AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC ಫೈನಲ್ ಪಂದ್ಯ ಡ್ರಾ ಆದರೆ ಯಾರು ಚಾಂಪಿಯನ್?

WTC Final 2025: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯವು ಜೂನ್ 11 ರಿಂದ ಶುರುವಾಗಿದ್ದು, ಈ ಪಂದ್ಯದಲ್ಲಿ ಸೌತ್ ಆಫ್ರಿಕಾ ಹಾಗೂ ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಿವೆ. ಇದಕ್ಕೂ ಮುನ್ನ ನಡೆದ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದಲ್ಲಿ ನ್ಯೂಝಿಲೆಂಡ್ (2021) ಹಾಗೂ ಆಸ್ಟ್ರೇಲಿಯಾ (2023) ತಂಡಗಳು ಚಾಂಪಿಯನ್ ಪಟ್ಟ ಅಲಂಕರಿಸಿದ್ದವು.

WTC ಫೈನಲ್ ಪಂದ್ಯ ಡ್ರಾ ಆದರೆ ಯಾರು ಚಾಂಪಿಯನ್?
Wtc Final 2025
ಝಾಹಿರ್ ಯೂಸುಫ್
|

Updated on: Jun 12, 2025 | 9:26 AM

Share

ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ (WTC Final) ಪಂದ್ಯಕ್ಕೆ ಚಾಲನೆ ದೊರೆತಿದೆ. ಕ್ರಿಕೆಟ್ ಕಾಶಿ ಲಾರ್ಡ್ಸ್ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ಹಾಗೂ ಸೌತ್ ಆಫ್ರಿಕಾ ತಂಡಗಳು ಮುಖಾಮುಖಿಯಾಗಿದೆ. ಈ ಮ್ಯಾಚ್​ನಲ್ಲಿ ಟಾಸ್ ಗೆದ್ದಿರುವ ಸೌತ್ ಆಫ್ರಿಕಾ ತಂಡವು ಬೌಲಿಂಗ್ ಆಯ್ದುಕೊಂಡಿದ್ದು, ಅದರಂತೆ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡವು ಮೊದಲ ಇನಿಂಗ್ಸ್​ನಲ್ಲಿ 212 ರನ್​ಗಳಿಸಿ ಆಲೌಟ್ ಆಗಿದೆ.

ಇದೀಗ ಪ್ರಥಮ ಇನಿಂಗ್ಸ್ ಆರಂಭಿಸಿರುವ ಸೌತ್ ಆಫ್ರಿಕಾ ತಂಡವು ಮೊದಲ ದಿನದಾಟದ ಮುಕ್ತಾಯದ ವೇಳೆಗೆ 4 ವಿಕೆಟ್ ಕಳೆದುಕೊಂಡು 43 ರನ್​ ಕಲೆಹಾಕಿದೆ. ಇನ್ನೂ ನಾಲ್ಕು ದಿನದಾಟಗಳು ಬಾಕಿಯಿದ್ದು, ಬಲಿಷ್ಠ ಪಡೆಗಳ ನಡುವಣ ಕದನದ ಫಲಿತಾಂಶ ಏನಾಗಲಿದೆ? ಎಂಬುದೇ ಈಗ ಕುತೂಹಲ.

ಒಂದು ವೇಳೆ ಡ್ರಾ ಆದರೆ?

ಟೆಸ್ಟ್ ಪಂದ್ಯದಲ್ಲಿ ಮೂರು ಫಲಿತಾಂಶವನ್ನು ಎದುರು ನೋಡಬಹುದು. ಇಲ್ಲಿ ಗೆಲುವು, ಸೋಲುಗಳ ನಡುವೆ ಡ್ರಾ ಮಾಡಿಕೊಳ್ಳುವ ಅವಕಾಶವಿದೆ. ಆದರೆ ಟೆಸ್ಟ್​ನ ಫೈನಲ್ ಪಂದ್ಯವು ಡ್ರಾನಲ್ಲಿ ಅಂತ್ಯಗೊಂಡರೆ ಚಾಂಪಿಯನ್ ಪಟ್ಟ ಯಾರಿಗೆ ಸಿಗುವುದು ಎಂಬುದೇ ಪ್ರಶ್ನೆ.

ಈ ಪ್ರಶ್ನೆಗೆ ಉತ್ತರ ಜಂಟಿ ಚಾಂಪಿಯನ್. ಅಂದರೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯವು ಡ್ರಾನಲ್ಲಿ ಕೊನೆಗೊಂಡರೆ, ಮೀಸಲು ದಿನದಾಟದಲ್ಲಿ ಫಲಿತಾಂಶವನ್ನು ನಿರ್ಧರಿಸುವುದಿಲ್ಲ. ಬದಲಾಗಿ ಉಭಯ ತಂಡಗಳನ್ನು ಚಾಂಪಿಯನ್ ಎಂದು ಪರಿಗಣಿಸಲಾಗುತ್ತದೆ.

ಹೀಗಾಗಿ ಸೌತ್ ಆಫ್ರಿಕಾ ಹಾಗೂ ಆಸ್ಟ್ರೇಲಿಯಾ ನಡುವಣ ಪಂದ್ಯವು ಡ್ರಾಗೊಂಡರೆ, ಜಂಟಿ ವಿಜೇತರಾಗಿ ಉಭಯ ತಂಡಗಳು ಚಾಂಪಿಯನ್ ಪಟ್ಟವನ್ನು ಅಲಂಕರಿಸಲಿದ್ದಾರೆ.

ಮೀಸಲು ದಿನದಾಟವೇಕೆ?

ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯಕ್ಕೆ ಮೀಸಲು ದಿನದಾಟವಿದೆ. ಆದರೆ ಅದು ಫೈನಲ್ ಪಂದ್ಯದ ಫಲಿತಾಂಶವನ್ನು ನಿರ್ಧರಿಸಲು ಅನ್ವಯವಾಗುವುದಿಲ್ಲ. ಅಂದರೆ 5ನೇ ದಿನದಾಟದಲ್ಲೂ ಫಲಿತಾಂಶ ಮೂಡಿಬರದಿದ್ದರೆ ಮೀಸಲು ದಿನದಾಟದಲ್ಲಿ ಪಂದ್ಯವನ್ನು ಆಯೋಜಿಸುವುದಿಲ್ಲ. ಬದಲಾಗಿ ಫಲಿತಾಂಶವನ್ನು ಡ್ರಾ ಎಂದು ಪರಿಗಣಿಸಲಾಗುತ್ತದೆ.

ಆದರೆ 5 ದಿನದಾಟಗಳ ವೇಳೆ ಅಡಚಣೆ ಉಂಟಾದರೆ, ಅಥವಾ ಕಾರಣಾಂತರಗಳಿಂದ ಓವರ್​ಗಳು ಕಡಿತಗೊಂಡರೆ ಆ ಓವರ್​ಗಳನ್ನು ಮೀಸಲು ದಿನದಾಟದಲ್ಲಿ ಪೂರ್ಣಗೊಳಿಸಲಾಗುತ್ತದೆ.

ಹೀಗಾಗಿ ಫೈನಲ್ ಪಂದ್ಯದ 5 ದಿನದಾಟಗಳಲ್ಲಿ ಸಂಪೂರ್ಣ ಓವರ್​ಗಳನ್ನು ಎಸೆಯಲು ಸಾಧ್ಯವಾಗದೇ ಇದ್ದರೆ ಆ ಓವರ್​ಗಳನ್ನು ಮೀಸಲು ದಿನದಾಟದಲ್ಲಿ ಪೂರ್ಣಗೊಳಿಸಲಾಗುತ್ತದೆ. ಈ ಮೂಲಕ ಪೂರ್ಣ ಪಂದ್ಯವನ್ನು ಆಯೋಜಿಸಲು ಐಸಿಸಿ ನಿರ್ಧರಿಸಿದೆ.

ಇದನ್ನೂ ಓದಿ: 48 ಗಂಟೆಗಳ ಮುಂಚೆ ಆಯ್ಕೆ… ಮಯಾಂಕ್ ಅಗರ್ವಾಲ್ ಕೈ ಹಿಡಿಯಲಿದೆಯಾ RCB

ಅದರಂತೆ ವಿಶ್ವ  ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯಕ್ಕೆ ಮಳೆ ಅಡಚಣೆಯಾಗಿ ಮ್ಯಾಚ್ ನಡೆಯದಿದ್ದರೆ ಅಥವಾ ಕೆಲ ಓವರ್​ಗಳು ಬಾಕಿ ಉಳಿದರೆ, ಜೂನ್ 16 ಕ್ಕೆ ನಿಗದಿಯಾಗಿರುವ ಮೀಸಲು ದಿನದಾಟದಲ್ಲಿ ಪಂದ್ಯವನ್ನು ಪೂರ್ಣಗೊಳಿಸಲಾಗುತ್ತದೆ. ಇನ್ನು ಪಂದ್ಯವು ಡ್ರಾನಲ್ಲಿ ಅಂತ್ಯಗೊಂಡರೆ ಉಭಯ ತಂಡಗಳನ್ನು ಜಂಟಿ ವಿಜೇತರೆಂದು ಘೋಷಿಸಲಾಗುತ್ತದೆ.

Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಮುಸ್ಲಿಮರಿಗೆ ಇಮಾಮ್ ಉಮರ್ ಇಲ್ಯಾಸಿ ಮನವಿ
ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಮುಸ್ಲಿಮರಿಗೆ ಇಮಾಮ್ ಉಮರ್ ಇಲ್ಯಾಸಿ ಮನವಿ
ಬೇಡ್ತಿ ನದಿ ತಿರುವಿನಿಂದಾಗುವ ಪರಿಣಾಮಗಳೇನು? ಯೋಜನೆಗೆ ವಿರೋಧವೇಕೆ?
ಬೇಡ್ತಿ ನದಿ ತಿರುವಿನಿಂದಾಗುವ ಪರಿಣಾಮಗಳೇನು? ಯೋಜನೆಗೆ ವಿರೋಧವೇಕೆ?
ಬರಿದಾಗ್ತಿದೆ KRS: CWMA ಆದೇಶದಿಂದ ಕುಡಿಯುವ ನೀರಿಗೂ ಹಾಹಾಕಾರದ ಭೀತಿ
ಬರಿದಾಗ್ತಿದೆ KRS: CWMA ಆದೇಶದಿಂದ ಕುಡಿಯುವ ನೀರಿಗೂ ಹಾಹಾಕಾರದ ಭೀತಿ
‘ಆ ಸಿನಿಮಾ ದರ್ಶನ್​​​ಗೆ ಮಾತ್ರ’: ತರುಣ್ ಸುಧೀರ್ ಹೇಳಿದ್ದು ಯಾವ ಕತೆ?
‘ಆ ಸಿನಿಮಾ ದರ್ಶನ್​​​ಗೆ ಮಾತ್ರ’: ತರುಣ್ ಸುಧೀರ್ ಹೇಳಿದ್ದು ಯಾವ ಕತೆ?
ಭಾರತೀಯ ಕಂಪನಿಗಳನ್ನ ಅಮೆರಿಕ ಟಾರ್ಗೆಟ್ ಮಾಡಿರೋ ಕಾರಣ ಬಿಚ್ಚಿಟ್ಟ ಪೈ!
ಭಾರತೀಯ ಕಂಪನಿಗಳನ್ನ ಅಮೆರಿಕ ಟಾರ್ಗೆಟ್ ಮಾಡಿರೋ ಕಾರಣ ಬಿಚ್ಚಿಟ್ಟ ಪೈ!
ಯಡಿಯೂರಪ್ಪ ಡ್ರೈವರ್ ಗ್ಯಾರಂಟಿ ಯೋಜನೆಗೆ ಮೊದಲು ಅರ್ಜಿ ಹಾಕಿದ್ದು
ಯಡಿಯೂರಪ್ಪ ಡ್ರೈವರ್ ಗ್ಯಾರಂಟಿ ಯೋಜನೆಗೆ ಮೊದಲು ಅರ್ಜಿ ಹಾಕಿದ್ದು
ಮಂಜನ ವಿರುದ್ಧ ಮುಗಿಬಿದ್ದ ಮನೆ ಮಂದಿ, ಮೌನಕ್ಕೆ ಶರಣಾದ ‘ಮಾಡರ್ನ್ ಕವಿ’
ಮಂಜನ ವಿರುದ್ಧ ಮುಗಿಬಿದ್ದ ಮನೆ ಮಂದಿ, ಮೌನಕ್ಕೆ ಶರಣಾದ ‘ಮಾಡರ್ನ್ ಕವಿ’
KPSC ನೇಮಕಾತಿ ಹಗರಣದಲ್ಲಿ ತೇಲಿಬಂದ ದುಗ್ಗಪ್ಪ ಯಾರು?
KPSC ನೇಮಕಾತಿ ಹಗರಣದಲ್ಲಿ ತೇಲಿಬಂದ ದುಗ್ಗಪ್ಪ ಯಾರು?
KPSC ಹಗರಣ: ಅಕ್ರಮದ ಹಣದಲ್ಲಿ ಆರೋಪಿಗಳಿಂದ ಪ್ಲೈಟ್ ಟಿಕೆಟ್​ ಬುಕ್ಕಿಂಗ್
KPSC ಹಗರಣ: ಅಕ್ರಮದ ಹಣದಲ್ಲಿ ಆರೋಪಿಗಳಿಂದ ಪ್ಲೈಟ್ ಟಿಕೆಟ್​ ಬುಕ್ಕಿಂಗ್
ಜಂಬೂಸವಾರಿ: ಮಹೇಂದ್ರ ಆನೆಯನ್ನು ಕ್ಯಾಪ್ಟನ್ ರೇಸ್​ನಿಂದ ಹೊರಗಿಟ್ಟಿದ್ದೇಕೆ?
ಜಂಬೂಸವಾರಿ: ಮಹೇಂದ್ರ ಆನೆಯನ್ನು ಕ್ಯಾಪ್ಟನ್ ರೇಸ್​ನಿಂದ ಹೊರಗಿಟ್ಟಿದ್ದೇಕೆ?