AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs WI: ಟೀಮ್ ಇಂಡಿಯಾಗೆ ಕಠಿಣ ಗುರಿ ನೀಡಿದ ವೆಸ್ಟ್ ಇಂಡೀಸ್

West Indies vs India, 4th T20I: ಈ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದ ಶಿಮ್ರಾನ್ ಹೆಟ್ಮೆಯರ್ ತಂಡಕ್ಕೆ ಆಸರೆಯಾಗಿ ನಿಂತರು. ಅಲ್ಲದೆ 35 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಅಲ್ಲದೆ 39 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 3 ಫೋರ್​ಗಳೊಂದಿಗೆ 61 ರನ್ ಬಾರಿಸಿದ ಹೆಟ್ಮೆಯರ್ ಕೊನೆಯ ಓವರ್​ನಲ್ಲಿ ವಿಕೆಟ್​ ಒಪ್ಪಿಸಿದರು.

IND vs WI: ಟೀಮ್ ಇಂಡಿಯಾಗೆ ಕಠಿಣ ಗುರಿ ನೀಡಿದ ವೆಸ್ಟ್ ಇಂಡೀಸ್
IND vs WI
TV9 Web
| Edited By: |

Updated on: Aug 12, 2023 | 9:42 PM

Share

West Indies vs India, 4th T20I: ಫ್ಲೋರಿಡಾದ ಸೆಂಟ್ರಲ್ ಬ್ರೋವರ್ಡ್ ರೀಜನಲ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ 4ನೇ ಟಿ20 ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡವು ಟೀಮ್ ಇಂಡಿಯಾಗೆ ಕಠಿಣ ಗುರಿ ನೀಡಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ವಿಂಡೀಸ್ ತಂಡದ ನಾಯಕ ರೋವ್​ಮನ್ ಪೊವೆಲ್ ಬ್ಯಾಟಿಂಗ್ ಆಯ್ದುಕೊಂಡರು.

ಅದರಂತೆ ಇನಿಂಗ್ಸ್ ಆರಂಭಿಸಿದ ಕೈಲ್ ಮೇಯರ್ಸ್ ಹಾಗೂ ಬ್ರಾಂಡನ್ ಕಿಂಗ್ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದರು. ಪರಿಣಾಮ 2ನೇ ಓವರ್​ ವೇಳೆಗೆ ತಂಡದ ಮೊತ್ತ 19 ಕ್ಕೇರಿತು. ಈ ಹಂತದಲ್ಲಿ ಅರ್ಷದೀಪ್ ಎಸೆತವನ್ನು ಗುರುತಿಸುವಲ್ಲಿ ಎಡವಿದ ಮೇಯರ್ಸ್ (17) ವಿಕೆಟ್​ ಕೀಪರ್​ಗೆ ಕ್ಯಾಚ್ ನೀಡಿದರು.

ಇನ್ನು 18 ರನ್​ಗಳಿಸಿ ಬ್ರಾಂಡನ್ ಕಿಂಗ್ ಕೂಡ ಅರ್ಷದೀಪ್​ಗೆ ವಿಕೆಟ್ ಒಪ್ಪಿಸಿದರು. ಇದಾಗ್ಯೂ ಪವರ್​ಪ್ಲೇ ಮುಕ್ತಾಯದ ವೇಳೆಗೆ ವೆಸ್ಟ್ ಇಂಡೀಸ್ ತಂಡದ ಮೊತ್ತ 50 ರ ಗಡಿದಾಟಿತು.

ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿದ ಶಾಯ್ ಹೋಪ್ ಟೀಮ್ ಇಂಡಿಯಾ ಬೌಲರ್​ಗಳ ಬೆಂಡೆತ್ತಿದರು. ಆದರೆ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ನಿಕೋಲಸ್ ಪೂರನ್ (1) ರನ್ನು ಕುಲ್ದೀಪ್ ಯಾದವ್​ ಪೆವಿಲಿಯನ್​ಗೆ ಕಳುಹಿಸಿದರು.

ಇದರ ಬೆನ್ನಲ್ಲೇ ಕುಲ್ದೀಪ್​ ಮ್ಯಾಜಿಕ್ ಡೆಲಿವರಿಗೆ ರೋವ್​ಮನ್ ಪೊವೆಲ್ (1) ಕೂಡ ವಿಕೆಟ್ ಒಪ್ಪಿಸಿದರು. ಮತ್ತೊಂದೆಡೆ ಭರ್ಜರಿ ಬ್ಯಾಟಿಂಗ್ ಮುಂದುವರೆಸಿದ್ದ ಶಾಯ್ ಹೋಪ್ 29 ಎಸೆತಗಳಲ್ಲಿ 2 ಭರ್ಜರಿ ಸಿಕ್ಸ್ ಹಾಗೂ 3 ಫೋರ್​ಗಳೊಂದಿಗೆ 45 ರನ್​ ಬಾರಿಸಿದ್ದರು.

ಈ ವೇಳೆ ದಾಳಿಗಿಳಿದ ಯುಜ್ವೇಂದ್ರ ಚಹಲ್ ಶಾಯ್ ಹೋಪ್ (45) ವಿಕೆಟ್ ಪಡೆದು ಅಮೂಲ್ಯ ಯಶಸ್ಸು ತಂದುಕೊಟ್ಟರು. ಇದರ ಬೆನ್ನಲ್ಲೇ ರೊಮಾರಿಯೊ ಶೆಫರ್ಡ್ (9) ಅಕ್ಷರ್ ಪಟೇಲ್​ಗೆ ವಿಕೆಟ್ ಒಪ್ಪಿಸಿದರೆ, ಜೇಸನ್ ಹೋಲ್ಡರ್ (3) ಮುಖೇಶ್ ಕುಮಾರ್ ಎಸೆತದಲ್ಲಿ ಬೌಲ್ಡ್ ಆದರು.

ಮತ್ತೊಂದೆಡೆ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದ ಶಿಮ್ರಾನ್ ಹೆಟ್ಮೆಯರ್ ತಂಡಕ್ಕೆ ಆಸರೆಯಾಗಿ ನಿಂತರು. ಅಲ್ಲದೆ 35 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಅಲ್ಲದೆ 39 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 3 ಫೋರ್​ಗಳೊಂದಿಗೆ 61 ರನ್ ಬಾರಿಸಿದ ಹೆಟ್ಮೆಯರ್ ಕೊನೆಯ ಓವರ್​ನಲ್ಲಿ ವಿಕೆಟ್​ ಒಪ್ಪಿಸಿದರು.

ಅರ್ಷದೀಪ್ ಸಿಂಗ್ ಎಸೆದ ಅಂತಿಮ ಓವರ್​ನಲ್ಲಿ ಒಟ್ಟು 17 ರನ್ ಚಚ್ಚಿದ ವೆಸ್ಟ್ ಇಂಡೀಸ್ ನಿಗದಿತ 20 ಓವರ್​ಗಳಲ್ಲಿ 8 ವಿಕೆಟ್ ನಷ್ಟಕ್ಕೆ 178 ರನ್​ ಕಲೆಹಾಕಿತು. ಈ ಮೂಲಕ ಟೀಮ್ ಇಂಡಿಯಾಗೆ 179 ರನ್​ಗಳ ಕಠಿಣ ಗುರಿ ನೀಡಿದೆ.

ಟೀಮ್ ಇಂಡಿಯಾ ಪರ 4 ಓವರ್​ಗಳಲ್ಲಿ 38 ರನ್​ ನೀಡಿ ಅರ್ಷದೀಪ್ ಸಿಂಗ್ 3 ವಿಕೆಟ್ ಪಡೆದರೆ, 4 ಓವರ್​ಗಳಲ್ಲಿ 26 ರನ್ ನೀಡಿ ಕುಲ್ದೀಪ್ ಯಾದವ್ 2 ವಿಕೆಟ್ ಕಬಳಿಸಿದರು.

ಟೀಮ್ ಇಂಡಿಯಾ ಪ್ಲೇಯಿಂಗ್ 11: ಶುಭಮನ್ ಗಿಲ್ , ಯಶಸ್ವಿ ಜೈಸ್ವಾಲ್ , ಸೂರ್ಯಕುಮಾರ್ ಯಾದವ್ , ತಿಲಕ್ ವರ್ಮಾ , ಹಾರ್ದಿಕ್ ಪಾಂಡ್ಯ (ನಾಯಕ) , ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್) , ಅಕ್ಷರ್ ಪಟೇಲ್ , ಕುಲದೀಪ್ ಯಾದವ್ , ಅರ್ಷದೀಪ್ ಸಿಂಗ್ , ಯುಜ್ವೇಂದ್ರ ಚಹಲ್ , ಮುಖೇಶ್ ಕುಮಾರ್.

ಇದನ್ನೂ ಓದಿ: Tilak Varma: ಬ್ಯಾಕ್ ಟು ಬ್ಯಾಕ್ ದಾಖಲೆ ಬರೆದ ತಿಲಕ್ ವರ್ಮಾ

ವೆಸ್ಟ್ ಇಂಡೀಸ್ ಪ್ಲೇಯಿಂಗ್ 11: ಬ್ರಾಂಡನ್ ಕಿಂಗ್, ಕೈಲ್ ಮೇಯರ್ಸ್, ಶಾಯ್ ಹೋಪ್, ನಿಕೋಲಸ್ ಪೂರನ್ (ವಿಕೆಟ್ ಕೀಪರ್), ರೋವ್‌ಮನ್ ಪೊವೆಲ್ (ನಾಯಕ), ಶಿಮ್ರಾನ್ ಹೆಟ್ಮೆಯರ್, ಜೇಸನ್ ಹೋಲ್ಡರ್, ರೊಮಾರಿಯೊ ಶೆಫರ್ಡ್, ಓಡಿಯನ್ ಸ್ಮಿತ್, ಅಕೇಲ್ ಹೋಸೇನ್, ಒಬೆಡ್ ಮೆಕಾಯ್.

ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ