IND vs WI: ವೆಸ್ಟ್ ಇಂಡೀಸ್ ವಿರುದ್ಧ ಬಲಿಷ್ಠ ಪಡೆಯನ್ನು ಕಣಕ್ಕಿಳಿಸಿದ ಟೀಮ್ ಇಂಡಿಯಾ
West Indies vs India, 2nd T20I: ಭಾರತದ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡವು 4 ರನ್ಗಳ ರೋಚಕ ಜಯ ಸಾಧಿಸಿತ್ತು. ಇದೀಗ 2ನೇ ಪಂದ್ಯದ ಮೂಲಕ ಸೋಲಿನ ಸೇಡನ್ನು ತೀರಿಸಿಕೊಳ್ಳುವ ಇರಾದೆಯಲ್ಲಿದೆ ಟೀಮ್ ಇಂಡಿಯಾ.
West Indies vs India, 2nd T20I: ಭಾರತ-ವೆಸ್ಟ್ ಇಂಡೀಸ್ ನಡುವಣ 2ನೇ ಟಿ20 ಪಂದ್ಯ ಶುರುವಾಗಿದೆ. ಗಯಾನಾದ ಪ್ರಾವಿಡೆನ್ಸ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ನಾಯಕ ಹಾರ್ದಿಕ್ ಪಾಂಡ್ಯ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಇನ್ನು ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾದಲ್ಲಿ ಒಂದು ಬದಲಾವಣೆ ಮಾಡಲಾಗಿದೆ. ಅದರಂತೆ ಕುಲ್ದೀಪ್ ಯಾದವ್ ಬದಲಿಗೆ ಯುವ ಸ್ಪಿನ್ನರ್ ರವಿ ಬಿಷ್ಣೋಯ್ಗೆ ಪ್ಲೇಯಿಂಗ್ ಇಲೆವೆನ್ನಲ್ಲಿ ಅವಕಾಶ ನೀಡಲಾಗಿದೆ.
ಸೋಲಿನ ಸೇಡು:
ಭಾರತದ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡವು 4 ರನ್ಗಳ ರೋಚಕ ಜಯ ಸಾಧಿಸಿತ್ತು. ಇದೀಗ 2ನೇ ಪಂದ್ಯದ ಮೂಲಕ ಸೋಲಿನ ಸೇಡನ್ನು ತೀರಿಸಿಕೊಳ್ಳುವ ಇರಾದೆಯಲ್ಲಿದೆ ಟೀಮ್ ಇಂಡಿಯಾ.
ಅತ್ತ ಐದು ಪಂದ್ಯಗಳ ಸರಣಿಯಲ್ಲಿ ವೆಸ್ಟ್ ಇಂಡೀಸ್ ತಂಡವು 1-0 ಅಂತರದಿಂದ ಮುನ್ನಡೆ ಸಾಧಿಸಿದ್ದು, ಇದೀಗ 2ನೇ ಪಂದ್ಯದಲ್ಲೂ ಗೆಲ್ಲುವ ಮೂಲಕ ಟೀಮ್ ಇಂಡಿಯಾ ವಿರುದ್ಧ ಒತ್ತಡ ಹೇರುವ ವಿಶ್ವಾಸದಲ್ಲಿದೆ. ಹೀಗಾಗಿ ಇಂದಿನ ಪಂದ್ಯದಲ್ಲೂ ಉಭಯ ತಂಡಗಳಿಂದ ರೋಚಕ ಹೋರಾಟ ನಿರೀಕ್ಷಿಸಬಹುದು.
ಟೀಮ್ ಇಂಡಿಯಾ ಪ್ಲೇಯಿಂಗ್ 11: ಶುಭ್ಮನ್ ಗಿಲ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ (ನಾಯಕ), ಸಂಜು ಸ್ಯಾಮ್ಸನ್, ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ಯುಜ್ವೇಂದ್ರ ಚಹಲ್, ಅರ್ಷದೀಪ್ ಸಿಂಗ್, ಮುಖೇಶ್ ಕುಮಾರ್.
ವೆಸ್ಟ್ ಇಂಡೀಸ್ ಪ್ಲೇಯಿಂಗ್ 11: ಕೈಲ್ ಮೇಯರ್ಸ್, ಬ್ರಾಂಡನ್ ಕಿಂಗ್, ಜಾನ್ಸನ್ ಚಾರ್ಲ್ಸ್ (ವಿಕೆಟ್ ಕೀಪರ್), ನಿಕೋಲಸ್ ಪೂರನ್, ಶಿಮ್ರಾನ್ ಹೆಟ್ಮೆಯರ್, ರೋವ್‌ಮನ್ ಪೊವೆಲ್ (ನಾಯಕ), ಜೇಸನ್ ಹೋಲ್ಡರ್, ರೊಮಾರಿಯೋ ಶೆಫರ್ಡ್, ಅಕೇಲ್ ಹೋಸೇನ್, ಅಲ್ಜಾರಿ ಜೋಸೆಫ್, ಒಬೆಡ್ ಮೆಕಾಯ್
ಭಾರತ ಟಿ20 ತಂಡ: ಇಶಾನ್ ಕಿಶನ್ (ವಿಕೆಟ್ ಕೀಪರ್), ಶುಭ್ಮನ್ ಗಿಲ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ಉಪನಾಯಕ), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ನಾಯಕ), ಅಕ್ಷರ್ ಪಟೇಲ್, ಯುಜ್ವೇಂದ್ರ ಚಾಹಲ್, ಕುಲ್ದೀಪ್ ಯಾದವ್, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್, ಅವೇಶ್ ಖಾನ್, ಮುಖೇಶ್ ಕುಮಾರ್.
ಇದನ್ನೂ ಓದಿ: Tilak Varma: ದಾಖಲೆಯೊಂದಿಗೆ ಹೊಸ ಇನಿಂಗ್ಸ್ ಆರಂಭಿಸಿದ ತಿಲಕ್ ವರ್ಮಾ
ವೆಸ್ಟ್ ಇಂಡೀಸ್ ಟಿ20 ತಂಡ: ರೋವ್‌ಮನ್ ಪೊವೆಲ್ (ನಾಯಕ), ಕೈಲ್ ಮೇಯರ್ಸ್ (ಉಪ ನಾಯಕ), ಜಾನ್ಸನ್ ಚಾರ್ಲ್ಸ್, ರೋಸ್ಟನ್ ಚೇಸ್, ಶಿಮ್ರಾನ್ ಹೆಟ್ಮೆಯರ್, ಜೇಸನ್ ಹೋಲ್ಡರ್, ಶಾಯ್ ಹೋಪ್, ಅಕೇಲ್ ಹೊಸೈನ್, ಅಲ್ಝಾರಿ ಜೋಸೆಫ್, ಬ್ರಾಂಡನ್ ಕಿಂಗ್, ಓಬೆಡ್ ಮೆಕಾಯ್, ನಿಕೋಲಸ್ ಪೂರನ್, ರೊಮಾರಿಯೊ ಶೆಫರ್ಡ್, ಓಡಿಯನ್ ಸ್ಮಿತ್ , ಓಶಾನೆ ಥಾಮಸ್.