AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB ತಂಡದ 2 ಪಂದ್ಯಗಳನ್ನು ಶಿಫ್ಟ್ ಮಾಡಲು ಇದುವೇ ಕಾರಣ..!

IPL 2026: ಐಪಿಎಲ್ 2025ರ ಬಳಿಕ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಆರ್‌ಸಿಬಿ ತಂಡದ ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತದಲ್ಲಿ 11 ಜನರು ಮೃತಪಟ್ಟಿದ್ದರು. ಈ ಹಿನ್ನಲೆಯಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಯನ್ನು ನಿಷೇಧಿಸಲಾಗಿತ್ತು. ಇದೀಗ ಸುರಕ್ಷತಾ ಕ್ರಮಗಳೊಂದಿಗೆ ಮ್ಯಾಚ್ ಆಯೋಜಿಸಲು ಅನುಮತಿ ಸಿಕ್ಕಿದೆ.

RCB ತಂಡದ 2 ಪಂದ್ಯಗಳನ್ನು ಶಿಫ್ಟ್ ಮಾಡಲು ಇದುವೇ ಕಾರಣ..!
RCB - Virat Kohli
ಝಾಹಿರ್ ಯೂಸುಫ್
|

Updated on: Mar 04, 2026 | 8:14 AM

Share

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ತವರಿನಲ್ಲಿ ಕಣಕ್ಕಿಳಿಯುವುದು ಖಚಿತವಾಗಿದೆ. ಈ ಹಿಂದೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಅಹಿತಕರ ಘಟನೆಯಿಂದಾಗಿ ಪಂದ್ಯ ಆಯೋಜಿಸುವುದನ್ನು ನಿಷೇಧಿಸಲಾಗಿತ್ತು. ಇದೀಗ ರಾಜ್ಯ ಸರ್ಕಾರದಿಂದ ಪಂದ್ಯ ಆಯೋಜನೆಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಇದಾಗ್ಯೂ ಆರ್​ಸಿಬಿ 7 ಪಂದ್ಯಗಳಲ್ಲಿ 5 ಮ್ಯಾಚ್​ಗಳನ್ನು ಮಾತ್ರ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಡಲಿದೆ. ಇನ್ನುಳಿದ 2 ಪಂದ್ಯಗಳನ್ನು ರಾಯ್​ಪುರದಲ್ಲಿ ಆಡಲು ನಿರ್ಧರಿಸಿದೆ.

ಆರ್​ಸಿಬಿ ರಾಯ್​ಪುರದಲ್ಲಿ ಕಣಕ್ಕಿಳಿಯುತ್ತಿರುವುದೇಕೆ?

ಐಪಿಎಲ್​ನಲ್ಲಿ 7 ಹೋಮ್ ಹಾಗೂ 7 ಅವೇ ಪಂದ್ಯಗಳ ನಿಯಮವಿದೆ. ಅಂದರೆ ತವರು ಮೈದಾನದಲ್ಲಿ 7 ಪಂದ್ಯಗಳು ಎದುರಾಳಿಗಳ ಹೋಮ್​ ಗ್ರೌಂಡ್​ನಲ್ಲಿ 7 ಪಂದ್ಯಗಳನ್ನಾಡಲಾಗುತ್ತದೆ. ಇತ್ತ ತವರಿನಲ್ಲಿಯೇ 7 ಪಂದ್ಯಗಳನ್ನಾಡುತ್ತಾ ಬಂದಿರುವ ಆರ್​ಸಿಬಿ ಇದೀಗ 2 ಮ್ಯಾಚ್​ಗಳಿಗಾಗಿ 2ನೇ ಹೋಮ್​ ಗ್ರೌಂಡ್ ಆಯ್ಕೆ ಮಾಡಿಕೊಂಡಿದೆ. ಅದರಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಛತ್ತೀಸ್‌ಗಢದ ರಾಯ್​ಪುರದಲ್ಲಿ 2 ಮ್ಯಾಚ್​ಗಳನ್ನಾಡಲಿದೆ. ಇದರ ಬೆನ್ನಲ್ಲೇ ಆರ್​ಸಿಬಿ ರಾಯ್​ಪುರದಲ್ಲಿ ಕಣಕ್ಕಿಳಿಯುತ್ತಿರುವುದೇಕೆ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಈ ಪ್ರಶ್ನೆಗೆ ಉತ್ತರ ಈ ಕೆಳಗಿನಂತಿದೆ…

  • ಒಪ್ಪಂದ: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಲಭ್ಯತೆಯ ಬಗ್ಗೆ ಅನಿಶ್ಚಿತತೆ ಇದ್ದಾಗ, ಆರ್‌ಸಿಬಿ ಫ್ರಾಂಚೈಸಿಯು ಛತ್ತೀಸ್‌ಗಢ ಸರ್ಕಾರದೊಂದಿಗೆ ರಾಯ್‌ಪುರದಲ್ಲಿ ಪಂದ್ಯಗಳನ್ನು ಆಯೋಜಿಸಲು ಮೊದಲೇ ಒಪ್ಪಂದ ಮಾಡಿಕೊಂಡಿತ್ತು. ಈ ಒಪ್ಪಂದಂತೆ ಇದೀಗ ರಾಯ್​ಪುರದಲ್ಲಿ 2 ಮ್ಯಾಚ್​ಗಳನ್ನಾಡಲು ನಿರ್ಧರಿಸಲಾಗಿದೆ.
  • ಸುರಕ್ಷತಾ ತನಿಖೆ: 2025ರ ಆರ್‌ಸಿಬಿ ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತದ ಘಟನೆಯಲ್ಲಿ 11 ಜನರು ಮೃತಪಟ್ಟ ನಂತರ, ಚಿನ್ನಸ್ವಾಮಿ ಕ್ರೀಡಾಂಗಣವು ಕಟ್ಟುನಿಟ್ಟಿನ ಸುರಕ್ಷತಾ ಪರಿಶೀಲನೆಗೆ ಒಳಪಟ್ಟಿತ್ತು. ಈ ಕಾರಣದಿಂದಾಗಿ ಕ್ರೀಡಾಂಗಣದ ಲಭ್ಯತೆಯ ಬಗ್ಗೆ ಅನುಮಾನಗಳಿದ್ದವು.
  • ಪರ್ಯಾಯ ವ್ಯವಸ್ಥೆ: ಕ್ರೀಡಾಂಗಣದ ನವೀಕರಣ ಮತ್ತು ಭದ್ರತಾ ಪರವಾನಗಿ ವಿಳಂಬವಾಗಬಹುದು ಎಂಬ ಕಾರಣಕ್ಕೆ ರಾಯ್‌ಪುರದ ಶಹೀದ್ ವೀರ್ ನಾರಾಯಣ್ ಸಿಂಗ್ ಅಂತರಾಷ್ಟ್ರೀಯ ಕ್ರೀಡಾಂಗಣವನ್ನು ‘ಎರಡನೇ ತವರು’ ಆಗಿ ಆಯ್ಕೆ ಮಾಡಿಕೊಳ್ಳಲಾಗಿತ್ತು.
  • ಎರಡನೇ ತವರು: ಬೆಂಗಳೂರಿನಲ್ಲಿ ಪಂದ್ಯ ಆಯೋಜನೆಯ ಬಗ್ಗೆ ಗೊಂದಲವಿದ್ದ ಇದ್ದ ಕಾರಣ ರಾಯ್‌ಪುರದ ಶಹೀದ್ ವೀರ್ ನಾರಾಯಣ್ ಸಿಂಗ್ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜಿಸಲು ಅವಕಾಶ ನೀಡಬೇಕೆಂದು ಆರ್​ಸಿಬಿ ಫ್ರಾಂಚೈಸಿ ಛತ್ತೀಸ್‌ಗಢ ಸರ್ಕಾರಕ್ಕೆ ಮನವಿ ಮಾಡಿದ್ದರು. ಈ ಮನವಿಯಂತೆ ಆರ್​ಸಿಬಿ ತಂಡದ ಎರಡನೇ ತವರು ಮೈದಾನವಾಗಿ ರಾಯ್​ಪುರದ ಸ್ಟೇಡಿಯಂ ಅನ್ನು ಆಯ್ಕೆ ಮಾಡಲಾಗಿತ್ತು. ಈ ವೇಳೆ ಮಾಡಿಕೊಂಡ ಒಪ್ಪಂದದಿಂದಾಗಿ ಆರ್​ಸಿಬಿ ತಂಡವು 7 ತವರು ಪಂದ್ಯಗಳಲ್ಲಿ 2 ಮ್ಯಾಚ್​ ಅನ್ನು ಎರಡನೇ ತವರು ಮೈದಾನವಾದ ರಾಯ್‌ಪುರದ ಶಹೀದ್ ವೀರ್ ನಾರಾಯಣ್ ಸಿಂಗ್ ಸ್ಟೇಡಿಯಂನಲ್ಲಿ ಆಡಲು ನಿರ್ಧರಿಸಿದೆ.

ಇದನ್ನೂ ಓದಿ: T20 World Cup 2026: ಸೆಮಿಫೈನಲ್ ಪಂದ್ಯಕ್ಕೆ ಹೆಚ್ಚುವರಿ 90 ನಿಮಿಷ!

ಚಿನ್ನಸ್ವಾಮಿ ಸ್ಟೇಡಿಯಂನಲ್ಲೇ ಉದ್ಘಾಟನೆ:

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಎರಡು ತವರು ಮೈದಾನ ಹೊಂದಿದ್ದರೂ ಉದ್ಘಾಟನಾ ಪಂದ್ಯವನ್ನು ಬೆಂಗಳೂರಿನಲ್ಲೇ ಆಯೋಜಿಸಲಾಗುತ್ತದೆ. ಪ್ರಸ್ತುತ ಮಾಹಿತಿ ಪ್ರಕಾರ ಮಾರ್ಚ್ 28 ರಂದು ನಡೆಯಲಿರುವ ಮೊದಲ ಪಂದ್ಯಕ್ಕೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಆತಿಥ್ಯವಹಿಸಲಿದ್ದು, ಈ ಪಂದ್ಯದಲ್ಲಿ ಆರ್​ಸಿಬಿ vs ಕೆಕೆಆರ್ ಇಲ್ಲಾ ಪಂಜಾಬ್ ಕಿಂಗ್ಸ್ ಮುಖಾಮುಖಿಯಾಗಲಿದೆ.

Follow Us
ಸ್ತ್ರೀಯರು ಶಾಸ್ತ್ರಾನುಸಾರ ಸನ್ಯಾಸಿನಿ ಆಗಬಹುದಾ?
ಸ್ತ್ರೀಯರು ಶಾಸ್ತ್ರಾನುಸಾರ ಸನ್ಯಾಸಿನಿ ಆಗಬಹುದಾ?
ಇಂದು ಈ ರಾಶಿಯವರು ಅಪರಿಚಿತರೊಂದಿಗೆ ವ್ಯವಹಾರಗಳಲ್ಲಿ ಜಾಗರೂಕರಾಗಿರಿ
ಇಂದು ಈ ರಾಶಿಯವರು ಅಪರಿಚಿತರೊಂದಿಗೆ ವ್ಯವಹಾರಗಳಲ್ಲಿ ಜಾಗರೂಕರಾಗಿರಿ
ನಿಧಿ ಆಸೆಗಾಗಿ ಅಪಾರ್ಟ್​​​ಮೆಂಟ್​​ನ ಬೇಸ್ಮೆಂಟ್​​ ಅಗೆದ ಬಿಲ್ಡರ್​: ವಿಡಿಯೋ
ನಿಧಿ ಆಸೆಗಾಗಿ ಅಪಾರ್ಟ್​​​ಮೆಂಟ್​​ನ ಬೇಸ್ಮೆಂಟ್​​ ಅಗೆದ ಬಿಲ್ಡರ್​: ವಿಡಿಯೋ
ಕನ್ನಡ ಚಿತ್ರರಂಗಕ್ಕೆ 93ರ ಸಂಭ್ರಮ: ಒಂದೇ ವೇದಿಕೆಯಲ್ಲಿ ಸೆಲೆಬ್ರಿಟಿಗಳು
ಕನ್ನಡ ಚಿತ್ರರಂಗಕ್ಕೆ 93ರ ಸಂಭ್ರಮ: ಒಂದೇ ವೇದಿಕೆಯಲ್ಲಿ ಸೆಲೆಬ್ರಿಟಿಗಳು
ದರ್ಶನ್ ಜೊತೆ ‘ಭೀಮ ತೀರದಲ್ಲಿ’ ಸಿನಿಮಾ ಯಾಕೆ ಮಾಡಲಿಲ್ಲ? ಸಿಕ್ತು ಉತ್ತರ
ದರ್ಶನ್ ಜೊತೆ ‘ಭೀಮ ತೀರದಲ್ಲಿ’ ಸಿನಿಮಾ ಯಾಕೆ ಮಾಡಲಿಲ್ಲ? ಸಿಕ್ತು ಉತ್ತರ
ಇರಾನ್​ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ಬಾಂಬ್ ದಾಳಿ
ಇರಾನ್​ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ಬಾಂಬ್ ದಾಳಿ
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ