Ravindra Jadeja: ಸ್ಟಾರ್ ಆಲ್​ರೌಂಡರ್ ಜಡೇಜಾ ತಂಡದಿಂದ ಔಟ್: ಆಯ್ಕೆಯಾಗದಿರಲು ಇದುವೇ ಕಾರಣ..!

India squad for West Indies series: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯ ಕುಮಾರ್ ಯಾದವ್, ರಿಷಬ್ ಪಂತ್

Ravindra Jadeja: ಸ್ಟಾರ್ ಆಲ್​ರೌಂಡರ್ ಜಡೇಜಾ ತಂಡದಿಂದ ಔಟ್: ಆಯ್ಕೆಯಾಗದಿರಲು ಇದುವೇ ಕಾರಣ..!
Ravindra Jadeja
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jan 27, 2022 | 2:18 PM

ವೆಸ್ಟ್ ಇಂಡೀಸ್ ವಿರುದ್ದದ (India vs West Indies) ಸರಣಿಗಾಗಿ ಟೀಮ್ ಇಂಡಿಯಾವನ್ನು (India squad) ಘೋಷಿಸಲಾಗಿದೆ. ದಕ್ಷಿಣ ಆಫ್ರಿಕಾ ವಿರುದ್ದದ ಸರಣಿಯಿಂದ ಹೊರಗುಳಿದಿದ್ದ ಕೆಲ ಆಟಗಾರರು ಈ ಬಾರಿ ತಂಡಕ್ಕೆ ಕಂಬ್ಯಾಕ್ ಮಾಡಿದ್ದಾರೆ. ಅದರಲ್ಲೂ ನಾಯಕ ರೋಹಿತ್ ಶರ್ಮಾ (Rohit Sharma) ಗಾಯದಿಂದ ಚೇತರಿಸಿಕೊಂಡು ತಂಡಕ್ಕೆ ಮರಳಿದ್ದು, ಹೀಗಾಗಿ ಏಕದಿನ ಹಾಗೂ ಟಿ20 ತಂಡಗಳನ್ನು ಮುನ್ನಡೆಸಲಿದ್ದಾರೆ. ಹಾಗೆಯೇ ಇದೇ ಮೊದಲ ಬಾರಿಗೆ ಯುವ ಸ್ಪಿನ್ನರ್ ರವಿ ಬಿಷ್ಣೋಯ್ ಹಾಗೂ ಆಲ್​ರೌಂಡರ್ ದೀಪಕ್ ಹೂಡಾ ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆದಿದ್ದಾರೆ. ಇದಾಗ್ಯೂ ತಂಡದಲ್ಲಿ ಕಾಣಿಸಿಕೊಳ್ಳದ ಪ್ರಮುಖ ಆಟಗಾರನೆಂದರೆ ರವೀಂದ್ರ ಜಡೇಜಾ (Ravindra Jadeja).

ಟಿ20 ವಿಶ್ವಕಪ್​ ಬಳಿಕ ನ್ಯೂಜಿಲೆಂಡ್ ವಿರುದ್ದ ಸರಣಿ ಆಡಿದ್ದ ರವೀಂದ್ರ ಜಡೇಜಾ ಆ ಬಳಿಕ ಟೀಮ್ ಇಂಡಿಯಾದಲ್ಲಿ ಕಾಣಿಸಿಕೊಂಡಿರಲಿಲ್ಲ. ದಕ್ಷಿಣ ಆಫ್ರಿಕಾ ವಿರುದ್ದದ ಟೆಸ್ಟ್ ಹಾಗೂ ಏಕದಿನ ತಂಡದಲ್ಲೂ ಜಡೇಜಾ ಸ್ಥಾನ ಪಡೆದಿರಲಿಲ್ಲ. ಇದೀಗ ವೆಸ್ಟ್ ಇಂಡೀಸ್ ವಿರುದ್ದದ ಸರಣಿಯಿಂದ ಕೂಡ ರವೀಂದ್ರ ಜಡೇಜಾ ಹೊರಗುಳಿದಿದ್ದಾರೆ. ಅಷ್ಟಕ್ಕೂ ಎರಡು ಸರಣಿಗಳಿಂದ ಜಡೇಜಾ ಹೊರಗುಳಿಯಲು ಮುಖ್ಯ ಕಾರಣವೆಂದರೆ ಫಿಟ್​ನೆಸ್​ ಸಮಸ್ಯೆ.

ಹೌದು, ರವೀಂದ್ರ ಜಡೇಜಾ ಕಾನ್ಪುರದಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ವೇಳೆ ಗಾಯ ಮಾಡಿಕೊಂಡಿದ್ದರು. ಗಾಯದ ಸ್ಕ್ಯಾನಿಂಗ್ ವೇಳೆ ಮೊಣಕಾಲಿನಲ್ಲಿ ಊತ ಕಂಡು ಬಂದಿತ್ತು. ಹೀಗಾಗಿ ಅವರಿಗೆ ವೈದ್ಯರು ಹೆಚ್ಚಿನ ವಿಶ್ರಾಂತಿ ಸೂಚಿಸಿದ್ದಾರೆ. ಸದ್ಯ ರವೀಂದ್ರ ಜಡೇಜಾ ಚೇತರಿಸಿಕೊಳ್ಳಲುತ್ತಿದ್ದು, ಹೀಗಾಗಿ ಅವರನ್ನು ಆಯ್ಕೆಗೆ ಪರಿಗಣಿಸಿಲ್ಲ ಎಂದು ಬಿಸಿಸಿಐ ಸ್ಪಷ್ಟಪಡಿಸಿದೆ. ಇದೇ ಕಾರಣದಿಂದಾಗಿ ಜಡೇಜಾ ವೆಸ್ಟ್ ಇಂಡೀಸ್ ವಿರುದ್ದದ ಸರಣಿಗೆ ಆಯ್ಕೆಯಾಗಿಲ್ಲ.

ಸದ್ಯ ರವೀಂದ್ರ ಜಡೇಜಾ ವಿಶ್ರಾಂತಿಯಲ್ಲಿದ್ದು, ಐಪಿಎಲ್ ಸೀಸನ್ 15 ಆರಂಭದ ವೇಳೆಗೆ ಸಂಪೂರ್ಣ ಫಿಟ್​ ಆಗಲಿದ್ದಾರೆ. ಅದರಂತೆ ಸಿಎಸ್​ಕೆ ಪರ ಜಡೇಜಾ ಕಣಕ್ಕಿಳಿಯುವುದು ಖಚಿತ ಎಂದು ತಿಳಿದು ಬಂದಿದೆ. ಇನ್ನು ಜಡೇಜಾ ಸ್ಥಾನದಲ್ಲಿ ಆಲ್​ರೌಂಡರ್​ ಆಗಿ ಐಪಿಎಲ್​ನಲ್ಲಿ ಪಂಜಾಬ್ ಕಿಂಗ್ಸ್ ಪರ ಆಡಿದ್ದ ದೀಪಕ್ ಹೂಡಾ ಸ್ಥಾನ ಪಡೆದಿದ್ದಾರೆ.

ಭಾರತ ಟಿ20 ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯ ಕುಮಾರ್ ಯಾದವ್, ರಿಷಬ್ ಪಂತ್ (ವಿಕೆಟ್ ಕೀಪರ್), ವೆಂಕಟೇಶ್ ಅಯ್ಯರ್, ದೀಪಕ್ ಚಹಾರ್, ಶಾರ್ದೂಲ್ ಠಾಕೂರ್, ರವಿ ಬಿಷ್ಣೋಯ್, ಅಕ್ಷರ್ ಪಟೇಲ್, ಯುಜುವೇಂದ್ರ ಚಹಾಲ್, ವಾಷಿಂಗ್ಟನ್ ಸುಂದರ್, ಮೊಹಮ್ಮದ್ ಸಿರಾಜ್, ಭುವನೇಶ್ವರ್ ಕುಮಾರ್, ಅವೇಶ್ ಖಾನ್, ಹರ್ಷಲ್ ಪಟೇಲ್

ಭಾರತ ಏಕದಿನ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ರುತುರಾಜ್ ಗಾಯಕ್ವಾಡ್, ಶಿಖರ್ ಧವನ್, ವಿರಾಟ್ ಕೊಹ್ಲಿ, ಸೂರ್ಯ ಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದೀಪಕ್ ಚಾಹರ್, ಶಾರ್ದೂಲ್ ಠಾಕೂರ್, ಯುಜುವೇಂದ್ರ ಚಾಹಲ್, ಕುಲ್ದೀಪ್ ಯಾದವ್ , ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಅವೇಶ್ ಖಾನ್

ಭಾರತ-ವೆಸ್ಟ್ ಇಂಡೀಸ್ ಸರಣಿ ವೇಳಾಪಟ್ಟಿ ಹೀಗಿದೆ:

ಏಕದಿನ ಸರಣಿ ವೇಳಾಪಟ್ಟಿ

6 ಫೆಬ್ರವರಿ: 1ನೇ ODI, ಅಹಮದಾಬಾದ್

ಫೆಬ್ರವರಿ 9: 2ನೇ ODI, ಅಹಮದಾಬಾದ್

ಫೆಬ್ರವರಿ 11: 3ನೇ ODI, ಅಹಮದಾಬಾದ್

ಟಿ20 ಸರಣಿ ವೇಳಾಪಟ್ಟಿ:

16 ಫೆಬ್ರವರಿ: 1ನೇ ಟಿ20, ಕೋಲ್ಕತ್ತಾ

ಫೆಬ್ರವರಿ 18: ಎರಡನೇ ಟಿ20, ಕೋಲ್ಕತ್ತಾ

ಫೆಬ್ರವರಿ 20: ಮೂರನೇ ಟಿ20, ಕೋಲ್ಕತ್ತಾ

ಇದನ್ನೂ ಓದಿ: ICC ODI Rankings: ಐಸಿಸಿ ಏಕದಿನ ರ‍್ಯಾಕಿಂಗ್ ಪಟ್ಟಿ ಪ್ರಕಟ: ಕೊಹ್ಲಿ-ರೋಹಿತ್ ನಡುವೆ ಪೈಪೋಟಿ

ಇದನ್ನೂ ಓದಿ: IPL 2022 Auction: ಲಕ್ನೋ ತಂಡದ ಮೊದಲ ಟಾರ್ಗೆಟ್ ಯಾರು ಎಂಬುದನ್ನು ಬಹಿರಂಗಪಡಿಸಿದ ರಾಹುಲ್

(Why did Ravindra Jadeja not get a place in Team India?)

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ