
T20 World Cup 2026: ಟಿ20 ವಿಶ್ವಕಪ್ನ ಸೆಮಿಫೈನಲ್ ಪಂದ್ಯಗಳಿಗೆ ವೇದಿಕೆ ಸಿದ್ಧವಾಗಿದೆ. ನಾಳೆ (ಮಾರ್ಚ್ 4) ನಡೆಯಲಿರುವ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಸೌತ್ ಆಫ್ರಿಕಾ ಮತ್ತು ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಇನ್ನು ಗುರುವಾರ ಜರುಗಲಿರುವ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಭಾರತ ತಂಡವು ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ.
ಈ ಪಂದ್ಯಕ್ಕೆ ಮಳೆ ಅಡ್ಡಿಯಾಗಿ ಅಥವಾ ಕಾರಣಾಂತರಗಳಿಂದ ರದ್ದಾದರೆ ಯಾರು ಫೈನಲ್ಗೇರಲಿದ್ದಾರೆ ಎಂಬ ಪ್ರಶ್ನೆ ಮೂಡುವುದು ಸಹಜ. ಈ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ…
ಸೆಮಿಫೈನಲ್ ಸನ್ನಿವೇಶ:
ಅಂದರೆ ಸೆಮಿಫೈನಲ್ ಪಂದ್ಯವು ನಿಗದಿತ ದಿನದಂದು ಸ್ಥಗಿತಗೊಂಡರೆ ಮರುದಿನ ಪಂದ್ಯವನ್ನು ಆಯೋಜಿಸಲಾಗುತ್ತದೆ. ಮೀಸಲು ದಿನದಂದು ಕೂಡ ಮ್ಯಾಚ್ ಆಯೋಜಿಸಲು ಸಾಧ್ಯವಾಗದೇ ಇದ್ದರೆ ಮಾತ್ರ ಪಂದ್ಯವನ್ನು ರದ್ದು ಮಾಡಲಾಗುತ್ತದೆ. ಹೀಗೆ ರದ್ದಾದರೆ ಸೂಪರ್-8 ಸುತ್ತಿನ ಅಂಕಪಟ್ಟಿಯನ್ನು ಪರಿಗಣನೆಗೆ ತೆಗೆದುಕೊಳ್ಳಲಿದ್ದಾರೆ.
ಇಲ್ಲಿ ಸೂಪರ್-8 ಸುತ್ತಿನ ಗ್ರೂಪ್-1 ರ ಅಂಕಪಟ್ಟಿಯಲ್ಲಿ ಸೌತ್ ಆಫ್ರಿಕಾ ತಂಡವು ಅಗ್ರಸ್ಥಾನದಲ್ಲಿದ್ದು, ಭಾರತ ದ್ವಿತೀಯ ಸ್ಥಾನದಲ್ಲಿದೆ. ಇನ್ನು ಗ್ರೂಪ್-2 ರ ಅಂಕಪಟ್ಟಿಯಲ್ಲಿ ಇಂಗ್ಲೆಂಡ್ ಮೊದಲ ಸ್ಥಾನದಲ್ಲಿದ್ದರೆ, ನ್ಯೂಝಿಲೆಂಡ್ ದ್ವಿತೀಯ ಸ್ಥಾನದಲ್ಲಿದೆ.
ಇದನ್ನೂ ಓದಿ: ಟಿ20 ವಿಶ್ವಕಪ್ ಇತಿಹಾಸದಲ್ಲೇ ಅತ್ಯಂತ ಹೀನಾಯ ಸೋಲುಂಡ ಟೀಮ್ ಇಂಡಿಯಾ
ಅದರಂತೆ ಸೆಮಿಫೈನಲ್ ಪಂದ್ಯಗಳು ಕಾರಣಾಂತರಗಳಿಂದ ರದ್ದಾದರೆ ಸೂಪರ್-8 ಸುತ್ತಿನ ಅಂಕ ಪಟ್ಟಿಗಳಲ್ಲಿ ಅಗ್ರಸ್ಥಾನದಲ್ಲಿರುವ ಸೌತ್ ಆಫ್ರಿಕಾ ಹಾಗೂ ಇಂಗ್ಲೆಂಡ್ ತಂಡಗಳು ಫೈನಲ್ಗೇರಲಿವೆ.