Team India Jersey: ಟೀಮ್ ಇಂಡಿಯಾ ಜೆರ್ಸಿ ಮೇಲೆ 3 ಸ್ಟಾರ್ ನೀಡಿದ್ದು ಯಾಕೆ ಗೊತ್ತಾ?
Indian Team New Jersey: ಬಿಸಿಸಿಐ ಲೋಗೋ ಮೇಲೆ 3 ಸ್ಟಾರ್ಗಳನ್ನು ನೀಡಲಾಗಿದೆ. ಇದರ ಬೆನ್ನಲ್ಲೇ ಈ ಸ್ಟಾರ್ಗಳು ಯಾಕಾಗಿ ನೀಡಲಾಗಿದೆ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.
T20 World Cup 2022: ಟಿ20 ವಿಶ್ವಕಪ್ಗಾಗಿ ಟೀಮ್ ಇಂಡಿಯಾ (Team India) ನೂತನ ಜೆರ್ಸಿಯನ್ನು ಅನಾವರಣಗೊಳಿಸಿದೆ. ಕಿಟ್ ಪ್ರಾಯೋಜಕರಾದ ಎಂಪಿಎಲ್ ಸ್ಪೋರ್ಟ್ಸ್ ಭಾರತ ತಂಡದ ಹೊಸ ಜೆರ್ಸಿಯನ್ನು ವಿನ್ಯಾಸಗೊಳಿಸಿದೆ. ವಿಶೇಷ ಎಂದರೆ ಈ ಜೆರ್ಸಿಯ ಅನಾವರಣ ಫೋಟೋದಲ್ಲಿ ಟೀಮ್ ಇಂಡಿಯಾದ 6 ಸ್ಟಾರ್ ಪ್ಲೇಯರ್ಸ್ ಕಾಣಿಸಿಕೊಂಡಿದ್ದಾರೆ. ನಾಯಕ ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್ ಹಾಗೂ ಹಾರ್ದಿಕ್ ಪಾಂಡ್ಯ ಪರುಷರ ತಂಡದಿಂದ ಕಾಣಿಸಿಕೊಂಡರೆ, ಮಹಿಳಾ ತಂಡದಿಂದ ನಾಯಕಿ ಹರ್ಮನ್ ಪ್ರೀತ್ ಕೌರ್, ಶಫಾಲಿ ವರ್ಮಾ ಹಾಗೂ ರೇಣುಕಾ ಠಾಕೂರ್ ಕಾಣಿಸಿಕೊಂಡಿದ್ದಾರೆ.
To every cricket fan out there, this one’s for you.
ಇದನ್ನೂ ಓದಿPresenting the all new T20 Jersey – One Blue Jersey by @mpl_sport. #HarFanKiJersey#TeamIndia #MPLSports #CricketFandom pic.twitter.com/3VVro2TgTT
— BCCI (@BCCI) September 18, 2022
ನೂತನ ಜೆರ್ಸಿಯ ಮತ್ತೊಂದು ವಿಶೇಷ ಎಂದರೆ ಈ ಕಿಟ್ನಲ್ಲಿ ವಿನ್ಯಾಸಗೊಳಿಸಲಾಗಿರುವ ಬಿಸಿಸಿಐ ಲೋಗೋ ಮೇಲೆ 3 ಸ್ಟಾರ್ಗಳನ್ನು ನೀಡಲಾಗಿರುವುದು. ಇದರ ಬೆನ್ನಲ್ಲೇ ಈ ಸ್ಟಾರ್ಗಳು ಯಾಕಾಗಿ ನೀಡಲಾಗಿದೆ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಈ ಪ್ರಶ್ನೆಗಳಿಗೆ ಸಿಗುವ ಉತ್ತರ ಮೂರು ಬಾರಿಯ ವಿಶ್ವಕಪ್ ಚಾಂಪಿಯನ್. ಅಂದರೆ ಟೀಮ್ ಇಂಡಿಯಾ ಐಸಿಸಿ ವಿಶ್ವಕಪ್ನಲ್ಲಿ 3 ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದೆ.
ಭಾರತ ತಂಡವು 1983 ರಲ್ಲಿ ಕಪಿಲ್ ದೇವ್ ನಾಯಕತ್ವದಲ್ಲಿ ಮೊದಲ ಬಾರಿಗೆ ವಿಶ್ವಕಪ್ ಗೆದ್ದಿತು. ಇದಾದ ಬಳಿಕ 2007 ರಲ್ಲಿ ಮಹೇಂದ್ರ ಸಿಂಗ್ ಧೋನಿ ನಾಯಕತ್ವದಲ್ಲಿ ಭಾರತ ತಂಡ ಟಿ20 ವಿಶ್ವಕಪ್ನಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಇನ್ನು 2011 ರಲ್ಲಿ ಮಹೇಂದ್ರ ಸಿಂಗ್ ಧೋನಿ ನಾಯಕತ್ವದಲ್ಲಿ ಭಾರತ ತಂಡ ಮೂರನೇ ಬಾರಿಗೆ ವಿಶ್ವಕಪ್ನಲ್ಲಿ ಟ್ರೋಫಿ ಎತ್ತಿ ಹಿಡಿದಿತ್ತು.
ಈ ಮೂರು ವಿಶ್ವಕಪ್ಗಳ ಚಾಂಪಿಯನ್ ಪಟ್ಟವನ್ನು ಪ್ರತಿನಿಧಿಸುವಂತೆ ಜೆರ್ಸಿ ಮೇಲೆ 3 ಸ್ಟಾರ್ಗಳನ್ನು ನೀಡಲಾಗಿದೆ. ಈ ಮೂಲಕ ನಾಲ್ಕನೇ ಬಾರಿ ಪ್ರಶಸ್ತಿ ಗೆಲ್ಲಲು ಟೀಮ್ ಇಂಡಿಯಾವನ್ನು ಹುರಿದುಂಬಿಸಲಾಗಿದೆ. ಒಟ್ಟಿನಲ್ಲಿ ಟೀಮ್ ಇಂಡಿಯಾದ ಹೊಸ ಜೆರ್ಸಿ ವಿನ್ಯಾಸದ ಬಗ್ಗೆ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದ್ದು, ಅದರಂತೆ ನೂತನ ಜೆರ್ಸಿಯಲ್ಲಿ ಕಣಕ್ಕಿಳಿದು ಟೀಮ್ ಇಂಡಿಯಾ ದಶಕದ ವಿಶ್ವಕಪ್ ಬರವನ್ನು ನೀಗಿಸಲಿದೆಯಾ ಕಾದು ನೋಡಬೇಕಿದೆ.
ಟಿ20 ವಿಶ್ವಕಪ್ಗೆ ಟೀಮ್ ಇಂಡಿಯಾ ಹೀಗಿದೆ:
ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಆರ್ ಅಶ್ವಿನ್, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್ ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್.
ಮೀಸಲು ಆಟಗಾರರು: ಮೊಹಮ್ಮದ್ ಶಮಿ, ಶ್ರೇಯಸ್ ಅಯ್ಯರ್, ರವಿ ಬಿಷ್ಣೋಯ್, ದೀಪಕ್ ಚಹರ್.