AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಅಡಿಲೇಡ್​ ಟೆಸ್ಟ್​ನಲ್ಲಿ ಕಪ್ಪು ಪಟ್ಟಿ ಧರಿಸಿ ಕಣಕ್ಕಿಳಿದ ಆಸ್ಟ್ರೇಲಿಯಾ

Australia vs India, 2nd Test: ಓವಲ್ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಮೊದಲ ಇನಿಂಗ್ಸ್ ನಲ್ಲಿ 180 ರನ್ ಗಳಿಸಿ ಆಲೌಟ್ ಆಗಿದೆ.

IND vs AUS: ಅಡಿಲೇಡ್​ ಟೆಸ್ಟ್​ನಲ್ಲಿ ಕಪ್ಪು ಪಟ್ಟಿ ಧರಿಸಿ ಕಣಕ್ಕಿಳಿದ ಆಸ್ಟ್ರೇಲಿಯಾ
Australia
ಝಾಹಿರ್ ಯೂಸುಫ್
|

Updated on:Dec 07, 2024 | 7:48 AM

Share

ಅಡಿಲೇಡ್​ನ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಭಾರತದ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದ ಮೊದಲ ದಿನದಾಟದಲ್ಲಿ ಆಸ್ಟ್ರೇಲಿಯಾ ಆಟಗಾರರು ತೋಳಿಗೆ ಕಪ್ಪು ಪಟ್ಟಿ ಧರಿಸಿ ಕಣಕ್ಕಿಳಿದಿದ್ದರು. ಇತ್ತೀಚೆಗೆ ನಿಧನರಾದ ಆಸ್ಟ್ರೇಲಿಯಾದ ಮಾಜಿ ಆಟಗಾರ ಇಯಾನ್ ರೆಡ್ ಪಾತ್ ಅವರ ಶೋಕಾಚರಣೆ ಹಾಗೂ ಮಾಜಿ ಆಟಗಾರ ಫಿಲ್ ಹ್ಯೂಸ್ ಅವರ ಸ್ಮರಣಾರ್ಥವಾಗಿ ಆಸೀಸ್ ಆಟಗಾರರು ಕಪ್ಪು ಪಟ್ಟಿ ಧರಿಸಿದ್ದಾರೆ.

60ರ ದಶಕದಲ್ಲಿ ಆಸ್ಟ್ರೇಲಿಯಾ ಪರ 66 ಟೆಸ್ಟ್‌ ಪಂದ್ಯವಾಡಿದ್ದ ಇಯಾನ್ ರೆಡ್ ಪಾತ್ 8 ಶತಕ ಹಾಗೂ 31 ಅರ್ಧಶತಕಗಳೊಂದಿಗೆ 4737 ರನ್ ಕಲೆಹಾಕಿದ್ದರು. ಹಾಗೆಯೇ ಆಸ್ಟ್ರೇಲಿಯಾ ಪರ 5 ಏಕದಿನ ಪಂದ್ಯಗಳನ್ನಾಡಿರುವ ಇಯಾನ್ ಅವರು ಡಿಸೆಂಬರ್ 1 ರಂದು 83ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದಾರೆ. ಮಾಜಿ ಕ್ರಿಕೆಟಿಗನ ನಿಧನದ ಶೋಕಾಚರಣೆಯಾಗಿ ಆಸ್ಟ್ರೇಲಿಯಾ ಆಟಗಾರರು ಕಪ್ಪು ಪಟ್ಟಿ ಧರಿಸಿ ಕಣಕ್ಕಿಳಿದಿದ್ದಾರೆ.

ಹಾಗೆಯೇ ನವೆಂಬರ್ 25, 2014 ರಲ್ಲಿ ಸಿಡ್ನಿಯಲ್ಲಿ ನಡೆದ ಶೆಫಿಲ್ಡ್ ಶೀಲ್ಡ್ ಟೂರ್ನಿಯಲ್ಲಿ ತಲೆಗೆ ಚೆಂಡು ಬಡಿದು ಆಸೀಸ್ ಆಟಗಾರ ಫಿಲ್ ಹ್ಯೂಸ್ ನಿಧನರಾಗಿದ್ದರು. ಫಿಲ್ ಹ್ಯೂಸ್ ಸ್ಮರಣಾರ್ಥವಾಗಿ ನವೆಂಬರ್ 25ರ ಬಳಿಕ ನಡೆಯುವ‌ ಮೊದಲ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಆಟಗಾರರು ಕಪ್ಪು ಪಟ್ಟಿ ಧರಿಸುತ್ತಾರೆ‌. ಅದರಂತೆ ಅಡಿಲೇಡ್ ಟೆಸ್ಟ್‌ನಲ್ಲಿ ಆಸ್ಟ್ರೇಲಿಯಾ ಆಟಗಾರರು ಶೋಕಾಚರಣೆ ಮತ್ತು ಸ್ಮರಣಾರ್ಥದ ಭಾಗವಾಗಿ ಕಪ್ಪು ಪಟ್ಟಿ ಧರಿಸಿ ಕಣಕ್ಕಿಳಿದಿದ್ದಾರೆ.

ಅಡಿಲೇಡ್ ಟೆಸ್ಟ್ ಪಂದ್ಯ:

ಓವಲ್ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಮೊದಲ ಇನಿಂಗ್ಸ್ ನಲ್ಲಿ 180 ರನ್ ಗಳಿಸಿ ಆಲೌಟ್ ಆಗಿದೆ. ಆಸ್ಟ್ರೇಲಿಯಾ ಪರ ಮಿಂಚಿನ ದಾಳಿ ಸಂಘಟಿಸಿದ ಮಿಚೆಲ್ ಸ್ಟಾರ್ಕ್ ಕೇವಲ 48 ರನ್ ನೀಡಿ 6 ವಿಕೆಟ್ ಕಬಳಿಸಿದ್ದಾರೆ.

ಇದರ ಬೆನ್ನಲ್ಲೇ ಪ್ರಥಮ ಇನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ ತಂಡವು ಮೊದಲದಿನದಾಟದ ಮುಕ್ತಾಯದ ವೇಳೆಗೆ 1 ವಿಕೆಟ್ ಕಳೆದುಕೊಂಡು 86 ರನ್ ಕಲೆಹಾಕಿದೆ. ಕ್ರೀಸ್ ನಲ್ಲಿ ನಾಥನ್ ಮೆಕ್ ಸ್ವೀನಿ ಹಾಗೂ ಮಾರ್ನಸ್ ಲಾಬುಶೇನ್ ಬ್ಯಾಟಿಂಗ್ ಮಾಡುತ್ತಿದ್ದಾರೆ.

ಆಸ್ಟ್ರೇಲಿಯಾ ಪ್ಲೇಯಿಂಗ್ XI: ಉಸ್ಮಾನ್ ಖ್ವಾಜಾ, ನಾಥನ್ ಮೆಕ್‌ಸ್ವೀನಿ, ಮಾರ್ನಸ್ ಲಾಬುಶೆನ್, ಸ್ಟೀವ್ ಸ್ಮಿತ್, ಟ್ರಾವಿಸ್ ಹೆಡ್, ಮಿಚ್ ಮಾರ್ಷ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಸ್ಕಾಟ್ ಬೋಲ್ಯಾಂಡ್.

ಇದನ್ನೂ ಓದಿ: ಶರ ವೇಗದ ಸೆಂಚುರಿ ಸಿಡಿಸಿ ವಿಶ್ವ ದಾಖಲೆ ಬರೆದ ಅಭಿಷೇಕ್ ಶರ್ಮಾ

ಭಾರತ ಪ್ಲೇಯಿಂಗ್ XI: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ , ಯಶಸ್ವಿ ಜೈಸ್ವಾಲ್ , ಶುಭ್​​ಮನ್ ಗಿಲ್, ವಿರಾಟ್ ಕೊಹ್ಲಿ , ರಿಷಭ್ ಪಂತ್ (ವಿಕೆಟ್ ಕೀಪರ್) , ನಿತೀಶ್ ರೆಡ್ಡಿ , ರವಿಚಂದ್ರನ್ ಅಶ್ವಿನ್ , ಹರ್ಷಿತ್ ರಾಣಾ , ಜಸ್​​ಪ್ರೀತ್ ಬುಮ್ರಾ , ಮೊಹಮ್ಮದ್ ಸಿರಾಜ್.

Published On - 7:22 am, Sat, 7 December 24

ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ