Bhuvneshwar Kumar: ಭುವನೇಶ್ವರ್ ಕುಮಾರ್ ಆಯ್ಕೆ ಯಾಕೆ? ಟೀಮ್ ಇಂಡಿಯಾ ಮಾಜಿ ಆಟಗಾರನ ಪ್ರಶ್ನೆ

| Updated By: ಝಾಹಿರ್ ಯೂಸುಫ್

Updated on: Jan 27, 2022 | 7:19 PM

ಭಾರತ ಟಿ20 ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯ ಕುಮಾರ್ ಯಾದವ್, ರಿಷಬ್ ಪಂತ್ (ವಿಕೆಟ್ ಕೀಪರ್), ವೆಂಕಟೇಶ್ ಅಯ್ಯರ್, ದೀಪಕ್ ಚಹಾರ್, ಶಾರ್ದೂಲ್ ಠಾಕೂರ್

Bhuvneshwar Kumar: ಭುವನೇಶ್ವರ್ ಕುಮಾರ್ ಆಯ್ಕೆ ಯಾಕೆ? ಟೀಮ್ ಇಂಡಿಯಾ ಮಾಜಿ ಆಟಗಾರನ ಪ್ರಶ್ನೆ
Bhuvneshwar Kumar
Follow us on

ವೆಸ್ಟ್ ಇಂಡೀಸ್ ವಿರುದ್ದ ಸರಣಿಗಾಗಿ ಟೀಮ್ ಇಂಡಿಯಾವನ್ನು ಘೋಷಿಸಲಾಗಿದೆ. ಅನುಭವಿ ಆಟಗಾರರೊಂದಿಗೆ ತಂಡದಲ್ಲಿ ಈ ಬಾರಿ ಕೆಲ ಯುವ ಆಟಗಾರರು ಕೂಡ ಸ್ಥಾನ ಪಡೆದಿದ್ದಾರೆ. ಆದರೆ ದಕ್ಷಿಣ ಆಫ್ರಿಕಾ ಸರಣಿಯಲ್ಲಿ ಸಂಪೂರ್ಣ ವಿಫಲರಾಗಿದ್ದ ಭುವನೇಶ್ವರ ಕುಮಾರ್ ಅವರಿಗೆ ಈ ಬಾರಿ ಕೂಡ ಆಯ್ಕೆ ಸಮಿತಿ ಮಣೆ ಹಾಕಿ ಅಚ್ಚರಿ ಮೂಡಿಸಿದೆ. ಇದೀಗ ಭುವಿ ಆಯ್ಕೆ ಬಗ್ಗೆ ಟೀಮ್ ಇಂಡಿಯಾದ ಮಾಜಿ ಆಟಗಾರ ಮದನ್ ಲಾಲ್ ಆಯ್ಕೆ ಸಮಿತಿಯನ್ನು ಪ್ರಶ್ನಿಸಿದ್ದಾರೆ.

ಟೀಮ್ ಇಂಡಿಯಾ ಆಯ್ಕೆ ಸಮಿತಿ ಭುವನೇಶ್ವರ್ ಕುಮಾರ್ ಅವರನ್ನು ಏಕದಿನ ತಂಡದಿಂದ ಕೈಬಿಟ್ಟು ಸರಿಯಾದ ನಿರ್ಧಾರ ತೆಗೆದುಕೊಂಡಿದ್ದಾರೆ. ಆದರೆ ಅವರನ್ನು ಟಿ20 ತಂಡದಲ್ಲಿ ಯಾಕೆ ಆಯ್ಕೆ ಮಾಡಿದ್ದಾರೆ ಎಂಬುದೇ ಅಚ್ಚರಿ. ಒಂದು ತಂಡದಲ್ಲಿ ಆಯ್ಕೆ ಮಾಡದಿದ್ದರೆ ಅವರ ಪ್ರದರ್ಶನ ಕಳಪೆ ಎಂದು ಪರಿಗಣಿಸಿದರೆ, ಅವರನ್ನು ಮತ್ತೊಂದು ತಂಡಕ್ಕೆ ಯಾಕಾಗಿ ಆಯ್ಕೆ ಮಾಡಲಾಗಿದೆ ಎಂದು ಮದನ್ ಲಾಲ್ ಪ್ರಶ್ನಿಸಿದ್ದಾರೆ.

ದಕ್ಷಿಣ ಆಫ್ರಿಕಾ ವಿರುದ್ದದ ಸರಣಿಯಲ್ಲಿ ಭುವನೇಶ್ವರ್ ಕುಮಾರ್ ಎರಡು ಪಂದ್ಯಗಳಲ್ಲಿ 7.27 ಎಕಾನಮಿ ರೇಟ್​ನಲ್ಲಿ 128 ರನ್‌ ನೀಡಿದ್ದರು. ಇದಾಗ್ಯೂ ಅವರು ಒಂದೇ ಒಂದು ವಿಕೆಟ್ ಪಡೆದಿರಲಿಲ್ಲ. ಹೀಗಾಗಿ ಅವರನ್ನು 3ನೇ ಏಕದಿನ ಪಂದ್ಯದಿಂದ ಕೈಬಿಡಲಾಯಿತು. ಇದಕ್ಕೂ ಮುನ್ನ ಶ್ರೀಲಂಕಾ ವಿರುದ್ದ ಸರಣಿಯಲ್ಲೂ ಅವರು ಪರಿಣಾಮಕಾರಿಯಾಗಿರಲಿಲ್ಲ. ಎರಡು ಪಂದ್ಯಗಳಲ್ಲಿ, ಅವರು ಮೂರು ವಿಕೆಟ್​ಗಳನ್ನು ಪಡೆದರೂ 6.15 ರ ಎಕಾನಮಿ ದರದಲ್ಲಿ ರನ್​ ಬಿಟ್ಟು ಕೊಟ್ಟಿದ್ದರು.

ಇದಾಗ್ಯೂ ಭುವಿ ಅವರಿಗೆ ಅವಕಾಶ ನೀಡುತ್ತಿರುವ ಬಗ್ಗೆ ಮದನ್ ಲಾಲ್ ಆಯ್ಕೆ ಸಮಿತಿಯನ್ನು ಪ್ರಶ್ನಿಸಿದ್ದಾರೆ. ನನ್ನ ಪ್ರಕಾರ ಭುವನೇಶ್ವರ್ ಕುಮಾರ್ ಅವರನ್ನು ಆಯ್ಕೆ ಮಾಡುವ ಬದಲು, ಅತ್ಯುತ್ತಮ ಪ್ರದರ್ಶನ ನೀಡಿದ ಅವೇಶ್ ಖಾನ್ ಅವರಂತಹ ಯುವ ಬೌಲರ್​ಗಳನ್ನು ಬೆಂಬಲಿಸುವುದು ಉತ್ತಮ ಎಂದು ಮದನ್ ಲಾಲ್ ಹೇಳಿದ್ದಾರೆ.

ಅವೇಶ್ ಖಾನ್ ಉತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ. ಅತ್ಯಂತ ಪ್ರತಿಭಾವಂತ ಯುವ ಆಟಗಾರ. ಇದಾಗ್ಯೂ ಇಂತಹ ಆಟಗಾರರನ್ನು ದಕ್ಷಿಣ ಆಫ್ರಿಕಾ ಸರಣಿಯಿಂದ ಹೊರಗಿಡಲಾಗಿತ್ತು. ಇದೀಗ ಅವೇಶ್ ಖಾನ್ ಅವರನ್ನು ಆಯ್ಕೆ ಮಾಡಿರುವುದು ಉತ್ತಮ ನಿರ್ಧಾರ ಎಂದು ಮದನ್ ಲಾಲ್ ಹೇಳಿದ್ದಾರೆ.

ಭಾರತ ಟಿ20 ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯ ಕುಮಾರ್ ಯಾದವ್, ರಿಷಬ್ ಪಂತ್ (ವಿಕೆಟ್ ಕೀಪರ್), ವೆಂಕಟೇಶ್ ಅಯ್ಯರ್, ದೀಪಕ್ ಚಹಾರ್, ಶಾರ್ದೂಲ್ ಠಾಕೂರ್, ರವಿ ಬಿಷ್ಣೋಯ್, ಅಕ್ಷರ್ ಪಟೇಲ್, ಯುಜುವೇಂದ್ರ ಚಹಾಲ್, ವಾಷಿಂಗ್ಟನ್ ಸುಂದರ್, ಮೊಹಮ್ಮದ್ ಸಿರಾಜ್, ಭುವನೇಶ್ವರ್ ಕುಮಾರ್, ಅವೇಶ್ ಖಾನ್, ಹರ್ಷಲ್ ಪಟೇಲ್

ಭಾರತ ಏಕದಿನ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ರುತುರಾಜ್ ಗಾಯಕ್ವಾಡ್, ಶಿಖರ್ ಧವನ್, ವಿರಾಟ್ ಕೊಹ್ಲಿ, ಸೂರ್ಯ ಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದೀಪಕ್ ಚಾಹರ್, ಶಾರ್ದೂಲ್ ಠಾಕೂರ್, ಯುಜುವೇಂದ್ರ ಚಾಹಲ್, ಕುಲ್ದೀಪ್ ಯಾದವ್ , ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಅವೇಶ್ ಖಾನ್

ಇದನ್ನೂ ಓದಿ:  IND vs WI: ದಕ್ಷಿಣ ಆಫ್ರಿಕಾ ವಿರುದ್ದದ ಸರಣಿಯಲ್ಲಿದ್ದ 5 ಆಟಗಾರರು ಟೀಮ್ ಇಂಡಿಯಾದಿಂದ ಔಟ್..!

ಇದನ್ನೂ ಓದಿ: ICC ODI Rankings: ಐಸಿಸಿ ಏಕದಿನ ರ‍್ಯಾಕಿಂಗ್ ಪಟ್ಟಿ ಪ್ರಕಟ: ಕೊಹ್ಲಿ-ರೋಹಿತ್ ನಡುವೆ ಪೈಪೋಟಿ

ಇದನ್ನೂ ಓದಿ: IPL 2022 Auction: ಲಕ್ನೋ ತಂಡದ ಮೊದಲ ಟಾರ್ಗೆಟ್ ಯಾರು ಎಂಬುದನ್ನು ಬಹಿರಂಗಪಡಿಸಿದ ರಾಹುಲ್

(Why is Bhuvneshwar Kumar in T20 team? Madan Lal raises question)