ಭಾರತ vs ನ್ಯೂಝಿಲೆಂಡ್ ಸರಣಿ ಯಾವಾಗ ಶುರು?
India vs New Zealand Series: ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಏಕದಿನ ಸರಣಿಯು ಜನವರಿ 11 ರಿಂದ ಶುರುವಾಗಲಿದೆ. ಮೂರು ಪಂದ್ಯಗಳ ಏಕದಿನ ಸರಣಿಯ ಬಳಿಕ ಟಿ20 ಸಿರೀಸ್ ಶುರುವಾಗಲಿದೆ. ಟಿ20 ಸರಣಿಯು ಜನವರಿ 21 ರಿಂದ ಆರಂಭವಾಗಲಿದೆ. ಅಲ್ಲದೆ ಈ ಸರಣಿ ಜನವರಿ 31 ರಂದು ಕೊನೆಗೊಳ್ಳಲಿದೆ. ಇದಾದ ಬಳಿಕ ಟೀಮ್ ಇಂಡಿಯಾ ಟಿ20 ವಿಶ್ವಕಪ್ನಲ್ಲಿ ಕಣಕ್ಕಿಳಿಯಲಿದೆ.

ಭಾರತ ಮತ್ತು ನ್ಯೂಝಿಲೆಂಡ್ ನಡುವಣ 8 ಪಂದ್ಯಗಳ ಸರಣಿಯು ಜನವರಿ 11 ರಿಂದ ಶುರುವಾಗಲಿದೆ. ಈ ಸರಣಿಯಲ್ಲಿ ಮೊದಲಿಗೆ ಏಕದಿನ ಪಂದ್ಯಗಳನ್ನಾಡಲಾಗುತ್ತಿದ್ದು, ಇದಾದ ಬಳಿಕ ಟಿ20 ಸರಣಿ ಜರುಗಲಿದೆ. ಇದೀಗ ಸರಣಿಗಾಗಿ 15 ಸದಸ್ಯರುಗಳ ಭಾರತ ತಂಡಗಳ ಪ್ರಕಟಿಸಲಾಗಿದೆ. ಭಾರತ ಟಿ20 ತಂಡದ ನಾಯಕನಾಗಿ ಸೂರ್ಯಕುಮಾರ್ ಯಾದವ್ ಕಾಣಿಸಿಕೊಂಡರೆ, ಏಕದಿನ ತಂಡದ ಕ್ಯಾಪ್ಟನ್ ಆಗಿ ಶುಭ್ಮನ್ ಕಣಕ್ಕಿಳಿಯಲಿದ್ದಾರೆ.
ಇದಕ್ಕೂ ಮುನ್ನ ನಡೆದ ಸೌತ್ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಕೆಎಲ್ ರಾಹುಲ್ ನಾಯಕನಾಗಿ ಕಾಣಿಸಿಕೊಂಡಿದ್ದರು. ಇದೀಗ ಗಾಯದಿಂದ ಚೇತರಿಸಿಕೊಂಡಿರುವ ಗಿಲ್ ಏಕದಿನ ತಂಡಕ್ಕೆ ಮರಳಿದ್ದು, ಅದರಂತೆ ಮತ್ತೊಮ್ಮೆ ತಂಡದ ಸಾರಥ್ಯವನ್ನು ವಹಿಸಿದ್ದಾರೆ.
ಇನ್ನು ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿ ವೇಳೆ ಗಾಯಗೊಂಡಿದ್ದ ಟೀಮ್ ಇಂಡಿಯಾ ಉಪನಾಯಕ ಶ್ರೇಯಸ್ ಅಯ್ಯರ್ ಕೂಡ ನ್ಯೂಝಿಲೆಂಡ್ ವಿರುದ್ಧದ ಸರಣಿಯ ಮೂಲಕ ಕಂಬ್ಯಾಕ್ ಮಾಡಲಿದ್ದಾರೆ. ಅದರಂತೆ ಈ ಸರಣಿಗಾಗಿ ಎರಡು ತಂಡಗಳು ಈ ಕೆಳಗಿನಂತಿದೆ…
ಭಾರತ ಟಿ20 ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್.
ಭಾರತ vs ನ್ಯೂಝಿಲೆಂಡ್ ಏಕದಿನ ಸರಣಿ ವೇಳಾಪಟ್ಟಿ
- ಮೊದಲ ಏಕದಿನ ಪಂದ್ಯ – ಜನವರಿ 11 – ವಡೋದರಾ – ಮಧ್ಯಾಹ್ನ 1:30
- ಎರಡನೇ ಏಕದಿನ ಪಂದ್ಯ – ಜನವರಿ 14 – ರಾಜ್‌ಕೋಟ್ – ಮಧ್ಯಾಹ್ನ 1:30
- ಮೂರನೇ ಏಕದಿನ ಪಂದ್ಯ – ಜನವರಿ 18 – ಇಂದೋರ್ – ಮಧ್ಯಾಹ್ನ 1:30
ಇದನ್ನೂ ಓದಿ: 138 ವರ್ಷಗಳ ಬಳಿಕ ವಿಭಿನ್ನ ಪ್ಲೇಯಿಂಗ್ ಇಲೆವೆನ್ ರೂಪಿಸಿದ ಆಸ್ಟ್ರೇಲಿಯಾ
ಭಾರತ vs ನ್ಯೂಝಿಲೆಂಡ್ ಟಿ20 ಸರಣಿ ವೇಳಾಪಟ್ಟಿ
- ಮೊದಲ ಟಿ20 ಪಂದ್ಯ – ಜನವರಿ 21 – ನಾಗ್ಪುರ – ರಾತ್ರಿ 7:00
- ಎರಡನೇ ಟಿ20 ಪಂದ್ಯ – ಜನವರಿ 23 – ರಾಯ್ಪುರ – ರಾತ್ರಿ 7:00
- ಮೂರನೇ ಟಿ20 ಪಂದ್ಯ – ಜನವರಿ 25 – ಗುವಾಹಟಿ – ರಾತ್ರಿ 7:00
- ನಾಲ್ಕನೇ ಟಿ20 ಪಂದ್ಯ – ಜನವರಿ 28 – ವಿಶಾಖಪಟ್ಟಣ – ರಾತ್ರಿ 7:00
- ಐದನೇ ಟಿ20 ಪಂದ್ಯ – ಜನವರಿ 31 – ತಿರುವನಂತಪುರಂ – ರಾತ್ರಿ 7:00
