AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಗ್ಲೆಂಡ್ ವಿರುದ್ಧ ಹಸಿರು ಪಟ್ಟಿ ಧರಿಸಿ ಕಣಕ್ಕಿಳಿದ ಟೀಮ್ ಇಂಡಿಯಾ

India vs England: ಭಾರತ ಮತ್ತು ಇಂಗ್ಲೆಂಡ್ ನಡುವಣ ಮೂರು ಪಂದ್ಯಗಳ ಸರಣಿಯ ಮೊದಲೆರಡು ಮ್ಯಾಚ್​ಗಳಲ್ಲಿ ಟೀಮ್ ಇಂಡಿಯಾ ತಲಾ 4 ವಿಕೆಟ್​ಗಳ ಜಯ ಸಾಧಿಸಿತ್ತು. ಇದೀಗ ಮೂರನೇ ಪಂದ್ಯದಲ್ಲಿ 142 ರನ್​ಗಳ ಅಮೋಘ ಗೆಲುವು ದಾಖಲಿಸಿದೆ. ಈ ಮೂಲಕ ಮೂರು ಪಂದ್ಯಗಳ ಸರಣಿಯನ್ನು 3-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿಕೊಂಡಿದೆ.

ಇಂಗ್ಲೆಂಡ್ ವಿರುದ್ಧ ಹಸಿರು ಪಟ್ಟಿ ಧರಿಸಿ ಕಣಕ್ಕಿಳಿದ ಟೀಮ್ ಇಂಡಿಯಾ
Team India
ಝಾಹಿರ್ ಯೂಸುಫ್
|

Updated on: Feb 13, 2025 | 7:07 AM

Share

ಇಂಗ್ಲೆಂಡ್ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಆಟಗಾರರು ಹಸಿರು ಪಟ್ಟಿ ಧರಿಸಿ ಕಣಕ್ಕಿಳಿದಿದ್ದರು. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದ ಟಾಸ್ ವೇಳೆ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಹಾಗೂ ಇಂಗ್ಲೆಂಡ್ ಕ್ಯಾಪ್ಟನ್ ಜೋಸ್ ಬಟ್ಲರ್ ಹಸಿರು ತೋಳುಪಟ್ಟಿ ಧರಿಸಿದ್ದರು.

ಇದಾದ ಬಳಿಕ ಬ್ಯಾಟಿಂಗ್​ಗೆ ಇಳಿದ ರೋಹಿತ್ ಶರ್ಮಾ, ಶ್ರೇಯಸ್ ಅಯ್ಯರ್ ಸೇರಿದಂತೆ ಕೆಲ ಆಟಗಾರರು ಹಸಿರು ಪಟ್ಟಿಯೊಂದಿಗೆ ಕಣಕ್ಕಿಳಿದಿದ್ದರು. ಅತ್ತ ಇಂಗ್ಲೆಂಡ್ ತಂಡದ ಕೆಲ ಆಟಗಾರರು ಸಹ ಫೀಲ್ಡಿಂಗ್ ಹಾಗೂ ಬ್ಯಾಟಿಂಗ್ ವೇಳೆ ಗ್ರೀನ್ ಆರ್ಮ್​ಬ್ಯಾಂಡ್ ಧರಿಸಿದ್ದರು.

ಹಸಿರು ಪಟ್ಟಿ ಧರಿಸಿದ್ದೇಕೆ?

ಸಾಮಾನ್ಯವಾಗಿ ಸೂತಕದ ಅಥವಾ ಶ್ರದ್ಧಾಂಜಲಿಯ ಸಲುವಾಗಿ ಆಟಗಾರರು ಕಪ್ಪು ತೋಳು ಪಟ್ಟಿ ಧರಿಸಿ ಕಣಕ್ಕಿಳಿಯುತ್ತಾರೆ. ಆದರೆ ಈ ಬಾರಿ ಹಸಿರು ಪಟ್ಟಿಯೊಂದಿಗೆ ಕಾಣಿಸಿಕೊಂಡಿದ್ದು ವಿಶೇಷವಾಗಿತ್ತು.

ಇದಕ್ಕೆ ಮುಖ್ಯ ಕಾರಣ ಬಿಸಿಸಿಐನ “ಅಂಗಾಂಗ ದಾನ, ಜೀವ ಉಳಿಸಿ” ಅಭಿಯಾನ. ಈ ಅಭಿಯಾನವನ್ನು ಬೆಂಬಲಿಸುವ ಸಲುವಾಗಿ ಉಭಯ ತಂಡಗಳ ಆಟಗಾರರು ಗ್ರೀನ್ ಆರ್ಮ್​ ಬ್ಯಾಂಡ್ ಧರಿಸಿ ಕಣಕ್ಕಿಳಿದಿದ್ದಾರೆ. ಈ ಮೂಲಕ ಅಂಗಾಂಗ ದಾನದ ಮಹತ್ವವನ್ನು ಸಾರಿ ಹೇಳಿದ್ದಾರೆ.

ಟೀಮ್ ಇಂಡಿಯಾ ಜಯಭೇರಿ:

ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಜೋಸ್ ಬಟ್ಲರ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಪರ ಶುಭ್​ಮನ್ ಗಿಲ್ (112) ಶತಕ ಸಿಡಿಸಿದರೆ, ವಿರಾಟ್ ಕೊಹ್ಲಿ (52) ಅರ್ಧಶತಕ ಬಾರಿಸಿದರು.

ಇನ್ನು ಶ್ರೇಯಸ್ ಅಯ್ಯರ್ 78 ರನ್​ ಸಿಡಿಸಿ ಮಿಂಚಿದರು. ಹಾಗೆಯೇ ಕೆಎಲ್ ರಾಹುಲ್ 40 ರನ್​ಗಳ ಕೊಡುಗೆ ನೀಡಿದರು. ಈ ಮೂಲಕ ಟೀಮ್ ಇಂಡಿಯಾ 50 ಓವರ್​ಗಳಲ್ಲಿ 356 ರನ್ ಕಲೆಹಾಕಿತು.

357 ರನ್​ಗಳ ಕಠಿಣ ಗುರಿಯನ್ನು ಬೆನ್ನತ್ತಿದ ಇಂಗ್ಲೆಂಡ್ ತಂಡವು ಕೇವಲ 214 ರನ್​ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಟೀಮ್ ಇಂಡಿಯಾ 142 ರನ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ 3 ಪಂದ್ಯಗಳ ಸರಣಿಯನ್ನು ಭಾರತ ತಂಡ 3-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿಕೊಂಡಿದೆ.

ಇಂಗ್ಲೆಂಡ್ ಪ್ಲೇಯಿಂಗ್ 11: ಫಿಲಿಪ್ ಸಾಲ್ಟ್(ವಿಕೆಟ್ ಕೀಪರ್), ಬೆನ್ ಡಕೆಟ್, ಜೋ ರೂಟ್, ಹ್ಯಾರಿ ಬ್ರೂಕ್, ಜೋಸ್ ಬಟ್ಲರ್ (ನಾಯಕ), ಟಾಮ್ ಬ್ಯಾಂಟನ್, ಲಿಯಾಮ್ ಲಿವಿಂಗ್‌ಸ್ಟೋನ್, ಗಸ್ ಅಟ್ಕಿನ್ಸನ್, ಆದಿಲ್ ರಶೀದ್, ಮಾರ್ಕ್ ವುಡ್, ಸಾಕಿಬ್ ಮಹಮೂದ್.

ಇದನ್ನೂ ಓದಿ: ಭಾರತ ತಂಡಕ್ಕೆ ಮೊಹಮ್ಮದ್ ಸಿರಾಜ್ ಮತ್ತೆ ಆಯ್ಕೆ… ಆದರೆ

ಭಾರತ ಪ್ಲೇಯಿಂಗ್ 11: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್(ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಹರ್ಷಿತ್ ರಾಣಾ, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್.