ಫೈನಲ್ ಪಂದ್ಯದ ವೇಳೆ ಮಳೆ ಬಂದರೆ ಫಲಿತಾಂಶ ನಿರ್ಧರಿಸುವುದು ಹೇಗೆ? ಇಲ್ಲಿದೆ ಮಾಹಿತಿ

ICC World Cup 2023 Final: ಫೈನಲ್ ಪಂದ್ಯಕ್ಕೆ ಮೀಸಲು ದಿನದಾಟವನ್ನು ನಿಗದಿ ಮಾಡಲಾಗಿದೆ. ಒಂದು ವೇಳೆ ಭಾನುವಾರ ಮಳೆ ಬಂದು ಪಂದ್ಯವನ್ನು ಪೂರ್ಣಗೊಳಿಸಲು ಸಾಧ್ಯವಾಗದಿದ್ದರೆ ಮೀಸಲು ದಿನದಾಟದಲ್ಲಿ ಮ್ಯಾಚ್ ಮುಂದುವರೆಯಲಿದೆ.

ಫೈನಲ್ ಪಂದ್ಯದ ವೇಳೆ ಮಳೆ ಬಂದರೆ ಫಲಿತಾಂಶ ನಿರ್ಧರಿಸುವುದು ಹೇಗೆ? ಇಲ್ಲಿದೆ ಮಾಹಿತಿ
India vs Australia
Follow us
| Edited By: Zahir Yusuf

Updated on: Nov 18, 2023 | 5:58 PM

ಏಕದಿನ ವಿಶ್ವಕಪ್ 2023 ಅಂತಿಮ ಹಂತಕ್ಕೆ ಬಂದು ನಿಂತಿದೆ. ಭಾನುವಾರ ನಡೆಯಲಿರುವ ಫೈನಲ್​ ಪಂದ್ಯದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಸೆಣಸಲಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಮಳೆಯ ಭೀತಿಯಂತು ಇಲ್ಲ. ಇದಾಗ್ಯೂ ಪಂದ್ಯಕ್ಕೆ ಇನ್ನಿತರೆ ಅಡಚಣೆಯುಂಟಾದರೆ, ಅಥವಾ ಮಳೆ ಬಂದರೆ ಫಲಿತಾಂಶ ನಿರ್ಧರಿಸುವುದು ಹೇಗೆ? ಎಂಬ ಪ್ರಶ್ನೆ ಮೂಡುವುದು ಸಹಜ. ಈ ಎಲ್ಲಾ ಪ್ರಶ್ನೆಗಳಿಗೆ ಉತ್ತರ ಈ ಕೆಳಗಿನಂತಿದೆ…

  1. ಹೆಚ್ಚುವರಿ 120 ನಿಮಿಷಗಳು: ಫೈನಲ್ ಪಂದ್ಯಕ್ಕೆ ಹೆಚ್ಚುವರಿಯಾಗಿ 2 ಗಂಟೆ ನಿಗದಿ ಮಾಡಲಾಗಿದೆ. ಅಂದರೆ ಮಳೆಯ ಕಾರಣ ಅಥವಾ ಇನ್ನಿತರ ಕಾರಣಗಳಿಂದ ಪಂದ್ಯಕ್ಕೆ ಅಡಚಣೆಯಾದರೆ 120 ನಿಮಿಷಗಳವರೆಗೆ ಯಾವುದೇ ಓವರ್ ಕಡಿತ ಇರುವುದಿಲ್ಲ. ಉದಾಹರಣೆಗೆ, ಪಂದ್ಯವು 6 ಗಂಟೆಗೆ ಸ್ಥಗಿತವಾಗಿ 8 ಗಂಟೆಗೆ ಮತ್ತೆ ಶುರುವಾದರೆ ಯಾವುದೇ ಓವರ್​ಗಳ ಕಡಿತ ಇರುವುದಿಲ್ಲ. ಅಂದರೆ 120 ನಿಮಿಷಗಳನ್ನು ಹೆಚ್ಚುವರಿಯಾಗಿ ಬಳಸಲಾಗುತ್ತದೆ.
  2. ಮೀಸಲು ದಿನದಾಟ: ಫೈನಲ್ ಪಂದ್ಯಕ್ಕೆ ಮೀಸಲು ದಿನದಾಟವನ್ನು ನಿಗದಿ ಮಾಡಲಾಗಿದೆ. ಒಂದು ವೇಳೆ ಭಾನುವಾರ ಮಳೆ ಬಂದು ಪಂದ್ಯವನ್ನು ಪೂರ್ಣಗೊಳಿಸಲು ಸಾಧ್ಯವಾಗದಿದ್ದರೆ ಮೀಸಲು ದಿನದಾಟದಲ್ಲಿ ಮ್ಯಾಚ್ ಮುಂದುವರೆಯಲಿದೆ. ಅಂದರೆ ಭಾನುವಾರ ಪಂದ್ಯ ನಡೆಸಲು ಸಾಧ್ಯವಾಗದಿದ್ದರೆ ಸೋಮವಾರ ಮ್ಯಾಚ್ ನಡೆಯುವುದು ಖಚಿತ.
  3. ಪಂದ್ಯ ಮುಂದುವರಿಕೆ: ಒಂದು ವೇಳೆ ಮಳೆಯಿಂದಾಗಿ ಪಂದ್ಯ ಅರ್ಧದಲ್ಲೇ ಸ್ಥಗಿತಗೊಂಡರೆ, ಮರುದಿನ ಪಂದ್ಯ ಮುಂದುವರೆಯಲಿದೆ. ಇಲ್ಲಿ ಯಾವ ಹಂತದಲ್ಲಿ ಪಂದ್ಯ ಸ್ಥಗಿತವಾಗಿತ್ತೊ ಅಲ್ಲಿಂದಲೇ ಪಂದ್ಯವನ್ನು ಮುಂದುವರೆಸಲಾಗುತ್ತದೆ. ಉದಾಹರಣೆಗೆ- ಟೀಮ್ ಇಂಡಿಯಾ 20 ಓವರ್​ಗಳಲ್ಲಿ 150 ರನ್​ಗಳಿಸಿದ್ದಾಗ ಮಳೆ ಬಂದು ಪಂದ್ಯ ನಿಂತರೆ, ಮರುದಿನ ಟೀಮ್ ಇಂಡಿಯಾ ಇನಿಂಗ್ಸ್​ 21ನೇ ಓವರ್​ನಿಂದ ಶುರುವಾಗಲಿದೆ.
  4. ಓವರ್​ಗಳ ಕಡಿತ: ಫೈನಲ್​ ಪಂದ್ಯಕ್ಕೆ 2 ಗಂಟೆಗಳ ಹೆಚ್ಚುವರಿ ಸಮಯ ನಿಗದಿ ಮಾಡಲಾಗಿದೆ. ಈ 2 ಗಂಟೆಗಳ ಹೆಚ್ಚುವರಿ ಸಮಯ ಕಳೆದ ಬಳಿಕವಷ್ಟೇ ಓವರ್​ಗಳ ಕಡಿತವಾಗಲಿದೆ. ಅಂದರೆ ಮಳೆಯಿಂದಾಗಿ ಪಂದ್ಯಕ್ಕೆ ಅಡಚಣೆಯಾದರೆ ಹೆಚ್ಚುವರಿ 2 ಗಂಟೆಗಳವರೆಗೆ ಯಾವುದೇ ಓವರ್​ಗಳ ಕಡಿತ ಮಾಡುವುದಿಲ್ಲ. ಆ ಬಳಿಕ ಪ್ರತಿ 5 ನಿಮಿಷಕ್ಕೆ ಒಂದು ಓವರ್ ಅನ್ನು ಕಡಿತ ಮಾಡಲಾಗುತ್ತದೆ.
  5. 20 ಓವರ್​ಗಳ ಬಳಿಕ ಫಲಿತಾಂಶ: ಫೈನಲ್ ಪಂದ್ಯದಲ್ಲಿ ಫಲಿತಾಂಶ ನಿರ್ಧರಿಸಲು ಉಭಯ ತಂಡಗಳು ಕನಿಷ್ಠ 20 ಓವರ್​ಗಳನ್ನು ಆಡಲೇಬೇಕು. ಅಂದರೆ ಮೊದಲ ಇನಿಂಗ್ಸ್​ ಬಳಿಕ ಮಳೆ ಬಂದು ಪಂದ್ಯ ಸ್ಥಗಿತವಾಗಿದ್ದರೆ ಡಕ್​ವರ್ತ್ ಲೂಯಿಸ್ ನಿಯಮದ ಪ್ರಕಾರ ಫಲಿತಾಂಶ ನಿರ್ಧರಿಸಲು ದ್ವಿತೀಯ ಇನಿಂಗ್ಸ್​ನಲ್ಲಿ ಬ್ಯಾಟ್ ಮಾಡಿದ ತಂಡ ಕನಿಷ್ಠ 20 ಓವರ್​ಗಳನ್ನು ಆಡಿರಬೇಕಾಗುತ್ತದೆ.
  6. ಜಂಟಿ ವಿಜೇತರು​: ಫೈನಲ್​ ​ಪಂದ್ಯವು ಸಂಪೂರ್ಣ ಮಳೆಗೆ ಅಹುತಿಯಾಗಿ, ಮೀಸಲು ದಿನಾಟದಲ್ಲೂ ಪಂದ್ಯವನ್ನು ಪೂರ್ಣಗೊಳಿಸಲು ಸಾಧ್ಯವಾಗದಿದ್ದರೆ ಮಾತ್ರ ಭಾರತ-ಆಸ್ಟ್ರೇಲಿಯಾ ತಂಡಗಳನ್ನು ಜಂಟಿ ವಿಜೇತರೆಂದು ಘೋಷಿಸಲಾಗುತ್ತದೆ.
ತಾಜಾ ಸುದ್ದಿ
ಭಾರತ-ಆಫ್ರಿಕಾ ಟಿ20 ಟ್ರೋಫಿ ಫೋಟೋ ಶೂಟ್​ನಲ್ಲಿ ಮಿಂಚಿದ ಸೂರ್ಯ: ವಿಡಿಯೋ
ಭಾರತ-ಆಫ್ರಿಕಾ ಟಿ20 ಟ್ರೋಫಿ ಫೋಟೋ ಶೂಟ್​ನಲ್ಲಿ ಮಿಂಚಿದ ಸೂರ್ಯ: ವಿಡಿಯೋ
‘ನನಗೆ ಯುವರಾಜ್​ ಅಂತ ಅವರೇ ಹೆಸರು ಇಟ್ಟಿದ್ದು’: ಲೀಲಾವತಿ ಮೊಮ್ಮಗನ ಮಾತು
‘ನನಗೆ ಯುವರಾಜ್​ ಅಂತ ಅವರೇ ಹೆಸರು ಇಟ್ಟಿದ್ದು’: ಲೀಲಾವತಿ ಮೊಮ್ಮಗನ ಮಾತು
ಆನೆ ಭೀಮ ಮತ್ತೆ ಗ್ರಾಮಕ್ಕೆ ಎಂಟ್ರಿ, ಗಾಂಭೀರ್ಯ ನಡಿಗೆ ನೋಡಿ
ಆನೆ ಭೀಮ ಮತ್ತೆ ಗ್ರಾಮಕ್ಕೆ ಎಂಟ್ರಿ, ಗಾಂಭೀರ್ಯ ನಡಿಗೆ ನೋಡಿ
ರಿಂಕು ಸಿಂಗ್ ಬಗ್ಗೆ ದ್ರಾವಿಡ್ ಏನೆಲ್ಲ ಹೇಳಿದ್ದಾರೆ ಗೊತ್ತೇ?: ವಿಡಿಯೋ ನೋಡಿ
ರಿಂಕು ಸಿಂಗ್ ಬಗ್ಗೆ ದ್ರಾವಿಡ್ ಏನೆಲ್ಲ ಹೇಳಿದ್ದಾರೆ ಗೊತ್ತೇ?: ವಿಡಿಯೋ ನೋಡಿ
‘ಅವರು ಗಲೀಜಿನಲ್ಲಿ ಇದ್ದಾರೆ’: ಯಾವ ಮುಲಾಜು ಇಲ್ಲದೇ ನೇರವಾಗಿ ಹೇಳಿದ ಸಂಗೀತಾ
‘ಅವರು ಗಲೀಜಿನಲ್ಲಿ ಇದ್ದಾರೆ’: ಯಾವ ಮುಲಾಜು ಇಲ್ಲದೇ ನೇರವಾಗಿ ಹೇಳಿದ ಸಂಗೀತಾ
‘ನಾನು ವಿಸ್ಮಯ ನೋಡಿದೆ’: ಅಮ್ಮನಿಗೆ ಅಂತಿಮ ವಿದಾಯ ಹೇಳಿದ ವಿನೋದ್ ಭಾವುಕ
‘ನಾನು ವಿಸ್ಮಯ ನೋಡಿದೆ’: ಅಮ್ಮನಿಗೆ ಅಂತಿಮ ವಿದಾಯ ಹೇಳಿದ ವಿನೋದ್ ಭಾವುಕ
ಜನತಾ ದಳದಲ್ಲಿದ್ದಾಗ ಯತ್ನಾಳ್ ಮುಸಲ್ಮಾನರನ್ನು ಓಲೈಸುತ್ತಿದ್ದರು: ಪಾಟೀಲ್
ಜನತಾ ದಳದಲ್ಲಿದ್ದಾಗ ಯತ್ನಾಳ್ ಮುಸಲ್ಮಾನರನ್ನು ಓಲೈಸುತ್ತಿದ್ದರು: ಪಾಟೀಲ್
ಗರುಡ ಮಾಲ್​ನಲ್ಲಿ ಮದ್ಯದ ನಶೆಯಲ್ಲಿ ಮಹಿಳೆ ರಾದ್ಧಾಂತ, ಸಿಬ್ಬಂದಿಗೆ ಥಳಿತ
ಗರುಡ ಮಾಲ್​ನಲ್ಲಿ ಮದ್ಯದ ನಶೆಯಲ್ಲಿ ಮಹಿಳೆ ರಾದ್ಧಾಂತ, ಸಿಬ್ಬಂದಿಗೆ ಥಳಿತ
ಸಕಲ ಸರ್ಕಾರೀ ಗೌರವದೊಂದಿಗೆ ನೆರವೇರಿದ ಲೀಲಾವತಿ ‘ಅಮ್ಮ’ನ ಅಂತಿಮ ಸಂಸ್ಕಾರ
ಸಕಲ ಸರ್ಕಾರೀ ಗೌರವದೊಂದಿಗೆ ನೆರವೇರಿದ ಲೀಲಾವತಿ ‘ಅಮ್ಮ’ನ ಅಂತಿಮ ಸಂಸ್ಕಾರ
ಶಿವಕುಮಾರ್  ನಾರಾಯಣ ಹೃದಯಾಲಯದಲ್ಲಿ ಬೆಡ್ ರೆಡಿ ಮಾಡಿಸಿಕೊಳ್ಳಲಿ: ಯತ್ನಾಳ್
ಶಿವಕುಮಾರ್  ನಾರಾಯಣ ಹೃದಯಾಲಯದಲ್ಲಿ ಬೆಡ್ ರೆಡಿ ಮಾಡಿಸಿಕೊಳ್ಳಲಿ: ಯತ್ನಾಳ್