T20 World Cup 2021: ಐಸಿಸಿ ಟೂರ್ನಿಯಲ್ಲಿ ಭಾರತಕ್ಕೆ ನ್ಯೂಜಿಲೆಂಡ್ ಕಬ್ಬಿಣದ ಕಡಲೆ: ಯಾಕೆ ಗೊತ್ತಾ?

India vs New Zealand: 2007 ರಲ್ಲಿ ನಡೆದ T20 ವಿಶ್ವಕಪ್‌ ಅಭಿಯಾನದಲ್ಲಿ ಭಾರತವನ್ನು ಸೋಲಿಸಿದ ಏಕೈಕ ತಂಡವೆಂದರೆ ಅದು ನ್ಯೂಜಿಲೆಂಡ್ ಮಾತ್ರ.

T20 World Cup 2021: ಐಸಿಸಿ ಟೂರ್ನಿಯಲ್ಲಿ ಭಾರತಕ್ಕೆ ನ್ಯೂಜಿಲೆಂಡ್ ಕಬ್ಬಿಣದ ಕಡಲೆ: ಯಾಕೆ ಗೊತ್ತಾ?
IND vs NZ
Follow us
TV9 Web
| Updated By: ಝಾಹಿರ್ ಯೂಸುಫ್

Updated on: Oct 30, 2021 | 6:32 PM

ಟಿ20 ವಿಶ್ವಕಪ್​ನ (T20 World Cup 2021) ಸೂಪರ್ 12 ಪಂದ್ಯಗಳಲ್ಲಿನ ತನ್ನ ಎರಡನೇ ಪಂದ್ಯದಲ್ಲಿ ಭಾರತ ತಂಡವು ನ್ಯೂಜಿಲೆಂಡ್ (India vs New Zealand) ವಿರುದ್ದ ಸೆಣಸಲಿದೆ. ಈ ಪಂದ್ಯದಲ್ಲಿ ಗೆದ್ದರೆ ಟೀಮ್ ಇಂಡಿಯಾ (Team India) ಸೆಮಿಫೈನಲ್ ಹಾದಿ ಸುಗಮವಾಗಲಿದೆ. ಹೀಗಾಗಿ ಇದು ಟೀಮ್ ಇಂಡಿಯಾ ಪಾಲಿಗೆ ನಿರ್ಣಾಯಕ ಪಂದ್ಯ ಎಂದೇ ಹೇಳಬಹುದು. ಆದರೆ ಅಂಕಿ ಅಂಶಗಳನ್ನು ನೋಡಿದರೆ ಟೀಮ್ ಇಂಡಿಯಾ ಜಯ ಸುಲಭವಲ್ಲ. ಏಕೆಂದರೆ ನ್ಯೂಜಿಲೆಂಡ್ ತಂಡದ ವಿರುದ್ದ ಐಸಿಸಿ ಟೂರ್ನಿಯಲ್ಲಿ ಭಾರತ ಗೆದ್ದು 18 ವರ್ಷಗಳೇ ಕಳೆದಿವೆ. ಅಂದರೆ ಪ್ರಮುಖ ಟೂರ್ನಿಯಲ್ಲಿ ಭಾರತ ಕಿವೀಸ್ ಪಡೆಯ ವಿರುದ್ದ ಸೋಲುತ್ತಾ ಬರುತ್ತಿದೆ.

ಭಾರತ vs ನ್ಯೂಜಿಲೆಂಡ್, ICC ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯ: ಈ ವರ್ಷದ ಆರಂಭದಲ್ಲಿ ನಡೆದ ಐಸಿಸಿ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್​ ಪಂದ್ಯದಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ ಕೇನ್ ವಿಲಿಯಮ್ಸನ್​ ಪಡೆ ಕೊಹ್ಲಿ ಬಳಗವನ್ನು 8 ವಿಕೆಟ್​ಗಳಿಂದ ಸೋಲಿಸಿ ಚೊಚ್ಚಲ ಬಾರಿ ಟೆಸ್ಟ್ ಚಾಂಪಿಯನ್​ಶಿಪ್​ ಕಿರೀಟವನ್ನು ತನ್ನದಾಗಿಸಿಕೊಂಡಿತು. ಇದೀಗ ಇದೇ ವರ್ಷ ಟೀಮ್ ಇಂಡಿಯಾ ನ್ಯೂಜಿಲೆಂಡ್ ವಿರುದ್ದ ಆಡುತ್ತಿರುವುದು ವಿಶೇಷ.

ಭಾರತ vs ನ್ಯೂಜಿಲೆಂಡ್, ICC ಕ್ರಿಕೆಟ್ ವಿಶ್ವಕಪ್ 2019 ಸೆಮಿಫೈನಲ್: ICC ಕ್ರಿಕೆಟ್ ವಿಶ್ವಕಪ್ 2019 ರ ಸೆಮಿ-ಫೈನಲ್‌ನಲ್ಲಿ ಉಭಯ ತಂಡಗಳು ನಿರ್ಣಾಯಕ ಹಂತದಲ್ಲಿ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲೂ ಭಾರತ ತಂಡವನ್ನು 18 ರನ್​ಗಳಿಂದ ಮಣಿಸಿ ನ್ಯೂಜಿಲೆಂಡ್ ತಂಡವು ಫೈನಲ್ ಪ್ರವೇಶಿಸಿತ್ತು. ಇದೀಗ ಟೀಮ್ ಇಂಡಿಯಾಗೆ ಸೆಮಿಫೈನಲ್ ಸೋಲು ಹಾಗೂ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್ ಸೋಲಿನ ಸೇಡು ತೀರಿಸಿಕೊಳ್ಳುವ ಅವಕಾಶ ಸಿಕ್ಕಿದೆ.

ಭಾರತ vs ನ್ಯೂಜಿಲೆಂಡ್, ICC T20 ವಿಶ್ವಕಪ್ 2016: ಭಾರತದಲ್ಲಿ ನಡೆದ ICC T20 ವಿಶ್ವಕಪ್ 2016 ರ ಸಂದರ್ಭದಲ್ಲಿ, ಭಾರತವು ಸೂಪರ್-10 ಪಂದ್ಯದಲ್ಲಿ ನ್ಯೂಜಿಲೆಂಡ್ ಅನ್ನು ಎದುರಿಸಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿ ನ್ಯೂಜಿಲೆಮಡ್ 126 ರನ್ ಪೇರಿಸಿತ್ತು. ಈ ಗುರಿಯನ್ನು ಬೆನ್ನತ್ತಿದ ಭಾರತ ಕೇವಲ 79 ರನ್​ಗಳಿಗೆ ಆಲೌಟ್​ ಆಗಿ ಸೋಲೊಪ್ಪಿಕೊಂಡಿತು.

ಭಾರತ vs ನ್ಯೂಜಿಲೆಂಡ್, T20 ವಿಶ್ವಕಪ್ 2007, ಗುಂಪು E: 2007 ರಲ್ಲಿ ನಡೆದ T20 ವಿಶ್ವಕಪ್‌ ಅಭಿಯಾನದಲ್ಲಿ ಭಾರತವನ್ನು ಸೋಲಿಸಿದ ಏಕೈಕ ತಂಡವೆಂದರೆ ಅದು ನ್ಯೂಜಿಲೆಂಡ್ ಮಾತ್ರ. ಟೂರ್ನಿಯ ಇ ಗುಂಪಿನ ಪಂದ್ಯದಲ್ಲಿ ಕಿವೀಸ್ ಭಾರತಕ್ಕೆ 190 ರನ್ ಗಳ ಗುರಿ ನೀಡಿತು. ಈ ಮೊತ್ತವನ್ನು ಬೆನ್ನತ್ತಿದ ಭಾರತ ಅಂತಿಮವಾಗಿ 10 ರನ್​ಗಳಿಂದ ಸೋಲೊಪ್ಪಿಕೊಂಡಿತು.

ಭಾರತ vs ನ್ಯೂಜಿಲೆಂಡ್, ICC ವಿಶ್ವಕಪ್ 2003: 18 ವರ್ಷಗಳ ಹಿಂದೆ 2003ರ ಐಸಿಸಿ ವಿಶ್ವಕಪ್‌ನಲ್ಲಿ ಭಾರತ ಕೊನೆಯ ಬಾರಿಗೆ ನ್ಯೂಜಿಲೆಂಡ್ ವಿರುದ್ಧ ಗೆದ್ದಿತ್ತು. ಈ ಪಂದ್ಯದಲ್ಲಿ ನ್ಯೂಜಿಲೆಂಡ್ ಭಾರತಕ್ಕೆ 147 ರನ್‌ಗಳ ಗುರಿಯನ್ನು ನೀಡಿತ್ತು. ಇದಕ್ಕುತ್ತರವಾಗಿ ಸೌರವ್ ಗಂಗೂಲಿ ನೇತೃತ್ವದ ಭಾರತ ತಂಡ ಮೂರು ವಿಕೆಟ್ ನಷ್ಟದಲ್ಲಿ ಗುರಿ ಬೆನ್ನಟ್ಟಿ ಗೆಲುವಿನ ನಗೆ ಬೀರಿತು. ಇದಾದ ಬಳಿಕ ಟೀಮ್ ಇಂಡಿಯಾ ಐಸಿಸಿ ಟೂರ್ನಿಯಲ್ಲಿ ನ್ಯೂಜಿಲೆಂಡ್ ವಿರುದ್ದ ಗೆದ್ದಿಲ್ಲ ಎಂಬುದು ವಿಶೇಷ. ಹೀಗಾಗಿ ಈ ಸೋಲಿನ ಸುಳಿಯಿಂದ ಹೊರಬರಲು ಟೀಮ್ ಇಂಡಿಯಾ ಭರ್ಜರಿ ಯೋಜನೆಯೊಂದಿಗೆ ಕಣಕ್ಕಿಳಿಯುವುದು ಬಹುತೇಕ ಖಚಿತ.

ಇದನ್ನೂ ಓದಿ: T20 World Cup 2021: ಸೆಮಿಫೈನಲ್ ಲೆಕ್ಕಾಚಾರ: ನ್ಯೂಜಿಲೆಂಡ್ ವಿರುದ್ದ ಟೀಮ್ ಇಂಡಿಯಾ ಗೆಲ್ಲಲೇಬೇಕು, ಯಾಕೆ ಗೊತ್ತಾ?

ಇದನ್ನೂ ಓದಿ: ICC T20 Batter Rankings: ನೂತನ ಟಿ20 ರ‍್ಯಾಂಕಿಂಗ್ ಪ್ರಕಟ: ಟೀಮ್ ಇಂಡಿಯಾದ ಇಬ್ಬರ ಸ್ಥಾನ ಕುಸಿತ

ಇದನ್ನೂ ಓದಿ:  T20 World Cup 2021: ಹಿಂದೂಗಳ ಮುಂದೆ ನಮಾಜ್ ಮಾಡಿದ್ದು ಖುಷಿಯಾಯ್ತು ಎಂದ ಪಾಕ್ ಕ್ರಿಕೆಟಿಗ

(What Is India’s Record Against New Zealand In ICC Tournaments?)

Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ