AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಬ್ಬರ ನಡುವೆ ಪೈಪೋಟಿ: ಯಾರಾಗ್ತಾರೆ ಟೀಮ್ ಇಂಡಿಯಾ ನಾಯಕ?

Team India T20 Captain: ಭಾರತೀಯ ಕ್ರಿಕೆಟ್‌ನಲ್ಲಿ ಈಗ ನಾಯಕತ್ವದ ಬದಲಾವಣೆಯ ಗಾಳಿ ಬೀಸುತ್ತಿದೆ. 2026ರ ಟಿ20 ವಿಶ್ವಕಪ್‌ನಲ್ಲಿ ಭಾರತಕ್ಕೆ ಐತಿಹಾಸಿಕ ಜಯ ತಂದುಕೊಟ್ಟ ಸೂರ್ಯಕುಮಾರ್ ಯಾದವ್ (SKY) ಅವರ ನಾಯಕತ್ವದ ಅವಧಿ ಮುಕ್ತಾಯದ ಹಂತಕ್ಕೆ ಬಂದಿರುವ ಸೂಚನೆಗಳು ಲಭ್ಯವಾಗಿವೆ. ಸೂರ್ಯಕುಮಾರ್ ಅವರ ಇತ್ತೀಚಿನ ಕಳಪೆ ಫಾರ್ಮ್ ಮತ್ತು ವಯಸ್ಸಿನ (35 ವರ್ಷ) ಕಾರಣದಿಂದಾಗಿ, ಬಿಸಿಸಿಐ (BCCI) ಭವಿಷ್ಯದ ದೃಷ್ಟಿಯಿಂದ ಹೊಸ ನಾಯಕನ ಹುಡುಕಾಟದಲ್ಲಿದೆ.

ಇಬ್ಬರ ನಡುವೆ ಪೈಪೋಟಿ: ಯಾರಾಗ್ತಾರೆ ಟೀಮ್ ಇಂಡಿಯಾ ನಾಯಕ?
Team India
ಝಾಹಿರ್ ಯೂಸುಫ್
|

Updated on: May 09, 2026 | 8:55 AM

Share

ಭಾರತ ಟಿ20 ತಂಡಕ್ಕೆ ಹೊಸ ಸಾರಥಿಯ ಹುಡುಕಾಟ ಶುರುವಾಗಿದೆ. ಸೂರ್ಯಕುಮಾರ್ ಯಾದವ್ ಅವರ ಉತ್ತರಾಧಿಕಾರಿಯಾಗಲು ಸ್ಫೋಟಕ ದಾಂಡಿಗ ಸಂಜು ಸ್ಯಾಮ್ಸನ್ ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಚಾಂಪಿಯನ್ ಮಾಡಿದ ಶ್ರೇಯಸ್ ಅಯ್ಯರ್ ನಡುವೆ ಬಿಗ್ ಫೈಟ್ ಏರ್ಪಟ್ಟಿದೆ. ಒಬ್ಬರ ಬಳಿ ಪ್ರಚಂಡ ಫಾರ್ಮ್ ಇದ್ದರೆ, ಮತ್ತೊಬ್ಬರ ಬಳಿ ಐಪಿಎಲ್ ಟ್ರೋಫಿ ಗೆದ್ದ ನಾಯಕತ್ವದ ಚಾಕಚಕ್ಯತೆಯಿದೆ. ಹೀಗಾಗಿಯೇ ಟೀಮ್ ಇಂಡಿಯಾದ ಮುಂದಿನ ನಾಯಕ ಯಾರಾಗಲಿದ್ದಾರೆ ಎಂಬ ಕುತೂಹಲ ಏರ್ಫಟ್ಟಿದೆ.

ರೇಸ್‌ನಲ್ಲಿ ಸಂಜು ಸ್ಯಾಮ್ಸನ್:

ಟೀಮ್ ಇಂಡಿಯಾದ ನಾಯಕನ ಸ್ಥಾನಕ್ಕೆ ಮೊದಲು ಶ್ರೇಯಸ್ ಅಯ್ಯರ್ ಅವರ ಹೆಸರು ಕೇಳಿಬಂದಿತ್ತಾದರೂ, ಇತ್ತೀಚಿನ ವರದಿಗಳ ಪ್ರಕಾರ ಸಂಜು ಸ್ಯಾಮ್ಸನ್ ಈಗ ನಾಯಕತ್ವದ ರೇಸ್‌ನಲ್ಲಿ ಎಲ್ಲರಿಗಿಂತ ಮುಂದಿದ್ದಾರೆ. 2026ರ ಟಿ20 ವಿಶ್ವಕಪ್‌ನಲ್ಲಿ ಸತತ ಮೂರು ಅರ್ಧಶತಕಗಳನ್ನು ಸಿಡಿಸಿ ‘ಪ್ಲೇಯರ್ ಆಫ್ ದಿ ಟೂರ್ನಮೆಂಟ್’ ಪ್ರಶಸ್ತಿ ಗೆದ್ದಿರುವುದು ಸಂಜು ಅವರ ಆಯ್ಕೆಗೆ ಬಲವಾದ ಕಾರಣವಾಗಿದೆ.

ಆಯ್ಕೆ ಸಮಿತಿಯ ಒಲವು ಏಕೆ?

ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿಯು ಸಂಜು ಅವರ ಶಾಂತ ಸ್ವಭಾವ ಮತ್ತು ಸ್ಥಿರ ಪ್ರದರ್ಶನಕ್ಕೆ ಮನಸೋತಿದೆ. ಐಪಿಎಲ್‌ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿದ ಅನುಭವ ಇವರಿಗೆ ಪ್ಲಸ್ ಪಾಯಿಂಟ್ ಆಗಿದೆ. ಅಲ್ಲದೆ, ಚೆನ್ನೈ ಸೂಪರ್ ಕಿಂಗ್ಸ್  ಪರ ಪ್ರಸಕ್ತ ಐಪಿಎಲ್ ಸೀಸನ್‌ನಲ್ಲಿ 400ಕ್ಕೂ ಹೆಚ್ಚು ರನ್ ಗಳಿಸಿ ಅಮೋಘ ಫಾರ್ಮ್‌ನಲ್ಲಿದ್ದಾರೆ.

ಶ್ರೇಯಸ್ ಅಯ್ಯರ್​ ಸವಾಲು:

ಶ್ರೇಯಸ್ ಅಯ್ಯರ್ ಅವರು 2023 ರಿಂದ ಟಿ20 ತಂಡದಿಂದ ಹೊರಗುಳಿದಿರುವುದು ಅವರ ಆಯ್ಕೆಗೆ ಅಡ್ಡಿಯಾಗಬಹುದು. ಒಂದು ವೇಳೆ ಸೂರ್ಯಕುಮಾರ್ ಅವರನ್ನು ಮುಂದುವರಿಸಲು ನಿರ್ಧರಿಸಿದರೆ, ಸಂಜು ಅವರನ್ನು ಉಪನಾಯಕನನ್ನಾಗಿ ನೇಮಿಸುವ ಸಾಧ್ಯತೆಯೂ ಇದೆ. ಇದರೊಂದಿಗೆ ಶುಭಮನ್ ಗಿಲ್ ಮತ್ತು ಹಾರ್ದಿಕ್ ಪಾಂಡ್ಯ ಅವರ ಹೆಸರುಗಳೂ ಚರ್ಚೆಯಲ್ಲಿವೆ.

ಈ ಹಿಂದೆ ಶ್ರೇಯಸ್ ಅಯ್ಯರ್ ಹೆಸರು ಮುಂಚೂಣಿಯಲ್ಲಿದ್ದರೂ, ಇದೀಗ ಈ ಸ್ಥಾನಕ್ಕೆ ಸಂಜು ಸ್ಯಾಮ್ಸನ್ ಹೆಸರು ಕೇಳಿ ಬರುತ್ತಿವೆ. ಅದರಲ್ಲೂ ಶ್ರೇಯಸ್​ಗಿಂತ ಗೌತಮ್ ಗಂಭೀರ್ ಸಂಜು ಸ್ಯಾಮ್ಸನ್ ಪರ ಇದ್ದಾರೆ ಎಂಬ ಮಾತುಗಳು ಕೂಡ ಕೇಳಿ ಬರುತ್ತಿವೆ. ಹೀಗಾಗಿ ಬಿಸಿಸಿಐ ಅಂತಿಮವಾಗಿ ಯಾರಿಗೆ ಕ್ಯಾಪ್ಟನ್ ಪಟ್ಟ ನೀಡಲಿದ್ದಾರೆ ಎಂಬುದೇ ಈಗ ಕುತೂಹಲ.

ಇದನ್ನೂ ಓದಿ: ಕೃನಾಲ್ ಪಾಂಡ್ಯ ಕಾಲರ್ ಪಟ್ಟಿ ಹಿಡಿದ ನಿಕೋಲಸ್ ಪೂರನ್!

ಮುಂಬರುವ ಸವಾಲುಗಳು:

ಐಪಿಎಲ್ 2026 ಮುಗಿದ ತಕ್ಷಣ ಭಾರತ ತಂಡವು ಐರ್ಲೆಂಡ್ ಮತ್ತು ಇಂಗ್ಲೆಂಡ್ ಪ್ರವಾಸ ಕೈಗೊಳ್ಳಲಿದೆ. ಈ ಪ್ರವಾಸಗಳಲ್ಲೇ ಭಾರತದ ಹೊಸ ಟಿ20 ನಾಯಕ ಯಾರು ಎಂಬುದು ಅಧಿಕೃತವಾಗಿ ತಿಳಿಯಲಿದೆ. 2028ರ ಲಾಸ್ ಏಂಜಲೀಸ್ ಒಲಿಂಪಿಕ್ಸ್ ಮತ್ತು ಮುಂದಿನ ಟಿ20 ವಿಶ್ವಕಪ್ ಅನ್ನು ದೃಷ್ಟಿಯಲ್ಲಿಟ್ಟುಕೊಂಡು ಬಿಸಿಸಿಐ ಈ ಮಹತ್ವದ ನಿರ್ಧಾರ ತೆಗೆದುಕೊಳ್ಳಲಿದೆ.

Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
‘ನಂಬಿ ಕೆಟ್ಟವರು’: ಗಾನವಿಯ ನಂಬಿ ಕುರಿಯಾದ ಆಸಿಯಾ
‘ನಂಬಿ ಕೆಟ್ಟವರು’: ಗಾನವಿಯ ನಂಬಿ ಕುರಿಯಾದ ಆಸಿಯಾ
ತುಮಕೂರು ದಸರಾ: ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಡಿಸಿಎಂ ಪರಮೇಶ್ವರ್
ತುಮಕೂರು ದಸರಾ: ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಡಿಸಿಎಂ ಪರಮೇಶ್ವರ್
ದಸರಾ ಆನೆಗಳ ಗುಣ, ಸ್ವಭಾವದ ಬಗ್ಗೆ ಸಿಬ್ಬಂದಿ ಹೇಳಿದ ಮಾತುಗಳನ್ನು ಕೇಳಿ!
ದಸರಾ ಆನೆಗಳ ಗುಣ, ಸ್ವಭಾವದ ಬಗ್ಗೆ ಸಿಬ್ಬಂದಿ ಹೇಳಿದ ಮಾತುಗಳನ್ನು ಕೇಳಿ!
ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಲ್ಲಿ ಕರಾವಳಿ ಉದ್ಯಮಿಗಳಿಗೆ ಬೆದರಿಕೆ ಕರೆ!
ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಲ್ಲಿ ಕರಾವಳಿ ಉದ್ಯಮಿಗಳಿಗೆ ಬೆದರಿಕೆ ಕರೆ!
ಮೈಸೂರು ದಸರಾ: ಅರಮನೆಯಲ್ಲಿ ಯದುವೀರ್ ನೇತೃತ್ವದಲ್ಲಿ ಅದ್ದೂರಿ ಆಯುಧ ಪೂಜೆ
ಮೈಸೂರು ದಸರಾ: ಅರಮನೆಯಲ್ಲಿ ಯದುವೀರ್ ನೇತೃತ್ವದಲ್ಲಿ ಅದ್ದೂರಿ ಆಯುಧ ಪೂಜೆ
ರಾಜ್ಯ ಬಿಜೆಪಿ ಕಚೇರಿಯಲ್ಲಿ ಆಯುಧ ಪೂಜೆ ಸಂಭ್ರಮದ ಆಚರಣೆ
ರಾಜ್ಯ ಬಿಜೆಪಿ ಕಚೇರಿಯಲ್ಲಿ ಆಯುಧ ಪೂಜೆ ಸಂಭ್ರಮದ ಆಚರಣೆ
ಆಯುಧ ಪೂಜೆ ಸಂಭ್ರಮ:ದೊಡ್ಡ ಗಣಪತಿ ಮತ್ತು ಸರ್ಕಲ್ ಮಾರಮ್ಮ ದೇಗುಲಗಳಲ್ಲಿ ಪೂಜೆ
ಆಯುಧ ಪೂಜೆ ಸಂಭ್ರಮ:ದೊಡ್ಡ ಗಣಪತಿ ಮತ್ತು ಸರ್ಕಲ್ ಮಾರಮ್ಮ ದೇಗುಲಗಳಲ್ಲಿ ಪೂಜೆ
ಆರ್‌ಎಸ್‌ಎಸ್ ವಿಜಯದಶಮಿ ಉತ್ಸವದಲ್ಲಿ ಮೋಹನ್ ಭಾಗವತ್ ಮಾತು
ಆರ್‌ಎಸ್‌ಎಸ್ ವಿಜಯದಶಮಿ ಉತ್ಸವದಲ್ಲಿ ಮೋಹನ್ ಭಾಗವತ್ ಮಾತು
ವೇದಿಕೆ ಮೇಲೆ ರಚಿತಾ ರಾಮ್ ಅವರನ್ನು ಎಳೆದಾಡಿದ ಅಭಿಮಾನಿ: ವಿಡಿಯೋ
ವೇದಿಕೆ ಮೇಲೆ ರಚಿತಾ ರಾಮ್ ಅವರನ್ನು ಎಳೆದಾಡಿದ ಅಭಿಮಾನಿ: ವಿಡಿಯೋ
ಬೆಂಗಳೂರು: ಶಾಂತಿನಗರದಲ್ಲಿ ಮೂರು ದಿನಗಳ ದುರ್ಗಾದೇವಿ ಉತ್ಸವ
ಬೆಂಗಳೂರು: ಶಾಂತಿನಗರದಲ್ಲಿ ಮೂರು ದಿನಗಳ ದುರ್ಗಾದೇವಿ ಉತ್ಸವ