RCB vs RR: ಇದುವರೆಗೆ 26 ಪಂದ್ಯಗಳಲ್ಲಿ ರಾಜಸ್ಥಾನ- ಆರ್​ಸಿಬಿ ಮುಖಾಮುಖಿ; ಇದರಲ್ಲಿ ಯಾರಿಗೆ ಮೇಲುಗೈ ಗೊತ್ತಾ?

RCB vs RR IPL 2022 Head to Head: ಉಭಯ ತಂಡಗಳ ನಡುವೆ ಇದುವರೆಗೆ ಒಟ್ಟು 26 ಪಂದ್ಯಗಳು ನಡೆದಿವೆ. ಈ ಪೈಕಿ ಬೆಂಗಳೂರು 13 ಪಂದ್ಯಗಳನ್ನು ಗೆದ್ದಿದ್ದರೆ, ರಾಜಸ್ಥಾನ 10 ಪಂದ್ಯಗಳನ್ನು ಗೆದ್ದಿದೆ.

RCB vs RR: ಇದುವರೆಗೆ 26 ಪಂದ್ಯಗಳಲ್ಲಿ ರಾಜಸ್ಥಾನ- ಆರ್​ಸಿಬಿ ಮುಖಾಮುಖಿ; ಇದರಲ್ಲಿ ಯಾರಿಗೆ ಮೇಲುಗೈ ಗೊತ್ತಾ?
RR vs RCB
Follow us
TV9 Web
| Updated By: ಪೃಥ್ವಿಶಂಕರ

Updated on: Apr 25, 2022 | 5:07 PM

ಐಪಿಎಲ್-2022 (IPL 2022)ರಲ್ಲಿ ರಾಜಸ್ಥಾನ್ ರಾಯಲ್ಸ್ (Rajasthan Royals) ಅತ್ಯುತ್ತಮ ಫಾರ್ಮ್‌ನಲ್ಲಿದೆ. ಪ್ರತಿ ಪಂದ್ಯದಲ್ಲೂ ಒಂದೊಂದೆ ಗೆಲುವಿನ ಮೆಟ್ಟಿಲನ್ನೂ ಹತ್ತುದಿದೆ. ತಮ್ಮ ಕೊನೆಯ ಪಂದ್ಯದಲ್ಲೂ ಈ ತಂಡ ಉತ್ತಮ ಪ್ರದರ್ಶನ ನೀಡಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಸೋಲಿಸಿತು. ಈ ಪಂದ್ಯದಲ್ಲಿ ರಾಜಸ್ಥಾನ 222 ರನ್ ಗಳಿಸಿದ್ದು, ಇದು ಈ ಆವೃತ್ತಿಯ ಅಂತ್ಯತ ಗರಿಷ್ಠ ಸ್ಕೋರ್ ಆಗಿದೆ. ಈ ಸೀಸನ್​ನಲ್ಲಿ ರಾಜಸ್ಥಾನ ಪರ ಜೋಸ್ ಬಟ್ಲರ್ (Jos Buttler) ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಅವರು ಇಲ್ಲಿಯವರೆಗೆ ಮೂರು ಶತಕಗಳನ್ನು ಗಳಿಸಿದ್ದಾರೆ. ಬೌಲಿಂಗ್‌ನಿಂದ ಹಿಡಿದು ಬ್ಯಾಟಿಂಗ್‌ವರೆಗೆ ಎಲ್ಲ ವಿಭಾಗದಲ್ಲೂ ಉತ್ತಮ ಪ್ರದರ್ಶನ ಹೊರಬರುತ್ತಿರುವುದು ರಾಜಸ್ಥಾನಕ್ಕೆ ಒಳ್ಳೆಯ ವಿಷಯವಾದಾಗಿದೆ. ಇಂತಹ ಸಂದರ್ಭದಲ್ಲಿ ಮುಂದಿನ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bangalore) ತಂಡವು ರಾಜಸ್ಥಾನವನ್ನು ಎದುರಿಸಲಿದೆ. ಫಾಫ್ ಡು ಪ್ಲೆಸಿಸ್ ನಾಯಕತ್ವದಲ್ಲಿ ಆಡುತ್ತಿರುವ ಆರ್​ಸಿಬಿ ಸದ್ಯಕ್ಕೆ ಉತ್ತಮ ಪ್ರದರ್ಶನ ನೀಡುತ್ತಿದೆ.

ಆದರೆ, ಬೆಂಗಳೂರು ತನ್ನ ಕೊನೆಯ ಪಂದ್ಯದಲ್ಲಿ ಹೀನಾಯ ಸೋಲನ್ನು ಎದುರಿಸಬೇಕಾಯಿತು. ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ತಂಡ ಕೇವಲ 68 ರನ್​ಗಳಿಗೆ ಆಲೌಟ್ ಆಗಿತ್ತು. ಈಗ ಮತ್ತೆ ಗೆಲುವಿನ ಹಾದಿಗೆ ಮರಳುವ ಪ್ರಯತ್ನ ಮಾಡಲಿದ್ದಾರೆ. ತಂಡದ ದೊಡ್ಡ ಚಿಂತೆ ಎಂದರೆ ವಿರಾಟ್ ಕೊಹ್ಲಿ ಫಾರ್ಮ್. ಇದುವರೆಗೆ ಆಡಿದ ಎಂಟು ಪಂದ್ಯಗಳಲ್ಲಿ ಕೊಹ್ಲಿ ಬ್ಯಾಟ್‌ನಿಂದ ಒಂದೇ ಒಂದು ದೊಡ್ಡ ಇನ್ನಿಂಗ್ಸ್ ಹೊರಬಿದ್ದಿಲ್ಲ. ಕಳೆದ ಎರಡು ಪಂದ್ಯಗಳಲ್ಲಿ ಕೊಹ್ಲಿ ಗೋಲ್ಡನ್ ಡಕ್‌ಗೆ ಬಲಿಯಾಗಿದ್ದಾರೆ.

ಅಂಕಿಅಂಶಗಳು ಹೀಗಿವೆ ಈ ಎರಡು ತಂಡಗಳ ನಡುವಿನ ಅಂಕಿ-ಅಂಶಗಳನ್ನು ಗಮನಿಸಿದರೆ, ಬೆಂಗಳೂರು ಮೇಲುಗೈ ಸಾಧಿಸಿದೆ. ಉಭಯ ತಂಡಗಳ ನಡುವೆ ಇದುವರೆಗೆ ಒಟ್ಟು 26 ಪಂದ್ಯಗಳು ನಡೆದಿವೆ. ಈ ಪೈಕಿ ಬೆಂಗಳೂರು 13 ಪಂದ್ಯಗಳನ್ನು ಗೆದ್ದಿದ್ದರೆ, ರಾಜಸ್ಥಾನ 10 ಪಂದ್ಯಗಳನ್ನು ಗೆದ್ದಿದೆ. ಮೂರು ಪಂದ್ಯಗಳ ಫಲಿತಾಂಶ ಹೊರಬಂದಿಲ್ಲ. ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ​​ಸ್ಟೇಡಿಯಂನಲ್ಲಿ ನಡೆಯಲಿರುವ ಪಂದ್ಯದಲ್ಲಿ ಬೆಂಗಳೂರು ಮೈದಾನಕ್ಕೆ ಇಳಿದಾಗ, ಈ ಅಂಕಿಅಂಶಗಳು ಅವರಿಗೆ ಸಾಂತ್ವನ ನೀಡಬಹುದು.

ಕಳೆದ ಐದು ಪಂದ್ಯಗಳ ಫಲಿತಾಂಶ ಇಲ್ಲಿದೆ ಇನ್ನೊಂದೆಡೆ ಕಳೆದ ಐದು ಪಂದ್ಯಗಳ ಫಲಿತಾಂಶ ನೋಡಿದರೆ ಇಲ್ಲೂ ಬೆಂಗಳೂರು ಮೇಲುಗೈ ಸಾಧಿಸಿದೆ. ಕಳೆದ ಐದು ಪಂದ್ಯಗಳಲ್ಲಿ ಬೆಂಗಳೂರು ಎಲ್ಲಾ ಪಂದ್ಯಗಳನ್ನು ಗೆದ್ದಿದೆ. ಆದರೆ, ಈ ಎಲ್ಲಾ ಪಂದ್ಯಗಳಲ್ಲಿ ಒಂದು ಸಂಗತಿ ಸಾಮಾನ್ಯವಾಗಿತ್ತು. ಅಂದರೆ, ಗುರಿ ಬೆನ್ನಟ್ಟಿದ ಐದೂ ಪಂದ್ಯಗಳಲ್ಲಿ ಬೆಂಗಳೂರು ಗೆಲುವು ಸಾಧಿಸಿದೆ. ಈ ಆವೃತ್ತಿಯಲ್ಲೂ, ಎಲ್ಲಾ ತಂಡಗಳು ಟಾಸ್ ಗೆದ್ದ ನಂತರ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಳ್ಳುತ್ತಿವೆ. ಇಲ್ಲಿಯವರೆಗೆ ಒಮ್ಮೆ ಮಾತ್ರ ಒಂದು ತಂಡವು ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಗುಜರಾತ್ ಟೈಟಾನ್ಸ್ ಈ ನಿರ್ಧಾರ ಕೈಗೊಂಡಿತ್ತು.

ಇದನ್ನೂ ಓದಿ:IPL 2022: ಈ ಒಂದು ಕಾರಣಕ್ಕಾಗಿ ನಾನು ಐಪಿಎಲ್ ಪ್ರಶಸ್ತಿಗಳನ್ನು ಗೆಲ್ಲಬೇಕಿದೆ ಎಂದ ರಾಹುಲ್..!

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ