
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಫೈನಲ್ಗೇರಿದೆ. ಅದರಂತೆ ಮೇ 31 ರಂದು ನಡೆಯಲಿರುವ ಫೈನಲ್ ಪಂದ್ಯದಲ್ಲಿ ಆರ್ಸಿಬಿ ಮತ್ತೊಮ್ಮೆ ಚಾಂಪಿಯನ್ ಪಟ್ಟಕ್ಕಾಗಿ ಸೆಣಸಲಿದೆ. ಇಲ್ಲಿ ಆರ್ಸಿಬಿ ಎದುರಾಳಿಯಾಗಿ ಬರಲಿರುವುದು ಯಾರು ಎಂಬುದೇ ಕುತೂಹಲ.
ಏಕೆಂದರೆ ಇದೀಗ ಫೈನಲ್ ರೇಸ್ನಲ್ಲಿ ಸನ್ರೈಸರ್ಸ್ ಹೈದರಾಬಾದ್, ರಾಜಸ್ಥಾನ್ ರಾಯಲ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳಿವೆ. ಈ ಮೂರು ತಂಡಗಳಲ್ಲಿ ಒಂದು ಟೀಮ್ ಇಂದು ಹೊರಬೀಳಲಿದೆ. ಅಂದರೆ ಎಲಿಮಿನೇಟರ್ ಪಂದ್ಯವಾಡಲಿರುವ ಸನ್ರೈಸರ್ಸ್ ಹೈದರಾಬಾದ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳಲ್ಲಿ ಒಂದು ಟೀಮ್ನ ಐಪಿಎಲ್ ಅಭಿಯಾನ ಇಂದು ಅಂತ್ಯಗೊಳ್ಳಲಿದೆ. ಇದಾದ ಬಳಿಕ ದ್ವಿತೀಯ ಕ್ವಾಲಿಫೈಯರ್ ಪಂದ್ಯ ನಡೆಯಲಿದೆ. ಈ ಮ್ಯಾಚ್ನಲ್ಲಿ ಗೆಲ್ಲುವ ತಂಡ ಫೈನಲ್ಗೇರಲಿದೆ.
ಹೀಗೆ ಯಾರೇ ಬಂದರೂ ಈ ಬಾರಿ ಮತ್ತೊಮ್ಮೆ ಚಾಂಪಿಯನ್ ಪಟ್ಟಕ್ಕೇರುವ ರಣ ಉತ್ಸಾಹದಲ್ಲಿದೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ. ಇದಕ್ಕೆ ಕೇವಲ ತಂಡದ ಪ್ರಸ್ತುತ ಫಾರ್ಮ್ ಮಾತ್ರವಲ್ಲ, ಕಳೆದ 8 ಸೀಸನ್‌ಗಳ ಐಪಿಎಲ್ ಇತಿಹಾಸವೂ ಬೆನ್ನಿಗಿದೆ.
ಅಂದರೆ ಕಳೆದ 8 ವರ್ಷಗಳ ಐಪಿಎಲ್ ಪ್ಲೇಆಫ್ ಇತಿಹಾಸವನ್ನು ಗಮನಿಸಿದರೆ, ಕ್ವಾಲಿಫೈಯರ್-1 ಪಂದ್ಯದಲ್ಲಿ ಗೆದ್ದ ತಂಡವೇ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಬಾರಿ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಗೆದ್ದಿರುವುದು ಆರ್ಸಿಬಿ. ಹೀಗಾಗಿಯೇ ಈ ಸಲ ಕೂಡ ಕಪ್ ನಮ್ದೇ ಎನ್ನುತ್ತಿದ್ದಾರೆ ಆರ್ಸಿಬಿ ಅಭಿಮಾನಿಗಳು.
ಇದನ್ನೂ ಓದಿ: Rajat Patidar: ಒಂದು ಪರೀಕ್ಷೆ ನಡೆಸಬೇಕಿತ್ತು, ಅದಕ್ಕಾಗಿ ಆತನನ್ನು ಕಣಕ್ಕಿಳಿಸಿದೆವು!
2018 ರಿಂದ 2025 ರವರೆಗೆ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಗೆದ್ದ ತಂಡಗಳೇ ಐಪಿಎಲ್ನಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಬಾರಿ ಮೊದಲ ಕ್ವಾಲಿಫೈಯರ್ ಮ್ಯಾಚ್ ಗೆದ್ದಿರುವುದು ರಾಯಲ್ ಚಾಲೆಂಜರ್ಸ್ ಬೆಂಗಳೂರು. ಹೀಗಾಗಿ ಈ ಸಲನೂ ಕಪ್ ನಮ್ದೇ ಎನ್ನಬಹುದು.
Published On - 12:57 pm, Wed, 27 May 26