CSK vs MI, Head To Head: ಚೆನ್ನೈ ಗೆಲ್ಲಲೇಬೇಕು, ಮುಂಬೈಗೆ ಔಪಚಾರಿಕ ಪಂದ್ಯ; ಇಬ್ಬರ ಮುಖಾಮುಖಿ ವರದಿ ಹೇಳುವುದೇನು?

CSK vs MI IPL 2022 Head To Head: ಎರಡೂ ತಂಡಗಳು ಒಟ್ಟು 35 ಪಂದ್ಯಗಳನ್ನು ಆಡಿದ್ದು, ಈ ಪೈಕಿ ಚೆನ್ನೈ 15 ಮತ್ತು ಮುಂಬೈ 20 ಪಂದ್ಯಗಳನ್ನು ಗೆದ್ದಿದೆ. ಸದ್ಯದ ಫಾರ್ಮ್ ನೋಡಿದರೆ ಚೆನ್ನೈ ತಂಡ ಬಲಿಷ್ಠವಾಗಿದೆ.

CSK vs MI, Head To Head: ಚೆನ್ನೈ ಗೆಲ್ಲಲೇಬೇಕು, ಮುಂಬೈಗೆ ಔಪಚಾರಿಕ ಪಂದ್ಯ; ಇಬ್ಬರ ಮುಖಾಮುಖಿ ವರದಿ ಹೇಳುವುದೇನು?
ರೋಹಿತ್- ಧೋನಿ
Follow us
| Updated By: ಪೃಥ್ವಿಶಂಕರ

Updated on: May 11, 2022 | 6:13 PM

ರೋಹಿತ್ ಶರ್ಮಾ (Rohit Sharma) ನಾಯಕತ್ವದ ಮುಂಬೈ ಇಂಡಿಯನ್ಸ್‌ (Mumbai Indians)ಗೆ ಇಂಡಿಯನ್ ಪ್ರೀಮಿಯರ್ ಲೀಗ್ (IPL) 15 ನೇ ಸೀಸನ್ ಸರಿಯಾಗಿ ಸಾಗಲಿಲ್ಲ. ಐಪಿಎಲ್ ಇತಿಹಾಸದಲ್ಲಿ ಇದು ಮುಂಬೈನ ಅತ್ಯಂತ ಕೆಟ್ಟ ಆವೃತ್ತಿಯಾಗಿದ್ದು ಈ ತಂಡ ಸತತ ಎಂಟು ಸೋಲುಗಳನ್ನು ಎದುರಿಸಬೇಕಾಯಿತು. ಅದೇ ಸಮಯದಲ್ಲಿ, ಚೆನ್ನೈ ಸೂಪರ್ ಕಿಂಗ್ಸ್‌ (Chennai Super Kings) ಕೂಡ ಐಪಿಎಲ್-2022 (IPL 2022) ತುಂಬಾ ಕೆಟ್ಟದಾಗಿದೆ. ಈ ಎರಡು ತಂಡಗಳ ನಡುವಿನ ವ್ಯತ್ಯಾಸವೆಂದರೆ ಮುಂಬೈ ಪ್ಲೇಆಫ್‌ನ ರೇಸ್‌ನಿಂದ ಸಂಪೂರ್ಣವಾಗಿ ಹೊರಗಿದೆ ಆದರೆ ಚೆನ್ನೈ ತಾಂತ್ರಿಕವಾಗಿ ಪ್ಲೇಆಫ್‌ನ ರೇಸ್‌ನಲ್ಲಿದೆ ಆದರೆ ಅವರು ತಮ್ಮ ಉಳಿದ ಎಲ್ಲಾ ಪಂದ್ಯಗಳನ್ನು ಗೆಲ್ಲಬೇಕಾಗಿದೆ. ಚೆನ್ನೈ (ಚೆನ್ನೈ ಸೂಪರ್ ಕಿಂಗ್ಸ್) ಗುರುವಾರ ಮುಂಬೈ ವಿರುದ್ಧ ಸೆಣಸಲಿದ್ದು, ಪ್ಲೇಆಫ್ ಅವಕಾಶವನ್ನು ಹಾಗೆಯೇ ಉಳಿಸಿಕೊಳ್ಳುವ ಗುರಿ ಹೊಂದಿದೆ. ಈ ಪಂದ್ಯಕ್ಕೂ ಮುನ್ನ ತಲೆ ಎತ್ತಿರುವ ಅಂಕಿ-ಅಂಶಗಳನ್ನು ನೋಡಿದರೆ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಯಾವ ತಂಡ ಮೇಲುಗೈ ಸಾಧಿಸಿದೆ ಎಂದು ಊಹಿಸಬಹುದು.

ಅದಕ್ಕೂ ಮುನ್ನ ಪ್ರಸಕ್ತ ಋತುವಿನಲ್ಲಿ ಪಾಯಿಂಟ್ ಪಟ್ಟಿಯಲ್ಲಿ ಈ ಎರಡು ತಂಡಗಳ ಸ್ಥಾನವನ್ನು ನೋಡಿದರೆ ಮುಂಬೈ ಕೊನೆಯ ಸ್ಥಾನದಲ್ಲಿದೆ. ಅವರು 11 ಪಂದ್ಯಗಳಿಂದ ಎರಡು ಗೆಲುವು ಮತ್ತು ಒಂಬತ್ತು ಸೋಲುಗಳೊಂದಿಗೆ ನಾಲ್ಕು ಅಂಕಗಳನ್ನು ಹೊಂದಿದ್ದಾರೆ. ಚೆನ್ನೈ ತಂಡ 11 ಪಂದ್ಯಗಳಲ್ಲಿ ನಾಲ್ಕು ಗೆಲುವು ಮತ್ತು ಏಳು ಸೋಲುಗಳೊಂದಿಗೆ ಎಂಟನೇ ಸ್ಥಾನದಲ್ಲಿದೆ.

ಅಂಕಿ ಅಂಶಗಳಲ್ಲಿ ಯಾರಿಗೆ ಮೇಲುಗೈ? ಈ ಎರಡು ತಂಡಗಳ ನಡುವಿನ ಅಂಕಿ-ಅಂಶಗಳನ್ನು ನಾವು ಗಮನಿಸಿದರೆ, ಎರಡೂ ತಂಡಗಳು ಒಟ್ಟು 35 ಪಂದ್ಯಗಳನ್ನು ಆಡಿದ್ದು, ಈ ಪೈಕಿ ಚೆನ್ನೈ 15 ಮತ್ತು ಮುಂಬೈ 20 ಪಂದ್ಯಗಳನ್ನು ಗೆದ್ದಿದೆ. ಸದ್ಯದ ಫಾರ್ಮ್ ನೋಡಿದರೆ ಚೆನ್ನೈ ತಂಡ ಬಲಿಷ್ಠವಾಗಿದೆ. ಆದರೆ, ಎರಡೂ ತಂಡಗಳು ತಲಾ ಒಬ್ಬ ಪ್ರಮುಖ ಆಟಗಾರನನ್ನು ಕಳೆದುಕೊಂಡಿವೆ. ಮುಂಬೈನ ಸೂರ್ಯಕುಮಾರ್ ಯಾದವ್ ಗಾಯದ ಸಮಸ್ಯೆಯಿಂದ ಹೊರಗುಳಿದಿದ್ದು, ಚೆನ್ನೈನ ರವೀಂದ್ರ ಜಡೇಜಾ ಅವರಿಗೂ ಇದೇ ಪರಿಸ್ಥಿತಿ ಎದುರಾಗಿದೆ.

ಇದನ್ನೂ ಓದಿ
Image
IPL 2022 CSK vs MI Live Streaming: ಚೆನ್ನೈ ಗೆದ್ದರೆ ಪ್ಲೇ ಆಫ್ ಕನಸು ಜೀವಂತ! ಪಂದ್ಯದ ಬಗ್ಗೆ ಇಲ್ಲಿದೆ ಮಾಹಿತಿ
Image
Ravindra Jadeja: ಚೆನ್ನೈ ನಾಯಕತ್ವದಿಂದ ಕೆಳಗಿಳಿದಿದ್ದ ರವೀಂದ್ರ ಜಡೇಜಾ ಈಗ ಐಪಿಎಲ್​ನಿಂದಲೇ ಔಟ್..!

ಕಳೆದ 5 ಪಂದ್ಯಗಳ ಅಂಕಿಅಂಶ ಇಲ್ಲಿದೆ ಈ ಎರಡು ತಂಡಗಳ ನಡುವಿನ ಕಳೆದ ಐದು ಪಂದ್ಯಗಳ ಅಂಕಿಅಂಶಗಳನ್ನು ಗಮನಿಸಿದರೆ ಇಲ್ಲಿ ಚೆನ್ನೈ ಮೇಲುಗೈ ಸಾಧಿಸಿದೆ. ಕಳೆದ ಐದು ಪಂದ್ಯಗಳಲ್ಲಿ ಚೆನ್ನೈ ಮೂರರಲ್ಲಿ ಗೆದ್ದಿದ್ದರೆ, ಮುಂಬೈ ಎರಡು ಪಂದ್ಯಗಳನ್ನು ಗೆದ್ದಿದೆ. ಗುರುವಾರ ನಡೆಯಲಿರುವ ಪಂದ್ಯ ಈ ಎರಡು ತಂಡಗಳ ನಡುವಿನ ಈ ಋತುವಿನ ಎರಡನೇ ಪಂದ್ಯವಾಗಿದೆ. ಇದಕ್ಕೂ ಮೊದಲು, 21 ಏಪ್ರಿಲ್ 2022 ರಂದು ಎರಡೂ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಚೆನ್ನೈ ಗೆಲುವು ಸಾಧಿಸಿತು. 19 ಸೆಪ್ಟೆಂಬರ್ 2021 ರಂದು ಆಡಿದ ಪಂದ್ಯವನ್ನು ಕೂಡ ಚೆನ್ನೈ ಗೆದ್ದುಕೊಂಡಿತ್ತು. ಮೇ 1, 2021 ರಂದು ನಡೆದ ಪಂದ್ಯವನ್ನು ಮುಂಬೈ ಗೆದ್ದುಕೊಂಡಿತರ್ತು. 23 ಅಕ್ಟೋಬರ್ 2020 ರಂದು ನಡೆದ ಪಂದ್ಯದಲ್ಲಿ ಮುಂಬೈ ಗೆಲುವು ಸಾಧಿಸಿತ್ತು. 19 ಡಿಸೆಂಬರ್ 2020 ರಂದು ನಡೆದ ಪಂದ್ಯದಲ್ಲಿ ಚೆನ್ನೈ ಗೆಲುವು ಸಾಧಿಸಿತು.

ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ