ಎಂತಹ ಅದ್ಭುತ ರಸ್ತೆ…ಪಾಕ್ ಪಿಚ್​ ಅನ್ನು ವ್ಯಂಗ್ಯವಾಡಿದ ನ್ಯೂಜಿಲೆಂಡ್ ಬೌಲರ್

Pakistan vs New Zealand: 2ನೇ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಜಿಲೆಂಡ್ ತಂಡದ ಪರ ಆರಂಭಿಕ ಆಟಗಾರ ಟಾಮ್ ಲಾಥಮ್ 71 (100 ಎಸೆತ) ಹಾಗೂ ಡೆವೊನ್ ಕಾನ್ವೆ 122 (191 ಎಸೆತ) ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು.

ಎಂತಹ ಅದ್ಭುತ ರಸ್ತೆ...ಪಾಕ್ ಪಿಚ್​ ಅನ್ನು ವ್ಯಂಗ್ಯವಾಡಿದ ನ್ಯೂಜಿಲೆಂಡ್ ಬೌಲರ್
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jan 02, 2023 | 8:31 PM

ಕರಾಚಿಯಲ್ಲಿ ನಡೆಯುತ್ತಿರುವ ಪಾಕಿಸ್ತಾನ್ (Pakistan) ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ನ್ಯೂಜಿಲೆಂಡ್ (New Zealand) ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದೆ. ಈ ಪ್ರದರ್ಶನದ ಬೆನ್ನಲ್ಲೇ ಇದೀಗ ಪಾಕಿಸ್ತಾನದ ಪಿಚ್​ಗಳ ಗುಣಮಟ್ಟದ ಬಗ್ಗೆ ಟೀಕೆಗಳು ಕೇಳಿ ಬರುತ್ತಿದೆ. ಏಕೆಂದರೆ ಇತ್ತೀಚೆಗೆ ಪಾಕ್​ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಟೆಸ್ಟ್​ ಸರಣಿಯಲ್ಲಿ ರನ್​ಗಳ ಸುರಿಮಳೆಯಾಗಿತ್ತು. ಅಷ್ಟೇ ಅಲ್ಲದೆ ಇಂಗ್ಲೆಂಡ್ ತಂಡವು ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿ 3-0 ಅಂತರದಿಂದ ಪಾಕ್​ನಲ್ಲೇ ಪಾಕಿಸ್ತಾನ್ ತಂಡವನ್ನು ಬಗ್ಗು ಬಡಿದಿತ್ತು. ಇದೀಗ ನ್ಯೂಜಿಲೆಂಡ್-ಪಾಕ್ ನಡುವಣ ಸರಣಿಯಲ್ಲೂ ಬ್ಯಾಟ್ಸ್​ಮನ್​ಗಳು ವಿಜೃಂಭಿಸುತ್ತಿದ್ದಾರೆ.

ಇತ್ತ 2ನೇ ಟೆಸ್ಟ್ ಪಂದ್ಯದಲ್ಲೂ ನ್ಯೂಜಿಲೆಂಡ್ ಬ್ಯಾಟ್ಸ್​ಮನ್​ಗಳ ಅಬ್ಬರದ ಬೆನ್ನಲ್ಲೇ ಪಾಕ್ ಪಿಚ್​ ಅನ್ನು ಕಿವೀಸ್ ವೇಗಿ ಮಿಚೆಲ್ ಮೆಕ್‌ಕ್ಲೆನಾಘನ್ ವ್ಯಂಗ್ಯವಾಡಿದ್ದಾರೆ. ಮೊದಲ ಇನಿಂಗ್ಸ್​ನಲ್ಲಿ ನ್ಯೂಜಿಲೆಂಡ್ ತಂಡವು 6 ವಿಕೆಟ್ ನಷ್ಟಕ್ಕೆ 309 ರನ್​ ಕಲೆಹಾಕಿತು. ಅದು ಕೂಡ ಮೊದಲ ದಿನಾಟದಲ್ಲೇ ಎಂಬುದು ವಿಶೇಷ.

ಪಾಕ್​ನಲ್ಲಿ ಬ್ಯಾಟ್ಸ್​ಮನ್​ಗಳು ಭರ್ಜರಿ ಪ್ರದರ್ಶನ ನೀಡುತ್ತಿದ್ದಂತೆ ಇತ್ತ ನ್ಯೂಜಿಲೆಂಡ್ ವೇಗಿ ಮಿಚೆಲ್ ಮೆಕ್‌ಕ್ಲೆನಾಘನ್ ಎಂತಹ ಅದ್ಭುತ (ಪರಿಪೂರ್ಣ) ರಸ್ತೆ…ಇದು ಬ್ಯಾಟ್ಸ್​ಮನ್​​ಗಳ ಕನಸು..ಎಂಬಾರ್ಥದಲ್ಲಿ ಟ್ವೀಟ್​ ಮಾಡಿದ್ದಾರೆ. ಇದೀಗ ಮಿಚೆಲ್ ಮೆಕ್‌ಕ್ಲೆನಾಘನ್ ಅವರ ಟ್ವೀಟ್ ವೈರಲ್ ಆಗಿದ್ದು, ಪಾಕ್ ಕ್ರಿಕೆಟ್ ಮಂಡಳಿ ಮತ್ತೊಮ್ಮೆ ಪಿಚ್ ವಿಷಯದಲ್ಲಿ ನಗೆಪಾಟಲೀಗೀಡಾಗಿದೆ. ಇದಕ್ಕೂ ಮುನ್ನ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲೂ ಪಿಚ್​ ಬ್ಯಾಟ್ಸ್​​ಮನ್​​ಗಳಿಗೆ ಸಹಕಾರಿಯಾಗಿತ್ತು.

ಇದನ್ನೂ ಓದಿ
Image
IPL 2023: 2 ದೇಶಗಳಿಂದ ಐಪಿಎಲ್​ಗೆ ಆಯ್ಕೆಯಾದ ಏಕೈಕ ಕ್ರಿಕೆಟಿಗ
Image
IPL 2023: RCB ಪ್ಲೇಯಿಂಗ್ ಇಲೆವೆನ್​ನಲ್ಲಿ ಬದಲಾವಣೆ ಕಂಡು ಬರುವುದು ಡೌಟ್, ಏಕೆಂದರೆ…
Image
IPL 2023: ಐಪಿಎಲ್​ಗೆ ನಮೀಬಿಯಾ, ಐರ್ಲೆಂಡ್, ಜಿಂಬಾಬ್ವೆ ಆಟಗಾರರು ಎಂಟ್ರಿ
Image
IPL 2023 RCB Team: RCB ಹೊಸ ತಂಡ ಹೀಗಿದೆ

ರಾವಲ್ಪಿಂಡಿಯಲ್ಲಿ ಆಡಲಾಗಿದ್ದ ಮೊದಲ ಟೆಸ್ಟ್​ನಲ್ಲಿ ಇಂಗ್ಲೆಂಡ್ ತಂಡವು ಮೊದಲ ದಿನದಾಟದಲ್ಲೇ 506 ರನ್​ ಬಾರಿಸಿತ್ತು. ಈ ಮೂಲಕ ಇಂಗ್ಲೆಂಡ್ ತಂಡವು ಟೆಸ್ಟ್ ಕ್ರಿಕೆಟ್​ನಲ್ಲಿ ಮೊದಲ ದಿನದಾಟದಲ್ಲಿ ಗರಿಷ್ಠ ಸ್ಕೋರ್ ಕಲೆಹಾಕಿದ ದಾಖಲೆ ಬರೆದಿತ್ತು. ಇದೀಗ ನ್ಯೂಜಿಲೆಂಡ್ ಸರಣಿಯಲ್ಲೂ ಬ್ಯಾಟ್ಸ್​ಮನ್​ಗಳ ಅಬ್ಬರ ಮುಂದುವರೆದಿದೆ. ಇದರ ಬೆನ್ನಲ್ಲೇ ಪಾಕ್​​ನಲ್ಲಿನ ಪಿಚ್​ಗಳ ಬಗ್ಗೆ ಭಾರೀ ಟೀಕೆಗಳು ವ್ಯಕ್ತವಾಗುತ್ತಿದೆ.

ಇದನ್ನೂ ಓದಿ: RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?

ಇನ್ನು 2ನೇ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಜಿಲೆಂಡ್ ತಂಡದ ಪರ ಆರಂಭಿಕ ಆಟಗಾರ ಟಾಮ್ ಲಾಥಮ್ 71 (100 ಎಸೆತ) ಹಾಗೂ ಡೆವೊನ್ ಕಾನ್ವೆ 122 (191 ಎಸೆತ) ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಪರಿಣಾಮ ಮೊದಲ ದಿನದಾಟದ ಅಂತ್ಯಕ್ಕೆ ನ್ಯೂಜಿಲೆಂಡ್ ತಂಡವು 6 ವಿಕೆಟ್ ಕಳೆದುಕೊಂಡು 309 ರನ್​ ಕಲೆಹಾಕಿದೆ. ಸದ್ಯ ಟಾಮ್ ಬ್ಲಂಡೆಲ್ ಹಾಗೂ ಇಶ್ ಸೋಧಿ 2ನೇ ದಿನದಾಟಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್