ಭಾರತ- ಪಾಕ್ ಪಂದ್ಯವನ್ನು ಟಿವಿ ಮತ್ತು ಮೊಬೈಲ್‌ನಲ್ಲಿ ಉಚಿತವಾಗಿ ವೀಕ್ಷೀಸುವುದು ಹೇಗೆ?

IND vs PAK Live Streaming: ಏಕದಿನ ವಿಶ್ವಕಪ್​ನಲ್ಲಿ ಇಂದು ಅಂದರೆ ಅಕ್ಟೋಬರ್ 14 ರಂದು ಭಾರತ ಕ್ರಿಕೆಟ್ ತಂಡವು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಪಾಕಿಸ್ತಾನದ ವಿರುದ್ಧ ಕಣಕ್ಕಿಳಿಯುತ್ತಿದೆ. ಟೀಂ ಇಂಡಿಯಾದ ನಾಯಕತ್ವ ರೋಹಿತ್ ಶರ್ಮಾ ಅವರ ಕೈಯಲ್ಲಿದ್ದರೆ, ಬಾಬರ್ ಆಝಂ ಪಾಕಿಸ್ತಾನವನ್ನು ಮುನ್ನಡೆಸಲಿದ್ದಾರೆ.

ಭಾರತ- ಪಾಕ್ ಪಂದ್ಯವನ್ನು ಟಿವಿ ಮತ್ತು ಮೊಬೈಲ್‌ನಲ್ಲಿ ಉಚಿತವಾಗಿ ವೀಕ್ಷೀಸುವುದು ಹೇಗೆ?
ಭಾರತ- ಪಾಕಿಸ್ತಾನ
Follow us
ಪೃಥ್ವಿಶಂಕರ
|

Updated on:Oct 14, 2023 | 6:58 AM

ಏಕದಿನ ವಿಶ್ವಕಪ್​ನಲ್ಲಿ (ICC World Cup 2023) ಇಂದು ಅಂದರೆ ಅಕ್ಟೋಬರ್ 14 ರಂದು ಭಾರತ ಕ್ರಿಕೆಟ್ ತಂಡವು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಪಾಕಿಸ್ತಾನದ ವಿರುದ್ಧ (India vs Pakistan) ಕಣಕ್ಕಿಳಿಯುತ್ತಿದೆ. ಟೀಂ ಇಂಡಿಯಾದ ನಾಯಕತ್ವ ರೋಹಿತ್ ಶರ್ಮಾ (Rohit Sharma) ಅವರ ಕೈಯಲ್ಲಿದ್ದರೆ, ಬಾಬರ್ ಆಝಂ (Babar Azam) ಪಾಕಿಸ್ತಾನವನ್ನು ಮುನ್ನಡೆಸಲಿದ್ದಾರೆ. ಈ ಎರಡೂ ತಂಡಗಳು ಈಗಾಗಲೇ ಆಡಿದ ಎರಡೂ ಪಂದ್ಯಗಳನ್ನು ಗೆದ್ದಿವೆ. ಹಾಗಾಗಿ ನ್ಯೂಜಿಲೆಂಡ್ ನಂತರ ಟೀಂ ಇಂಡಿಯಾ ಮತ್ತು ಪಾಕಿಸ್ತಾನ ಎರಡೂ ತಂಡಗಳು ಹ್ಯಾಟ್ರಿಕ್ ಗೆಲುವು ಸಾಧಿಸಲು ಸಿದ್ಧವಾಗಿವೆ. ಆದರೆ ಒಂದು ತಂಡ ಮಾತ್ರ ಈ ಕನಸನ್ನು ನನಸಾಗಿಸುತ್ತದೆ. ಹೀಗಾಗಿ ಈ ಹೈವೋಲ್ಟೇಜ್ ಪಂದ್ಯ ಯಾವಾಗ ಆರಂಭವಾಗುತ್ತದೆ? ಟಿವಿ ಮತ್ತು ಮೊಬೈಲ್‌ನಲ್ಲಿ ಉಚಿತವಾಗಿ ಪಂದ್ಯವನ್ನು ಎಲ್ಲಿ ವೀಕ್ಷಿಸಬೇಕು ಎಂಬುದರ ಪೂರ್ಣ ವಿವರ ಇಲ್ಲಿದೆ.

ಪಂದ್ಯದ ಪೂರ್ಣ ವಿವರ ಇಂತಿದೆ.

ಭಾರತ ಮತ್ತು ಪಾಕಿಸ್ತಾನ ನಡುವಿನ ವಿಶ್ವಕಪ್ ಪಂದ್ಯ ಯಾವಾಗ ನಡೆಯಲ್ಲಿದೆ?

ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ಅಕ್ಟೋಬರ್ 14 ಶನಿವಾರ ನಡೆಯಲಿದೆ.

ಭಾರತ ಮತ್ತು ಪಾಕಿಸ್ತಾನ ನಡುವಿನ ವಿಶ್ವಕಪ್ ಪಂದ್ಯ ಎಲ್ಲಿ ನಡೆಯಲಿದೆ?

ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತ ಮತ್ತು ಪಾಕಿಸ್ತಾನ ಪಂದ್ಯ ನಡೆಯಲಿದೆ.

ಭಾರತ ಮತ್ತು ಪಾಕಿಸ್ತಾನ ನಡುವಿನ ವಿಶ್ವಕಪ್ ಪಂದ್ಯ ಎಷ್ಟು ಗಂಟೆಗೆ ಆರಂಭವಾಗಲಿದೆ?

ಭಾರತ ಮತ್ತು ಪಾಕಿಸ್ತಾನ ಪಂದ್ಯ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದೆ. ಹಾಗಾಗಿ 1 ಗಂಟೆ 30 ನಿಮಿಷಗಳ ನಂತರ ಟಾಸ್ ನಡೆಯಲಿದೆ.

ಭಾರತ ಮತ್ತು ಪಾಕಿಸ್ತಾನ ನಡುವಿನ ವಿಶ್ವಕಪ್ ಪಂದ್ಯವನ್ನು ಟಿವಿಯಲ್ಲಿ ಉಚಿತವಾಗಿ ವೀಕ್ಷಿಸುವುದು ಹೇಗೆ?

ಭಾರತ ಮತ್ತು ಪಾಕಿಸ್ತಾನ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ ಟಿವಿಯಲ್ಲಿ ಉಚಿತವಾಗಿ ಪ್ರಸಾರ ಮಾಡುತ್ತಿದೆ. ಹೀಗಾಗಿ ಕ್ರಿಕೆಟ್ ಪ್ರೇಮಿಗಳು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್​ನ ವಿವಿದ ಚಾನೆಲ್‌ಗಳಲ್ಲಿ ಈ ಪಂದ್ಯವನ್ನು ಉಚಿತವಾಗಿ ವೀಕ್ಷಿಸಬಹುದು. ಹಾಗೆಯೇ ಈ ಪಂದ್ಯವನ್ನು ಡಿಡಿ ಸ್ಪೋರ್ಟ್ಸ್‌ನಲ್ಲಿಯೂ ಉಚಿತವಾಗಿ ಪ್ರಸಾರ ಮಾಡಲಾಗುತ್ತದೆ.

ಭಾರತ ಮತ್ತು ಪಾಕಿಸ್ತಾನ ನಡುವಿನ ವಿಶ್ವಕಪ್ ಪಂದ್ಯವನ್ನು ಮೊಬೈಲ್‌ನಲ್ಲಿ ಉಚಿತವಾಗಿ ವೀಕ್ಷಿಸುವುದು ಹೇಗೆ?

ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಅಪ್ಲಿಕೇಶನ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ವಿಶ್ವಕಪ್ ಪಂದ್ಯವನ್ನು ಮೊಬೈಲ್‌ನಲ್ಲಿ ಉಚಿತವಾಗಿ ವೀಕ್ಷಿಸಬಹುದಾಗಿದೆ. ಹೀಗಾಗಿ ಮೊಬೈಲ್ ಬಳಕೆದರಾರು ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಅಪ್ಲಿಕೇಶನ್‌ ಅನ್ನು ಗೂಗಲ್ ಪ್ಲೇ ಸ್ಟೋರ್​ನಿಂದ ಡೌನ್​ ಲೌಡ್ ಮಾಡಿಕೊಂಡು, ಲಾಗಿನ್ ಆದರೆ ಸಾಕು ಪಂದ್ಯವನ್ನು ಉಚಿತವಾಗಿ ವೀಕ್ಷಿಸಬಹುದಾಗಿದೆ.

ವಿಶ್ವಕಪ್‌ ಇತಿಹಾಸದಲ್ಲಿ 7 ಬಾರಿ ಮುಖಾಮುಖಿ; ಭಾರತ ಗೆದ್ದಿದ್ದೆಷ್ಟು? ಪಾಕಿಸ್ತಾನ ಸೋತಿದ್ದೆಷ್ಟು?

ಉಭಯ ತಂಡಗಳು

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ರವಿಚಂದ್ರನ್ ಅಶ್ವಿನ್, ಇಶಾನ್ ಕಿಶನ್ ಮತ್ತು ಸೂರ್ಯಕುಮಾರ್ ಯಾದವ್.

ಪಾಕಿಸ್ತಾನ ತಂಡ: ಬಾಬರ್ ಆಝಂ (ನಾಯಕ), ಶಾದಾಬ್ ಖಾನ್, ಫಖರ್ ಜಮಾನ್, ಇಮಾಮ್-ಉಲ್-ಹಕ್, ಅಬ್ದುಲ್ಲಾ ಶಫೀಕ್, ಮೊಹಮ್ಮದ್ ರಿಜ್ವಾನ್, ಸೌದ್ ಶಕೀಲ್, ಇಫ್ತಿಕರ್ ಅಹ್ಮದ್, ಸಲ್ಮಾನ್ ಅಲಿ ಅಘಾ, ಮೊಹಮ್ಮದ್ ನವಾಜ್, ಉಸಾಮಾ ಮಿರ್, ಹ್ಯಾರಿಸ್ ರೌಫ್, ಹಸನ್ ಅಲಿ, ಶಾಹೀನ್ ಅಫ್ರಿದಿ ವಾಸಿಂ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:58 am, Sat, 14 October 23

ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು