India squad: ವೆಸ್ಟ್​ ಇಂಡೀಸ್ ವಿರುದ್ದದ ಸರಣಿಗೆ ಟೀಮ್ ಇಂಡಿಯಾ ಪ್ರಕಟ

India squad for West Indies series: ಅನುಭವಿ ವೇಗಿಗಳಾದ ಜಸ್ಪ್ರೀತ್ ಬುಮ್ರಾ, ಮೊಹಮ್ಮದ್. ಶಮಿಗೆ ಸರಣಿಯಿಂದ ವಿಶ್ರಾಂತಿ ನೀಡಲಾಗಿದೆ. ಇನ್ನು ತಂಡಕ್ಕೆ ಆಯ್ಕೆಯಾಗಿರುವ ಉಪನಾಯಕ ಕೆಎಲ್ ರಾಹುಲ್ 2ನೇ ಏಕದಿನ ಪಂದ್ಯದಿಂದ ಲಭ್ಯವಾಗಲಿದ್ದಾರೆ.

India squad: ವೆಸ್ಟ್​ ಇಂಡೀಸ್ ವಿರುದ್ದದ ಸರಣಿಗೆ ಟೀಮ್ ಇಂಡಿಯಾ ಪ್ರಕಟ
Team India
Follow us
TV9 Web
| Updated By: ಝಾಹಿರ್ ಯೂಸುಫ್

Updated on:Jan 26, 2022 | 11:08 PM

India squad for West Indies series:  ವೆಸ್ಟ್ ಇಂಡೀಸ್ ವಿರುದ್ದದ (India vs West Indies) ಸರಣಿಗಾಗಿ ಟೀಮ್ ಇಂಡಿಯಾವನ್ನು (India squad) ಪ್ರಕಟಿಸಲಾಗಿದೆ. ಗಾಯದ ಕಾರಣ ಸೌತ್ ಆಫ್ರಿಕಾ ಸರಣಿಯಿಂದ ಹೊರಗುಳಿದಿದ್ದ ಟೀಮ್ ಇಂಡಿಯಾ (Team India) ನಾಯಕ ರೋಹಿತ್ ಶರ್ಮಾ (Rohit Sharma) ತಂಡಕ್ಕೆ ಮರಳಿದ್ದಾರೆ. ಐಪಿಎಲ್​ನಲ್ಲಿ ಪಂಜಾಬ್ ಕಿಂಗ್ಸ್​ ಪರ ಆಡಿದ್ದ ಯುವ ಸ್ಪಿನ್ನರ್ ರವಿ ಬಿಷ್ಣೋಯ್ ಹಾಗೂ  ಸ್ಪೋಟಕ ಬ್ಯಾಟರ್ ದೀಪಕ್ ಹೂಡಾ  ಚೊಚ್ಚಲ ಬಾರಿಗೆ ಟೀಮ್ ಇಂಡಿಯಾದಲ್ಲಿ ಅವಕಾಶ ಪಡೆದಿದ್ದಾರೆ. ಹಾಗೆಯೇ ನ್ಯೂಜಿಲೆಂಡ್ ವಿರುದ್ದ ಸರಣಿಗೆ ಆಯ್ಕೆಯಾಗಿದ್ದ ಯುವ ವೇಗಿ ಅವೇಶ್ ಖಾನ್ ಮತ್ತೊಮ್ಮೆ ತಂಡದಲ್ಲಿ ಕಾಣಿಸಿಕೊಂಡಿದ್ದಾರೆ. ಇನ್ನು ಕುಲ್ದೀಪ್ ಯಾದವ್, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್ ತಂಡಕ್ಕೆ ಮರಳಿದ್ದಾರೆ.

ಇನ್ನು ಅನುಭವಿ ವೇಗಿಗಳಾದ ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿಗೆ ಸರಣಿಯಿಂದ ವಿಶ್ರಾಂತಿ ನೀಡಲಾಗಿದೆ. ಹಾಗೆಯೇ ತಂಡಕ್ಕೆ ಆಯ್ಕೆಯಾಗಿರುವ ಉಪನಾಯಕ ಕೆಎಲ್ ರಾಹುಲ್ 2ನೇ ಏಕದಿನ ಪಂದ್ಯದಿಂದ ಲಭ್ಯವಾಗಲಿದ್ದಾರೆ. ಇದಾಗ್ಯೂ  ಮೊಣಕಾಲಿನ ಗಾಯದಿಂದ ಚೇತರಿಸಿಕೊಳ್ಳುತ್ತಿರುವ ರವೀಂದ್ರ ಜಡೇಜಾ ಅವರನ್ನು ಆಯ್ಕೆ ಮಾಡಲಾಗಿಲ್ಲ. ಇನ್ನು ಗಾಯದ ಕಾರಣ ರವಿಚಂದ್ರನ್ ಅಶ್ವಿನ್ ಅವರನ್ನು ಕೂಡ ಆಯ್ಕೆಗೆ ಪರಿಗಣಿಸಿಲ್ಲ.

ಭಾರತ ಟಿ20 ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯ ಕುಮಾರ್ ಯಾದವ್, ರಿಷಬ್ ಪಂತ್ (ವಿಕೆಟ್ ಕೀಪರ್), ವೆಂಕಟೇಶ್ ಅಯ್ಯರ್, ದೀಪಕ್ ಚಹಾರ್, ಶಾರ್ದೂಲ್ ಠಾಕೂರ್, ರವಿ ಬಿಷ್ಣೋಯ್, ಅಕ್ಷರ್ ಪಟೇಲ್, ಯುಜುವೇಂದ್ರ  ಚಹಾಲ್, ವಾಷಿಂಗ್ಟನ್ ಸುಂದರ್, ಮೊಹಮ್ಮದ್ ಸಿರಾಜ್, ಭುವನೇಶ್ವರ್ ಕುಮಾರ್, ಅವೇಶ್ ಖಾನ್, ಹರ್ಷಲ್ ಪಟೇಲ್

ಭಾರತ ಏಕದಿನ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ರುತುರಾಜ್ ಗಾಯಕ್ವಾಡ್, ಶಿಖರ್ ಧವನ್, ವಿರಾಟ್ ಕೊಹ್ಲಿ, ಸೂರ್ಯ ಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದೀಪಕ್ ಚಾಹರ್, ಶಾರ್ದೂಲ್ ಠಾಕೂರ್, ಯುಜುವೇಂದ್ರ ಚಾಹಲ್, ಕುಲ್ದೀಪ್ ಯಾದವ್ , ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಅವೇಶ್ ಖಾನ್

ಭಾರತ-ವೆಸ್ಟ್ ಇಂಡೀಸ್ ಸರಣಿ ವೇಳಾಪಟ್ಟಿ ಹೀಗಿದೆ:

ಏಕದಿನ ಸರಣಿ ವೇಳಾಪಟ್ಟಿ

6 ಫೆಬ್ರವರಿ: 1ನೇ ODI, ಅಹಮದಾಬಾದ್

ಫೆಬ್ರವರಿ 9: 2ನೇ ODI, ಅಹಮದಾಬಾದ್

ಫೆಬ್ರವರಿ 11: 3ನೇ ODI, ಅಹಮದಾಬಾದ್

ಟಿ20 ಸರಣಿ ವೇಳಾಪಟ್ಟಿ:

16 ಫೆಬ್ರವರಿ: 1ನೇ ಟಿ20, ಕೋಲ್ಕತ್ತಾ

ಫೆಬ್ರವರಿ 18: ಎರಡನೇ ಟಿ20, ಕೋಲ್ಕತ್ತಾ

ಫೆಬ್ರವರಿ 20: ಮೂರನೇ ಟಿ20, ಕೋಲ್ಕತ್ತಾ

ಇದನ್ನೂ ಓದಿ: ICC ODI Rankings: ಐಸಿಸಿ ಏಕದಿನ ರ‍್ಯಾಕಿಂಗ್ ಪಟ್ಟಿ ಪ್ರಕಟ: ಕೊಹ್ಲಿ-ರೋಹಿತ್ ನಡುವೆ ಪೈಪೋಟಿ

ಇದನ್ನೂ ಓದಿ: IPL 2022 Auction: ಲಕ್ನೋ ತಂಡದ ಮೊದಲ ಟಾರ್ಗೆಟ್ ಯಾರು ಎಂಬುದನ್ನು ಬಹಿರಂಗಪಡಿಸಿದ ರಾಹುಲ್

Published On - 10:51 pm, Wed, 26 January 22

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ