AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs WI: ಫೈನಲ್ ಫೈಟ್​ಗೆ ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್ ಹೀಗಿದೆ

West Indies vs India, 5th T20I: ಈ ಪಂದ್ಯವು ಸರಣಿ ನಿರ್ಣಾಯಕ ಮ್ಯಾಚ್. ಅಂದರೆ 5 ಪಂದ್ಯಗಳ ಟಿ20 ಸರಣಿಯ ಮೊದಲ ಎರಡು ಪಂದ್ಯಗಳಲ್ಲಿ ಆತಿಥೇಯ ವೆಸ್ಟ್ ಇಂಡೀಸ್ ತಂಡ ಜಯ ಸಾಧಿಸಿತ್ತು. ಇನ್ನು 3ನೇ ಹಾಗೂ 4ನೇ ಟಿ20 ಪಂದ್ಯಗಳಲ್ಲಿ ಕಂಬ್ಯಾಕ್ ಮಾಡಿದ ಟೀಮ್ ಇಂಡಿಯಾ ಸರಣಿಯನ್ನು 2-2 ಅಂತರದಿಂದ ಸಮಬಲಗೊಳಿಸುವಲ್ಲಿ ಯಶಸ್ವಿಯಾಗಿತ್ತು.

IND vs WI: ಫೈನಲ್ ಫೈಟ್​ಗೆ ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್ ಹೀಗಿದೆ
Team India
TV9 Web
| Updated By: ಝಾಹಿರ್ ಯೂಸುಫ್|

Updated on:Aug 13, 2023 | 7:37 PM

Share

West Indies vs India, 5th T20I: ಭಾರತ ಮತ್ತು ವೆಸ್ಟ್ ಇಂಡೀಸ್ (India vs West Indies) ನಡುವಣ 5ನೇ ಟಿ20 ಪಂದ್ಯ ಶುರುವಾಗಿದೆ. ಫ್ಲೋರಿಡಾದ ಸೆಂಟ್ರಲ್ ಬ್ರೋವರ್ಡ್ ರೀಜನಲ್ ಪಾರ್ಕ್ ಸ್ಟೇಡಿಯಂ ಟರ್ಫ್ ಗ್ರೌಂಡ್​ನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಭಾರತ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.

ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ತನ್ನ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾವುದೇ ಬದಲಾವಣೆ ಮಾಡಿಕೊಂಡಿಲ್ಲ. ಅಂದರೆ ಕಳೆದ ಪಂದ್ಯದಲ್ಲಿ ಕಣಕ್ಕಿಳಿದ ಆಟಗಾರರೇ ಈ ಪಂದ್ಯದಲ್ಲೂ ಆಡಲಿದ್ದಾರೆ.

ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್: ಶುಭಮನ್ ಗಿಲ್ , ಯಶಸ್ವಿ ಜೈಸ್ವಾಲ್ , ಸೂರ್ಯಕುಮಾರ್ ಯಾದವ್ , ತಿಲಕ್ ವರ್ಮಾ , ಹಾರ್ದಿಕ್ ಪಾಂಡ್ಯ (ನಾಯಕ) , ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್) , ಅಕ್ಷರ್ ಪಟೇಲ್ , ಕುಲದೀಪ್ ಯಾದವ್ , ಅರ್ಷದೀಪ್ ಸಿಂಗ್ , ಯುಜ್ವೇಂದ್ರ ಚಹಲ್ , ಮುಖೇಶ್ ಕುಮಾರ್.

ವೆಸ್ಟ್ ಇಂಡೀಸ್ ಪ್ಲೇಯಿಂಗ್ ಇಲೆವೆನ್: ಬ್ರಾಂಡನ್ ಕಿಂಗ್, ಕೈಲ್ ಮೇಯರ್ಸ್, ಶಾಯ್ ಹೋಪ್, ನಿಕೋಲಸ್ ಪೂರನ್ (ವಿಕೆಟ್ ಕೀಪರ್), ರೋವ್‌ಮನ್ ಪೊವೆಲ್ (ನಾಯಕ), ಶಿಮ್ರಾನ್ ಹೆಟ್ಮೆಯರ್, ಜೇಸನ್ ಹೋಲ್ಡರ್, ರೊಮಾರಿಯೊ ಶೆಫರ್ಡ್, ರೋಸ್ಟನ್ ಚೇಸ್, ಅಕೇಲ್ ಹೋಸೇನ್, ಅಲ್ಝಾರಿ ಜೋಸೆಫ್.

ಸರಣಿ ನಿರ್ಣಾಯಕ ಪಂದ್ಯ:

ಈ ಪಂದ್ಯವು ಸರಣಿ ನಿರ್ಣಾಯಕ ಮ್ಯಾಚ್. ಅಂದರೆ 5 ಪಂದ್ಯಗಳ ಟಿ20 ಸರಣಿಯ ಮೊದಲ ಎರಡು ಪಂದ್ಯಗಳಲ್ಲಿ ಆತಿಥೇಯ ವೆಸ್ಟ್ ಇಂಡೀಸ್ ತಂಡ ಜಯ ಸಾಧಿಸಿತ್ತು. ಇನ್ನು 3ನೇ ಹಾಗೂ 4ನೇ ಟಿ20 ಪಂದ್ಯಗಳಲ್ಲಿ ಕಂಬ್ಯಾಕ್ ಮಾಡಿದ ಟೀಮ್ ಇಂಡಿಯಾ ಸರಣಿಯನ್ನು 2-2 ಅಂತರದಿಂದ ಸಮಬಲಗೊಳಿಸುವಲ್ಲಿ ಯಶಸ್ವಿಯಾಗಿತ್ತು.

ಇದೀಗ 5ನೇ ಹಾಗೂ ಅಂತಿಮ ಟಿ20 ಪಂದ್ಯಕ್ಕೆ ವೇದಿಕೆ ಸಜ್ಜಾಗಿದೆ. ಈ ಪಂದ್ಯದಲ್ಲಿ ಯಾರು ಗೆಲ್ಲುತ್ತಾರೋ ಅವರು ಟ್ರೋಫಿಯನ್ನು ಎತ್ತಿ ಹಿಡಿಯಲಿದ್ದಾರೆ. ಹೀಗಾಗಿ ಸೆಂಟ್ರಲ್ ಬ್ರೋವರ್ಡ್ ರೀಜನಲ್ ಪಾರ್ಕ್ ಸ್ಟೇಡಿಯಂ ಟರ್ಫ್ ಗ್ರೌಂಡ್​ನಲ್ಲಿ ಉಭಯ ತಂಡಗಳಿಂದ ರೋಚಕ ಹೋರಾಟವನ್ನು ನಿರೀಕ್ಷಿಸಬಹುದು.

ಭಾರತ ಟಿ20 ತಂಡ: ಇಶಾನ್ ಕಿಶನ್ (ವಿಕೆಟ್ ಕೀಪರ್), ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ಉಪನಾಯಕ), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ನಾಯಕ), ಅಕ್ಷರ್ ಪಟೇಲ್, ಯುಜ್ವೇಂದ್ರ ಚಾಹಲ್, ಕುಲ್ದೀಪ್ ಯಾದವ್, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್, ಅವೇಶ್ ಖಾನ್, ಮುಖೇಶ್ ಕುಮಾರ್.

ಇದನ್ನೂ ಓದಿ: ODI World Cup 2023: ಈ 4 ತಂಡಗಳು ಸೆಮಿಫೈನಲ್​ ಪ್ರವೇಶಿಸುವುದು ಖಚಿತ: ಸೆಹ್ವಾಗ್

ವೆಸ್ಟ್ ಇಂಡೀಸ್ ಟಿ20 ತಂಡ: ರೋವ್‌ಮನ್ ಪೊವೆಲ್ (ನಾಯಕ), ಕೈಲ್ ಮೇಯರ್ಸ್ (ಉಪ ನಾಯಕ), ಜಾನ್ಸನ್ ಚಾರ್ಲ್ಸ್, ರೋಸ್ಟನ್ ಚೇಸ್, ಶಿಮ್ರಾನ್ ಹೆಟ್ಮೆಯರ್, ಜೇಸನ್ ಹೋಲ್ಡರ್, ಶಾಯ್ ಹೋಪ್, ಅಕೇಲ್ ಹೊಸೈನ್, ಅಲ್ಝಾರಿ ಜೋಸೆಫ್, ಬ್ರಾಂಡನ್ ಕಿಂಗ್, ಓಬೆಡ್ ಮೆಕಾಯ್, ನಿಕೋಲಸ್ ಪೂರನ್, ರೊಮಾರಿಯೊ ಶೆಫರ್ಡ್, ಓಡಿಯನ್ ಸ್ಮಿತ್ , ಓಶಾನೆ ಥಾಮಸ್.

Published On - 7:35 pm, Sun, 13 August 23

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ