ಇಂಡಿಯನ್ ಪ್ರೀಮಿಯರ್ ಲೀಗ್‌ನ (IPL 2022) 15ನೇ ಸೀಸನ್‌ನ ಪ್ಲೇಆಫ್‌ಗಾಗಿನ ಕದನ ಕುತೂಹಲ ಮೂಡಿಸಿದೆ. ಲೀಗ್ ಹಂತವು ಅಂತಿಮ ಹಂತದಲ್ಲಿದ್ದು, ಪ್ರತಿ ಪಂದ್ಯದ ನಂತರ ಪ್ಲೇಆಫ್ ಲೆಕ್ಕಾಚಾರ ಅದಲುಬದಲಾಗುತ್ತಿದೆ. ಈ ಸೀಸನ್ನಲ್ಲಿ ಗುಜರಾತ್ ಟೈಟಾನ್ಸ್ (Gujarat Titans) ತಂಡವು ಪ್ಲೇಆಫ್‌ಗೆ ಪ್ರವೇಶಿಸಿದೆ. ಆದರೆ ಉಳಿದ ಮೂರು ಸ್ಥಾನಗಳಿಗಾಗಿ ತೀವ್ರ ಪೈಪೋಟಿ ನಡೆಯುತ್ತಿದೆ. ಮೂರು ಸ್ಥಾನಗಳಿಗಾಗಿ ಎಂಟು ತಂಡಗಳು ಸೆಣಸುತ್ತಿವೆ. ಈ ಎರಡು ತಂಡಗಳು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ (RCB vs PBKS). ಈ ಎರಡು ತಂಡಗಳು ಶುಕ್ರವಾರ ಮುಂಬೈನ ಬ್ರಬೋರ್ನ್ ಸ್ಟೇಡಿಯಂನಲ್ಲಿ ಮುಖಾಮುಖಿಯಾಗಲಿವೆ. ಈ ಪಂದ್ಯ ಎರಡೂ ತಂಡಗಳಿಗೆ ಅತ್ಯಂತ ಮಹತ್ವದ್ದಾಗಿದ್ದು, ಗೆಲ್ಲುವ ತಂಡವು ಪಾಯಿಂಟ್ ಪಟ್ಟಿಯಲ್ಲಿ ಮೇಲಕ್ಕೇರಿದರೆ, ಸೋತ ತಂಡಕ್ಕೆ ಕಷ್ಟ ಇನ್ನಷ್ಟು ಹೆಚ್ಚಾಗಲಿದೆ. ಹೀಗಾಗಿ ಈ ಎರಡು ತಂಡಗಳ ನಡುವಿನ ಪಂದ್ಯಗಳ ಅಂಕಿಅಂಶಗಳನ್ನು ನೋಡುವುದು ಸಹ ಅಗತ್ಯವಾಗಿದೆ.
ಪಾಯಿಂಟ್ ಪಟ್ಟಿಯಲ್ಲಿ ಸದ್ಯದ ಸ್ಥಿತಿ ನೋಡಿದರೆ ಬೆಂಗಳೂರು ನಾಲ್ಕನೇ ಸ್ಥಾನದಲ್ಲಿದೆ. 12 ಪಂದ್ಯಗಳನ್ನು ಆಡಿರುವ ಅವರು ಏಳರಲ್ಲಿ ಗೆದ್ದು ಐದರಲ್ಲಿ ಸೋತಿದ್ದಾರೆ. ಮತ್ತೊಂದೆಡೆ, ಪಂಜಾಬ್‌ನ ಸ್ಥಿತಿ ತುಂಬಾ ಕೆಟ್ಟದಾಗಿದೆ. 11 ಪಂದ್ಯಗಳಿಂದ ಐದು ಗೆಲುವು ಮತ್ತು ಆರು ಸೋಲುಗಳೊಂದಿಗೆ 10 ಅಂಕಗಳೊಂದಿಗೆ ಎಂಟನೇ ಸ್ಥಾನದಲ್ಲಿದೆ. ಬೆಂಗಳೂರು ಇನ್ನೂ ಒಟ್ಟು ಮೂರು ಪಂದ್ಯಗಳನ್ನು ಆಡಬೇಕಿದೆ ಮತ್ತು ಪಂಜಾಬ್ ನಾಲ್ಕು ಪಂದ್ಯಗಳನ್ನು ಆಡಬೇಕಿದೆ. ಬೆಂಗಳೂರು ಮತ್ತು ಪಂಜಾಬ್‌ಗೆ ಗೆಲುವುಗಳು ಅಗತ್ಯವಾಗಿದ್ದು, ಈ ಎರಡು ತಂಡಗಳು ಈ ವಿಜಯವನ್ನು ದೊಡ್ಡ ಅಂತರದಿಂದ ಗೆಲ್ಲುವ ಹಂಬಲದಲ್ಲಿವೆ.
ಮುಖಾಮುಖಿ ಅಂಕಿಅಂಶ
ಅಂಕಿಅಂಶಗಳ ಪ್ರಕಾರ ಪಂಜಾಬ್ ತಂಡ ಮೇಲುಗೈ ಸಾಧಿಸಿದೆ. ಈ ಎರಡು ತಂಡಗಳ ನಡುವೆ ಇದುವರೆಗೆ ಒಟ್ಟು 29 ಪಂದ್ಯಗಳು ನಡೆದಿದ್ದು, ಪಂಜಾಬ್ 16 ರಲ್ಲಿ ಗೆದ್ದಿದ್ದರೆ, ಬೆಂಗಳೂರು 13 ಪಂದ್ಯಗಳನ್ನು ಗೆದ್ದಿದೆ. ಮೂರು ಪಂದ್ಯಗಳ ಅಂತರದಲ್ಲಿ ಪಂಜಾಬ್ ತಂಡ ಬೆಂಗಳೂರಿಗಿಂತ ಮುಂದಿದೆ
ಕೊನೆಯ 5 ಪಂದ್ಯಗಳ ಅಂಕಿಅಂಶಗಳು
ಮತ್ತೊಂದೆಡೆ, ಕಳೆದ ಐದು ಪಂದ್ಯಗಳ ಅಂಕಿ-ಅಂಶಗಳನ್ನು ಗಮನಿಸಿದರೆ, ಇಲ್ಲಿಯೂ ಅದೇ ಪರಿಸ್ಥಿತಿ ಇದೆ. ಇಲ್ಲೂ ಪಂಜಾಬ್ ತಂಡ ಮೇಲುಗೈ ಸಾಧಿಸಿದೆ. ಕಳೆದ ಐದು ಪಂದ್ಯಗಳಲ್ಲಿ ಪಂಜಾಬ್ ನಾಲ್ಕು ಪಂದ್ಯಗಳನ್ನು ಗೆದ್ದಿದ್ದರೆ, ಬೆಂಗಳೂರು ಗೆದ್ದಿರುವುದು ಕೇವಲ ಒಂದೇ ಒಂದು ಪಂದ್ಯ ಮಾತ್ರ. ಈ ಋತುವಿನಲ್ಲಿ ಈ ಎರಡು ತಂಡಗಳ ನಡುವೆ ಇದು ಎರಡನೇ ಪಂದ್ಯವಾಗಿದೆ. ಎರಡೂ ತಂಡಗಳು 27 ಮಾರ್ಚ್ 2022 ರಂದು ಮುಖಾಮುಖಿಯಾದ್ದವು. ಈ ಪಂದ್ಯದಲ್ಲಿ ಪಂಜಾಬ್ ಭರ್ಜರಿ ಗೆಲುವು ಸಾಧಿಸಿತ್ತು. ಈ ಪಂದ್ಯದಲ್ಲಿ ಮಯಾಂಕ್ ಅಗರ್ವಾಲ್ ತಂಡ ಐದು ವಿಕೆಟ್‌ಗಳ ಜಯ ಸಾಧಿಸಿತು. ಇದಕ್ಕೂ ಮೊದಲು, ಅಕ್ಟೋಬರ್ 3, 2021 ರಂದು ಆಡಿದ ಪಂದ್ಯವನ್ನು ಬೆಂಗಳೂರು ಗೆದ್ದುಕೊಂಡಿತ್ತು. ಪಂಜಾಬ್ 30 ಏಪ್ರಿಲ್ 2021, 15 ಅಕ್ಟೋಬರ್ 2020, 24 ಸೆಪ್ಟೆಂಬರ್ 2020 ರಂದು ನಡೆದ ಪಂದ್ಯವನ್ನು ಗೆದ್ದುಕೊಂಡಿತ್ತು.