AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AFG T20I: ಭಾರತ-ಅಫ್ಘಾನಿಸ್ತಾನ ಎರಡನೇ ಟಿ20 ಪಂದ್ಯ ಯಾವಾಗ?, ಎಲ್ಲಿ?: ಇಲ್ಲಿದೆ ಎಲ್ಲ ಮಾಹಿತಿ

India vs Afghanistan 2nd T20I: ಮೊದಲ ಟಿ20 ಪಂದ್ಯದಲ್ಲಿ ಜಯ ಸಾಧಿಸುವ ಮೂಲಕ 14 ತಿಂಗಳ ಬಳಿಕ ಟಿ20 ಅಂತರರಾಷ್ಟ್ರೀಯ ಪಂದ್ಯಕ್ಕೆ ವಾಪಸಾದ ನಾಯಕ ರೋಹಿತ್ ಶರ್ಮಾ ಮೊಗದಲ್ಲಿ ನಗು ಮೂಡಿದೆ. ಇದೀಗ ಉಭಯ ತಂಡಗಳು ಎರಡನೇ ಪಂದ್ಯಕ್ಕೆ ಸಜ್ಜಾಗಬೇಕಿದೆ. ಹಾಗಾದರೆ ಇಂಡೋ-ಅಫ್ಘಾನ್ ದ್ವಿತೀಯ ಟಿ20 ಪಂದ್ಯ ಯಾವಾಗ?.

IND vs AFG T20I: ಭಾರತ-ಅಫ್ಘಾನಿಸ್ತಾನ ಎರಡನೇ ಟಿ20 ಪಂದ್ಯ ಯಾವಾಗ?, ಎಲ್ಲಿ?: ಇಲ್ಲಿದೆ ಎಲ್ಲ ಮಾಹಿತಿ
IND vs AFG 2nd T20I
Vinay Bhat
|

Updated on: Jan 12, 2024 | 10:43 AM

Share

ಹೊಸ ವರ್ಷದ ಮೊದಲ ಟಿ20 ಪಂದ್ಯದಲ್ಲಿ ಅಫ್ಘಾನಿಸ್ತಾನವನ್ನು ಸೋಲಿಸುವ ಮೂಲಕ ಟೀಮ್ ಇಂಡಿಯಾ (Team India) ಸರಣಿಯಲ್ಲಿ ಶುಭಾರಂಭ ಮಾಡಿದೆ. ಮೊಹಾಲಿಯಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಶಿವಂ ದುಬೆ (ಔಟಾಗದೆ 60, 1/9) ಅವರ ಆಲ್‌ರೌಂಡ್ ಪ್ರದರ್ಶನ ಭಾರತ, ಅಫ್ಘಾನಿಸ್ತಾನವನ್ನು 6 ವಿಕೆಟ್‌ಗಳಿಂದ ಸೋಲಿಸಿತು. ಭಾರತೀಯ ಬೌಲರ್‌ಗಳು ಮೊದಲು ಅಫ್ಘಾನಿಸ್ತಾನವನ್ನು ಕೇವಲ 158 ಕ್ಕೆ ನಿರ್ಬಂಧಿಸಿದರು ಭಾರತ 18 ನೇ ಓವರ್‌ನಲ್ಲಿ ಗುರಿಯನ್ನು ತಲುಪಿತು. ಇದರೊಂದಿಗೆ 14 ತಿಂಗಳ ಬಳಿಕ ಟಿ20 ಅಂತರರಾಷ್ಟ್ರೀಯ ಪಂದ್ಯಕ್ಕೆ ವಾಪಸಾದ ನಾಯಕ ರೋಹಿತ್ ಶರ್ಮಾ ವಾಗೆಲುವಿನ ರುಚಿ ಕಂಡರು. ಇದೀಗ ಉಭಯ ತಂಡಗಳು ಎರಡನೇ ಪಂದ್ಯಕ್ಕೆ ಸಜ್ಜಾಗಬೇಕಿದೆ.

ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಎರಡನೇ ಟಿ20 ಪಂದ್ಯ ಯಾವಾಗ ನಡೆಯಲಿದೆ?

ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ದ್ವಿತೀಯ ಟಿ20 ಪಂದ್ಯ ಭಾನುವಾರ, ಜನವರಿ 14 ರಂದು ನಡೆಯಲಿದೆ.

ಇದನ್ನೂ ಓದಿ
Image
ಮೈದಾನದಲ್ಲೇ ಶುಭ್​ಮನ್ ಗಿಲ್ ಮೇಲೆ ರೋಹಿತ್ ಶರ್ಮಾ ವಾಗ್ದಾಳಿ
Image
ಎರಡೂ ಕೈಗಳಿಲ್ಲದಿದ್ದರೂ ಕ್ರಿಕೆಟ್​ ಆಡುವ ಅಮೀರ್ ಹುಸೇನ್, ವಿಶ್ವಕ್ಕೆ ಮಾದರಿ
Image
ಮೊದಲ ಟಿ20 ಪಂದ್ಯ ಗೆದ್ದ ಬಳಿಕ ನಾಯಕ ರೋಹಿತ್ ಶರ್ಮಾ ಏನು ಹೇಳಿದ್ರು ಗೊತ್ತೇ?
Image
ಅಫ್ಘಾನ್ ವಿರುದ್ಧ ಭಾರತಕ್ಕೆ 6 ವಿಕೆಟ್​ಗಳ ಸುಲಭ ಜಯ

IND vs AFG: ಅಫ್ಘಾನ್ ವಿರುದ್ಧ ಸೊನ್ನೆ ಸುತ್ತಿದರೂ ಎರಡೆರಡು ದಾಖಲೆ ಬರೆದ ರೋಹಿತ್ ಶರ್ಮಾ..!

ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಎರಡನೇ ಟಿ20 ಪಂದ್ಯ ಎಲ್ಲಿ ನಡೆಯಲಿದೆ?

ಇಂದೋರ್​ನ ಹೋಲ್ಕರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಎರಡನೇ ಟಿ20 ಪಂದ್ಯ ನಡೆಯಲಿದೆ.

ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ದ್ವಿತೀಯ ಟಿ20 ಪಂದ್ಯ ಎಷ್ಟು ಗಂಟೆಗೆ ಆರಂಭವಾಗಲಿದೆ?

ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಎರಡನೇ ಟಿ20 ಪಂದ್ಯ ಭಾರತೀಯ ಕಾಲಮಾನದ ಪ್ರಕಾರ ಸಂಜೆ 7 ಗಂಟೆಗೆ ಆರಂಭವಾಗಲಿದೆ. ಟಾಸ್ ಸಂಜೆ 6:30ಕ್ಕೆ ನಡೆಯಲಿದೆ.

ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ದ್ವಿತೀಯ ಟಿ20 ಪಂದ್ಯವನ್ನು ಯಾವ ಚಾನೆಲ್​ನಲ್ಲಿ ವೀಕ್ಷಿಸಬಹುದು?

ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಎರಡನೇ ಟಿ20 ಪಂದ್ಯವನ್ನು ಸ್ಪೋರ್ಟ್ಸ್ 18 ನೆಟ್‌ವರ್ಕ್​ನಲ್ಲಿ ವೀಕ್ಷಿಸಬಹುದಾಗಿದೆ.

ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಎರಡನೇ ಟಿ20 ಪಂದ್ಯವನ್ನು ಎಲ್ಲಿ ಲೈವ್-ಸ್ಟ್ರೀಮ್ ಮಾಡಲಾಗುತ್ತದೆ?

ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ದ್ವಿತೀಯ ಟಿ20 ಪಂದ್ಯವನ್ನು JioCinema ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಲೈವ್-ಸ್ಟ್ರೀಮ್ ಮಾಡಲಾಗುತ್ತದೆ.

ಟಿ20 ಸರಣಿಗೆ ಉಭಯ ತಂಡಗಳ ತಂಡ

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ತಿಲಕ್ ವರ್ಮಾ, ರಿಂಕು ಸಿಂಗ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಿವಂ ದುಬೆ, ವಾಷಿಂಗ್ಟನ್ ಸುಂದರ್, ಅಕ್ಸರ್ ಪಟೇಲ್, ರವಿ ಬಿಷ್ಣೋಯ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಅವೇಶ್ ಖಾನ್, ಮುಖೇಶ್ ಕುಮಾರ್.

ಅಫ್ಘಾನಿಸ್ತಾನ ತಂಡ: ಇಬ್ರಾಹಿಂ ಝದ್ರಾನ್ (ನಾಯಕ), ರಹಮಾನುಲ್ಲಾ ಗುರ್ಬಾಜ್, ಇಕ್ರಮ್ ಅಲಿಖಿಲ್, ಹಜರತುಲ್ಲಾ ಝಜೈ, ರಹಮತ್ ಷಾ, ನಜಿಬುಲ್ಲಾ ಝದ್ರಾನ್, ಮೊಹಮ್ಮದ್ ನಬಿ, ಕರೀಂ ಜನತ್, ಅಜ್ಮುಲ್ಲಾ ಉಮರ್ಜಾಯ್, ಶರಫುದ್ದೀನ್ ಅಶ್ರಫ್, ಮುಜೀಬ್ ಉರ್ ರೆಹಮಾಲ್, ಫಜಲ್ ಹಕ್ಮಾನ್, ನವೀನ್ ಉಲ್ ಹಕ್, ನೂರ್ ಅಹ್ಮದ್, ಮೊಹಮ್ಮದ್ ಸಲೀಮ್, ಖೈಸ್ ಅಹ್ಮದ್, ಗುಲ್ಬದಿನ್ ನೈಬ್ ಮತ್ತು ರಶೀದ್ ಖಾನ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ