ಹೊಸ ವರ್ಷದ ಮೊದಲ ಟಿ20 ಪಂದ್ಯದಲ್ಲಿ ಅಫ್ಘಾನಿಸ್ತಾನವನ್ನು ಸೋಲಿಸುವ ಮೂಲಕ ಟೀಮ್ ಇಂಡಿಯಾ (Team India) ಸರಣಿಯಲ್ಲಿ ಶುಭಾರಂಭ ಮಾಡಿದೆ. ಮೊಹಾಲಿಯಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಶಿವಂ ದುಬೆ (ಔಟಾಗದೆ 60, 1/9) ಅವರ ಆಲ್‌ರೌಂಡ್ ಪ್ರದರ್ಶನ ಭಾರತ, ಅಫ್ಘಾನಿಸ್ತಾನವನ್ನು 6 ವಿಕೆಟ್‌ಗಳಿಂದ ಸೋಲಿಸಿತು. ಭಾರತೀಯ ಬೌಲರ್‌ಗಳು ಮೊದಲು ಅಫ್ಘಾನಿಸ್ತಾನವನ್ನು ಕೇವಲ 158 ಕ್ಕೆ ನಿರ್ಬಂಧಿಸಿದರು ಭಾರತ 18 ನೇ ಓವರ್‌ನಲ್ಲಿ ಗುರಿಯನ್ನು ತಲುಪಿತು. ಇದರೊಂದಿಗೆ 14 ತಿಂಗಳ ಬಳಿಕ ಟಿ20 ಅಂತರರಾಷ್ಟ್ರೀಯ ಪಂದ್ಯಕ್ಕೆ ವಾಪಸಾದ ನಾಯಕ ರೋಹಿತ್ ಶರ್ಮಾ ವಾಗೆಲುವಿನ ರುಚಿ ಕಂಡರು. ಇದೀಗ ಉಭಯ ತಂಡಗಳು ಎರಡನೇ ಪಂದ್ಯಕ್ಕೆ ಸಜ್ಜಾಗಬೇಕಿದೆ.
ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಎರಡನೇ ಟಿ20 ಪಂದ್ಯ ಯಾವಾಗ ನಡೆಯಲಿದೆ?
ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ದ್ವಿತೀಯ ಟಿ20 ಪಂದ್ಯ ಭಾನುವಾರ, ಜನವರಿ 14 ರಂದು ನಡೆಯಲಿದೆ.
IND vs AFG: ಅಫ್ಘಾನ್ ವಿರುದ್ಧ ಸೊನ್ನೆ ಸುತ್ತಿದರೂ ಎರಡೆರಡು ದಾಖಲೆ ಬರೆದ ರೋಹಿತ್ ಶರ್ಮಾ..!
ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಎರಡನೇ ಟಿ20 ಪಂದ್ಯ ಎಲ್ಲಿ ನಡೆಯಲಿದೆ?
ಇಂದೋರ್ನ ಹೋಲ್ಕರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಎರಡನೇ ಟಿ20 ಪಂದ್ಯ ನಡೆಯಲಿದೆ.
ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ದ್ವಿತೀಯ ಟಿ20 ಪಂದ್ಯ ಎಷ್ಟು ಗಂಟೆಗೆ ಆರಂಭವಾಗಲಿದೆ?
ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಎರಡನೇ ಟಿ20 ಪಂದ್ಯ ಭಾರತೀಯ ಕಾಲಮಾನದ ಪ್ರಕಾರ ಸಂಜೆ 7 ಗಂಟೆಗೆ ಆರಂಭವಾಗಲಿದೆ. ಟಾಸ್ ಸಂಜೆ 6:30ಕ್ಕೆ ನಡೆಯಲಿದೆ.
ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ದ್ವಿತೀಯ ಟಿ20 ಪಂದ್ಯವನ್ನು ಯಾವ ಚಾನೆಲ್ನಲ್ಲಿ ವೀಕ್ಷಿಸಬಹುದು?
ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಎರಡನೇ ಟಿ20 ಪಂದ್ಯವನ್ನು ಸ್ಪೋರ್ಟ್ಸ್ 18 ನೆಟ್ವರ್ಕ್ನಲ್ಲಿ ವೀಕ್ಷಿಸಬಹುದಾಗಿದೆ.
ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಎರಡನೇ ಟಿ20 ಪಂದ್ಯವನ್ನು ಎಲ್ಲಿ ಲೈವ್-ಸ್ಟ್ರೀಮ್ ಮಾಡಲಾಗುತ್ತದೆ?
ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ದ್ವಿತೀಯ ಟಿ20 ಪಂದ್ಯವನ್ನು JioCinema ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಲೈವ್-ಸ್ಟ್ರೀಮ್ ಮಾಡಲಾಗುತ್ತದೆ.
ಟಿ20 ಸರಣಿಗೆ ಉಭಯ ತಂಡಗಳ ತಂಡ
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ತಿಲಕ್ ವರ್ಮಾ, ರಿಂಕು ಸಿಂಗ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಿವಂ ದುಬೆ, ವಾಷಿಂಗ್ಟನ್ ಸುಂದರ್, ಅಕ್ಸರ್ ಪಟೇಲ್, ರವಿ ಬಿಷ್ಣೋಯ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಅವೇಶ್ ಖಾನ್, ಮುಖೇಶ್ ಕುಮಾರ್.
ಅಫ್ಘಾನಿಸ್ತಾನ ತಂಡ: ಇಬ್ರಾಹಿಂ ಝದ್ರಾನ್ (ನಾಯಕ), ರಹಮಾನುಲ್ಲಾ ಗುರ್ಬಾಜ್, ಇಕ್ರಮ್ ಅಲಿಖಿಲ್, ಹಜರತುಲ್ಲಾ ಝಜೈ, ರಹಮತ್ ಷಾ, ನಜಿಬುಲ್ಲಾ ಝದ್ರಾನ್, ಮೊಹಮ್ಮದ್ ನಬಿ, ಕರೀಂ ಜನತ್, ಅಜ್ಮುಲ್ಲಾ ಉಮರ್ಜಾಯ್, ಶರಫುದ್ದೀನ್ ಅಶ್ರಫ್, ಮುಜೀಬ್ ಉರ್ ರೆಹಮಾಲ್, ಫಜಲ್ ಹಕ್ಮಾನ್, ನವೀನ್ ಉಲ್ ಹಕ್, ನೂರ್ ಅಹ್ಮದ್, ಮೊಹಮ್ಮದ್ ಸಲೀಮ್, ಖೈಸ್ ಅಹ್ಮದ್, ಗುಲ್ಬದಿನ್ ನೈಬ್ ಮತ್ತು ರಶೀದ್ ಖಾನ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ