AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

MS Dhoni: ಧೋನಿ ನಾಯಕತ್ವಕ್ಕೆ ದಿಢೀರ್ ರಾಜೀನಾಮೆ ನೀಡಲು ಕಾರಣವೇನು?

CSK: ಈ ನಿರ್ಧಾರವ ಸ್ವಲ್ಪ ಸಮಯದಿಂದ ಅವರ ಮನಸ್ಸಿನಲ್ಲಿತ್ತು. ಧೋನಿ ಕೂಡ ಪರಿವರ್ತನೆ ಬಯಸಿದ್ದರು. ಹೀಗಾಗಿ ಜಡೇಜಾಗೆ ಕ್ಯಾಪ್ಟನ್ ಪಟ್ಟ ಹಸ್ತಾಂತರಿಸಲು ಇದು ಸರಿಯಾದ ಸಮಯ ಎಂದು ಅವರು ಭಾವಿಸಿದ್ದಾರೆ.

MS Dhoni: ಧೋನಿ ನಾಯಕತ್ವಕ್ಕೆ ದಿಢೀರ್ ರಾಜೀನಾಮೆ ನೀಡಲು ಕಾರಣವೇನು?
Dhoni
TV9 Web
| Edited By: |

Updated on: Mar 24, 2022 | 5:48 PM

Share

ಚೆನ್ನೈ ಸೂಪರ್ ಕಿಂಗ್ಸ್ (CSK) ನಾಯಕತ್ವಕ್ಕೆ ಮಹೇಂದ್ರ ಸಿಂಗ್ ಧೋನಿ (Ms Dhoni) ರಾಜೀನಾಮೆ ನೀಡಿದ್ದಾರೆ. ಅವರ ಬದಲಿಗೆ ಈಗ ರವೀಂದ್ರ ಜಡೇಜಾ (Ravindra Jadeja) ಸಿಎಸ್​ಕೆ ತಂಡವನ್ನು ಮುನ್ನಡೆಸಲಿದ್ದಾರೆ. ಇದಾಗ್ಯೂ ಸಿಎಸ್​ಕೆ ತಂಡದ ವಿಕೆಟ್ ಕೀಪರ್ ಆಗಿ ಧೋನಿ ಕಾಣಿಸಿಕೊಳ್ಳಲಿದ್ದಾರೆ. ಅಂದರೆ ಇದೇ ಮೊದಲ ಬಾರಿಗೆ ಧೋನಿ ಕೇವಲ ಆಟಗಾರನಾಗಿ ಸಿಎಸ್​ಕೆ ಪರ ಕಣಕ್ಕಿಳಿಯಲಿದ್ದಾರೆ. ಸಿಎಸ್​ಕೆ ತಂಡವನ್ನು 6 ಬಾರಿ ಚಾಂಪಿಯನ್ ಪಟ್ಟಕ್ಕೇರಿಸಿದ್ದ ನಾಯಕ ಎನಿಸಿಕೊಂಡಿರುವ ಧೋನಿ ಇದಕ್ಕಿದ್ದಂತೆ ರಾಜೀನಾಮೆ ನೀಡಲು ಕಾರಣವೇನು ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಏಕೆಂದರೆ ಐಪಿಎಲ್​ ಆರಂಭಕ್ಕೆ ಇನ್ನು ದಿನಗಳು ಮಾತ್ರ ಉಳಿದಿವೆ. ಅದರಲ್ಲೂ ಮೊದಲ ಪಂದ್ಯದಲ್ಲಿ ಸಿಎಸ್​ಕೆ ತಂಡವು ಕೆಕೆಆರ್ ವಿರುದ್ದ ಆಡಬೇಕಿದೆ. ಆದರೆ ಇದಕ್ಕೂ ಎರಡು ದಿನಗಳ ಮೊದಲು ಧೋನಿ ರಾಜೀನಾಮೆ ಘೋಷಿಸಿ ಅಚ್ಚರಿ ಮೂಡಿಸಿದ್ದಾರೆ. ಆದರೆ ಮಹೇಂದ್ರ ಸಿಂಗ್ ಧೋನಿ ದಿಢೀರ್ ಆಗಿ ಈ ನಿರ್ಧಾರಕ್ಕೆ ಬಂದಿಲ್ಲ ಎಂಬುದು ಸ್ಪಷ್ಟ.

ಏಕೆಂದರೆ ಕಳೆದ ಸೀಸನ್​ ಐಪಿಎಲ್ ವೇಳೆಯೇ ಧೋನಿಯ ವಿದಾಯದ ಬಗ್ಗೆ ಮಾತುಗಳು ಕೇಳಿ ಬಂದಿದ್ದವು. ಇದಾಗ್ಯೂ ಕೊನೆಯ ಬಾರಿಗೆ ಚೆನ್ನೈನಲ್ಲಿ ಆಡುವ ಮೂಲಕ ಕ್ರಿಕೆಟ್ ಅಂಗಳಕ್ಕೆ ವಿದಾಯ ಹೇಳುವುದಾಗಿ ಧೋನಿ ತಿಳಿಸಿದ್ದರು. ಇದೀಗ ಅದರ ಮೊದಲ ಹೆಜ್ಜೆ ಎಂಬಂತೆ ಧೋನಿ ಸಿಎಸ್​ಕೆ ತಂಡದ ನಾಯಕತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಏಕೆಂದರೆ ಧೋನಿ ಕಳೆದೆರಡು ಐಪಿಎಲ್​ ಸೀಸನ್​ಗಳಲ್ಲಿ ನಾಯಕನಾಗಿ ಯಶಸ್ವಿಯಾಗಿದ್ದಾರೇ ಹೊರತು ಬ್ಯಾಟ್ಸ್​ಮನ್​ ಆಗಿ ಸಕ್ಸಸ್ ಆಗಿಲ್ಲ.

ಅದರಲ್ಲೂ ಕಳೆದ ಸೀಸನ್​ನಲ್ಲೇ ಧೋನಿ ವಿದಾಯದ ಬಗ್ಗೆ ಸುಳಿವು ಸಿಕ್ಕಿದ್ದವು. ಆದರೆ ನಾವು ಧೋನಿಯನ್ನು ಮತ್ತೆರಡು ವರ್ಷಗಳವರೆಗೆ ತಂಡದಲ್ಲಿ ಮುಂದುವರೆಸಲು ಬಯಸುತ್ತೇವೆ ಎಂದು ಸಿಎಸ್​ಕೆ ಸಿಇಒ ಕಾಸಿ ವಿಶ್ವನಾಥನ್ ತಿಳಿಸಿದ್ದರು. ಅಂದರೆ ಅದಾಗಲೇ ಧೋನಿ ಸಿಎಸ್​ಕೆ ಫ್ರಾಂಚೈಸಿ ಜೊತೆ ನಿವೃತ್ತಿ ಬಗ್ಗೆ ಚರ್ಚಿಸಿದ್ದರು. ಇದೀಗ ಜಡೇಜಾ ಅವರಿಗೆ ನಾಯಕತ್ವ ಜವಾಬ್ದಾರಿ ವಹಿಸಿದ್ದಾರೆ. ಅಲ್ಲದೆ ಈ ಸೀಸನ್​ನಲ್ಲಿ ರವೀಂದ್ರ ಜಡೇಜಾ ಅವರನ್ನು ಪರಿಪೂರ್ಣ ನಾಯಕನಾಗಿ ಮಾಡುವ ಜವಾಬ್ದಾರಿಯನ್ನು ಧೋನಿ ವಹಿಸಿಕೊಂಡಿದ್ದಾರೆ.

ಧೋನಿಯ ನಿರ್ಧಾರ ಬಗ್ಗೆ ಮಾತನಾಡಿರುವ ಸಿಎಸ್‌ಕೆ ಸಿಇಒ ಕಾಸಿ ವಿಶ್ವನಾಥನ್, ಈ ನಿರ್ಧಾರವ ಸ್ವಲ್ಪ ಸಮಯದಿಂದ ಅವರ ಮನಸ್ಸಿನಲ್ಲಿತ್ತು. ಧೋನಿ ಕೂಡ ಪರಿವರ್ತನೆ ಬಯಸಿದ್ದರು. ಹೀಗಾಗಿ ಜಡೇಜಾಗೆ ಕ್ಯಾಪ್ಟನ್ ಪಟ್ಟ ಹಸ್ತಾಂತರಿಸಲು ಇದು ಸರಿಯಾದ ಸಮಯ ಎಂದು ಅವರು ಭಾವಿಸಿದ್ದಾರೆ. ಹೀಗಾಗಿ ಇದೇ ಸೀಸನ್ ಮೂಲಕ ರವೀಂದ್ರ ಜಡೇಜಾಗೆ ಧೋನಿ ಹೊಸ ಜವಾಬ್ದಾರಿವಹಿಸಿದ್ದಾರೆ ಎಂದು ಕಾಸಿ ವಿಶ್ವನಾಥನ್ ತಿಳಿಸಿದ್ದಾರೆ.

ಅಂದರೆ ಇಲ್ಲಿ ಧೋನಿ ಈ ಸೀಸನ್​ ಮಾತ್ರ ಆಡುವ ಸಾಧ್ಯತೆಯಿದೆ. ಮುಂದಿನ ಸೀಸನ್​ ಐಪಿಎಲ್​ನಲ್ಲಿ ಕಾಣಿಸಿಕೊಂಡರೂ ಚೆನ್ನೈ ಚೆಪಾಕ್ ಸ್ಟೇಡಿಯಂನಲ್ಲಿ ನಡೆಯಲಿರುವ ಪಂದ್ಯದ ಮೂಲಕ ವಿದಾಯ ಹೇಳಬಹುದು. ಏಕೆಂದರೆ ಕಳೆದ ಸೀಸನ್​ ಐಪಿಎಲ್​ ಬಳಿಕ ಅವರು ಚೆಪಾಕ್ ಸ್ಟೇಡಿಯಂನಲ್ಲಿ ಕೊನೆಯ ಪಂದ್ಯವಾಡುವ ಇಂಗಿತ ವ್ಯಕ್ತಪಡಿಸಿದ್ದರು. ಆದರೆ ಕೊರೋನಾ ಪರಿಸ್ಥಿತಿಯಲ್ಲಿ ಈ ಬಾರಿಯ ಐಪಿಎಲ್​ನ ಲೀಗ್ ಹಂತದ ಪಂದ್ಯಗಳು ಮುಂಬೈನಲ್ಲೇ ನಡೆಯುತ್ತಿದೆ. ಹೀಗಾಗಿ ಚೆನ್ನೈನಲ್ಲಿ ನಾಯಕನಾಗಿ ಕೊನೆಯ ಪಂದ್ಯವಾಡುವ ಅವಕಾಶ ಕೈತಪ್ಪಿದೆ.

ಇದಾಗ್ಯೂ ಮುಂದಿನ ವರ್ಷ ಅಥವಾ ಐಪಿಎಲ್ ಮುಕ್ತಾಯದ ಬಳಿಕ ಮಹೇಂದ್ರ ಸಿಂಗ್ ಧೋನಿಗಾಗಿ ಸಿಎಸ್​ಕೆ ಚೆಪಾಕ್ ಮೈದಾನದಲ್ಲಿ ವಿಶೇಷ ಪಂದ್ಯವನ್ನು ಆಯೋಜಿಸುವ ಸಾಧ್ಯತೆಯಿದೆ. ಈ ಮೂಲಕ ಧೋನಿ ಕ್ರಿಕೆಟ್ ಅಂಗಳಕ್ಕೆ ವಿದಾಯ ಹೇಳುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಒಟ್ಟಿನಲ್ಲಿ 40 ವರ್ಷದ ಮಹೇಂದ್ರ ಸಿಂಗ್ ಧೋನಿ ಈ ಹಿಂದಿನ ನಿರ್ಧಾರದಂತೆ ಕ್ರಿಕೆಟ್ ಅಂಗಳಕ್ಕೆ ವಿದಾಯ ಹೇಳುವ ಸಲುವಾಗಿ ಇದೀಗ ನಾಯಕತ್ವವನ್ನು ತ್ಯಜಿಸಿದ್ದಾರೆ. ಹೀಗಾಗಿ ಒಂದು ವರ್ಷದೊಳಗೆ ಧೋನಿ ಅವರ ನಿವೃತ್ತಿಯನ್ನೂ ಕೂಡ ನಿರೀಕ್ಷಿಸಬಹುದು.

ಇದನ್ನೂ ಓದಿ: IPL 2022: ಐಪಿಎಲ್​ನಲ್ಲಿ ಅಂದು ಪರ್ಪಲ್ ಕ್ಯಾಪ್ ವಿನ್ನರ್, ಇಂದು ನೆಟ್ ಬೌಲರ್..!

ಇದನ್ನೂ ಓದಿ: IPL 2022: ಐಪಿಎಲ್​ನಲ್ಲಿ ಅತೀ ವೇಗವಾಗಿ ಅರ್ಧಶತಕ ಬಾರಿಸಿದ 10 ಬ್ಯಾಟರ್​ಗಳು ಇವರೇ..!

ಇದನ್ನೂ ಓದಿ: IPL 2022: ಐಪಿಎಲ್ ಪಂದ್ಯವೊಂದರಲ್ಲಿ ಅತೀ ಹೆಚ್ಚು ಸಿಕ್ಸ್​ ಸಿಡಿಸಿದ ಬ್ಯಾಟರ್ ಯಾರು ಗೊತ್ತಾ?

(Why did Dhoni step down as CSK Captain?)

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?