ರಿಷಭ್ ಪಂತ್ ಕಂಬ್ಯಾಕ್ ಯಾವಾಗ? ಇಲ್ಲಿದೆ ಉತ್ತರ

Rishabh Pant: ಮುಂದಿನ ಸೀಸನ್ ಐಪಿಎಲ್​ನಲ್ಲಿ ರಿಷಭ್ ಪಂತ್ ಡೆಲ್ಲಿ ಕ್ಯಾಪಿಟಲ್ಸ್ ಪರ ಕಣಕ್ಕಿಳಿಯುವುದು ಬಹುತೇಕ ಖಚಿತ. ಹೀಗಾಗಿಯೇ ಡೆಲ್ಲಿ ತಂಡದ ನಾಯಕ ಮತ್ತೆ ಬದಲಾಗಲಿದ್ದಾರೆ. ಅಂದರೆ ಪಂತ್ ಅವರ ಅಲಭ್ಯತೆಯಲ್ಲಿ ಈ ಬಾರಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಆಸ್ಟ್ರೇಲಿಯಾದ ಡೇವಿಡ್ ವಾರ್ನರ್ ಮುನ್ನಡೆಸಿದ್ದರು.

ರಿಷಭ್ ಪಂತ್ ಕಂಬ್ಯಾಕ್ ಯಾವಾಗ? ಇಲ್ಲಿದೆ ಉತ್ತರ
Rishabh Pant
Follow us
TV9 Web
| Updated By: ಝಾಹಿರ್ ಯೂಸುಫ್

Updated on: Aug 15, 2023 | 3:02 PM

ಟೀಮ್ ಇಂಡಿಯಾ (Team India) ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ (Rishabh Pant) ಚೇತರಿಕೆಯ ಹಾದಿಯಲ್ಲಿದ್ದಾರೆ. ಡಿಸೆಂಬರ್ 30, 2022 ರ ಮುಂಜಾನೆ ರೂರ್ಕಿಯಿಂದ ನವದೆಹಲಿಗೆ ತೆರಳುತ್ತಿದ್ದಾಗ ಪಂತ್ ಅವರ ಕಾರು ಭೀಕರ ರಸ್ತೆ ಅಪಘಾತಕ್ಕೆ ಒಳಗಾಗಿತ್ತು. ಈ ವೇಳೆ ಕಾಲಿಗೆ ಗಂಭೀರ ಗಾಯವಾಗಿದ್ದರಿಂದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಇದಾಗಿ 8 ತಿಂಗಳುಗಳ ಬಳಿಕ ರಿಷಭ್ ಪಂತ್ ಮತ್ತೆ ಮೈದಾನದಲ್ಲಿ ಕಾಣಿಸಿಕೊಳ್ಳಲು ಸಜ್ಜಾಗುತ್ತಿದ್ದಾರೆ. ಆದರೆ ಅವರು ಸಂಪೂರ್ಣ ಫಿಟ್​ನೆಸ್​ನೊಂದಿಗೆ ಪಂದ್ಯವಾಡಲು ಇನ್ನಷ್ಟು ದಿನ ತೆಗೆದುಕೊಳ್ಳಲಿದೆ ಎಂದು ವರದಿಯಾಗಿದೆ.

ಪ್ರಸ್ತುತ ಮಾಹಿತಿ ಪ್ರಕಾರ, ರಿಷಭ್ ಪಂತ್ ಮುಂದಿನ ವರ್ಷದ ಆರಂಭದಲ್ಲಿ ಟೀಮ್ ಇಂಡಿಯಾಗೆ ಕಂಬ್ಯಾಕ್ ಮಾಡಲಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಜನವರಿ 25, 2024 ರಲ್ಲಿ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಪಂತ್ ಕಾಣಿಸಿಕೊಳ್ಳುವ ಸಾಧ್ಯತೆಯಿದೆ.

ಹಾಗೆಯೇ ಐಪಿಎಲ್ 2024 ರಲ್ಲಿ ರಿಷಭ್ ಪಂತ್ ಡೆಲ್ಲಿ ಕ್ಯಾಪಿಟಲ್ಸ್ ಪರ ಕಣಕ್ಕಿಳಿಯುವುದು ಖಚಿತ ಎನ್ನಲಾಗಿದೆ. ಅಂದರೆ ಟೀಮ್ ಇಂಡಿಯಾದ ಯುವ ದಾಂಡಿಗ ಮುಂದಿನ ವರ್ಷ ಕಂಬ್ಯಾಕ್ ಮಾಡಲಿರುವುದು ಬಹುತೇಕ ಖಚಿತವಾಗಿದೆ.

ಸದ್ಯ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿ ಹಾರೈಕೆಯಲ್ಲಿರುವ ಪಂತ್ ಶೀಘ್ರದಲ್ಲೇ ಬ್ಯಾಟಿಂಗ್ ಅಭ್ಯಾಸಕ್ಕೆ ಇಳಿಯುವ ಸಾಧ್ಯತೆಯಿದೆ. ಅದರಂತೆ ಮುಂದಿನ ನಾಲ್ಕು ತಿಂಗಳಲ್ಲಿ ಸಂಪೂರ್ಣ ಫಿಟ್​ನೆಸ್ ಸಾಧಿಸಿ ಇಂಗ್ಲೆಂಡ್ ವಿರುದ್ಧದ ಸರಣಿಯೊಂದಿಗೆ ಹೊಸ ಇನಿಂಗ್ಸ್ ಆರಂಭಿಸುವ ಇರಾದೆಯಲ್ಲಿದ್ದಾರೆ.

ಡೆಲ್ಲಿ ತಂಡವನ್ನು ಮುನ್ನಡೆಸಲಿರುವ ಪಂತ್:

ಮುಂದಿನ ಸೀಸನ್ ಐಪಿಎಲ್​ನಲ್ಲಿ ರಿಷಭ್ ಪಂತ್ ಡೆಲ್ಲಿ ಕ್ಯಾಪಿಟಲ್ಸ್ ಪರ ಕಣಕ್ಕಿಳಿಯುವುದು ಬಹುತೇಕ ಖಚಿತ. ಹೀಗಾಗಿಯೇ ಡೆಲ್ಲಿ ತಂಡದ ನಾಯಕ ಮತ್ತೆ ಬದಲಾಗಲಿದ್ದಾರೆ. ಅಂದರೆ ಪಂತ್ ಅವರ ಅಲಭ್ಯತೆಯಲ್ಲಿ ಈ ಬಾರಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಆಸ್ಟ್ರೇಲಿಯಾದ ಡೇವಿಡ್ ವಾರ್ನರ್ ಮುನ್ನಡೆಸಿದ್ದರು. ಇದೀಗ ಪಂತ್ ತಂಡಕ್ಕೆ ಮರಳಿದರೆ ಅವರಿಗೆ ಮತ್ತೆ ನಾಯಕನ ಪಟ್ಟ ನೀಡಲಾಗುತ್ತದೆ. ಹೀಗಾಗಿ ಐಪಿಎಲ್ ಸೀಸನ್ 17 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ರಿಷಭ್ ಪಂತ್ ಮುನ್ನಡೆಸಲಿದ್ದಾರೆ.

ಮೂವರು ವಿಕೆಟ್ ಕೀಪರ್​ಗಳು:

ರಿಷಭ್ ಪಂತ್ ಅವರ ಅಲಭ್ಯತೆಯ ನಡುವೆ ಟೀಮ್ ಇಂಡಿಯಾ ಪರ ಕಳೆದ 8 ತಿಂಗಳುಗಳಲ್ಲಿ ಮೂವರು ವಿಕೆಟ್ ಕೀಪರ್​ಗಳು ಕಾಣಿಸಿಕೊಂಡಿದ್ದಾರೆ. ಟೆಸ್ಟ್​ನಲ್ಲಿ ಕೆಎಸ್ ಭರತ್ ವಿಕೆಟ್ ಕೀಪರ್ ಜವಾಬ್ದಾರಿ ನಿರ್ವಹಿಸಿದರೆ, ಏಕದಿನ ಹಾಗೂ ಟಿ20 ಪಂದ್ಯಗಳಲ್ಲಿ ಇಶಾನ್ ಕಿಶನ್ ಹಾಗೂ ಸಂಜು ಸ್ಯಾಮ್ಸನ್ ಕೀಪಿಂಗ್ ಗ್ಲೌಸ್ ತೊಟ್ಟಿದ್ದರು. ಆದರೆ ಈ ಮೂವರಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ ಎಂಬುದು ಇಲ್ಲಿ ಉಲ್ಲೇಖಾರ್ಹ. ಹೀಗಾಗಿಯೇ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಪಂತ್ ಕಾಣಿಸಿಕೊಳ್ಳುವುದರೊಂದಿಗೆ ಕೆಎಸ್ ಭರತ್ ತಂಡದಿಂದ ಹೊರಬೀಳುವುದು ಖಚಿತ ಎನ್ನಬಹುದು.

ಇದನ್ನೂ ಓದಿ: Team India: ವಿಶ್ವ ದಾಖಲೆ ಬರೆದ ಟೀಮ್ ಇಂಡಿಯಾ

ಭಾರತ-ಇಂಗ್ಲೆಂಡ್ ಟೆಸ್ಟ್​ ಸರಣಿ ವೇಳಾಪಟ್ಟಿ:

  1. ಮೊದಲ ಟೆಸ್ಟ್ (ಹೈದರಾಬಾದ್ – ಜನವರಿ 25 – ಜನವರಿ 29, 2024)
  2. ಎರಡನೇ ಟೆಸ್ಟ್ (ವೈಜಾಗ್ – ಫೆಬ್ರವರಿ 02 – ಫೆಬ್ರವರಿ 06, 2024)
  3. ಮೂರನೇ ಟೆಸ್ಟ್ (ರಾಜ್​ಕೋಟ್ – ಫೆಬ್ರವರಿ 15 – ಫೆಬ್ರವರಿ 19, 2024)
  4. ನಾಲ್ಕನೇ ಟೆಸ್ಟ್ (ರಾಂಚಿ – ಫೆಬ್ರವರಿ 23 – ಫೆಬ್ರವರಿ 27, 2024)
  5. ಐದನೇ ಟೆಸ್ಟ್ (ಧರ್ಮಶಾಲಾ – ಮಾರ್ಚ್ 07 – ಮಾರ್ಚ್ 11, 2024)
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ