IND vs WI 3rd ODI: ಭಾರತ-ವೆಸ್ಟ್ ಇಂಡೀಸ್ 3ನೇ ಏಕದಿನ ಪಂದ್ಯ ಯಾವಾಗ? ಇಲ್ಲಿದೆ ಮಾಹಿತಿ
West Indies vs India, 3rd ODI: ಏಕದಿನ ವಿಶ್ವಕಪ್ಗೆ ಅರ್ಹತೆ ಪಡೆಯುವಲ್ಲಿ ವಿಫಲವಾಗಿರುವ ವೆಸ್ಟ್ ಇಂಡೀಸ್ ವಿರುದ್ಧ 2ನೇ ಏಕದಿನ ಪಂದ್ಯದಲ್ಲಿ ಸೋತು ಭಾರತ ತಂಡವು ಮುಖಭಂಗಕ್ಕೆ ಒಳಗಾಗಿದೆ.
West Indies vs India, 3rd ODI: ಭಾರತ-ವೆಸ್ಟ್ ಇಂಡೀಸ್ ನಡುವಣ 3 ಪಂದ್ಯಗಳ ಏಕದಿನ ಸರಣಿಯ 2 ಮ್ಯಾಚ್ಗಳು ಈಗಾಗಲೇ ಮುಗಿದಿವೆ. ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ 5 ವಿಕೆಟ್ಗಳ ಜಯ ಸಾಧಿಸಿದರೆ, 2ನೇ ಪಂದ್ಯದಲ್ಲಿ ಭಾರತ ತಂಡಕ್ಕೆ ವೆಸ್ಟ್ ಇಂಡೀಸ್ 6 ವಿಕೆಟ್ಗಳ ಸೋಲುಣಿಸಿದೆ. ಇದರೊಂದಿಗೆ ಸರಣಿಯು 1-1 ಅಂತರದಿಂದ ಸಮಬಲಗೊಂಡಿದೆ. ಅದರಂತೆ ಇದೀಗ ಮೂರನೇ ಪಂದ್ಯವು ಫೈನಲ್ ಫೈಟ್ ಆಗಿ ಮಾರ್ಪಟ್ಟಿರುವುದು ವಿಶೇಷ.
ಈ ಫೈನಲ್ ಫೈಟ್ ಪಂದ್ಯವು ಆಗಸ್ಟ್ 1 ರಂದು ಟ್ರಿನಿಡಾಡ್ನ ಬ್ರಿಯಾನ್ ಲಾರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಪಂದ್ಯವು ಸರಣಿ ನಿರ್ಣಾಯಕವಾಗಿರುವುದರಿಂದ ಗೆದ್ದು ಮಾನ ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಟೀಮ್ ಇಂಡಿಯಾ ಮುಂದಿದೆ.
ಏಕೆಂದರೆ ಏಕದಿನ ವಿಶ್ವಕಪ್ಗೆ ಅರ್ಹತೆ ಪಡೆಯುವಲ್ಲಿ ವಿಫಲವಾಗಿರುವ ವೆಸ್ಟ್ ಇಂಡೀಸ್ ವಿರುದ್ಧ 2ನೇ ಏಕದಿನ ಪಂದ್ಯದಲ್ಲಿ ಸೋತು ಭಾರತ ತಂಡವು ಮುಖಭಂಗಕ್ಕೆ ಒಳಗಾಗಿದೆ. ಹೀಗಾಗಿ ಅಂತಿಮ ಪಂದ್ಯದಲ್ಲಿ ಜಯ ಸಾಧಿಸಿ ಸರಣಿ ವಶಪಡಿಸಿಕೊಳ್ಳಲು ಟೀಮ್ ಇಂಡಿಯಾ ಭರ್ಜರಿ ಪ್ಲ್ಯಾನ್ ರೂಪಿಸಿದೆ.
ಇನ್ನು ಈ ಪಂದ್ಯ ಕೂಡ ಡಿಡಿ ಸ್ಪೋರ್ಟ್ಸ್ ಚಾನೆಲ್ನಲ್ಲಿ ನೇರ ಪ್ರಸಾರವಾಗಲಿದ್ದು, ಹಾಗೆಯೇ ಜಿಯೋ ಸಿನಿಮಾ ಆ್ಯಪ್ ಹಾಗೂ ವೆಬ್ಸೈಟ್ಗಳಲ್ಲಿ ಲೈವ್ ವೀಕ್ಷಿಸಬಹುದು.
ವೆಸ್ಟ್ ಇಂಡೀಸ್ ಏಕದಿನ ತಂಡ: ಶಾಯ್ ಹೋಪ್ (ನಾಯಕ) , ಬ್ರಾಂಡನ್ ಕಿಂಗ್ , ಕೈಲ್ ಮೇಯರ್ಸ್ , ಅಲಿಕ್ ಅಥಾನಾಝ್, ಶಿಮ್ರಾನ್ ಹೆಟ್ಮೆಯರ್ , ರೋವ್ಮನ್ ಪೊವೆಲ್ , ರೊಮಾರಿಯೋ ಶೆಫರ್ಡ್ , ಡೊಮಿನಿಕ್ ಡ್ರೇಕ್ಸ್ , ಯಾನಿಕ್ ಕ್ಯಾರಿಯಾ , ಗುಡಕೇಶ್ ಮೋಟಿ , ಜೇಡನ್ ಸೀಲ್ಸ್ , ಕೀಸಿ ಕಾರ್ಟಿ, ಒಶಾನೆ ಥಾಮಸ್ , ಅಲ್ಝಾರಿ ಜೋಸೆಫ್, ಕೆವಿನ್ ಸಿಂಕ್ಲೇರ್.
ಇದನ್ನೂ ಓದಿ: ICC Test Rankings: ಅಗ್ರ ಹತ್ತರಲ್ಲಿ ಟೀಮ್ ಇಂಡಿಯಾದ ಏಕೈಕ ಆಟಗಾರನಿಗೆ ಸ್ಥಾನ
ಭಾರತ ಏಕದಿನ ತಂಡ: ರೋಹಿತ್ ಶರ್ಮಾ (ನಾಯಕ) , ಇಶಾನ್ ಕಿಶನ್ (ವಿಕೆಟ್ ಕೀಪರ್) , ಶುಭ್ಮನ್ ಗಿಲ್ , ವಿರಾಟ್ ಕೊಹ್ಲಿ , ಹಾರ್ದಿಕ್ ಪಾಂಡ್ಯ , ಸೂರ್ಯಕುಮಾರ್ ಯಾದವ್ , ರವೀಂದ್ರ ಜಡೇಜಾ , ಶಾರ್ದೂಲ್ ಠಾಕೂರ್ , ಕುಲ್ದೀಪ್ ಯಾದವ್ , ಉಮ್ರಾನ್ ಮಲಿಕ್ , ಮುಖೇಶ್ ಕುಮಾರ್ , ಯುಜ್ವೇಂದ್ರ ಚಾಹಲ್ , ಸಂಜು ಸ್ಯಾಮ್ಸನ್, ಜಯದೇವ್ ಉನಾದ್ಕಟ್, ರುತುರಾಜ್ ಗಾಯಕ್ವಾಡ್, ಅಕ್ಷರ್ ಪಟೇಲ್.