ನಾಲ್ವರು ಆರಂಭಿಕರು: ಟೀಮ್ ಇಂಡಿಯಾದ ಓಪನಿಂಗ್ ಜೋಡಿ ಯಾರು?

India vs Australia: ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆದಿರುವ ಇಶಾನ್ ಕಿಶನ್ ಕೂಡ ಏಷ್ಯಾಕಪ್​ನ ಫೈನಲ್​ನಲ್ಲಿ ಆರಂಭಿಕನಾಗಿ ಆಡಿದ್ದರು. ಇದೀಗ ಹಿಟ್​ಮ್ಯಾನ್ ಅನುಪಸ್ಥಿತಿಯಲ್ಲಿ ಎಡಗೈ ದಾಂಡಿಗ ಗಿಲ್ ಜೊತೆ ಮತ್ತೆ ಇನಿಂಗ್ಸ್ ಆರಂಭಿಸುವ ವಿಶ್ವಾಸದಲ್ಲಿದ್ದಾರೆ. ಮತ್ತೊಂದೆಡೆ ಇನ್ನಿಬ್ಬರು ಆಟಗಾರರು ಕೂಡ ಆರಂಭಿಕನ ಸ್ಥಾನದ ರೇಸ್​ನಲ್ಲಿದ್ದಾರೆ.

ನಾಲ್ವರು ಆರಂಭಿಕರು: ಟೀಮ್ ಇಂಡಿಯಾದ ಓಪನಿಂಗ್ ಜೋಡಿ ಯಾರು?
Team India
Follow us
TV9 Web
| Updated By: ಝಾಹಿರ್ ಯೂಸುಫ್

Updated on:Sep 21, 2023 | 6:37 PM

ಭಾರತ-ಆಸ್ಟ್ರೇಲಿಯಾ ನಡುವಣ ಮೂರು ಪಂದ್ಯಗಳ ಏಕದಿನ ಸರಣಿ ಶುಕ್ರವಾರದಿಂದ (ಸೆ.22) ಶುರುವಾಗಲಿದೆ. ಮೊಹಾಲಿಯಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ (Team India) ಪರ ಆರಂಭಿಕರಾಗಿ ಕಾಣಿಸಿಕೊಳ್ಳುವುದು ಯಾರು ಎಂಬ ಕುತೂಹಲ ಏರ್ಪಟ್ಟಿದೆ. ಏಕೆಂದರೆ ತಂಡದಲ್ಲಿ ಒಟ್ಟು ನಾಲ್ವರು ಆರಂಭಿಕ ಆಟಗಾರರಿದ್ದಾರೆ.

ಅತ್ತ ರೋಹಿತ್ ಶರ್ಮಾ ಈ ಪಂದ್ಯದಿಂದ ಹೊರಗುಳಿದಿರುವ ಕಾರಣ ಆರಂಭಿಕನ ಸ್ಥಾನದಲ್ಲಿ ಬದಲಾವಣೆ ಕಂಡು ಬರುವುದು ಖಚಿತ. ಇಲ್ಲಿ ಓಪನರ್ ಸ್ಥಾನಕ್ಕಾಗಿ ನಾಲ್ವರು ಆಟಗಾರರ ನಡುವೆ ಪೈಪೋಟಿ ಇರುವುದರಿಂದ ಯಾರು ಇನಿಂಗ್ಸ್​ ಆರಂಭಿಸಲಿದ್ದಾರೆ ಎಂಬ ಪ್ರಶ್ನೆ ಮೂಡುವುದು ಸಹಜ.

ಒಂದು ಕಡೆ ಭಾರತದ ತಂಡದ ಖಾಯಂ ಆರಂಭಿಕ ಆಟಗಾರ ಶುಭ್​ಮನ್ ಗಿಲ್ ಕಣಕ್ಕಿಳಿಯುವುದು ಖಚಿತ ಎನ್ನಬಹುದು. ಇನ್ನೊಂದು ಬದಿಯಲ್ಲಿ ಕಣಕ್ಕಿಳಿಯಲು ಇಶಾನ್ ಕಿಶನ್, ರುತುರಾಜ್ ಗಾಯಕ್ವಾಡ್ ಹಾಗೂ ಕೆಎಲ್ ರಾಹುಲ್ ನಡುವೆ ಪೈಪೋಟಿ ಇದೆ.

ಸಾಮಾನ್ಯವಾಗಿ ರೋಹಿತ್ ಶರ್ಮಾ ತಂಡದಲ್ಲಿದ್ದರೆ ಕೆಎಲ್ ರಾಹುಲ್ ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿಯುತ್ತಾರೆ. ಆದರೆ ಅನುಭವಿ ಆಟಗಾರರ ಅನುಪಸ್ಥಿತಿಯಲ್ಲಿ ರಾಹುಲ್ ಅಗ್ರ ಕ್ರಮಾಂಕದಲ್ಲಿ ಕಣಕ್ಕಿಳಿಯುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ.

ಮತ್ತೊಂದೆಡೆ ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆದಿರುವ ಇಶಾನ್ ಕಿಶನ್ ಕೂಡ ಏಷ್ಯಾಕಪ್​ನ ಫೈನಲ್​ನಲ್ಲಿ ಆರಂಭಿಕನಾಗಿ ಆಡಿದ್ದರು. ಇದೀಗ ಹಿಟ್​ಮ್ಯಾನ್ ಅನುಪಸ್ಥಿತಿಯಲ್ಲಿ ಎಡಗೈ ದಾಂಡಿಗ ಗಿಲ್ ಜೊತೆ ಮತ್ತೆ ಇನಿಂಗ್ಸ್ ಆರಂಭಿಸುವ ವಿಶ್ವಾಸದಲ್ಲಿದ್ದಾರೆ.

ಆದರೆ ಅತ್ತ ಏಷ್ಯನ್ ಗೇಮ್ಸ್​ಗಾಗಿ ತೆರಳಬೇಕಿರುವ ಭಾರತ ತಂಡದ ನಾಯಕರಾಗಿರುವ ರುತುರಾಜ್ ಗಾಯಕ್ವಾಡ್ ಕೂಡ ಆರಂಭಿಕ ಅಟಗಾರ. ಆಸ್ಟ್ರೇಲಿಯಾ ವಿರುದ್ಧದ ಪಂದ್ಯಗಳಲ್ಲಿ ಕಣಕ್ಕಿಳಿದು ಏಷ್ಯನ್ ಗೇಮ್ಸ್​ಗಾಗಿ ಸಿದ್ಧತೆಗಳನ್ನು ಆರಂಭಿಸುವ ಇರಾದೆಯಲ್ಲಿದ್ದಾರೆ ರುತುರಾಜ್. ಹೀಗಾಗಿ ಗಾಯಕ್ವಾಡ್ ಕೂಡ ಆರಂಭಿಕನಾಗಿ ಕಣಕ್ಕಿಳಿಯುವ ಆಕಾಂಕ್ಷಿಯಾಗಿದ್ದಾರೆ.

ಒಟ್ಟಿನಲ್ಲಿ ಒಂದು ಸ್ಥಾನಕ್ಕಾಗಿ ಇದೀಗ ಮೂವರು ಆಟಗಾರರ ಹೆಸರು ಮುಂಚೂಣಿಯಲ್ಲಿದೆ. ಇವರಲ್ಲಿ ನಾಯಕ ಕೆಎಲ್ ರಾಹುಲ್ ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿಯಲು ನಿರ್ಧರಿಸಿದರೆ, ಇಶಾನ್ ಕಿಶನ್ ಹಾಗೂ ರುತುರಾಜ್ ಗಾಯಕ್ವಾಡ್ ನಡುವೆ ಆರಂಭಿಕನ ಸ್ಥಾನಕ್ಕಾಗಿ ನೇರ ಪೈಪೋಟಿ ಕಂಡು ಬರಲಿದೆ. ಹೀಗಾಗಿ ಇವರಲ್ಲಿ ಯಾರಿಗೆ ಅವಕಾಶ ಸಿಗಲಿದೆ ಕಾದು ನೋಡಬೇಕಿದೆ.

ಇದನ್ನೂ ಓದಿ: ಮೊಹಮ್ಮದ್ ಸಿರಾಜ್ ಈಗ ವಿಶ್ವದ ನಂಬರ್ 1 ಬೌಲರ್

ಮೊದಲ 2 ಪಂದ್ಯಗಳಿಗೆ ಭಾರತ ತಂಡ: ಕೆಎಲ್ ರಾಹುಲ್ (ನಾಯಕ), ಶುಭ್​ಮನ್ ಗಿಲ್, ರುತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ, ತಿಲಕ್ ವರ್ಮಾ, ಪ್ರಸಿದ್ಧ್ ಕೃಷ್ಣ, ರವಿಚಂದ್ರನ್ ಅಶ್ವಿನ್ ಮತ್ತು ವಾಷಿಂಗ್ಟನ್ ಸುಂದರ್.

Published On - 6:36 pm, Thu, 21 September 23

ಮಾಲೂರು ಹತ್ತಿರದ ಪ್ರಸನ್ನ ವೆಂಕಟರಮಣ ದೇವಸ್ಥಾನ ಪ್ರಾಚೀನ ಇತಿಹಾಸದ ಪ್ರತೀಕ
ಮಾಲೂರು ಹತ್ತಿರದ ಪ್ರಸನ್ನ ವೆಂಕಟರಮಣ ದೇವಸ್ಥಾನ ಪ್ರಾಚೀನ ಇತಿಹಾಸದ ಪ್ರತೀಕ
ಸಂಚಾರಕ್ಕೆ ಅನುಮತಿ ನೀಡಿದರೆ ಸುವರ್ಣ ಸೌಧದ ಮುಂದೆ ಪ್ರತಿಭಟನೆ: ವಾಟಾಳ್
ಸಂಚಾರಕ್ಕೆ ಅನುಮತಿ ನೀಡಿದರೆ ಸುವರ್ಣ ಸೌಧದ ಮುಂದೆ ಪ್ರತಿಭಟನೆ: ವಾಟಾಳ್
‘ಭೈರತಿ ರಣಗಲ್’ ಸಿನಿಮಾ ನೋಡಿದ ಗೀತಾ ಶಿವರಾಜ್ ಕುಮಾರ್ ಮೊದಲ ರಿಯಾಕ್ಷನ್
‘ಭೈರತಿ ರಣಗಲ್’ ಸಿನಿಮಾ ನೋಡಿದ ಗೀತಾ ಶಿವರಾಜ್ ಕುಮಾರ್ ಮೊದಲ ರಿಯಾಕ್ಷನ್
ಮಂಡ್ಯ: ಪಾಂಡವಪುರ ಪುರಸಭೆ ನಿವೇಶನಗಳ ಹಂಚಿಕೆಯಲ್ಲಿ ಅಕ್ರಮ
ಮಂಡ್ಯ: ಪಾಂಡವಪುರ ಪುರಸಭೆ ನಿವೇಶನಗಳ ಹಂಚಿಕೆಯಲ್ಲಿ ಅಕ್ರಮ
‘ಭೈರತಿ ರಣಗಲ್’ ಲುಕ್​ನಲ್ಲೇ ಶಿವಣ್ಣನ ಸಿನಿಮಾ ನೋಡಲು ಬಂದ ಡಾಲಿ ಧನಂಜಯ್
‘ಭೈರತಿ ರಣಗಲ್’ ಲುಕ್​ನಲ್ಲೇ ಶಿವಣ್ಣನ ಸಿನಿಮಾ ನೋಡಲು ಬಂದ ಡಾಲಿ ಧನಂಜಯ್
ಜವಾರಿ ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ಹನುಮಂತ
ಜವಾರಿ ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ಹನುಮಂತ
Daily Devotional: ಶನಿ ನೇರ ಸಂಚಾರ ಯಾರಿಗೆಲ್ಲ ಅದೃಷ್ಟ? ವಿಡಿಯೋ ನೋಡಿ
Daily Devotional: ಶನಿ ನೇರ ಸಂಚಾರ ಯಾರಿಗೆಲ್ಲ ಅದೃಷ್ಟ? ವಿಡಿಯೋ ನೋಡಿ
ಶನಿದೇವ ಕುಂಬ ರಾಶಿಗೆ ಪ್ರವೇಶಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಶನಿದೇವ ಕುಂಬ ರಾಶಿಗೆ ಪ್ರವೇಶಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಮನೆಯಲ್ಲಿ ಸಲಗೆನಾ, ಸ್ಟ್ರೀಕ್ಟಾ? ವಿದ್ಯಾರ್ಥಿನಿ ಪ್ರಶ್ನೆಗೆ ಡಿಕೆಶಿ ಉತ್ತರ
ಮನೆಯಲ್ಲಿ ಸಲಗೆನಾ, ಸ್ಟ್ರೀಕ್ಟಾ? ವಿದ್ಯಾರ್ಥಿನಿ ಪ್ರಶ್ನೆಗೆ ಡಿಕೆಶಿ ಉತ್ತರ
ತಮಗೊಂದು ಗ್ಯಾರಂಟಿ ನೀಡುವಂತೆ ವಿದ್ಯಾರ್ಥಿ ಕೇಳಿದ ಪ್ರಶ್ನೆಗೆ ಡಿಸಿಎಂ ಉತ್ತರ
ತಮಗೊಂದು ಗ್ಯಾರಂಟಿ ನೀಡುವಂತೆ ವಿದ್ಯಾರ್ಥಿ ಕೇಳಿದ ಪ್ರಶ್ನೆಗೆ ಡಿಸಿಎಂ ಉತ್ತರ