IND vs WI 3rd ODI: ಭಾರತ-ವೆಸ್ಟ್ ಇಂಡೀಸ್ 3ನೇ ಏಕದಿನ ಪಂದ್ಯ ಯಾವಾಗ? ಇಲ್ಲಿದೆ ಮಾಹಿತಿ

| Updated By: ಝಾಹಿರ್ ಯೂಸುಫ್

Updated on: Jul 30, 2023 | 6:03 PM

West Indies vs India, 3rd ODI: ಏಕದಿನ ವಿಶ್ವಕಪ್​ಗೆ ಅರ್ಹತೆ ಪಡೆಯುವಲ್ಲಿ ವಿಫಲವಾಗಿರುವ ವೆಸ್ಟ್ ಇಂಡೀಸ್ ವಿರುದ್ಧ 2ನೇ ಏಕದಿನ ಪಂದ್ಯದಲ್ಲಿ ಸೋತು ಭಾರತ ತಂಡವು ಮುಖಭಂಗಕ್ಕೆ ಒಳಗಾಗಿದೆ.

IND vs WI 3rd ODI: ಭಾರತ-ವೆಸ್ಟ್ ಇಂಡೀಸ್ 3ನೇ ಏಕದಿನ ಪಂದ್ಯ ಯಾವಾಗ? ಇಲ್ಲಿದೆ ಮಾಹಿತಿ
IND vs WI
Follow us on

West Indies vs India, 3rd ODI: ಭಾರತ-ವೆಸ್ಟ್ ಇಂಡೀಸ್ ನಡುವಣ 3 ಪಂದ್ಯಗಳ ಏಕದಿನ ಸರಣಿಯ 2 ಮ್ಯಾಚ್​ಗಳು ಈಗಾಗಲೇ ಮುಗಿದಿವೆ. ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ 5 ವಿಕೆಟ್​ಗಳ ಜಯ ಸಾಧಿಸಿದರೆ, 2ನೇ ಪಂದ್ಯದಲ್ಲಿ ಭಾರತ ತಂಡಕ್ಕೆ ವೆಸ್ಟ್ ಇಂಡೀಸ್ 6 ವಿಕೆಟ್​ಗಳ ಸೋಲುಣಿಸಿದೆ. ಇದರೊಂದಿಗೆ ಸರಣಿಯು 1-1 ಅಂತರದಿಂದ ಸಮಬಲಗೊಂಡಿದೆ. ಅದರಂತೆ ಇದೀಗ ಮೂರನೇ ಪಂದ್ಯವು ಫೈನಲ್ ಫೈಟ್ ಆಗಿ ಮಾರ್ಪಟ್ಟಿರುವುದು ವಿಶೇಷ.

ಈ ಫೈನಲ್ ಫೈಟ್ ಪಂದ್ಯವು ಆಗಸ್ಟ್ 1 ರಂದು ಟ್ರಿನಿಡಾಡ್​ನ ಬ್ರಿಯಾನ್ ಲಾರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಪಂದ್ಯವು ಸರಣಿ ನಿರ್ಣಾಯಕವಾಗಿರುವುದರಿಂದ ಗೆದ್ದು ಮಾನ ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಟೀಮ್ ಇಂಡಿಯಾ ಮುಂದಿದೆ.

ಏಕೆಂದರೆ ಏಕದಿನ ವಿಶ್ವಕಪ್​ಗೆ ಅರ್ಹತೆ ಪಡೆಯುವಲ್ಲಿ ವಿಫಲವಾಗಿರುವ ವೆಸ್ಟ್ ಇಂಡೀಸ್ ವಿರುದ್ಧ 2ನೇ ಏಕದಿನ ಪಂದ್ಯದಲ್ಲಿ ಸೋತು ಭಾರತ ತಂಡವು ಮುಖಭಂಗಕ್ಕೆ ಒಳಗಾಗಿದೆ. ಹೀಗಾಗಿ ಅಂತಿಮ ಪಂದ್ಯದಲ್ಲಿ ಜಯ ಸಾಧಿಸಿ ಸರಣಿ ವಶಪಡಿಸಿಕೊಳ್ಳಲು ಟೀಮ್ ಇಂಡಿಯಾ ಭರ್ಜರಿ ಪ್ಲ್ಯಾನ್ ರೂಪಿಸಿದೆ.

ಇನ್ನು ಈ ಪಂದ್ಯ ಕೂಡ ಡಿಡಿ ಸ್ಪೋರ್ಟ್ಸ್​ ಚಾನೆಲ್​ನಲ್ಲಿ ನೇರ ಪ್ರಸಾರವಾಗಲಿದ್ದು, ಹಾಗೆಯೇ ಜಿಯೋ ಸಿನಿಮಾ ಆ್ಯಪ್ ಹಾಗೂ ವೆಬ್​ಸೈಟ್​ಗಳಲ್ಲಿ ಲೈವ್ ವೀಕ್ಷಿಸಬಹುದು.

ವೆಸ್ಟ್ ಇಂಡೀಸ್ ಏಕದಿನ ತಂಡ: ಶಾಯ್ ಹೋಪ್ (ನಾಯಕ) , ಬ್ರಾಂಡನ್ ಕಿಂಗ್ , ಕೈಲ್ ಮೇಯರ್ಸ್ , ಅಲಿಕ್ ಅಥಾನಾಝ್, ಶಿಮ್ರಾನ್ ಹೆಟ್ಮೆಯರ್ , ರೋವ್​ಮನ್ ಪೊವೆಲ್ , ರೊಮಾರಿಯೋ ಶೆಫರ್ಡ್ , ಡೊಮಿನಿಕ್ ಡ್ರೇಕ್ಸ್ , ಯಾನಿಕ್ ಕ್ಯಾರಿಯಾ , ಗುಡಕೇಶ್ ಮೋಟಿ , ಜೇಡನ್ ಸೀಲ್ಸ್ , ಕೀಸಿ ಕಾರ್ಟಿ, ಒಶಾನೆ ಥಾಮಸ್ , ಅಲ್ಝಾರಿ ಜೋಸೆಫ್, ಕೆವಿನ್ ಸಿಂಕ್ಲೇರ್.

ಇದನ್ನೂ ಓದಿ: ICC Test Rankings: ಅಗ್ರ ಹತ್ತರಲ್ಲಿ ಟೀಮ್ ಇಂಡಿಯಾದ ಏಕೈಕ ಆಟಗಾರನಿಗೆ ಸ್ಥಾನ

ಭಾರತ ಏಕದಿನ ತಂಡ: ರೋಹಿತ್ ಶರ್ಮಾ (ನಾಯಕ) , ಇಶಾನ್ ಕಿಶನ್ (ವಿಕೆಟ್ ಕೀಪರ್) , ಶುಭ್​ಮನ್ ಗಿಲ್ , ವಿರಾಟ್ ಕೊಹ್ಲಿ , ಹಾರ್ದಿಕ್ ಪಾಂಡ್ಯ , ಸೂರ್ಯಕುಮಾರ್ ಯಾದವ್ , ರವೀಂದ್ರ ಜಡೇಜಾ , ಶಾರ್ದೂಲ್ ಠಾಕೂರ್ , ಕುಲ್ದೀಪ್ ಯಾದವ್ , ಉಮ್ರಾನ್ ಮಲಿಕ್ , ಮುಖೇಶ್ ಕುಮಾರ್ , ಯುಜ್ವೇಂದ್ರ ಚಾಹಲ್ , ಸಂಜು ಸ್ಯಾಮ್ಸನ್, ಜಯದೇವ್ ಉನಾದ್ಕಟ್, ರುತುರಾಜ್ ಗಾಯಕ್ವಾಡ್, ಅಕ್ಷರ್ ಪಟೇಲ್.