AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs WI: ಟೀಮ್ ಇಂಡಿಯಾ ಭರ್ಜರಿ ಬ್ಯಾಟಿಂಗ್: ವೆಸ್ಟ್ ಇಂಡೀಸ್​ಗೆ ಕಠಿಣ ಗುರಿ

West Indies vs India, 3rd ODI: ಈ ಪಂದ್ಯದಲ್ಲಿ ಟಾಸ್ ಗೆದ್ದ ವೆಸ್ಟ್ ಇಂಡೀಸ್ ತಂಡದ ನಾಯಕ ಶಾಯ್ ಹೋಪ್ ಟೀಮ್ ಇಂಡಿಯಾವನ್ನು ಮೊದಲು ಬ್ಯಾಟಿಂಗ್​ಗೆ ಆಹ್ವಾನಿಸಿತು.

IND vs WI: ಟೀಮ್ ಇಂಡಿಯಾ ಭರ್ಜರಿ ಬ್ಯಾಟಿಂಗ್: ವೆಸ್ಟ್ ಇಂಡೀಸ್​ಗೆ ಕಠಿಣ ಗುರಿ
IND vs WI
TV9 Web
| Edited By: |

Updated on:Aug 01, 2023 | 11:01 PM

Share

West Indies vs India, 3rd ODI: ಟ್ರಿನಿಡಾಡ್​ನ ಬ್ರಿಯಾನ್ ಲಾರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ವೆಸ್ಟ್ ಇಂಡೀಸ್ ವಿರುದ್ಧದ 3ನೇ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಬೃಹತ್ ಮೊತ್ತ ಪೇರಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ವಿಂಡೀಸ್ ತಂಡದ ನಾಯಕ ಶಾಯ್ ಹೋಪ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ಇಶಾನ್ ಕಿಶನ್ ಹಾಗೂ ಶುಭ್​ಮನ್ ಗಿಲ್ ಇನಿಂಗ್ಸ್ ಆರಂಭಿಸಿದರು.

ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ ಈ ಜೋಡಿ ಮೊದಲ ವಿಕೆಟ್​ಗೆ 143 ರನ್​ಗಳ ಜೊತೆಯಾಟವಾಡಿದರು. ಈ ಹಂತದಲ್ಲಿ 64 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 8 ಫೋರ್​ಗಳೊಂದಿಗೆ 77 ರನ್ ಬಾರಿಸಿದ್ದ ಇಶಾನ್ ಕಿಶನ್ ಔಟಾದರು. ಆ ಬಳಿಕ ಬಂದ ರುತುರಾಜ್ ಗಾಯಕ್ವಾಡ್ ಕೇವಲ 8 ರನ್​ಗಳಿಸಿ ವಿಕೆಟ್ ಒಪ್ಪಿಸಿದರು.

ಇನ್ನು ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಸಂಜು ಸ್ಯಾಮ್ಸನ್ ಕೂಡ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದರು. 41 ಎಸೆತಗಳನ್ನು ಎದುರಿಸಿದ ಸ್ಯಾಮ್ಸನ್ 4 ಭರ್ಜರಿ ಸಿಕ್ಸ್ ಹಾಗೂ 2 ಫೋರ್​ಗಳೊಂದಿಗೆ 51 ರನ್​ ಬಾರಿಸಿ ನಿರ್ಗಮಿಸಿದರು.

ಇದರ ನಡುವೆ ಮತ್ತೊಂದೆಡೆ ಶುಭ್​ಮನ್ ಗಿಲ್ ತಮ್ಮ ಆಕರ್ಷಕ ಇನಿಂಗ್ಸ್ ಮುಂದುವರೆಸಿದ್ದರು. 92 ಎಸೆತಗಳನ್ನು ಎದುರಿಸಿದ್ದ ಗಿಲ್ 11 ಫೋರ್​ಗಳೊಂದಿಗೆ 85 ರನ್​ ಬಾರಿಸಿ ಶತಕದತ್ತ ಹೆಜ್ಜೆ ಹಾಕಿದ್ದರು. ಈ ಹಂತದಲ್ಲಿ ದಾಳಿಗಿಳಿದ ಮೋಟಿ ಎಸೆತದಲ್ಲಿ ಕ್ಯಾಚ್ ನೀಡುವ ಮೂಲಕ ಶುಭ್​ಮನ್ ಗಿಲ್ (85) ಕೂಡ ವಿಂಡೀಸ್ ವಿರುದ್ಧ ಶತಕ ಸಿಡಿಸುವ ಅವಕಾಶ ಕೈ ತಪ್ಪಿಸಿಕೊಂಡರು.

ಇನ್ನು ಐದನೇ ವಿಕೆಟ್​ಗೆ ಜೊತೆಯಾದ ಹಾರ್ದಿಕ್ ಪಾಂಡ್ಯ ಹಾಗೂ ಸೂರ್ಯಕುಮಾರ್ ಯಾದವ್ 65 ರನ್​ಗಳ ಜೊತೆಯಾಟವಾಡಿದರು. ಇದೇ ವೇಳೆ 35 ರನ್​ಗಳಿಸಿದ್ದ ಸೂರ್ಯಕುಮಾರ್ ಯಾದವ್ ಕ್ಯಾಚಿತ್ತು ನಿರ್ಗಮಿಸಿದರು. ಇನ್ನೊಂದೆಡೆ 45 ಎಸೆತಗಳಲ್ಲಿ ಹಾರ್ದಿಕ್ ಪಾಂಡ್ಯ ಅರ್ಧಶತಕ ಪೂರೈಸಿದರು.

ಅಂತಿಮವಾಗಿ ಹಾರ್ದಿಕ್ ಪಾಂಡ್ಯ 52 ಎಸೆತಗಳಲ್ಲಿ 5 ಭರ್ಜರಿ ಸಿಕ್ಸ್​ ಹಾಗೂ 4 ಫೋರ್​ಗಳೊಂದಿಗೆ  ಅಜೇಯ 70 ರನ್ ಹಾಗೂ ರವೀಂದ್ರ ಜಡೇಜಾ ಅಜೇಯ 8 ರನ್​ ಬಾರಿಸಿದರು. ಈ ಮೂಲಕ ನಿಗದಿತ 50 ಓವರ್​ಗಳಲ್ಲಿ 5 ವಿಕೆಟ್ ನಷ್ಟಕ್ಕೆ 351 ರನ್​ ಕಲೆಹಾಕಿತು. ಈ ಮೂಲಕ ಭಾರತ ತಂಡವು ವೆಸ್ಟ್ ಇಂಡೀಸ್ ತಂಡಕ್ಕೆ 352 ರನ್​ಗಳ ಕಠಿಣ ಗುರಿ ನೀಡಿದೆ.

ಭಾರತ (ಪ್ಲೇಯಿಂಗ್ XI): ಇಶಾನ್ ಕಿಶನ್(ವಿಕೆಟ್ ಕೀಪರ್), ಶುಭ್​ಮನ್ ಗಿಲ್, ರುತುರಾಜ್ ಗಾಯಕ್ವಾಡ್, ಸಂಜು ಸ್ಯಾಮ್ಸನ್, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ(ನಾಯಕ), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಯದೇವ್ ಉನಾದ್ಕಟ್, ಕುಲದೀಪ್ ಯಾದವ್, ಮುಖೇಶ್ ಕುಮಾರ್.

ಇದನ್ನೂ ಓದಿ: India T20 Squad: ಟೀಮ್ ಇಂಡಿಯಾದಲ್ಲಿ ಇಬ್ಬರೇ ಆಲ್​ರೌಂಡರ್​ಗಳು..!

ವೆಸ್ಟ್ ಇಂಡೀಸ್ (ಪ್ಲೇಯಿಂಗ್ XI): ಬ್ರಾಂಡನ್ ಕಿಂಗ್, ಕೈಲ್ ಮೇಯರ್ಸ್, ಅಲಿಕ್ ಅಥಾನಾಝ್, ಶಾಯ್ ಹೋಪ್(ನಾಯಕ), ಶಿಮ್ರಾನ್ ಹೆಟ್ಮೆಯರ್, ಕೀಸಿ ಕಾರ್ಟಿ, ರೊಮಾರಿಯೋ ಶೆಫರ್ಡ್, ಯಾನಿಕ್ ಕ್ಯಾರಿಯಾ, ಅಲ್ಝಾರಿ ಜೋಸೆಫ್, ಗುಡಕೇಶ್ ಮೋಟಿ, ಜೇಡನ್ ಸೀಲ್ಸ್.

Published On - 10:59 pm, Tue, 1 August 23

Follow Us
TV9 Web
TV9 Web

TV9 Kannada

Read More
ಬೆಂಗಳೂರಿನಲ್ಲಿ ಆಶಾ ಕಾರ್ಯಕರ್ತೆಯರ ಬೃಹತ್ ಪ್ರತಿಭಟನೆ
ಬೆಂಗಳೂರಿನಲ್ಲಿ ಆಶಾ ಕಾರ್ಯಕರ್ತೆಯರ ಬೃಹತ್ ಪ್ರತಿಭಟನೆ
ಸೌಜನ್ಯ ಪ್ರಕರಣ: ತನಿಖೆಗಾಗಿ ಎಸ್​ಐಟಿಯಿಂದ ಮೆಡಿಕಲ್ ಬೋರ್ಡ್ ರಚನೆ
ಸೌಜನ್ಯ ಪ್ರಕರಣ: ತನಿಖೆಗಾಗಿ ಎಸ್​ಐಟಿಯಿಂದ ಮೆಡಿಕಲ್ ಬೋರ್ಡ್ ರಚನೆ
ದೆಹಲಿಯಲ್ಲಿ ತಮಿಳುನಾಡು ಸಿಎಂ ವಿಜಯ್​ ಜೊತೆ ಸಿಎಂ ಡಿಕೆಶಿ ಚರ್ಚಿಸಿದ್ದೇನು?
ದೆಹಲಿಯಲ್ಲಿ ತಮಿಳುನಾಡು ಸಿಎಂ ವಿಜಯ್​ ಜೊತೆ ಸಿಎಂ ಡಿಕೆಶಿ ಚರ್ಚಿಸಿದ್ದೇನು?
ಬೇಲೂರಿನ ಕೋಗಿಲಮನೆ ಬಳಿ 30ಕ್ಕೂ ಹೆಚ್ಚು ಕಾಡಾನೆಗಳು ಪ್ರತ್ಯಕ್ಷ
ಬೇಲೂರಿನ ಕೋಗಿಲಮನೆ ಬಳಿ 30ಕ್ಕೂ ಹೆಚ್ಚು ಕಾಡಾನೆಗಳು ಪ್ರತ್ಯಕ್ಷ
19 ವರ್ಷದ ಇಬ್ಬರು ವಿದ್ಯಾರ್ಥಿನಿಯರು ರಸ್ತೆ ಅಪಘಾತದಲ್ಲಿ ಬಲಿ
19 ವರ್ಷದ ಇಬ್ಬರು ವಿದ್ಯಾರ್ಥಿನಿಯರು ರಸ್ತೆ ಅಪಘಾತದಲ್ಲಿ ಬಲಿ
ಚಳ್ಳಕೆರೆ ಬಳಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಸಾರಿಗೆ ಬಸ್: 42 ಮಂದಿ ಪಾರು
ಚಳ್ಳಕೆರೆ ಬಳಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಸಾರಿಗೆ ಬಸ್: 42 ಮಂದಿ ಪಾರು
ಸ್ಟಿಂಗ್ ಪ್ರಕರಣ: ಪೊಲೀಸರಿಗೆ ಮೊಬೈಲ್ ನೀಡಲು ಕೃಪಾ ಆಳ್ವ ನಿರಾಕರಣೆ!
ಸ್ಟಿಂಗ್ ಪ್ರಕರಣ: ಪೊಲೀಸರಿಗೆ ಮೊಬೈಲ್ ನೀಡಲು ಕೃಪಾ ಆಳ್ವ ನಿರಾಕರಣೆ!
ಪ್ರಧಾನಿ ಮೋದಿ ಆಡಳಿತದ ಯಶೋಗಾಥೆ, ಯೋಜನೆಗಳ ಅಧ್ಯಯನ
ಪ್ರಧಾನಿ ಮೋದಿ ಆಡಳಿತದ ಯಶೋಗಾಥೆ, ಯೋಜನೆಗಳ ಅಧ್ಯಯನ
ವೀರಾಂಜನೇಯ ವಿಗ್ರಹಕ್ಕೆ ಲೇಪಿಸಿದ ಬೆಣ್ಣೆ 17 ದಿನ ಕಳೆದರೂ ಕರಗಿಲ್ಲ
ವೀರಾಂಜನೇಯ ವಿಗ್ರಹಕ್ಕೆ ಲೇಪಿಸಿದ ಬೆಣ್ಣೆ 17 ದಿನ ಕಳೆದರೂ ಕರಗಿಲ್ಲ
‘ಮಾಡಿರೋದೇ ಒಂದು ಸಿನಿಮಾ, ಗಂಡಸರ ಹಾಗೆ ನಡೆದುಕೋ; ಜಗ್ಗುಗೆ ಮಂಜು ಅವಾಜ್
‘ಮಾಡಿರೋದೇ ಒಂದು ಸಿನಿಮಾ, ಗಂಡಸರ ಹಾಗೆ ನಡೆದುಕೋ; ಜಗ್ಗುಗೆ ಮಂಜು ಅವಾಜ್