IND vs WI: ಬಲಿಷ್ಠ ಪಡೆಯನ್ನು ಕಣಕ್ಕಿಳಿಸಿದ ಟೀಮ್ ಇಂಡಿಯಾ
West Indies vs India, 4th T20I: ಈ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಜಯ ಸಾಧಿಸಿದರೆ 6 ವರ್ಷಗಳ ಬಳಿಕ ಟೀಮ್ ಇಂಡಿಯಾ ವಿರುದ್ಧ ಸರಣಿ ಗೆದ್ದ ಹಿರಿಮೆಗೆ ಪಾತ್ರರಾಗಲಿದ್ದಾರೆ. ಅಂದರೆ ಕೆರಿಬಿಯನ್ನರು ಭಾರತದ ವಿರುದ್ಧ ಕೊನೆಯ ಬಾರಿ ಟಿ20 ಸರಣಿ ಗೆದ್ದಿರುವುದು 2017 ರಲ್ಲಿ. ಇದಾದ ಬಳಿಕ ವಿಂಡೀಸ್ ವಿರುದ್ಧ ಟೀಮ್ ಇಂಡಿಯಾ ಪಾರುಪತ್ಯ ಮೆರೆಯುತ್ತಾ ಬಂದಿದೆ.
West Indies vs India, 4th T20I: ಭಾರತ-ವೆಸ್ಟ್ ಇಂಡೀಸ್ ನಡುವಣ 4ನೇ ಟಿ20 ಪಂದ್ಯ ಶುರುವಾಗಿದೆ. ಅಮೆರಿಕದ ಫ್ಲೋರಿಡಾದಲ್ಲಿನ ಸೆಂಟ್ರಲ್ ಬ್ರೋವರ್ಡ್ ರೀಜನಲ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ವೆಸ್ಟ್ ಇಂಡೀಸ್ ತಂಡದ ನಾಯಕ ರೋವ್‌ಮನ್ ಪೊವೆಲ್ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಇನ್ನು ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಅಂದರೆ 3ನೇ ಟಿ20 ಪಂದ್ಯದಲ್ಲಿ ಕಣಕ್ಕಿಳಿದ ಬಳಗವನ್ನೇ ಮುಂದುವರೆಸಲಾಗಿದೆ.
ಟೀಮ್ ಇಂಡಿಯಾ ಪ್ಲೇಯಿಂಗ್ 11: ಶುಭಮನ್ ಗಿಲ್ , ಯಶಸ್ವಿ ಜೈಸ್ವಾಲ್ , ಸೂರ್ಯಕುಮಾರ್ ಯಾದವ್ , ತಿಲಕ್ ವರ್ಮಾ , ಹಾರ್ದಿಕ್ ಪಾಂಡ್ಯ (ನಾಯಕ) , ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್) , ಅಕ್ಷರ್ ಪಟೇಲ್ , ಕುಲದೀಪ್ ಯಾದವ್ , ಅರ್ಷದೀಪ್ ಸಿಂಗ್ , ಯುಜ್ವೇಂದ್ರ ಚಹಲ್ , ಮುಖೇಶ್ ಕುಮಾರ್.
ವೆಸ್ಟ್ ಇಂಡೀಸ್ ಪ್ಲೇಯಿಂಗ್ 11: ಬ್ರಾಂಡನ್ ಕಿಂಗ್, ಕೈಲ್ ಮೇಯರ್ಸ್, ಶಾಯ್ ಹೋಪ್, ನಿಕೋಲಸ್ ಪೂರನ್ (ವಿಕೆಟ್ ಕೀಪರ್), ರೋವ್‌ಮನ್ ಪೊವೆಲ್ (ನಾಯಕ), ಶಿಮ್ರಾನ್ ಹೆಟ್ಮೆಯರ್, ಜೇಸನ್ ಹೋಲ್ಡರ್, ರೊಮಾರಿಯೊ ಶೆಫರ್ಡ್, ಓಡಿಯನ್ ಸ್ಮಿತ್, ಅಕೇಲ್ ಹೋಸೇನ್, ಒಬೆಡ್ ಮೆಕಾಯ್.
ಟೀಮ್ ಇಂಡಿಯಾ ಪಾಲಿಗೆ ನಿರ್ಣಾಯಕ ಪಂದ್ಯ:
ಈ ಪಂದ್ಯವು ಟೀಮ್ ಇಂಡಿಯಾ ಪಾಲಿಗೆ ನಿರ್ಣಾಯಕ ಪಂದ್ಯ. ಏಕೆಂದರೆ 5 ಪಂದ್ಯಗಳ ಟಿ20 ಸರಣಿಯ ಮೊದಲ ಎರಡು ಪಂದ್ಯಗಳಲ್ಲಿ ವೆಸ್ಟ್ ಇಂಡೀಸ್ ಜಯ ಸಾಧಿಸಿದೆ. ಇನ್ನು ಮೂರನೇ ಟಿ20 ಪಂದ್ಯದಲ್ಲಿ ಗೆಲ್ಲುವ ಮೂಲಕ ಭಾರತ ತಂಡವು ಸರಣಿ ಅಂತರವನ್ನು 2-1 ಕ್ಕೆ ಇಳಿಸಿದೆ. ಇದೀಗ 4ನೇ ಟಿ20 ಪಂದ್ಯದಲ್ಲಿ ಭಾರತ ಗೆದ್ದರೆ ಮಾತ್ರ ಸರಣಿ ಗೆಲ್ಲುವ ಆಸೆಯನ್ನು ಜೀವಂತವಿರಿಸಿಕೊಳ್ಳಬಹುದು.
ಐತಿಹಾಸಿಕ ಜಯದ ನಿರೀಕ್ಷೆಯಲ್ಲಿ ವಿಂಡೀಸ್:
ಒಂದು ವೇಳೆ ಈ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಜಯ ಸಾಧಿಸಿದರೆ 6 ವರ್ಷಗಳ ಬಳಿಕ ಟೀಮ್ ಇಂಡಿಯಾ ವಿರುದ್ಧ ಸರಣಿ ಗೆದ್ದ ಹಿರಿಮೆಗೆ ಪಾತ್ರರಾಗಲಿದ್ದಾರೆ. ಅಂದರೆ ಕೆರಿಬಿಯನ್ನರು ಭಾರತದ ವಿರುದ್ಧ ಕೊನೆಯ ಬಾರಿ ಟಿ20 ಸರಣಿ ಗೆದ್ದಿರುವುದು 2017 ರಲ್ಲಿ. ಇದಾದ ಬಳಿಕ ವಿಂಡೀಸ್ ವಿರುದ್ಧ ಟೀಮ್ ಇಂಡಿಯಾ ಪಾರುಪತ್ಯ ಮೆರೆಯುತ್ತಾ ಬಂದಿದೆ. ಇದೀಗ 6 ವರ್ಷಗಳ ಬಳಿಕ ಭಾರತದ ವಿರುದ್ಧ ಸರಣಿ ಗೆಲ್ಲುವ ಉತ್ತಮ ಅವಕಾಶ ವೆಸ್ಟ್ ಇಂಡೀಸ್ ಮುಂದಿದೆ.
ಭಾರತ ಟಿ20 ತಂಡ: ಇಶಾನ್ ಕಿಶನ್ (ವಿಕೆಟ್ ಕೀಪರ್), ಶುಭ್ಮನ್ ಗಿಲ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ಉಪನಾಯಕ), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ನಾಯಕ), ಅಕ್ಷರ್ ಪಟೇಲ್, ಯುಜ್ವೇಂದ್ರ ಚಾಹಲ್, ಕುಲ್ದೀಪ್ ಯಾದವ್, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್, ಅವೇಶ್ ಖಾನ್, ಮುಖೇಶ್ ಕುಮಾರ್.
ಇದನ್ನೂ ಓದಿ: ODI World Cup 2023: ಈ 4 ತಂಡಗಳು ಸೆಮಿಫೈನಲ್ ಪ್ರವೇಶಿಸುವುದು ಖಚಿತ: ಸೆಹ್ವಾಗ್
ವೆಸ್ಟ್ ಇಂಡೀಸ್ ಟಿ20 ತಂಡ: ರೋವ್‌ಮನ್ ಪೊವೆಲ್ (ನಾಯಕ), ಕೈಲ್ ಮೇಯರ್ಸ್ (ಉಪ ನಾಯಕ), ಜಾನ್ಸನ್ ಚಾರ್ಲ್ಸ್, ರೋಸ್ಟನ್ ಚೇಸ್, ಶಿಮ್ರಾನ್ ಹೆಟ್ಮೆಯರ್, ಜೇಸನ್ ಹೋಲ್ಡರ್, ಶಾಯ್ ಹೋಪ್, ಅಕೇಲ್ ಹೊಸೈನ್, ಅಲ್ಝಾರಿ ಜೋಸೆಫ್, ಬ್ರಾಂಡನ್ ಕಿಂಗ್, ಓಬೆಡ್ ಮೆಕಾಯ್, ನಿಕೋಲಸ್ ಪೂರನ್, ರೊಮಾರಿಯೊ ಶೆಫರ್ಡ್, ಓಡಿಯನ್ ಸ್ಮಿತ್ , ಓಶಾನೆ ಥಾಮಸ್.
Published On - 7:36 pm, Sat, 12 August 23