ವೆಸ್ಟ್ ಇಂಡೀಸ್​ಗೆ ಸ್ಪರ್ಧಾತ್ಮಕ ಸವಾಲು ನೀಡಿದ ಟೀಮ್ ಇಂಡಿಯಾ

| Updated By: ಝಾಹಿರ್ ಯೂಸುಫ್

Updated on: Aug 13, 2023 | 10:11 PM

West Indies vs India, 5th T20I: ಈ ಪಂದ್ಯದಲ್ಲಿ ಆರಂಭಿಕರಾಗಿ ಕಣಕ್ಕಿಳಿದ ಯಶಸ್ವಿ ಜೈಸ್ವಾಲ್ (5) ಹಾಗೂ ಶುಭ್​ಮನ್ ಗಿಲ್ (9) ಅಕೇಲ್ ಹೊಸೈನ್​ರ ಸ್ಪಿನ್ ಮೋಡಿಗೆ ಬಲಿಯಾದರು. ಈ ಹಂತದಲ್ಲಿ ಜೊತೆಯಾದ ಸೂರ್ಯಕುಮಾರ್ ಯಾದವ್ ಹಾಗೂ ತಿಲಕ್ ವರ್ಮಾ 49 ರನ್​ಗಳ ಜೊತೆಯಾಟದೊಂದಿಗೆ ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದರು.

ವೆಸ್ಟ್ ಇಂಡೀಸ್​ಗೆ ಸ್ಪರ್ಧಾತ್ಮಕ ಸವಾಲು ನೀಡಿದ ಟೀಮ್ ಇಂಡಿಯಾ
IND vs WI
Image Credit source: AFP
Follow us on

West Indies vs India, 5th T20I: ಫ್ಲೋರಿಡಾದ ಸೆಂಟ್ರಲ್ ಬ್ರೋವರ್ಡ್ ರೀಜನಲ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ವೆಸ್ಟ್ ಇಂಡೀಸ್ ವಿರುದ್ಧದ 5ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಸ್ಪರ್ಧಾತ್ಮಕ ಮೊತ್ತ ಪೇರಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಭಾರತ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ.

ಆರಂಭಿಕ ಆಟಗಾರರಾದ ಯಶಸ್ವಿ ಜೈಸ್ವಾಲ್ (5) ಹಾಗೂ ಶುಭ್​ಮನ್ ಗಿಲ್ (9) ಅಕೇಲ್ ಹೊಸೈನ್​ರ ಸ್ಪಿನ್ ಮೋಡಿಗೆ ಬಲಿಯಾದರು. ಈ ಹಂತದಲ್ಲಿ ಜೊತೆಯಾದ ಸೂರ್ಯಕುಮಾರ್ ಯಾದವ್ ಹಾಗೂ ತಿಲಕ್ ವರ್ಮಾ 49 ರನ್​ಗಳ ಜೊತೆಯಾಟದೊಂದಿಗೆ ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದರು.

ಆದರೆ ತಂಡದ ಮೊತ್ತ 66 ರನ್ ಆಗಿದ್ದ ವೇಳೆ ರೋಸ್ಟನ್ ಚೇಸ್ ಹಿಡಿದ ಅದ್ಭುತ ಕ್ಯಾಚ್​ನಿಂದ ತಿಲಕ್ ವರ್ಮಾ (27) ಹೊರ ನಡೆಯಬೇಕಾಯಿತು. ಇದರ ಬೆನ್ನಲ್ಲೇ ಸಂಜು ಸ್ಯಾಮ್ಸನ್ (13) ಕೂಡ ವಿಕೆಟ್ ಒಪ್ಪಿಸಿದರು.

ಇದಾಗ್ಯೂ ಮತ್ತೊಂದೆಡೆ ಉತ್ತಮವಾಗಿ ಬ್ಯಾಟ್ ಬೀಸಿದ ಸೂರ್ಯಕುಮಾರ್ ಯಾದವ್ ರನ್​ಗಳಿಕೆಯ ವೇಗವನ್ನು ಹೆಚ್ಚಿಸುತ್ತಾ ಸಾಗಿದರು. ಇದರಿಂದ 15 ಓವರ್​ ಮುಕ್ತಾಯದ ವೇಳೆಗೆ ಟೀಮ್ ಇಂಡಿಯಾ 112 ರನ್​ಗಳಿಸುವಂತಾಯಿತು.

ಅಲ್ಲದೆ 16ನೇ ಓವರ್​ನ ಮೊದಲ ಎಸೆತದಲ್ಲೇ ಭರ್ಜರಿ ಸಿಕ್ಸ್ ಸಿಡಿಸಿ ಸೂರ್ಯಕುಮಾರ್ ಯಾದವ್ 38 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಇನ್ನು ನಾಯಕ ಹಾರ್ದಿಕ್ ಪಾಂಡ್ಯ ಕೇವಲ 14 ರನ್​ಗಳಿಸಿ ನಿರ್ಗಮಿಸಿದರು. ಮತ್ತೊಂದೆಡೆ ಅಬ್ಬರ ಮುಂದುವರೆಸಿದ ಸೂರ್ಯಕುಮಾರ್ 45 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್ ಹಾಗೂ 4 ಫೋರ್​ಗಳೊಂದಿಗೆ 61 ರನ್ ಸಿಡಿಸಿದರು. ಈ ವೇಳೆ ಹೋಲ್ಡರ್ ಎಸೆತವನ್ನು ಗುರುತಿಸುವಲ್ಲಿ ಎಡವಿದ ಸೂರ್ಯಕುಮಾರ್ ಯಾದವ್ (61) ಎಲ್​ಬಿಡಬ್ಲ್ಯೂ ಆಗಿ ಹೊರನಡೆದರು.

ಅಂತಿಮವಾಗಿ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 165 ರನ್​ಗಳಿಸಿತು. ಈ ಮೂಲಕ ವೆಸ್ಟ್ ಇಂಡೀಸ್ ತಂಡಕ್ಕೆ 166 ರನ್​ಗಳ ಟಾರ್ಗೆಟ್ ನೀಡಿದೆ. ವಿಂಡೀಸ್ ಪರ ರೊಮಾರಿಯೊ ಶೆಫರ್ಡ್​ 4 ವಿಕೆಟ್ ಕಬಳಿಸಿದರೆ, ಅಕೇಲ್ ಹೊಸೈನ್ ಹಾಗೂ ಜೇಸನ್ ಹೋಲ್ಡರ್ ತಲಾ 2 ವಿಕೆಟ್ ಪಡೆದರು.

ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್: ಶುಭಮನ್ ಗಿಲ್ , ಯಶಸ್ವಿ ಜೈಸ್ವಾಲ್ , ಸೂರ್ಯಕುಮಾರ್ ಯಾದವ್ , ತಿಲಕ್ ವರ್ಮಾ , ಹಾರ್ದಿಕ್ ಪಾಂಡ್ಯ (ನಾಯಕ) , ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್) , ಅಕ್ಷರ್ ಪಟೇಲ್ , ಕುಲದೀಪ್ ಯಾದವ್ , ಅರ್ಷದೀಪ್ ಸಿಂಗ್ , ಯುಜ್ವೇಂದ್ರ ಚಹಲ್ , ಮುಖೇಶ್ ಕುಮಾರ್.

ಇದನ್ನೂ ಓದಿ: Team India: ವಿಶ್ವ ದಾಖಲೆ ಬರೆದ ಟೀಮ್ ಇಂಡಿಯಾ

ವೆಸ್ಟ್ ಇಂಡೀಸ್ ಪ್ಲೇಯಿಂಗ್ ಇಲೆವೆನ್: ಬ್ರಾಂಡನ್ ಕಿಂಗ್, ಕೈಲ್ ಮೇಯರ್ಸ್, ಶಾಯ್ ಹೋಪ್, ನಿಕೋಲಸ್ ಪೂರನ್ (ವಿಕೆಟ್ ಕೀಪರ್), ರೋವ್‌ಮನ್ ಪೊವೆಲ್ (ನಾಯಕ), ಶಿಮ್ರಾನ್ ಹೆಟ್ಮೆಯರ್, ಜೇಸನ್ ಹೋಲ್ಡರ್, ರೊಮಾರಿಯೊ ಶೆಫರ್ಡ್, ರೋಸ್ಟನ್ ಚೇಸ್, ಅಕೇಲ್ ಹೋಸೇನ್, ಅಲ್ಝಾರಿ ಜೋಸೆಫ್.