Hanuma Vihari: ಕ್ರಿಕೆಟಿಗ ಹನುಮ ವಿಹಾರಿಗೆ ವ್ಯಾಪಕ ಬೆಂಬಲ

Hanuma Vihari: ಆಂಧ್ರ ಪ್ರದೇಶ ಮೂಲದ ಹನುಮ ವಿಹಾರಿ ಟೀಮ್ ಇಂಡಿಯಾ ಪರ ಇದುವರೆಗೆ 16 ಟೆಸ್ಟ್ ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 1 ಭರ್ಜರಿ ಶತಕ ಹಾಗೂ 5 ಅರ್ಧಶತಕಗಳನ್ನು ಒಳಗೊಂಡಂತೆ ಒಟ್ಟು 839 ರನ್ ಕಲೆಹಾಕಿದ್ದಾರೆ. ಕಳೆದ ಎರಡು ವರ್ಷಗಳಿಂದ ಟೀಮ್ ಇಂಡಿಯಾದಿಂದ ಹೊರಗುಳಿದಿರುವ ವಿಹಾರಿ 2022 ರಲ್ಲಿ ಕೊನೆಯ ಬಾರಿ ಭಾರತ ತಂಡವನ್ನು ಪ್ರತಿನಿಧಿಸಿದ್ದರು.

Hanuma Vihari: ಕ್ರಿಕೆಟಿಗ ಹನುಮ ವಿಹಾರಿಗೆ ವ್ಯಾಪಕ ಬೆಂಬಲ
Hanuma Vihari
Follow us
TV9 Web
| Updated By: ಝಾಹಿರ್ ಯೂಸುಫ್

Updated on: Feb 28, 2024 | 1:09 PM

ಕ್ರಿಕೆಟಿಗ ಹನುಮ ವಿಹಾರಿ (Hanuma Vihari) ಮತ್ತು ಆಂಧ್ರ ಕ್ರಿಕೆಟ್ ಸಂಸ್ಥೆ (ಎಸಿಎ) ನಡುವಿನ ಜಟಾಪಟಿ ಇದೀಗ ಸಾರ್ವಜನಿಕ ಚರ್ಚೆಗೆ ಗ್ರಾಸವಾಗಿದೆ. ವಿಹಾರಿ ಆಂಧ್ರ ತಂಡದ ನಾಯಕತ್ವವನ್ನು ತೊರೆಯುವುದರೊಂದಿಗೆ ಶುರುವಾದ ಈ ವಿವಾದಕ್ಕೆ ಇದೀಗ ರಾಜಕಾರಣಿಗಳು ಎಂಟ್ರಿ ಕೊಟ್ಟಿದ್ದಾರೆ. ಮತ್ತೊಂದೆಡೆ ಅಭಿಮಾನಿಗಳಿಂದಲೂ ಬೆಂಬಲ ವ್ಯಕ್ತವಾಗುತ್ತಿದೆ.

16 ಟೆಸ್ಟ್‌ಗಳಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿರುವ ವಿಹಾರಿ, ಎಸಿಎಯಿಂದ ದುರ್ವರ್ತನೆ ಮತ್ತು ಒಳ ರಾಜಕೀಯದಿಂದಾಗಿ ನಾನು ಆಂಧ್ರ ತಂಡದೊಂದಿಗಿನ ಸಂಬಂಧವನ್ನು ಕಡಿದುಕೊಳ್ಳುತ್ತಿರುವುದಾಗಿ ತಿಳಿಸಿದ್ದರು. ಇದಕ್ಕೂ ಮುನ್ನ ಅವರು ಆಂಧ್ರ ತಂಡದ ನಾಯಕತ್ವನ್ನೂ ಕೂಡ ತ್ಯಜಿಸಿದ್ದರು.

ಈ ಬಗ್ಗೆ ಸೋಷಿಯಲ್ ಮೀಡಿಯಾ ಮೂಲಕ ಸ್ಪಷ್ಟನೆ ನೀಡಿದ್ದ ಹನುಮ ವಿಹಾರಿ, ಆಂಧ್ರ ಕ್ರಿಕೆಟ್ ಸಂಸ್ಥೆ ತನನ್ನು ನಾಯಕತ್ವದಿಂದ ತೆಗೆದುಹಾಕಲು ಯೋಜಿಸಿದ್ದಾರೆ. ಅಲ್ಲದೆ ರಾಜಕೀಯದ ಮೂಲಕ ಒತ್ತಡ ಹೇರಿ ನನನ್ನು ಕಪ್ತಾನನ ಸ್ಥಾನದಿಂದ ಕೆಳಗಿಳಿಸಿದ್ದಾರೆ ಎಂದು ಆರೋಪಿಸಿದ್ದರು.

ವಿಹಾರಿ ಅವರ ಈ ಗಂಭೀರ ಆರೋಪಕ್ಕೆ ಇದೀಗ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. #WeStandWithHanuma ಎಂಬ ಹ್ಯಾಶ್‌ಟ್ಯಾಗ್ ಭಾರತದಲ್ಲಿ ಟ್ರೆಂಡ್ ಆಗಿದ್ದು, ಮಾಜಿ ಮುಖ್ಯಮಂತ್ರಿ ನಾರಾ ಚಂದ್ರಬಾಬು ನಾಯ್ಡು ಮತ್ತು ನಟ-ರಾಜಕಾರಣಿ ಪವನ್ ಕಲ್ಯಾಣ್ ಅವರಂತಹ ಪ್ರಮುಖ ವ್ಯಕ್ತಿಗಳು ಕ್ರಿಕೆಟಿಗನಿಗೆ ತಮ್ಮ ಬೆಂಬಲ ಸೂಚಿಸಿದ್ದಾರೆ.

ಆಂಧ್ರ ಕ್ರಿಕೆಟ್ ಸಂಸ್ಥೆಯ ನಡೆಯನ್ನು ಟೀಕಿಸಿರುವ ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್, ರಾಜಕೀಯ ನಾಯಕನ ಪ್ರಭಾವವು ರಾಷ್ಟ್ರೀಯ ಕ್ರಿಕೆಟಿಗನ ಕೊಡುಗೆಗಳನ್ನು ಮೀರಿಸುತ್ತದೆಯೇ ಎಂದು ಪ್ರಶ್ನಿಸಿದ್ದಾರೆ. ಅಲ್ಲದೆ ಸಂಪೂರ್ಣವಾಗಿ ಕ್ರೀಡೆಗೆ ಸಮರ್ಪಿಸಿಕೊಂಡಿರುವ ಆಟಗಾರರಿಗೆ ಗೌರವ ನೀಡಬೇಕೆಂದು ಒತ್ತಿ ಹೇಳಿದ್ದಾರೆ.

ಏತನ್ಮಧ್ಯೆ, ವಿಹಾರಿ ಎತ್ತಿರುವ ಆರೋಪಗಳ ಬಗ್ಗೆ ಎಸಿಎ ತನಿಖೆ ನಡೆಸುವುದಾಗಿ ತಿಳಿಸಿದೆ. ಆದಾಗ್ಯೂ, ಅವರ ನಾಯಕತ್ವದ ನಿರ್ಗಮನವು ವೃತ್ತಿಪರ ಪರಿಗಣನೆಯ ಪರಿಣಾಮವಾಗಿದೆಯೇ ಹೊರತು ರಾಜಕೀಯ ಹಸ್ತಕ್ಷೇಪವಲ್ಲ ಎಂದು ಹೇಳಿದೆ. ಹನುಮ ವಿಹಾರಿಯ ದುರ್ವತನೆಯ ನಡೆಯನ್ನು ಉಲ್ಲೇಖಿಸಿ ವಿವಿಧ ವಲಯಗಳಿಂದ ದೂರುಗಳನ್ನು ಸ್ವೀಕರಿಸಿದ್ದೇವೆ. ಹೀಗಾಗಿ ನಾಯಕತ್ವದಿಂದ ಅವರನ್ನು ಕೆಳಗಿಳಿಸಲಾಗಿದೆ ಎಂದು ಆಂಧ್ರ ಕ್ರಿಕೆಟ್ ಸಂಸ್ಥೆ ಸ್ಪಷ್ಟನೆ ನೀಡಿದೆ.

ಇದನ್ನೂ ಓದಿ: IPL 2024: RCB ಗೆದ್ದರೆ ಹೊಸ ಇತಿಹಾಸ

ಆದಾಗ್ಯೂ, ವಿಹಾರಿ ಅವರ ಆರೋಪಗಳು ಆಂಧ್ರಪ್ರದೇಶದ ಕ್ರಿಕೆಟ್ ವಲಯಗಳಲ್ಲಿ ಹೊಸ ಚರ್ಚೆಯನ್ನು ಹುಟ್ಟುಹಾಕಿದೆ. ಇದೀಗ ಹನುಮ ವಿಹಾರಿ ಅವರು ಇತರ ರಾಜ್ಯ ತಂಡದ ಪರ ಆಡಲು ನಿರಾಕ್ಷೇಪಣಾ ಪ್ರಮಾಣಪತ್ರಕ್ಕೆ (ಎನ್‌ಒಸಿ) ಮನವಿ ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ. ಇತ್ತ ಆಂಧ್ರ ಕ್ರಿಕೆಟ್ ಸಂಸ್ಥೆಯು ತಂಡದ ಹೊಸ ನಾಯಕನಾಗಿ ರಿಕಿ ಭುಯಿ ಅವರನ್ನು ಆಯ್ಕೆ ಮಾಡಿದೆ. ಇದರೊಂದಿಗೆ ಆಂಧ್ರ ತಂಡದಲ್ಲಿ ಹನುಮ ವಿಹಾರಿಯ ಯುಗಾಂತ್ಯ ಎಂದೇ ಹೇಳಬಹುದು.

ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್