IND vs ENG: ಭಾರತದ ವಿರುದ್ಧದ ಸರಣಿಗೆ ಆಯ್ಕೆಯಾದ ಡಾನ್ ಯಾರು?

| Updated By: ಝಾಹಿರ್ ಯೂಸುಫ್

Updated on: Jan 22, 2024 | 1:46 PM

India vs England: ಭಾರತ ಮತ್ತು ಇಂಗ್ಲೆಂಡ್ ನಡುವಣ ಸರಣಿಯು ಜನವರಿ 25 ರಿಂದ ಶುರುವಾಗಲಿದೆ. ಈ ಸರಣಿಯ ಮೊದಲ ಪಂದ್ಯವು ಹೈದರಾಬಾದ್​ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆಯಲಿದೆ. ಇನ್ನು 2ನೇ ಪಂದ್ಯಕ್ಕೆ ವಿಶಾಖಪಟ್ಟಣಂನಲ್ಲಿರುವ ವೈಎಸ್​ಆರ್​ ಸ್ಟೇಡಿಯಂ ಆತಿಥ್ಯವಹಿಸಿದರೆ, 3ನೇ ಪಂದ್ಯವು

IND vs ENG: ಭಾರತದ ವಿರುದ್ಧದ ಸರಣಿಗೆ ಆಯ್ಕೆಯಾದ ಡಾನ್ ಯಾರು?
Dan Lawrence
Follow us on

ಭಾರತದ ವಿರುದ್ಧದ ಟೆಸ್ಟ್ ಸರಣಿಯಿಂದ ಇಂಗ್ಲೆಂಡ್ ಆಟಗಾರ ಹ್ಯಾರಿ ಬ್ರೂಕ್  (Harry Brook) ಹೊರಗುಳಿದಿದ್ದಾರೆ. ವೈಯುಕ್ತಿಕ ಕಾರಣಗಳಿಂದಾಗಿ ಅವರು 5 ಪಂದ್ಯಗಳ ಸರಣಿಯಿಂದ ಹಿಂದೆ ಸರಿದಿದ್ದಾರೆ. ಇದೀಗ ಅವರ ಬದಲಿ ಆಟಗಾರನಾಗಿ ಡಾನ್ ಲಾರೆನ್ಸ್ (Dan Lawrence) ಇಂಗ್ಲೆಂಡ್ ತಂಡಕ್ಕೆ ಆಯ್ಕೆಯಾಗಿದ್ದಾರೆ. ಇದರ ಬೆನ್ನಲ್ಲೇ ಈ ಡಾನ್ ಲಾರೆನ್ಸ್ ಯಾರು ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

ಈ ಪ್ರಶ್ನೆಗೆ ಸಿಗುವ ಉತ್ತರ ಡೇನಿಯಲ್ ವಿಲಿಯಂ ಲಾರೆನ್ಸ್​. ಹೌದು, ಡಾನ್ ಲಾರೆನ್ಸ್​ ಅವರ ಮೂಲ ಹೆಸರು ಡೇನಿಯಲ್ ವಿಲಿಯಂ ಲಾರೆನ್ಸ್​. ಈಗಾಗಲೇ ಇಂಗ್ಲೆಂಡ್ ಪರ 11 ಟೆಸ್ಟ್ ಪಂದ್ಯಗಳನ್ನಾಡಿದ್ದಾರೆ. ಈ ಹನ್ನೊಂದು ಪಂದ್ಯಗಳ 21 ಇನಿಂಗ್ಸ್​ಗಳಿಂದ 551 ರನ್ ಕಲೆಹಾಕಿದ್ದಾರೆ. ಈ ವೇಳೆ 4 ಅರ್ಧಶತಕಗಳನ್ನು ಕೂಡ ಬಾರಿಸಿದ್ದಾರೆ.

ಇನ್ನು ಟೆಸ್ಟ್ ಕ್ರಿಕೆಟ್​ನಲ್ಲಿ 210 ಎಸೆತಗಳನ್ನು ಎಸೆದಿರುವ ಲಾರೆನ್ಸ್ 3 ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಂದರೆ ಲಾರೆನ್ಸ್ ಬ್ಯಾಟಿಂಗ್ ಆಲ್​ರೌಂಡರ್. ಅದರಲ್ಲೂ ಮಧ್ಯಮ ಕ್ರಮಾಂಕದಲ್ಲಿ ಸ್ಪೋಟಕ ಬ್ಯಾಟಿಂಗ್ ಮಾಡಬಲ್ಲ ಸಾಮರ್ಥ್ಯ ಹೊಂದಿದ್ದಾರೆ. ಹೀಗಾಗಿ ಹ್ಯಾರಿ ಬ್ರೂಕ್ ಬದಲಿಗೆ ಡಾನ್ ಲಾರೆನ್ಸ್​ಗೆ ಚಾನ್ಸ್ ನೀಡಲಾಗಿದೆ.

ಫಸ್ಟ್ ಕ್ಲಾಸ್​ನಲ್ಲೂ ಕ್ಲಾಸ್ ಬ್ಯಾಟಿಂಗ್:

ಡಾನ್ ಲಾರೆನ್ಸ್ ಪ್ರಥಮ ದರ್ಜೆ ಕ್ರಿಕೆಟ್​ನಲ್ಲೂ ಅತ್ಯುತ್ತಮ ಪ್ರದರ್ಶನ ನೀಡುತ್ತಾ ಬಂದಿದ್ದಾರೆ. ಫಸ್ಟ್ ಕ್ಲಾಸ್​ನಲ್ಲಿ 118 ಪಂದ್ಯಗಳನ್ನಾಡಿರುವ ಲಾರೆನ್ಸ್ 15 ಶತಕ ಹಾಗೂ 29 ಅರ್ಧಶತಕಗಳನ್ನು ಬಾರಿಸಿದ್ದಾರೆ. ಅಲ್ಲದೆ ಒಟ್ಟು 6360 ರನ್​ ಕಲೆಹಾಕಿದ್ದಾರೆ.

ಈ ಎಲ್ಲಾ ಕಾರಣಗಳಿಂದಾಗಿ 26 ವರ್ಷದ ಡಾನ್ ಲಾರೆನ್ಸ್ ಅವರನ್ನು ಭಾರತದ ವಿರುದ್ಧದ ಟೆಸ್ಟ್ ಸರಣಿಗೆ ಆಯ್ಕೆ ಮಾಡಲಾಗಿದೆ. ಅದರಂತೆ ಟೀಮ್ ಇಂಡಿಯಾ ವಿರುದ್ಧದ ಪಂದ್ಯಗಳಲ್ಲಿ ಹ್ಯಾರಿ ಬ್ರೂಕ್ ಸ್ಥಾನದಲ್ಲಿ ಡಾನ್ ಕಣಕ್ಕಿಳಿಯಲಿದ್ದಾರಾ ಕಾದು ನೋಡಬೇಕಿದೆ.

ಭಾರತ-ಇಂಗ್ಲೆಂಡ್ ಸರಣಿ ಯಾವಾಗ ಶುರು?

ಭಾರತ ಮತ್ತು ಇಂಗ್ಲೆಂಡ್ ನಡುವಣ ಸರಣಿಯು ಜನವರಿ 25 ರಿಂದ ಶುರುವಾಗಲಿದೆ. ಈ ಸರಣಿಯ ಮೊದಲ ಪಂದ್ಯವು ಹೈದರಾಬಾದ್​ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆಯಲಿದೆ. ಇನ್ನು 2ನೇ ಪಂದ್ಯಕ್ಕೆ ವಿಶಾಖಪಟ್ಟಣಂನಲ್ಲಿರುವ ವೈಎಸ್​ಆರ್​ ಸ್ಟೇಡಿಯಂ ಆತಿಥ್ಯವಹಿಸಿದರೆ, 3ನೇ ಪಂದ್ಯವು

ರಾಜ್​ಕೋಟ್​ನ ಸೌರಾಷ್ಟ್ರ ಕ್ರಿಕೆಟ್ ಅಸೋಷಿಯೇಷನ್ ಸ್ಟೇಡಿಯಂನಲ್ಲಿ ನಡೆಯಲಿದೆ.
ನಾಲ್ಕನೇ ಟೆಸ್ಟ್ ಪಂದವು ರಾಂಚಿಯ ಜೆಎಸ್​ಸಿಎ ಸ್ಟೇಡಿಯಂನಲ್ಲಿ ನಡೆಯಲಿದ್ದು, ಕೊನೆಯ ಟೆಸ್ಟ್ ಪಂದ್ಯಕ್ಕೆ ಧರ್ಮಶಾಲಾದ ಹೆಚ್​ಪಿಸಿಎ ಸ್ಟೇಡಿಯಂ ಆತಿಥ್ಯವಹಿಸಲಿದೆ.

ಇದನ್ನೂ ಓದಿ: ಅಫ್ಘಾನಿಸ್ತಾನ್ ವಿರುದ್ಧ ಗೆದ್ದು ಪಾಕಿಸ್ತಾನ್ ತಂಡದ ವಿಶ್ವ ದಾಖಲೆ ಮುರಿದ ಟೀಮ್ ಇಂಡಿಯಾ

ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ:

  • ಜನವರಿ 25 ರಿಂದ 29- ಮೊದಲ ಟೆಸ್ಟ್ ಪಂದ್ಯ (ಹೈದರಾಬಾದ್)
  • ಫೆಬ್ರವರಿ 2 ರಿಂದ 6- ಎರಡನೇ ಟೆಸ್ಟ್ ಪಂದ್ಯ (ವಿಶಾಖಪಟ್ಟಣಂ)
  • ಫೆಬ್ರವರಿ 15 ರಿಂದ 19- ಮೂರನೇ ಟೆಸ್ಟ್ ಪಂದ್ಯ (ರಾಜ್​ಕೋಟ್)
  • ಫೆಬ್ರವರಿ 23 ರಿಂದ 27- ನಾಲ್ಕನೇ ಟೆಸ್ಟ್ ಪಂದ್ಯ (ರಾಂಚಿ)
  • ಮಾರ್ಚ್ 7 ರಿಂದ 11- ಐದನೇ ಟೆಸ್ಟ್ ಪಂದ್ಯ (ಧರ್ಮಶಾಲಾ)