AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Priyansh Arya: ಅಂದು ಒಂದೇ ಓವರ್‌ನಲ್ಲಿ 6 ಸಿಕ್ಸ್: ಇಂದು 39 ಎಸೆತಗಳಲ್ಲಿ ಶತಕ ಬಾರಿಸಿದ ಪ್ರಿಯಾಂಶ್ ಆರ್ಯ ಯಾರು?

PBKS vs CSK IPL 2025: ಪ್ರಿಯಾಂಶ್ ತಮ್ಮ ಚೊಚ್ಚಲ ಐಪಿಎಲ್ ಪಂದ್ಯದಲ್ಲೇ 47 ರನ್ ಗಳಿಸಿದ್ದರು ಎಂಬುದು ಗಮನಿಸಬೇಕಾದ ಸಂಗತಿ. ನಿನ್ನೆ ಸಿಎಸ್ಕೆ ವಿರುದ್ಧ 42 ಎಸೆತಗಳಲ್ಲಿ 103 ರನ್ ಗಳಿಸಿ ಔಟಾದರು. ಇವರ ಇನ್ನಿಂಗ್ಸ್ನಲ್ಲಿ 7 ಫೋರ್ ಮತ್ತು 9 ಸಿಕ್ಸರ್ಸ್ ಒಳಗೊಂಡಿತ್ತು. ಈ ಶತಕದ ಮೂಲಕ ಪ್ರಿಯಾಂಶ್ ಐಪಿಎಲ್‌ನಲ್ಲಿ ಅತಿ ವೇಗದ ಸೆಂಚುರಿ ಬಾರಿಸಿದ ಎರಡನೇ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

Priyansh Arya: ಅಂದು ಒಂದೇ ಓವರ್‌ನಲ್ಲಿ 6 ಸಿಕ್ಸ್: ಇಂದು 39 ಎಸೆತಗಳಲ್ಲಿ ಶತಕ ಬಾರಿಸಿದ ಪ್ರಿಯಾಂಶ್ ಆರ್ಯ ಯಾರು?
Priyansh Arya
Follow us
Vinay Bhat
|

Updated on: Apr 09, 2025 | 11:12 AM

ಬೆಂಗಳೂರು (ಏ. 09): ಪಂಜಾಬ್ ಕಿಂಗ್ಸ್ (ಪಿಬಿಕೆಎಸ್) ತಂಡದ ಬ್ಯಾಟ್ಸ್‌ಮನ್ ಪ್ರಿಯಾಂಶ್ ಆರ್ಯ ಮಂಗಳವಾರ ಚೆನ್ನೈ ಸೂಪರ್ ಕಿಂಗ್ಸ್ (Punjab Kings vs Chennai Super Kings) ವಿರುದ್ಧ 39 ಎಸೆತಗಳಲ್ಲಿ ಶತಕ ಸಿಡಿಸಿದರು. ಇದು ಅವರ ಕೇವಲ ನಾಲ್ಕನೇ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಪಂದ್ಯವಾಗಿತ್ತು. ಐದು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಪ್ರಿಯಾಂಶ್ ಆಟ ಕಂಡು ಎಲ್ಲರೂ ಶಾಕ್ ಆದರು. ಎಡಗೈ ಬ್ಯಾಟ್ಸ್‌ಮನ್ ಒಂಬತ್ತು ಸಿಕ್ಸರ್‌ಗಳು ಮತ್ತು ಏಳು ಬೌಂಡರಿಗಳನ್ನು ಬಾರಿಸಿ 13 ನೇ ಓವರ್‌ನಲ್ಲಿ ಮಥಿಶ ಪತಿರಾನ ಬೌಲಿಂಗ್‌ನಲ್ಲಿ 22 ರನ್ ಗಳಿಸುವ ಮೂಲಕ ಶತಕವನ್ನು ತಲುಪಿದರು.

ಪ್ರಿಯಾಂಶ್ ತಮ್ಮ ಚೊಚ್ಚಲ ಐಪಿಎಲ್ ಪಂದ್ಯದಲ್ಲೇ 47 ರನ್ ಗಳಿಸಿದ್ದರು ಎಂಬುದು ಗಮನಿಸಬೇಕಾದ ಸಂಗತಿ. ನಿನ್ನೆ ಸಿಎಸ್​ಕೆ ವಿರುದ್ಧ 42 ಎಸೆತಗಳಲ್ಲಿ 103 ರನ್ ಗಳಿಸಿ ಔಟಾದರು. ಇವರ ಇನ್ನಿಂಗ್ಸ್​ನಲ್ಲಿ 7 ಫೋರ್ ಮತ್ತು 9 ಸಿಕ್ಸರ್ಸ್ ಒಳಗೊಂಡಿತ್ತು. ಇವರು ನೂರ್ ಅಹ್ಮದ್ ಬೌಲಿಂಗ್ ಔಟ್ ಆದರು. ಈ ಶತಕದ ಮೂಲಕ ಪ್ರಿಯಾಂಶ್ ಐಪಿಎಲ್‌ನಲ್ಲಿ ಅತಿ ವೇಗದ ಸೆಂಚುರಿ ಬಾರಿಸಿದ ಎರಡನೇ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು. 2010 ರಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಪರ ಆಡುವಾಗ 37 ಎಸೆತಗಳಲ್ಲಿ ಶತಕ ಗಳಿಸಿದ ಯೂಸುಫ್ ಪಠಾಣ್ ನಂಬರ್ ಒನ್ ಸ್ಥಾನದಲ್ಲಿದ್ದಾರೆ.

ಪ್ರಿಯಾಂಶ್ ಆರ್ಯ ಯಾರು?:

ದೆಹಲಿಯ ಆಕ್ರಮಣಕಾರಿ ಆರಂಭಿಕ ಆಟಗಾರ ಪ್ರಿಯಾಂಶ್ ಆರ್ಯ ಅವರನ್ನು ಪಂಜಾಬ್ ಕಿಂಗ್ಸ್ ತಂಡವು ಮೆಗಾ ಹರಾಜಿನಲ್ಲಿ 3.8 ಕೋಟಿ ರೂ. ಗೆ ಖರೀದಿಸಿತು. ಅವರು ದೆಹಲಿ ಪ್ರೀಮಿಯರ್ ಲೀಗ್ (ಡಿಪಿಎಲ್) ಟೂರ್ನಮೆಂಟ್‌ನಲ್ಲಿ ಸೌತ್ ದೆಹಲಿ ಸೂಪರ್‌ಸ್ಟಾರ್ಸ್ ಪರ ಆಡುವಾಗ 10 ಇನ್ನಿಂಗ್ಸ್‌ಗಳಲ್ಲಿ 608 ರನ್‌ಗಳನ್ನು ಗಳಿಸಿ ಗಮನ ಸೆಳೆದಿದ್ದರು. ಡಿಪಿಎಲ್‌ನ ಮೊದಲ ಋತುವಿನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರರಾದರು. ಈ ವರ್ಷದ ಆರಂಭದಲ್ಲಿ ದೆಹಲಿ ಪ್ರೀಮಿಯರ್ ಲೀಗ್‌ನಲ್ಲಿ ಪ್ರಿಯಾಂಶ್ ಮತ್ತಷ್ಟು ಪ್ರಸಿದ್ಧಿ ಪಡೆದರು. ಇಲ್ಲಿ ಅವರು ನಾರ್ತ್ ಡೆಲ್ಲಿ ಸ್ಟ್ರೈಕರ್ಸ್ ವಿರುದ್ಧ ಒಂದೇ ಓವರ್‌ನಲ್ಲಿ ಆರು ಸಿಕ್ಸರ್‌ಗಳನ್ನು ಬಾರಿಸಿ ಸದ್ದು ಮಾಡಿದ್ದರು.

ಇದನ್ನೂ ಓದಿ
Image
ನಾನು ಹೇಳಿದರೆ ವಿವಾದವಾಗುತ್ತೆ: ಪೋಸ್ಟ್ ಮ್ಯಾಚ್​ನಲ್ಲಿ ಕೋಪಗೊಂಡ ರಹಾನೆ
Image
ಗಲ್ಲಿ ಕ್ರಿಕೆಟ್‌ನಲ್ಲೂ ಹೀಗೆ ಆಗಲ್ಲ: PBKS vs CSK ಪಂದ್ಯದಲ್ಲಿ ಏನಾಯಿತು?
Image
ಪತಿರಾನ ಓವರ್​ನಲ್ಲಿ ಹ್ಯಾಟ್ರಿಕ್ ಸಿಕ್ಸರ್ ಸಿಡಿಸಿದ ಪ್ರಿಯಾಂಶ್
Image
ಐಪಿಎಲ್ 2025 ರ ಅತ್ಯಂತ ವೇಗದ ಶತಕ ಬಾರಿಸಿದ ಪ್ರಿಯಾಂಶ್ ಆರ್ಯ

Ajinkya Rahane: ನಾನು ಹೇಳಿದರೆ ವಿವಾದವಾಗುತ್ತೆ: ಪೋಸ್ಟ್ ಮ್ಯಾಚ್​ನಲ್ಲಿ ಕೋಪಗೊಂಡ ಅಜಿಂಕ್ಯಾ ರಹಾನೆ

2023-24ರ ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ, ಪ್ರಿಯಾಂಶ್ ದೆಹಲಿ ಪರ ಅತಿ ಹೆಚ್ಚು ರನ್ ಗಳಿಸಿದ ಆಟಗಾರನಾಗಿ ಹೊರಹೊಮ್ಮಿದರು. ಅವರು ಏಳು ಇನ್ನಿಂಗ್ಸ್‌ಗಳಲ್ಲಿ 31.71 ಸರಾಸರಿ ಮತ್ತು 166.91 ರ ಅದ್ಭುತ ಸ್ಟ್ರೈಕ್ ರೇಟ್‌ನಲ್ಲಿ 222 ರನ್ ಗಳಿಸಿದರು. ಅಚ್ಚರಿ ಎಂದರೆ ಐಪಿಎಲ್ 2024 ರ ಹರಾಜಿಗೆ ಇವರು ಆಯ್ಕೆಯಾಗಿದ್ದರೂ, ಅಲ್ಲಿ ಮಾರಾಟವಾಗಲಿಲ್ಲ.

ಪ್ರಿಯಾಂಶ್ ಆರ್ಯ ಶತಕದೊಂದಿಗೆ ಹಲವು ದಾಖಲೆ ನಿರ್ಮಿಸಿದರು:

ಪ್ರಿಯಾಂಶ್ ಆರ್ಯ ಐಪಿಎಲ್ ಇತಿಹಾಸದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಅತಿ ವೇಗದ ಶತಕ ಬಾರಿಸಿದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇದು ಪಂದ್ಯಾವಳಿಯ ಐದನೇ ವೇಗದ ಶತಕ ಆಗಿದೆ. ಇದಲ್ಲದೆ, ಇದುವರೆಗೆ ಅಂತರರಾಷ್ಟ್ರೀಯ ಕ್ರಿಕೆಟ್ ಆಡದ ಯಾವುದೇ ಆಟಗಾರನು ಐಪಿಎಲ್‌ನಲ್ಲಿ ಗಳಿಸಿದ ಅತ್ಯಂತ ವೇಗದ ಶತಕ ಕೂಡ ಇದಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ
ಪಹಲ್ಗಾಮ್ ಉಗ್ರರಿಗೆ ನೆರವಾದ ಇಬ್ಬರು ಸ್ಥಳೀಯ ಕಾಶ್ಮೀರಿಗಳ ಮನೆ ಧ್ವಂಸ!
ಪಹಲ್ಗಾಮ್ ಉಗ್ರರಿಗೆ ನೆರವಾದ ಇಬ್ಬರು ಸ್ಥಳೀಯ ಕಾಶ್ಮೀರಿಗಳ ಮನೆ ಧ್ವಂಸ!
ನನ್ನ ಹೆಗಲ ಮೇಲೆ ಕೂರಿಸಿಕೊಂಡು ಬೆಟ್ಟ ಇಳಿದವರು ಸ್ಥಳೀಯ ಕಾಶ್ಮೀರಿ: ಅಭಿಜಯ್
ನನ್ನ ಹೆಗಲ ಮೇಲೆ ಕೂರಿಸಿಕೊಂಡು ಬೆಟ್ಟ ಇಳಿದವರು ಸ್ಥಳೀಯ ಕಾಶ್ಮೀರಿ: ಅಭಿಜಯ್
Dewald Brevis: ಚೊಚ್ಚಲ ಪಂದ್ಯದಲ್ಲೇ ಡೆವಾಲ್ಡ್ ಬ್ರೆವಿಸ್ ಆರ್ಭಟ
Dewald Brevis: ಚೊಚ್ಚಲ ಪಂದ್ಯದಲ್ಲೇ ಡೆವಾಲ್ಡ್ ಬ್ರೆವಿಸ್ ಆರ್ಭಟ
ಸುಳಿವು ನೀಡಿದ ಕಳ್ಳರ ಕಾರು,  ಚೇಸ್ ಮಾಡಿದಾಗ ಪೊಲೀಸರ ಮೇಲೆ ಹಲ್ಲೆ
ಸುಳಿವು ನೀಡಿದ ಕಳ್ಳರ ಕಾರು,  ಚೇಸ್ ಮಾಡಿದಾಗ ಪೊಲೀಸರ ಮೇಲೆ ಹಲ್ಲೆ