ವೆಸ್ಟ್ ಇಂಡೀಸ್ಗೆ ಸ್ಪರ್ಧಾತ್ಮಕ ಸವಾಲು ನೀಡಿದ ಟೀಮ್ ಇಂಡಿಯಾ
West Indies vs India, 5th T20I: ಈ ಪಂದ್ಯದಲ್ಲಿ ಆರಂಭಿಕರಾಗಿ ಕಣಕ್ಕಿಳಿದ ಯಶಸ್ವಿ ಜೈಸ್ವಾಲ್ (5) ಹಾಗೂ ಶುಭ್ಮನ್ ಗಿಲ್ (9) ಅಕೇಲ್ ಹೊಸೈನ್ರ ಸ್ಪಿನ್ ಮೋಡಿಗೆ ಬಲಿಯಾದರು. ಈ ಹಂತದಲ್ಲಿ ಜೊತೆಯಾದ ಸೂರ್ಯಕುಮಾರ್ ಯಾದವ್ ಹಾಗೂ ತಿಲಕ್ ವರ್ಮಾ 49 ರನ್ಗಳ ಜೊತೆಯಾಟದೊಂದಿಗೆ ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದರು.
West Indies vs India, 5th T20I: ಫ್ಲೋರಿಡಾದ ಸೆಂಟ್ರಲ್ ಬ್ರೋವರ್ಡ್ ರೀಜನಲ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ವೆಸ್ಟ್ ಇಂಡೀಸ್ ವಿರುದ್ಧದ 5ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಸ್ಪರ್ಧಾತ್ಮಕ ಮೊತ್ತ ಪೇರಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಭಾರತ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ.
ಆರಂಭಿಕ ಆಟಗಾರರಾದ ಯಶಸ್ವಿ ಜೈಸ್ವಾಲ್ (5) ಹಾಗೂ ಶುಭ್ಮನ್ ಗಿಲ್ (9) ಅಕೇಲ್ ಹೊಸೈನ್ರ ಸ್ಪಿನ್ ಮೋಡಿಗೆ ಬಲಿಯಾದರು. ಈ ಹಂತದಲ್ಲಿ ಜೊತೆಯಾದ ಸೂರ್ಯಕುಮಾರ್ ಯಾದವ್ ಹಾಗೂ ತಿಲಕ್ ವರ್ಮಾ 49 ರನ್ಗಳ ಜೊತೆಯಾಟದೊಂದಿಗೆ ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದರು.
ಆದರೆ ತಂಡದ ಮೊತ್ತ 66 ರನ್ ಆಗಿದ್ದ ವೇಳೆ ರೋಸ್ಟನ್ ಚೇಸ್ ಹಿಡಿದ ಅದ್ಭುತ ಕ್ಯಾಚ್ನಿಂದ ತಿಲಕ್ ವರ್ಮಾ (27) ಹೊರ ನಡೆಯಬೇಕಾಯಿತು. ಇದರ ಬೆನ್ನಲ್ಲೇ ಸಂಜು ಸ್ಯಾಮ್ಸನ್ (13) ಕೂಡ ವಿಕೆಟ್ ಒಪ್ಪಿಸಿದರು.
ಇದಾಗ್ಯೂ ಮತ್ತೊಂದೆಡೆ ಉತ್ತಮವಾಗಿ ಬ್ಯಾಟ್ ಬೀಸಿದ ಸೂರ್ಯಕುಮಾರ್ ಯಾದವ್ ರನ್ಗಳಿಕೆಯ ವೇಗವನ್ನು ಹೆಚ್ಚಿಸುತ್ತಾ ಸಾಗಿದರು. ಇದರಿಂದ 15 ಓವರ್ ಮುಕ್ತಾಯದ ವೇಳೆಗೆ ಟೀಮ್ ಇಂಡಿಯಾ 112 ರನ್ಗಳಿಸುವಂತಾಯಿತು.
ಅಲ್ಲದೆ 16ನೇ ಓವರ್ನ ಮೊದಲ ಎಸೆತದಲ್ಲೇ ಭರ್ಜರಿ ಸಿಕ್ಸ್ ಸಿಡಿಸಿ ಸೂರ್ಯಕುಮಾರ್ ಯಾದವ್ 38 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಇನ್ನು ನಾಯಕ ಹಾರ್ದಿಕ್ ಪಾಂಡ್ಯ ಕೇವಲ 14 ರನ್ಗಳಿಸಿ ನಿರ್ಗಮಿಸಿದರು. ಮತ್ತೊಂದೆಡೆ ಅಬ್ಬರ ಮುಂದುವರೆಸಿದ ಸೂರ್ಯಕುಮಾರ್ 45 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್ ಹಾಗೂ 4 ಫೋರ್ಗಳೊಂದಿಗೆ 61 ರನ್ ಸಿಡಿಸಿದರು. ಈ ವೇಳೆ ಹೋಲ್ಡರ್ ಎಸೆತವನ್ನು ಗುರುತಿಸುವಲ್ಲಿ ಎಡವಿದ ಸೂರ್ಯಕುಮಾರ್ ಯಾದವ್ (61) ಎಲ್ಬಿಡಬ್ಲ್ಯೂ ಆಗಿ ಹೊರನಡೆದರು.
ಅಂತಿಮವಾಗಿ ಟೀಮ್ ಇಂಡಿಯಾ 20 ಓವರ್ಗಳಲ್ಲಿ 9 ವಿಕೆಟ್ ಕಳೆದುಕೊಂಡು 165 ರನ್ಗಳಿಸಿತು. ಈ ಮೂಲಕ ವೆಸ್ಟ್ ಇಂಡೀಸ್ ತಂಡಕ್ಕೆ 166 ರನ್ಗಳ ಟಾರ್ಗೆಟ್ ನೀಡಿದೆ. ವಿಂಡೀಸ್ ಪರ ರೊಮಾರಿಯೊ ಶೆಫರ್ಡ್ 4 ವಿಕೆಟ್ ಕಬಳಿಸಿದರೆ, ಅಕೇಲ್ ಹೊಸೈನ್ ಹಾಗೂ ಜೇಸನ್ ಹೋಲ್ಡರ್ ತಲಾ 2 ವಿಕೆಟ್ ಪಡೆದರು.
ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್: ಶುಭಮನ್ ಗಿಲ್ , ಯಶಸ್ವಿ ಜೈಸ್ವಾಲ್ , ಸೂರ್ಯಕುಮಾರ್ ಯಾದವ್ , ತಿಲಕ್ ವರ್ಮಾ , ಹಾರ್ದಿಕ್ ಪಾಂಡ್ಯ (ನಾಯಕ) , ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್) , ಅಕ್ಷರ್ ಪಟೇಲ್ , ಕುಲದೀಪ್ ಯಾದವ್ , ಅರ್ಷದೀಪ್ ಸಿಂಗ್ , ಯುಜ್ವೇಂದ್ರ ಚಹಲ್ , ಮುಖೇಶ್ ಕುಮಾರ್.
ಇದನ್ನೂ ಓದಿ: Team India: ವಿಶ್ವ ದಾಖಲೆ ಬರೆದ ಟೀಮ್ ಇಂಡಿಯಾ
ವೆಸ್ಟ್ ಇಂಡೀಸ್ ಪ್ಲೇಯಿಂಗ್ ಇಲೆವೆನ್: ಬ್ರಾಂಡನ್ ಕಿಂಗ್, ಕೈಲ್ ಮೇಯರ್ಸ್, ಶಾಯ್ ಹೋಪ್, ನಿಕೋಲಸ್ ಪೂರನ್ (ವಿಕೆಟ್ ಕೀಪರ್), ರೋವ್‌ಮನ್ ಪೊವೆಲ್ (ನಾಯಕ), ಶಿಮ್ರಾನ್ ಹೆಟ್ಮೆಯರ್, ಜೇಸನ್ ಹೋಲ್ಡರ್, ರೊಮಾರಿಯೊ ಶೆಫರ್ಡ್, ರೋಸ್ಟನ್ ಚೇಸ್, ಅಕೇಲ್ ಹೋಸೇನ್, ಅಲ್ಝಾರಿ ಜೋಸೆಫ್.