AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ram mandir: ರಾಮಲಾಲ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮಕ್ಕೆ ಆಹ್ವಾನಿಸಲಾದ ಭಾರತದ ಆಟಗಾರರ ಪಟ್ಟಿ ಇಲ್ಲಿದೆ

Team India Players Ram Mandir Inauguration: ರಾಮಲಾಲ ಅವರ ಪ್ರಾಣ ಪ್ರತಿಷ್ಠಾ ಸಮಾರಂಭದ ಆಹ್ವಾನ ಪತ್ರಿಕೆ ಪಟ್ಟಿಯಲ್ಲಿ ಪ್ರಮುಖ ರಾಜಕಾರಣಿಗಳು, ನಟರು, ಕ್ರೀಡಾ ತಾರೆಗಳು, ಉದ್ಯಮಿಗಳು ಸೇರಿದಂತೆ 500 ಕ್ಕೂ ಹೆಚ್ಚು ವಿಶೇಷ ಅತಿಥಿಗಳು ಕಾರ್ಯಕ್ರಮಕ್ಕೆ ಆಹ್ವಾನಿತರಾಗಿದ್ದಾರೆ. ಇದರಲ್ಲಿ ಕ್ರಿಕೆಟಿಗರ ಸಂಪೂರ್ಣ ಪಟ್ಟಿ ಇಲ್ಲಿದೆ.

Ram mandir: ರಾಮಲಾಲ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮಕ್ಕೆ ಆಹ್ವಾನಿಸಲಾದ ಭಾರತದ ಆಟಗಾರರ ಪಟ್ಟಿ ಇಲ್ಲಿದೆ
Team India Ram Mandir
Vinay Bhat
|

Updated on: Jan 21, 2024 | 7:54 AM

Share

ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಲಾಲ ಅವರ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮ (Ram Mandir Inauguration) ನಡೆಯಲಿದೆ. ಇದಕ್ಕಾಗಿ ಭಾರತದ ಹಲವು ಮಹಾನ್ ವ್ಯಕ್ತಿಗಳು ಅಯೋಧ್ಯೆಗೆ ತೆರಳಲು ತಯಾರಿ ನಡೆಸುತ್ತಿದ್ದಾರೆ. ಇದೇ ವೇಳೆ ಕ್ರೀಡಾ ಲೋಕದ ದಿಗ್ಗಜರಿಗೂ ಆಹ್ವಾನ ಕಳುಹಿಸಲಾಗಿದೆ. ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್, ಚೆಸ್ ಗ್ರ್ಯಾಂಡ್ ಮಾಸ್ಟರ್ ವಿಶ್ವನಾಥನ್ ಆನಂದ್, ‘ಸ್ಪ್ರಿಂಟ್ ಕ್ವೀನ್’ ಪಿಟಿ ಉಷಾ ಮತ್ತು ಸ್ಟಾರ್ ಫುಟ್‌ಬಾಲ್ ಆಟಗಾರ ಭೈಚುಂಗ್ ಭುಟಿಯಾ ಸೇರಿದಂತೆ ಅನೇಕ ಸ್ಟಾರ್ ಆಟಗಾರರನ್ನು ರಾಮಮಂದಿರ ಶಂಕುಸ್ಥಾಪನೆಗೆ ಆಹ್ವಾನಿಸಲಾಗಿದೆ.

500ಕ್ಕೂ ಹೆಚ್ಚು ಸೆಲೆಬ್ರಿಟಿಗಳು

ರಾಮಲಾಲ ಅವರ ಪ್ರಾಣ ಪ್ರತಿಷ್ಠಾ ಸಮಾರಂಭದ ಆಹ್ವಾನ ಪತ್ರಿಕೆ ಪಟ್ಟಿಯಲ್ಲಿ ಪ್ರಮುಖ ರಾಜಕಾರಣಿಗಳು, ನಟರು, ಕ್ರೀಡಾ ತಾರೆಗಳು, ಉದ್ಯಮಿಗಳು ಸೇರಿದಂತೆ 500 ಕ್ಕೂ ಹೆಚ್ಚು ವಿಶೇಷ ಅತಿಥಿಗಳು ಕಾರ್ಯಕ್ರಮಕ್ಕೆ ಆಹ್ವಾನಿತರಾಗಿದ್ದಾರೆ. ಇದರಲ್ಲಿ ಕ್ರೀಡಾ ಜಗತ್ತಿನ ಸಚಿನ್ ತೆಂಡೂಲ್ಕರ್ ಜೊತೆಗೆ ವಿಶ್ವಕಪ್ ವಿಜೇತ ನಾಯಕ ಕಪಿಲ್ ದೇವ್, ಲಿಟ್ಲ್ ಮಾಸ್ಟರ್ ಸುನಿಲ್ ಗವಾಸ್ಕರ್, ಮಹೇಂದ್ರ ಸಿಂಗ್ ಧೋನಿ, ವಿರಾಟ್ ಕೊಹ್ಲಿ ಕೂಡ ಇದ್ದಾರೆ. ಇಲ್ಲಿದೆ ನೋಡಿ ಸಂಪೂರ್ಣ ಪಟ್ಟಿ.

U19 World Cup 2024: ಬಾಂಗ್ಲಾ ತಂಡವನ್ನು 84 ರನ್​ಗಳಿಂದ ಮಣಿಸಿ ವಿಶ್ವಕಪ್​ನಲ್ಲಿ ಶುಭಾರಂಭ ಮಾಡಿದ ಭಾರತ..!

ಇದನ್ನೂ ಓದಿ
Image
ರಜತ್ ಪಾಟಿದಾರ್ ಶತಕ: ಭಾರತ A vs ಇಂಗ್ಲೆಂಡ್​ L ಪಂದ್ಯ ಡ್ರಾ..!
Image
ILT20: ಗುರ್ಬಾಝ್ ಅಬ್ಬರ: ದುಬೈ ಕ್ಯಾಪಿಟಲ್ಸ್ ತಂಡಕ್ಕೆ ಭರ್ಜರಿ ಜಯ
Image
ಇಂದಿನಿಂದ ಭಾರತದ ತರಬೇತಿ ಶಿಬಿರ: ಪ್ರ್ಯಾಕ್ಟೀಸ್ ನಡುವೆ ಅಯೋಧ್ಯೆ ದರ್ಶನ?
Image
ಟಿ20 ಯಲ್ಲಿ ಈ ಸಾಧನೆ ಮಾಡಿದ ವಿಶ್ವದ 2ನೇ, ಏಷ್ಯಾದ ಮೊದಲ ಬ್ಯಾಟರ್ ಮಲಿಕ್..!

ರಾಮಮಂದಿರ ಶಂಕುಸ್ಥಾಪನೆಗೆ ಆಹ್ವಾನಿತ ಕ್ರಿಕೆಟಿಗರ ಸಂಪೂರ್ಣ ಪಟ್ಟಿ:

  • ಸಚಿನ್ ತೆಂಡೂಲ್ಕರ್
  • ಎಂಎಸ್ ಧೋನಿ
  • ವಿರಾಟ್ ಕೊಹ್ಲಿ
  • ರೋಹಿತ್ ಶರ್ಮಾ
  • ಸುನಿಲ್ ಗವಾಸ್ಕರ್
  • ಕಪಿಲ್ ದೇವ್
  • ರಾಹುಲ್ ದ್ರಾವಿಡ್
  • ವೀರೇಂದ್ರ ಸೆಹ್ವಾಗ್
  • ಸೌರವ್ ಗಂಗೂಲಿ
  • ಅನಿಲ್ ಕುಂಬ್ಳೆ
  • ರವೀಂದ್ರ ಜಡೇಜಾ
  • ರವಿಚಂದ್ರನ್ ಅಶ್ವಿನ್
  • ಮಿಥಾಲಿ ರಾಜ್
  • ಹರ್ಮನ್‌ಪ್ರೀತ್ ಕೌರ್
  • ಗೌತಮ್ ಗಂಭೀರ್
  • ಹರ್ಭಜನ್ ಸಿಂಗ್

ಆದರೆ, ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯು ಜನವರಿ 25 ರಿಂದ ಪ್ರಾರಂಭವಾಗಲಿದೆ. ಟೀಮ್ ಇಂಡಿಯಾದ ಅನೇಕ ಆಟಗಾರರು ಜನವರಿ 21 ರಿಂದ ಹೈದರಾಬಾದ್​ನಲ್ಲಿ ಪ್ರ್ಯಾಕ್ಟೀಸ್ ಶುರುಮಾಡಲಿದ್ದಾರೆ. ಹೀಗಾಗಿ ಈ ಲಿಸ್ಟ್​ನಲ್ಲಿ ಯಾರು ಅಯೋಧ್ಯೆಯಲ್ಲಿ ಕಾಣಿಸಿಕೊಳ್ಳುತ್ತಾರೆ, ಯಾರು ಇಲ್ಲ ಎಂಬುದನ್ನು ಕಾದು ನೋಡಬೇಕಿದೆ.

ಇತರ ಕ್ರೀಡಾ ತಾರೆಗಳೂ ಭಾಗಿಯಾಗಲಿದ್ದಾರೆ

ಕ್ರಿಕೆಟಿಗರನ್ನು ಹೊರತುಪಡಿಸಿ, ವೇಟ್‌ಲಿಫ್ಟರ್ ಕರ್ಣಂ ಮಲ್ಲೇಶ್ವರಿ, ಫುಟ್‌ಬಾಲ್ ಆಟಗಾರ ಕಲ್ಯಾಣ್ ಚೌಬೆ, ಓಟಗಾರ್ತಿ ಕವಿತಾ ರಾವುತ್ ಮತ್ತು ಪ್ಯಾರಾಲಿಂಪಿಕ್ ಜಾವೆಲಿನ್ ಎಸೆತಗಾರ ದೇವೇಂದ್ರ ಝಜಾರಿಯಾ ಅವರಿಗೂ ಆಹ್ವಾನ ಕಳುಹಿಸಲಾಗಿದೆ. ಮಹಿಳಾ ಕ್ರಿಕೆಟ್ ತಂಡದ ನಾಯಕಿ ಮಿಥಾಲಿ ರಾಜ್, ಹರ್ಮನ್​ಪ್ರೀತ್ ಕೌರ್, ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ಮತ್ತು ಪಿವಿ ಸಿಂಧು ಮತ್ತು ಅವರ ತರಬೇತುದಾರ ಪುಲ್ಲೇಲ ಗೋಪಿಚಂದ್ ಅವರನ್ನೂ ಆಹ್ವಾನಿಸಲಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು