AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ vs ವಿಂಡೀಸ್ ಟಿ20 ಪಂದ್ಯ ಎಷ್ಟು ಗಂಟೆಗೆ ಶುರು? ಯಾವ ಚಾನೆಲ್​ನಲ್ಲಿ? ಇಲ್ಲಿದೆ ಮಾಹಿತಿ

ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಣ ಏಕದಿನ ಸರಣಿಯನ್ನು ಟೀಮ್ ಇಂಡಿಯಾ ಗೆದ್ದುಕೊಂಡಿದೆ. ಮೂರು ಮ್ಯಾಚ್​ಗಳ ಈ ಸರಣಿ ಮೊದಲೆರಡು ಪಂದ್ಯಗಳಲ್ಲಿ ಭಾರತ ತಂಡ ಗೆದ್ದರೆ, ಮೂರನೇ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡ ಜಯ ಸಾಧಿಸಿತ್ತು. ಇದೀಗ ಉಭಯ ತಂಡಗಳು 5 ಪಂದ್ಯಗಳ ಟಿ20 ಸರಣಿಗಾಗಿ ಸಜ್ಜಾಗಿದೆ.

ಭಾರತ vs ವಿಂಡೀಸ್ ಟಿ20 ಪಂದ್ಯ ಎಷ್ಟು ಗಂಟೆಗೆ ಶುರು? ಯಾವ ಚಾನೆಲ್​ನಲ್ಲಿ? ಇಲ್ಲಿದೆ ಮಾಹಿತಿ
Ind Vs Wi Image Credit source: x.com
ಝಾಹಿರ್ ಯೂಸುಫ್
|

Updated on: Oct 05, 2026 | 12:39 PM

Share

ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಣ ಐದು ಪಂದ್ಯಗಳ ಟಿ20 ಸರಣಿಯು ಮಂಗಳವಾರದಿಂದ (ಅಕ್ಟೋಬರ್ 6) ಶುರುವಾಗಲಿದೆ. ಈ ರೋಮಾಂಚಕ ಸರಣಿಯ ಮೊದಲ ಪಂದ್ಯವು ಲಕ್ನೋದ ಏಕಾನ ಸ್ಟೇಡಿಯಂನಲ್ಲಿ ನಡೆಯಲಿದ್ದು, ಈ ಪಂದ್ಯದ ಸಮಯ ಮತ್ತು ನೇರ ಪ್ರಸಾರದ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ…

ಭಾರತ vs ವೆಸ್ಟ್ ಇಂಡೀಸ್ ಪಂದ್ಯ ಎಷ್ಟು ಗಂಟೆಗೆ ಶುರು?

ಇಂಡೋ-ವಿಂಡೀಸ್ ನಡುವಣ ಮೊದಲ ಟಿ20 ಪಂದ್ಯ ಭಾರತೀಯ ಕಾಲಮಾನ ರಾತ್ರಿ 7 ಗಂಟೆಗೆ ಶುರುವಾಗಲಿದೆ. ಇನ್ನು ಟಾಸ್ ಪ್ರಕ್ರಿಯೆ 6.30 ಕ್ಕೆ ನಡೆಯಲಿದೆ.

ಭಾರತ vs ವೆಸ್ಟ್ ಇಂಡೀಸ್ ಪಂದ್ಯವನ್ನು ಯಾವ ಚಾನೆಲ್​ನಲ್ಲಿ ವೀಕ್ಷಿಸಬಹುದು?

ಈ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್​ನ ಚಾನೆಲ್​ಗಳಾದ ಸ್ಟಾರ್ ಸ್ಪೋರ್ಟ್ಸ್ 1, ಸ್ಟಾರ್ ಸ್ಪೋರ್ಟ್ಸ್ 3 ಮತ್ತು ವಿವಿಧ ಪ್ರಾದೇಶಿಕ ಭಾಷಾ ಚಾನೆಲ್‌ಗಳಲ್ಲಿ ವೀಕ್ಷಿಸಬಹುದು.

ಹಾಗೆಯೇ ಮೊಬೈಲ್ ಅಥವಾ ಲ್ಯಾಪ್‌ಟಾಪ್‌ಗಳಲ್ಲಿ ವೀಕ್ಷಿಸಲು ಇಚ್ಛಿಸುವವರು ಜಿಯೋಹಾಟ್‌ಸ್ಟಾರ್ ಆ್ಯಪ್ ಮತ್ತು ವೆಬ್‌ಸೈಟ್ ಮೂಲಕ ಲೈವ್ ಸ್ಟ್ರೀಮಿಂಗ್ ವೀಕ್ಷಿಸಬಹುದು.

ಭಾರತ vs ವೆಸ್ಟ್ ಇಂಡೀಸ್ ಸರಣಿ ವೇಳಾಪಟ್ಟಿ:

ಪಂದ್ಯ ದಿನಾಂಕ ಕ್ರೀಡಾಂಗಣ ಸಮಯ (IST)
ಮೊದಲ ಟಿ20 ಪಂದ್ಯ 6 ಅಕ್ಟೋಬರ್ 2026 ಏಕನಾ ಕ್ರಿಕೆಟ್ ಸ್ಟೇಡಿಯಂ, ಲಕ್ನೋ ಸಂಜೆ 7:00
ಎರಡನೇ ಟಿ20 ಪಂದ್ಯ 9 ಅಕ್ಟೋಬರ್ 2026 JSCA ಇಂಟರ್ನ್ಯಾಷನಲ್ ಸ್ಟೇಡಿಯಂ, ರಾಂಚಿ ಸಂಜೆ 7:00
ಮೂರನೇ ಟಿ20 ಪಂದ್ಯ 11 ಅಕ್ಟೋಬರ್ 2026 ಹೋಳ್ಕರ್ ಸ್ಟೇಡಿಯಂ, ಇಂದೋರ್ ಸಂಜೆ 7:00
ನಾಲ್ಕನೇ ಟಿ20 ಪಂದ್ಯ 14 ಅಕ್ಟೋಬರ್ 2026 ರಾಜೀವ್ ಗಾಂಧಿ ಸ್ಟೇಡಿಯಂ, ಹೈದರಾಬಾದ್ ಸಂಜೆ 7:00
ಐದನೇ ಟಿ20 ಪಂದ್ಯ 17 ಅಕ್ಟೋಬರ್ 2026 ಎಂ. ಚಿನ್ನಸ್ವಾಮಿ ಸ್ಟೇಡಿಯಂ, ಬೆಂಗಳೂರು ಸಂಜೆ 7:00

ಉಭಯ ತಂಡಗಳು:

ಭಾರತ ಟಿ20 ತಂಡ: ಶ್ರೇಯಸ್ ಅಯ್ಯರ್ (ನಾಯಕ), ಅಭಿಷೇಕ್ ಶರ್ಮಾ, ವೈಭವ್ ಸೂರ್ಯವಂಶಿ, ಇಶಾನ್ ಕಿಶನ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ತಿಲಕ್ ವರ್ಮಾ (ನಾಯಕ), ಶಿವಂ ದುಬೆ, ಕುಲ್ದೀಪ್ ಯಾದವ್, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ನಿತೀಶ್ ಕುಮಾರ್ ರೆಡ್ಡಿ, ಪ್ರಿನ್ಸ್ ಯಾದವ್, ಅರ್ಷದೀಪ್ ಸಿಂಗ್, ಮಯಾಂಕ್ ಯಾದವ್.

ಇದನ್ನೂ ಓದಿ: ಟೀಮ್ ಇಂಡಿಯಾದಿಂದ ನಾಲ್ವರು ಔಟ್

ವೆಸ್ಟ್ ಇಂಡೀಸ್ ಟಿ20 ತಂಡ: ಶಾಯ್ ಹೋಪ್ (ನಾಯಕ), ಅಮೀರ್ ಜಂಗೂ, ರೋಸ್ಟನ್ ಚೇಸ್, ಮ್ಯಾಥ್ಯೂ ಫೋರ್ಡ್, ಶಿಮ್ರಾನ್ ಹೆಟ್ಮೆಯರ್, ಅಕೇಲ್ ಹೊಸೈನ್, ಶಮರ್ ಜೋಸೆಫ್, ಗುಡಾಕೇಶ್ ಮೋಟಿ, ಕೀಮೋ ಪೌಲ್, ಕಮಿಲ್ ಪೂರನ್, ರೋವ್‌ಮನ್ ಪೊವೆಲ್, ಶೆರ್ಫೇನ್ ರದರ್‌ಫೋರ್ಡ್, ಕ್ವೆಂಟಿನ್ ಸ್ಯಾಂಪ್ಸನ್, ರೊಮಾರಿಯೋ ಶೆಫರ್ಡ್, ಶಮರ್ ಸ್ಪ್ರಿಂಗರ್.

Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More