AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಸಲನೂ ಕಪ್ ನಮ್ದೆ: ಈ ಲೆಕ್ಕಾಚಾರಕ್ಕಿದೆ ಬಲವಾದ ಕಾರಣ!

IPL 2026 RCB vs GT: ಐಪಿಎಲ್​ನ ಕ್ವಾಲಿಫೈಯರ್-1 ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 20 ಓವರ್​ಗಳಲ್ಲಿ 254 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಗುಜರಾತ್ ಟೈಟಾನ್ಸ್ ತಂಡ 19.3 ಓವರ್​ಗಳಲ್ಲಿ 162 ರನ್​​ಗಳಿಗೆ ಆಲೌಟ್ ಆಗಿದ್ದಾರೆ. ಈ ಮೂಲಕ ಆರ್​ಸಿಬಿ ತಂಡ 92 ರನ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಆರ್​ಸಿಬಿ ತಂಡ ಐಪಿಎಲ್​ ಫೈನಲ್​ಗೆ ಲಗ್ಗೆಯಿಟ್ಟಿದೆ.

ಈ ಸಲನೂ ಕಪ್ ನಮ್ದೆ: ಈ ಲೆಕ್ಕಾಚಾರಕ್ಕಿದೆ ಬಲವಾದ ಕಾರಣ!
RCBImage Credit source: IPL
ಝಾಹಿರ್ ಯೂಸುಫ್
|

Updated on:May 27, 2026 | 1:08 PM

Share

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಫೈನಲ್​ಗೇರಿದೆ. ಅದರಂತೆ ಮೇ 31 ರಂದು ನಡೆಯಲಿರುವ ಫೈನಲ್​ ಪಂದ್ಯದಲ್ಲಿ ಆರ್​ಸಿಬಿ ಮತ್ತೊಮ್ಮೆ ಚಾಂಪಿಯನ್ ಪಟ್ಟಕ್ಕಾಗಿ ಸೆಣಸಲಿದೆ. ಇಲ್ಲಿ ಆರ್​ಸಿಬಿ ಎದುರಾಳಿಯಾಗಿ ಬರಲಿರುವುದು ಯಾರು ಎಂಬುದೇ ಕುತೂಹಲ.

ಏಕೆಂದರೆ ಇದೀಗ ಫೈನಲ್ ರೇಸ್​ನಲ್ಲಿ ಸನ್​ರೈಸರ್ಸ್ ಹೈದರಾಬಾದ್, ರಾಜಸ್ಥಾನ್ ರಾಯಲ್ಸ್ ಹಾಗೂ ಗುಜರಾತ್ ಟೈಟಾನ್ಸ್​ ತಂಡಗಳಿವೆ. ಈ ಮೂರು ತಂಡಗಳಲ್ಲಿ ಒಂದು ಟೀಮ್ ಇಂದು ಹೊರಬೀಳಲಿದೆ. ಅಂದರೆ ಎಲಿಮಿನೇಟರ್ ಪಂದ್ಯವಾಡಲಿರುವ ಸನ್​ರೈಸರ್ಸ್ ಹೈದರಾಬಾದ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳಲ್ಲಿ ಒಂದು ಟೀಮ್​ನ ಐಪಿಎಲ್ ಅಭಿಯಾನ ಇಂದು ಅಂತ್ಯಗೊಳ್ಳಲಿದೆ. ಇದಾದ ಬಳಿಕ ದ್ವಿತೀಯ ಕ್ವಾಲಿಫೈಯರ್ ಪಂದ್ಯ ನಡೆಯಲಿದೆ. ಈ ಮ್ಯಾಚ್​ನಲ್ಲಿ ಗೆಲ್ಲುವ ತಂಡ ಫೈನಲ್​ಗೇರಲಿದೆ.

ಹೀಗೆ ಯಾರೇ ಬಂದರೂ ಈ ಬಾರಿ ಮತ್ತೊಮ್ಮೆ ಚಾಂಪಿಯನ್ ಪಟ್ಟಕ್ಕೇರುವ ರಣ ಉತ್ಸಾಹದಲ್ಲಿದೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ. ಇದಕ್ಕೆ ಕೇವಲ ತಂಡದ ಪ್ರಸ್ತುತ ಫಾರ್ಮ್ ಮಾತ್ರವಲ್ಲ, ಕಳೆದ 8 ಸೀಸನ್‌ಗಳ ಐಪಿಎಲ್ ಇತಿಹಾಸವೂ ಬೆನ್ನಿಗಿದೆ.

ಅಂದರೆ ಕಳೆದ 8 ವರ್ಷಗಳ ಐಪಿಎಲ್ ಪ್ಲೇಆಫ್​ ಇತಿಹಾಸವನ್ನು ಗಮನಿಸಿದರೆ, ಕ್ವಾಲಿಫೈಯರ್-1 ಪಂದ್ಯದಲ್ಲಿ ಗೆದ್ದ ತಂಡವೇ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಬಾರಿ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಗೆದ್ದಿರುವುದು ಆರ್​ಸಿಬಿ. ಹೀಗಾಗಿಯೇ ಈ ಸಲ ಕೂಡ ಕಪ್ ನಮ್ದೇ ಎನ್ನುತ್ತಿದ್ದಾರೆ ಆರ್​ಸಿಬಿ ಅಭಿಮಾನಿಗಳು.

ಕಳೆದ 8 ವರ್ಷಗಳ ಇತಿಹಾಸ!

  1. 2025: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಕ್ವಾಲಿಫೈಯರ್ 1 ವಿನ್ನರ್)
  2. 2024: ಕೊಲ್ಕತ್ತಾ ನೈಟ್ ರೈಡರ್ಸ್ (ಕ್ವಾಲಿಫೈಯರ್ 1 ವಿನ್ನರ್)
  3. 2023: ಚೆನ್ನೈ ಸೂಪರ್ ಕಿಂಗ್ಸ್ (ಕ್ವಾಲಿಫೈಯರ್ 1 ವಿನ್ನರ್)
  4. 2022: ಗುಜರಾತ್ ಟೈಟಾನ್ಸ್ (ಕ್ವಾಲಿಫೈಯರ್ 1 ವಿನ್ನರ್)
  5. 2021: ಚೆನ್ನೈ ಸೂಪರ್ ಕಿಂಗ್ಸ್ (ಕ್ವಾಲಿಫೈಯರ್ 1 ವಿನ್ನರ್)
  6. 2020: ಮುಂಬೈ ಇಂಡಿಯನ್ಸ್ (ಕ್ವಾಲಿಫೈಯರ್ 1 ವಿನ್ನರ್)
  7. 2019: ಮುಂಬೈ ಇಂಡಿಯನ್ಸ್ (ಕ್ವಾಲಿಫೈಯರ್ 1 ವಿನ್ನರ್)
  8. 2018: ಚೆನ್ನೈ ಸೂಪರ್ ಕಿಂಗ್ಸ್ (ಕ್ವಾಲಿಫೈಯರ್ 1 ವಿನ್ನರ್)

ಇದನ್ನೂ ಓದಿ: Rajat Patidar: ಒಂದು ಪರೀಕ್ಷೆ ನಡೆಸಬೇಕಿತ್ತು, ಅದಕ್ಕಾಗಿ ಆತನನ್ನು ಕಣಕ್ಕಿಳಿಸಿದೆವು!

2018 ರಿಂದ 2025 ರವರೆಗೆ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಗೆದ್ದ ತಂಡಗಳೇ ಐಪಿಎಲ್​​ನಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಬಾರಿ ಮೊದಲ ಕ್ವಾಲಿಫೈಯರ್ ಮ್ಯಾಚ್ ಗೆದ್ದಿರುವುದು ರಾಯಲ್ ಚಾಲೆಂಜರ್ಸ್ ಬೆಂಗಳೂರು. ಹೀಗಾಗಿ ಈ ಸಲನೂ ಕಪ್ ನಮ್ದೇ ಎನ್ನಬಹುದು.

Published On - 12:57 pm, Wed, 27 May 26

Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಭುವನೇಶ್ವರದಲ್ಲಿ ಆರ್‌ಬಿಐನ 169 ಕೋಟಿ ರೂ. ಮೌಲ್ಯದ ಡೇಟಾ ಸೆಂಟರ್ ಉದ್ಘಾಟನೆ
ಭುವನೇಶ್ವರದಲ್ಲಿ ಆರ್‌ಬಿಐನ 169 ಕೋಟಿ ರೂ. ಮೌಲ್ಯದ ಡೇಟಾ ಸೆಂಟರ್ ಉದ್ಘಾಟನೆ
ಕಾಮಗಾರಿ ವೀಕ್ಷಣೆಗೆ ಬಂದಿದ್ದ ಶಾಸಕ ವಿಠ್ಠಲ್ ಹಲಗೇಕರ್​​​ಗೆ ಜನರಿಂದ ಕ್ಲಾಸ್
ಕಾಮಗಾರಿ ವೀಕ್ಷಣೆಗೆ ಬಂದಿದ್ದ ಶಾಸಕ ವಿಠ್ಠಲ್ ಹಲಗೇಕರ್​​​ಗೆ ಜನರಿಂದ ಕ್ಲಾಸ್
‘ಪ್ರೇಮದ ಊರಲಿ’ ಸಿನಿಮಾ ಬಗ್ಗೆ ಸಾಯಿಕುಮಾರ್ ಮಾತು: ನಟ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಬಗ್ಗೆ ಸಾಯಿಕುಮಾರ್ ಮಾತು: ನಟ ಹೇಳಿದ್ದೇನು?
‘ಪ್ರೇಮದ ಊರಲಿ’ ಎಫೆಕ್ಟ್: ಚಿತ್ರೀಕರಣ ನಡೆದ ಸೀಗೆಗುಡ್ಡದಲ್ಲಿ ಜನಸಾಗರ
‘ಪ್ರೇಮದ ಊರಲಿ’ ಎಫೆಕ್ಟ್: ಚಿತ್ರೀಕರಣ ನಡೆದ ಸೀಗೆಗುಡ್ಡದಲ್ಲಿ ಜನಸಾಗರ
ವಾರಾಣಸಿಯ ನಮೋ ಘಾಟ್‌ನಲ್ಲಿ ಪ್ರಧಾನಿ ಮೋದಿಯ ಮನಸೆಳೆದ ಏರ್ ಶೋ
ವಾರಾಣಸಿಯ ನಮೋ ಘಾಟ್‌ನಲ್ಲಿ ಪ್ರಧಾನಿ ಮೋದಿಯ ಮನಸೆಳೆದ ಏರ್ ಶೋ
ರಾಹುಲ್ ಗಾಂಧಿ ಭೇಟಿಗೆ ಸಮಯ ಕೇಳಿದ ಸಿದ್ದರಾಮಯ್ಯ
ರಾಹುಲ್ ಗಾಂಧಿ ಭೇಟಿಗೆ ಸಮಯ ಕೇಳಿದ ಸಿದ್ದರಾಮಯ್ಯ
ಗಗನ್​​ಗೆ ಕೌಂಟರ್ ಕೊಟ್ಟ ಆಸಿಯಾ, ಸೋನಿಕಾ ಇಂದ ಆಸಿಯಾಗೆ ಟಾಂಗ್​​: ವಿಡಿಯೋ
ಗಗನ್​​ಗೆ ಕೌಂಟರ್ ಕೊಟ್ಟ ಆಸಿಯಾ, ಸೋನಿಕಾ ಇಂದ ಆಸಿಯಾಗೆ ಟಾಂಗ್​​: ವಿಡಿಯೋ
'ಮೋದಿ ಮಾತ್ರ ಅಲ್ಲ, ಅವರಪ್ಪನೂ ಅಧಿಕಾರದಿಂದ ಕೆಳಗಿಳಿಯುತ್ತಾರೆ'; ಖರ್ಗೆ
'ಮೋದಿ ಮಾತ್ರ ಅಲ್ಲ, ಅವರಪ್ಪನೂ ಅಧಿಕಾರದಿಂದ ಕೆಳಗಿಳಿಯುತ್ತಾರೆ'; ಖರ್ಗೆ
ದಾಂಡೇಲಿಯಲ್ಲಿ ಪ್ರವಾಸಿಗನ ಧ್ವನಿ ಕೇಳಿ ದಡಕ್ಕೆ ಬಂತು ಮೊಸಳೆ!
ದಾಂಡೇಲಿಯಲ್ಲಿ ಪ್ರವಾಸಿಗನ ಧ್ವನಿ ಕೇಳಿ ದಡಕ್ಕೆ ಬಂತು ಮೊಸಳೆ!
ಸ್ಟಿಂಗ್ ವಿಚಾರ ಡೈವರ್ಟ್ ಮಾಡಲು ಹೀಗೆ ಮಾಡ್ತಿದ್ದಾರೆ; ಜೋಶಿ ವಾಗ್ದಾಳಿ
ಸ್ಟಿಂಗ್ ವಿಚಾರ ಡೈವರ್ಟ್ ಮಾಡಲು ಹೀಗೆ ಮಾಡ್ತಿದ್ದಾರೆ; ಜೋಶಿ ವಾಗ್ದಾಳಿ