IND vs ENG: ಭಾರತದ ವಿರುದ್ಧದ ಸರಣಿಗೆ ಆಯ್ಕೆಯಾದ ಡಾನ್ ಯಾರು?
India vs England: ಭಾರತ ಮತ್ತು ಇಂಗ್ಲೆಂಡ್ ನಡುವಣ ಸರಣಿಯು ಜನವರಿ 25 ರಿಂದ ಶುರುವಾಗಲಿದೆ. ಈ ಸರಣಿಯ ಮೊದಲ ಪಂದ್ಯವು ಹೈದರಾಬಾದ್ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆಯಲಿದೆ. ಇನ್ನು 2ನೇ ಪಂದ್ಯಕ್ಕೆ ವಿಶಾಖಪಟ್ಟಣಂನಲ್ಲಿರುವ ವೈಎಸ್ಆರ್ ಸ್ಟೇಡಿಯಂ ಆತಿಥ್ಯವಹಿಸಿದರೆ, 3ನೇ ಪಂದ್ಯವು

ಭಾರತದ ವಿರುದ್ಧದ ಟೆಸ್ಟ್ ಸರಣಿಯಿಂದ ಇಂಗ್ಲೆಂಡ್ ಆಟಗಾರ ಹ್ಯಾರಿ ಬ್ರೂಕ್ (Harry Brook) ಹೊರಗುಳಿದಿದ್ದಾರೆ. ವೈಯುಕ್ತಿಕ ಕಾರಣಗಳಿಂದಾಗಿ ಅವರು 5 ಪಂದ್ಯಗಳ ಸರಣಿಯಿಂದ ಹಿಂದೆ ಸರಿದಿದ್ದಾರೆ. ಇದೀಗ ಅವರ ಬದಲಿ ಆಟಗಾರನಾಗಿ ಡಾನ್ ಲಾರೆನ್ಸ್ (Dan Lawrence) ಇಂಗ್ಲೆಂಡ್ ತಂಡಕ್ಕೆ ಆಯ್ಕೆಯಾಗಿದ್ದಾರೆ. ಇದರ ಬೆನ್ನಲ್ಲೇ ಈ ಡಾನ್ ಲಾರೆನ್ಸ್ ಯಾರು ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.
ಈ ಪ್ರಶ್ನೆಗೆ ಸಿಗುವ ಉತ್ತರ ಡೇನಿಯಲ್ ವಿಲಿಯಂ ಲಾರೆನ್ಸ್. ಹೌದು, ಡಾನ್ ಲಾರೆನ್ಸ್ ಅವರ ಮೂಲ ಹೆಸರು ಡೇನಿಯಲ್ ವಿಲಿಯಂ ಲಾರೆನ್ಸ್. ಈಗಾಗಲೇ ಇಂಗ್ಲೆಂಡ್ ಪರ 11 ಟೆಸ್ಟ್ ಪಂದ್ಯಗಳನ್ನಾಡಿದ್ದಾರೆ. ಈ ಹನ್ನೊಂದು ಪಂದ್ಯಗಳ 21 ಇನಿಂಗ್ಸ್ಗಳಿಂದ 551 ರನ್ ಕಲೆಹಾಕಿದ್ದಾರೆ. ಈ ವೇಳೆ 4 ಅರ್ಧಶತಕಗಳನ್ನು ಕೂಡ ಬಾರಿಸಿದ್ದಾರೆ.
ಇನ್ನು ಟೆಸ್ಟ್ ಕ್ರಿಕೆಟ್ನಲ್ಲಿ 210 ಎಸೆತಗಳನ್ನು ಎಸೆದಿರುವ ಲಾರೆನ್ಸ್ 3 ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಂದರೆ ಲಾರೆನ್ಸ್ ಬ್ಯಾಟಿಂಗ್ ಆಲ್ರೌಂಡರ್. ಅದರಲ್ಲೂ ಮಧ್ಯಮ ಕ್ರಮಾಂಕದಲ್ಲಿ ಸ್ಪೋಟಕ ಬ್ಯಾಟಿಂಗ್ ಮಾಡಬಲ್ಲ ಸಾಮರ್ಥ್ಯ ಹೊಂದಿದ್ದಾರೆ. ಹೀಗಾಗಿ ಹ್ಯಾರಿ ಬ್ರೂಕ್ ಬದಲಿಗೆ ಡಾನ್ ಲಾರೆನ್ಸ್ಗೆ ಚಾನ್ಸ್ ನೀಡಲಾಗಿದೆ.
ಫಸ್ಟ್ ಕ್ಲಾಸ್ನಲ್ಲೂ ಕ್ಲಾಸ್ ಬ್ಯಾಟಿಂಗ್:
ಡಾನ್ ಲಾರೆನ್ಸ್ ಪ್ರಥಮ ದರ್ಜೆ ಕ್ರಿಕೆಟ್ನಲ್ಲೂ ಅತ್ಯುತ್ತಮ ಪ್ರದರ್ಶನ ನೀಡುತ್ತಾ ಬಂದಿದ್ದಾರೆ. ಫಸ್ಟ್ ಕ್ಲಾಸ್ನಲ್ಲಿ 118 ಪಂದ್ಯಗಳನ್ನಾಡಿರುವ ಲಾರೆನ್ಸ್ 15 ಶತಕ ಹಾಗೂ 29 ಅರ್ಧಶತಕಗಳನ್ನು ಬಾರಿಸಿದ್ದಾರೆ. ಅಲ್ಲದೆ ಒಟ್ಟು 6360 ರನ್ ಕಲೆಹಾಕಿದ್ದಾರೆ.
ಈ ಎಲ್ಲಾ ಕಾರಣಗಳಿಂದಾಗಿ 26 ವರ್ಷದ ಡಾನ್ ಲಾರೆನ್ಸ್ ಅವರನ್ನು ಭಾರತದ ವಿರುದ್ಧದ ಟೆಸ್ಟ್ ಸರಣಿಗೆ ಆಯ್ಕೆ ಮಾಡಲಾಗಿದೆ. ಅದರಂತೆ ಟೀಮ್ ಇಂಡಿಯಾ ವಿರುದ್ಧದ ಪಂದ್ಯಗಳಲ್ಲಿ ಹ್ಯಾರಿ ಬ್ರೂಕ್ ಸ್ಥಾನದಲ್ಲಿ ಡಾನ್ ಕಣಕ್ಕಿಳಿಯಲಿದ್ದಾರಾ ಕಾದು ನೋಡಬೇಕಿದೆ.
ಭಾರತ-ಇಂಗ್ಲೆಂಡ್ ಸರಣಿ ಯಾವಾಗ ಶುರು?
ಭಾರತ ಮತ್ತು ಇಂಗ್ಲೆಂಡ್ ನಡುವಣ ಸರಣಿಯು ಜನವರಿ 25 ರಿಂದ ಶುರುವಾಗಲಿದೆ. ಈ ಸರಣಿಯ ಮೊದಲ ಪಂದ್ಯವು ಹೈದರಾಬಾದ್ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆಯಲಿದೆ. ಇನ್ನು 2ನೇ ಪಂದ್ಯಕ್ಕೆ ವಿಶಾಖಪಟ್ಟಣಂನಲ್ಲಿರುವ ವೈಎಸ್ಆರ್ ಸ್ಟೇಡಿಯಂ ಆತಿಥ್ಯವಹಿಸಿದರೆ, 3ನೇ ಪಂದ್ಯವು
ರಾಜ್ಕೋಟ್ನ ಸೌರಾಷ್ಟ್ರ ಕ್ರಿಕೆಟ್ ಅಸೋಷಿಯೇಷನ್ ಸ್ಟೇಡಿಯಂನಲ್ಲಿ ನಡೆಯಲಿದೆ. ನಾಲ್ಕನೇ ಟೆಸ್ಟ್ ಪಂದವು ರಾಂಚಿಯ ಜೆಎಸ್ಸಿಎ ಸ್ಟೇಡಿಯಂನಲ್ಲಿ ನಡೆಯಲಿದ್ದು, ಕೊನೆಯ ಟೆಸ್ಟ್ ಪಂದ್ಯಕ್ಕೆ ಧರ್ಮಶಾಲಾದ ಹೆಚ್ಪಿಸಿಎ ಸ್ಟೇಡಿಯಂ ಆತಿಥ್ಯವಹಿಸಲಿದೆ.
ಇದನ್ನೂ ಓದಿ: ಅಫ್ಘಾನಿಸ್ತಾನ್ ವಿರುದ್ಧ ಗೆದ್ದು ಪಾಕಿಸ್ತಾನ್ ತಂಡದ ವಿಶ್ವ ದಾಖಲೆ ಮುರಿದ ಟೀಮ್ ಇಂಡಿಯಾ
ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ:
- ಜನವರಿ 25 ರಿಂದ 29- ಮೊದಲ ಟೆಸ್ಟ್ ಪಂದ್ಯ (ಹೈದರಾಬಾದ್)
- ಫೆಬ್ರವರಿ 2 ರಿಂದ 6- ಎರಡನೇ ಟೆಸ್ಟ್ ಪಂದ್ಯ (ವಿಶಾಖಪಟ್ಟಣಂ)
- ಫೆಬ್ರವರಿ 15 ರಿಂದ 19- ಮೂರನೇ ಟೆಸ್ಟ್ ಪಂದ್ಯ (ರಾಜ್ಕೋಟ್)
- ಫೆಬ್ರವರಿ 23 ರಿಂದ 27- ನಾಲ್ಕನೇ ಟೆಸ್ಟ್ ಪಂದ್ಯ (ರಾಂಚಿ)
- ಮಾರ್ಚ್ 7 ರಿಂದ 11- ಐದನೇ ಟೆಸ್ಟ್ ಪಂದ್ಯ (ಧರ್ಮಶಾಲಾ)
