ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಲಾಲ ಅವರ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮ (Ram Mandir Inauguration) ನಡೆಯಲಿದೆ. ಇದಕ್ಕಾಗಿ ಭಾರತದ ಹಲವು ಮಹಾನ್ ವ್ಯಕ್ತಿಗಳು ಅಯೋಧ್ಯೆಗೆ ತೆರಳಲು ತಯಾರಿ ನಡೆಸುತ್ತಿದ್ದಾರೆ. ಇದೇ ವೇಳೆ ಕ್ರೀಡಾ ಲೋಕದ ದಿಗ್ಗಜರಿಗೂ ಆಹ್ವಾನ ಕಳುಹಿಸಲಾಗಿದೆ. ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್, ಚೆಸ್ ಗ್ರ್ಯಾಂಡ್ ಮಾಸ್ಟರ್ ವಿಶ್ವನಾಥನ್ ಆನಂದ್, ‘ಸ್ಪ್ರಿಂಟ್ ಕ್ವೀನ್’ ಪಿಟಿ ಉಷಾ ಮತ್ತು ಸ್ಟಾರ್ ಫುಟ್‌ಬಾಲ್ ಆಟಗಾರ ಭೈಚುಂಗ್ ಭುಟಿಯಾ ಸೇರಿದಂತೆ ಅನೇಕ ಸ್ಟಾರ್ ಆಟಗಾರರನ್ನು ರಾಮಮಂದಿರ ಶಂಕುಸ್ಥಾಪನೆಗೆ ಆಹ್ವಾನಿಸಲಾಗಿದೆ.
ರಾಮಲಾಲ ಅವರ ಪ್ರಾಣ ಪ್ರತಿಷ್ಠಾ ಸಮಾರಂಭದ ಆಹ್ವಾನ ಪತ್ರಿಕೆ ಪಟ್ಟಿಯಲ್ಲಿ ಪ್ರಮುಖ ರಾಜಕಾರಣಿಗಳು, ನಟರು, ಕ್ರೀಡಾ ತಾರೆಗಳು, ಉದ್ಯಮಿಗಳು ಸೇರಿದಂತೆ 500 ಕ್ಕೂ ಹೆಚ್ಚು ವಿಶೇಷ ಅತಿಥಿಗಳು ಕಾರ್ಯಕ್ರಮಕ್ಕೆ ಆಹ್ವಾನಿತರಾಗಿದ್ದಾರೆ. ಇದರಲ್ಲಿ ಕ್ರೀಡಾ ಜಗತ್ತಿನ ಸಚಿನ್ ತೆಂಡೂಲ್ಕರ್ ಜೊತೆಗೆ ವಿಶ್ವಕಪ್ ವಿಜೇತ ನಾಯಕ ಕಪಿಲ್ ದೇವ್, ಲಿಟ್ಲ್ ಮಾಸ್ಟರ್ ಸುನಿಲ್ ಗವಾಸ್ಕರ್, ಮಹೇಂದ್ರ ಸಿಂಗ್ ಧೋನಿ, ವಿರಾಟ್ ಕೊಹ್ಲಿ ಕೂಡ ಇದ್ದಾರೆ. ಇಲ್ಲಿದೆ ನೋಡಿ ಸಂಪೂರ್ಣ ಪಟ್ಟಿ.
U19 World Cup 2024: ಬಾಂಗ್ಲಾ ತಂಡವನ್ನು 84 ರನ್ಗಳಿಂದ ಮಣಿಸಿ ವಿಶ್ವಕಪ್ನಲ್ಲಿ ಶುಭಾರಂಭ ಮಾಡಿದ ಭಾರತ..!
ಆದರೆ, ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯು ಜನವರಿ 25 ರಿಂದ ಪ್ರಾರಂಭವಾಗಲಿದೆ. ಟೀಮ್ ಇಂಡಿಯಾದ ಅನೇಕ ಆಟಗಾರರು ಜನವರಿ 21 ರಿಂದ ಹೈದರಾಬಾದ್ನಲ್ಲಿ ಪ್ರ್ಯಾಕ್ಟೀಸ್ ಶುರುಮಾಡಲಿದ್ದಾರೆ. ಹೀಗಾಗಿ ಈ ಲಿಸ್ಟ್ನಲ್ಲಿ ಯಾರು ಅಯೋಧ್ಯೆಯಲ್ಲಿ ಕಾಣಿಸಿಕೊಳ್ಳುತ್ತಾರೆ, ಯಾರು ಇಲ್ಲ ಎಂಬುದನ್ನು ಕಾದು ನೋಡಬೇಕಿದೆ.
ಕ್ರಿಕೆಟಿಗರನ್ನು ಹೊರತುಪಡಿಸಿ, ವೇಟ್‌ಲಿಫ್ಟರ್ ಕರ್ಣಂ ಮಲ್ಲೇಶ್ವರಿ, ಫುಟ್‌ಬಾಲ್ ಆಟಗಾರ ಕಲ್ಯಾಣ್ ಚೌಬೆ, ಓಟಗಾರ್ತಿ ಕವಿತಾ ರಾವುತ್ ಮತ್ತು ಪ್ಯಾರಾಲಿಂಪಿಕ್ ಜಾವೆಲಿನ್ ಎಸೆತಗಾರ ದೇವೇಂದ್ರ ಝಜಾರಿಯಾ ಅವರಿಗೂ ಆಹ್ವಾನ ಕಳುಹಿಸಲಾಗಿದೆ. ಮಹಿಳಾ ಕ್ರಿಕೆಟ್ ತಂಡದ ನಾಯಕಿ ಮಿಥಾಲಿ ರಾಜ್, ಹರ್ಮನ್‌ಪ್ರೀತ್ ಕೌರ್, ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ಮತ್ತು ಪಿವಿ ಸಿಂಧು ಮತ್ತು ಅವರ ತರಬೇತುದಾರ ಪುಲ್ಲೇಲ ಗೋಪಿಚಂದ್ ಅವರನ್ನೂ ಆಹ್ವಾನಿಸಲಾಗಿದೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ