Ravindra Jadeja: ಟೀಮ್ ಇಂಡಿಯಾಗೆ ರವೀಂದ್ರ ಜಡೇಜಾ ಕಂಬ್ಯಾಕ್ ಯಾವಾಗ? ಇಲ್ಲಿದೆ ಉತ್ತರ
Team India: ಭಾರತದಲ್ಲಿ ನಡೆಯಲಿರುವ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯು ಟೀಮ್ ಇಂಡಿಯಾ ಪಾಲಿಗೆ ನಿರ್ಣಾಯಕ. ಈ ಸರಣಿಯಲ್ಲಿ ಭಾರತ ತಂಡ ಸೋತರೆ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಫೈನಲ್ ಆಡುವ ಅವಕಾಶ ಕೈತಪ್ಪಲಿದೆ.
ಏಷ್ಯಾಕಪ್ 2022ರ ವೇಳೆ ಗಾಯಗೊಂಡಿದ್ದ ಟೀಮ್ ಇಂಡಿಯಾದ (Team India) ಸ್ಟಾರ್ ಆಲ್ರೌಂಡರ್ ರವೀಂದ್ರ ಜಡೇಜಾ (Ravindra Jadeja) ಕಂಬ್ಯಾಕ್ ಮಾಡುವುದು ಯಾವಾಗ? ಇಂತಹದೊಂದು ಪ್ರಶ್ನೆ ಹುಟ್ಟಿಕೊಳ್ಳಲು ಮುಖ್ಯ ಕಾರಣ ಜಡ್ಡು ಲಂಕಾ ವಿರುದ್ಧದ ಸರಣಿಯಿಂದ ಹೊರಗುಳಿದಿರುವುದು. ಮೊಣಕಾಲಿನ ಗಾಯದ ಸಮಸ್ಯೆಗೆ ಒಳಗಾಗಿದ್ದ ಟೀಮ್ ಇಂಡಿಯಾ ಆಟಗಾರ ಇತ್ತೀಚೆಗೆ ಗುಜರಾತ್ ಚುನಾವಣೆಯ ವೇಳೆ ಪತ್ನಿ ಪರ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದರು. ಇದಾಗ್ಯೂ ಪ್ರಸ್ತುತ ನಡೆಯುತ್ತಿರುವ ಶ್ರೀಲಂಕಾ (India vs Sri Lanka) ವಿರುದ್ಧದ ಟಿ20 ಸರಣಿ ಹಾಗೂ ಏಕದಿನ ಸರಣಿಯ ತಂಡಗಳಲ್ಲಿ ಜಡೇಜಾ ಕಾಣಿಸಿಕೊಂಡಿಲ್ಲ. ಹೀಗಾಗಿಯೇ ಪ್ರಮುಖ ಆಲ್ರೌಂಡರ್ ತಂಡಕ್ಕೆ ಮರಳುವುದು ಯಾವಾಗ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಈ ಕುತೂಹಲಕಾರಿ ಪ್ರಶ್ನೆಗೆ ಟೀಮ್ ಇಂಡಿಯಾ ಹಿರಿಯ ಆಟಗಾರ ರವಿಚಂದ್ರನ್ ಅಶ್ವಿನ್ (Ravichandran Ashwin) ಉತ್ತರ ನೀಡಿದ್ದಾರೆ. ಸದ್ಯ ಗಾಯದಿಂದ ಚೇತರಿಸಿಕೊಂಡಿರುವ ಜಡ್ಡು, ಮುಂದಿನ ತಿಂಗಳು ತಂಡಕ್ಕೆ ಮರಳುವ ಸುಳಿವು ನೀಡಿದ್ದಾರೆ ಅಶ್ವಿನ್.
ಫೆಬ್ರವರಿಯಲ್ಲಿ ಭಾರತ ತಂಡವು ಆಸ್ಟ್ರೇಲಿಯಾ ವಿರುದ್ಧ ಸರಣಿ ಆಡಲಿದೆ. ಇದರಲ್ಲಿನ 4 ಟೆಸ್ಟ್ ಪಂದ್ಯಗಳು ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನ ಭಾಗವಾಗಿದೆ. ಹೀಗಾಗಿ ರವೀಂದ್ರ ಜಡೇಜಾ ಅವರು ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯ ಮೂಲಕ ಮರಳುವ ಸಾಧ್ಯತೆಯಿದೆ ಎಂದು ರವಿಚಂದ್ರನ್ ಅಶ್ವಿನ್ ಹೇಳಿದ್ದಾರೆ.
ತವರಿನಲ್ಲಿ ನಡೆಯಲಿರುವ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಆಡುವುದನ್ನು ನಾನು ಎದುರು ನೋಡುತ್ತಿದ್ದೇನೆ. ಅದಕ್ಕಾಗಿ ಬ್ಯಾಟಿಂಗ್ ಹಾಗೂ ಬೌಲಿಂಗ್ನಲ್ಲಿ ಕಠಿಣ ಅಭ್ಯಾಸವನ್ನು ಮಾಡುತ್ತಿದ್ದೇನೆ. ಇದೇ ಸಂದರ್ಭದಲ್ಲಿ ಜಡೇಜಾ ಕೂಡ ತಂಡಕ್ಕೆ ಮರಳುವ ವಿಶ್ವಾಸವಿದೆ. ಹೀಗಾಗಿ ಆಸೀಸ್ ವಿರುದ್ಧ ಟೀಮ್ ಇಂಡಿಯಾ ಬಲಿಷ್ಠವಾಗಿರಲಿದೆ ಎಂದಿದ್ದಾರೆ ಅಶ್ವಿನ್. ಅದರಂತೆ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ರವೀಂದ್ರ ಜಡೇಜಾ ತಂಡದಲ್ಲಿ ಕಾಣಿಸಿಕೊಳ್ಳುವುದು ಬಹುತೇಕ ಖಚಿತ ಎಂದೇ ಹೇಳಬಹುದು.
ಏಷ್ಯಾಕಪ್ 2022ರಲ್ಲಿ ಹಾಂಗ್ಕಾಂಗ್ ವಿರುದ್ಧ ಕೊನೆಯ ಬಾರಿ ಕಣಕ್ಕಿಳಿದಿದ್ದ ಜಡೇಜಾ ಮೊಣಕಾಲಿನ ಸಮಸ್ಯೆಗೆ ಒಳಗಾಗಿದ್ದರು. ಈ ಸಮಸ್ಯೆಯು ಗಂಭೀರವಾಗಿದ್ದ ಕಾರಣ ಮೊಣಕಾಲಿನ ಸರ್ಜರಿಗೆ ಒಳಗಾಗಬೇಕಾಯಿತು. ಇದರಿಂದ ಟಿ20 ವಿಶ್ವಕಪ್ ಅನ್ನು ಕೂಡ ತಪ್ಪಿಸಿಕೊಂಡಿದ್ದರು. ಇದೀಗ ಫಿಟ್ ಆಗಿರುವ ಜಡ್ಡು ಮುಂದಿನ ತಿಂಗಳು ತಂಡಕ್ಕೆ ಮರಳಲು ಸಜ್ಜಾಗುತ್ತಿದ್ದಾರೆ.
ಟೀಮ್ ಇಂಡಿಯಾ ಪಾಲಿಗೆ ನಿರ್ಣಾಯಕ:
ಭಾರತದಲ್ಲಿ ನಡೆಯಲಿರುವ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯು ಟೀಮ್ ಇಂಡಿಯಾ ಪಾಲಿಗೆ ನಿರ್ಣಾಯಕ. ಈ ಸರಣಿಯಲ್ಲಿ ಭಾರತ ತಂಡ ಸೋತರೆ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಫೈನಲ್ ಆಡುವ ಅವಕಾಶ ಕೈತಪ್ಪಲಿದೆ. ಹೀಗಾಗಿ ಆಸ್ಟ್ರೇಲಿಯಾ ವಿರುದ್ಧ ಭಾರತ ತಂಡವು 4-0 ಅಥವಾ 3-1 ಅಥವಾ 3-0 ಅಂತರದಿಂದ ಗೆಲ್ಲಬೇಕು. ಇದರಿಂದ ಟೀಮ್ ಇಂಡಿಯಾ ನೇರವಾಗಿ ವಿಶ್ವ ಟೆಸ್ಟ್ ಚಾಂಪಿಯನ್ನಲ್ಲಿ ಫೈನಲ್ಗೇರಬಹುದು.
ಇದನ್ನೂ ಓದಿ: RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
ಒಂದು ವೇಳೆ 2-1, 2-0 ಅಂತರದಿಂದ ಗೆದ್ದರೂ ಶ್ರೀಲಂಕಾ ತಂಡವು ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ಸೋಲುವುದನ್ನು ಭಾರತ ತಂಡ ಎದುರು ನೋಡಬೇಕಾಗುತ್ತದೆ. ಹೀಗಾಗಿ ಆಸೀಸ್ ವಿರುದ್ಧದ 4 ಪಂದ್ಯಗಳ ಟೆಸ್ಟ್ ಸರಣಿಯು ಟೀಮ್ ಇಂಡಿಯಾ ಪಾಲಿಗೆ ನಿರ್ಣಾಯಕ ಪಂದ್ಯವಾಗಿ ಮಾರ್ಪಟ್ಟಿದೆ.
ಭಾರತ-ಆಸ್ಟ್ರೇಲಿಯಾ ನಡುವಣ ಸರಣಿಯ ವೇಳಾಪಟ್ಟಿ ಹೀಗಿದೆ:
- 1ನೇ ಟೆಸ್ಟ್ ಪಂದ್ಯ (ನಾಗ್ಪುರ) – ಫೆಬ್ರವರಿ 9-13
- 2ನೇ ಟೆಸ್ಟ್ ಪಂದ್ಯ (ದೆಹಲಿ) – ಫೆಬ್ರವರಿ 17-21
- 3ನೇ ಟೆಸ್ಟ್ ಪಂದ್ಯ (ಧರ್ಮಶಾಲಾ) – ಮಾರ್ಚ್ 1-5
- 4ನೇ ಟೆಸ್ಟ್ ಪಂದ್ಯ (ಅಹಮದಾಬಾದ್) – ಮಾರ್ಚ್ 9-13
- 1ನೇ ಏಕದಿನ ಪಂದ್ಯ (ಮುಂಬೈ) – ಮಾರ್ಚ್ 17
- 2ನೇ ಏಕದಿನ ಪಂದ್ಯ (ವಿಶಾಖಪಟ್ಟಣಂ) – ಮಾರ್ಚ್ 19
- 3ನೇ ಏಕದಿನ ಪಂದ್ಯ (ಚೆನ್ನೈ) – ಮಾರ್ಚ್ 22