IPL 2022: ಕ್ರಿಸ್ ಗೇಲ್ ಐಪಿಎಲ್​ನಿಂದ ಹಿಂದೆ ಸರಿಯಲು ಇದುವೇ ಕಾರಣ

IPL 2022 Mega Auction: 2018 ರ ಮೆಗಾ ಹರಾಜಿನಲ್ಲಿ ಯಾವುದೇ ತಂಡ ಖರೀದಿಸಲು ಮುಂದಾಗಿರಲಿಲ್ಲ. ಮೊದಲೆರಡು ಸುತ್ತಿನಲ್ಲಿ ಗೇಲ್ ಅವರಿಗಾಗಿ ಯಾವುದೇ ತಂಡ ಬಿಡ್ ಮಾಡಿರಲಿಲ್ಲ.

IPL 2022: ಕ್ರಿಸ್ ಗೇಲ್ ಐಪಿಎಲ್​ನಿಂದ ಹಿಂದೆ ಸರಿಯಲು ಇದುವೇ ಕಾರಣ
Chris Gayle
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jan 22, 2022 | 7:41 PM

ಐಪಿಎಲ್ ಸೀಸನ್ 15 ಮೆಗಾ ಹರಾಜಿಗೆ ವೇದಿಕೆ ಸಿದ್ದವಾಗಿದೆ. ಅದರಂತೆ ಫೆಬ್ರವರಿ 12 ಮತ್ತು 13 ರಂದು ಮೆಗಾ ಹರಾಜು ನಡೆಸಲು ಬಿಸಿಸಿಐ ಪ್ಲ್ಯಾನ್ ರೂಪಿಸಿದೆ. ಇದಕ್ಕಾಗಿ ಈಗಾಗಲೇ 1214 ಆಟಗಾರರು ನೋಂದಾಯಿಸಿಕೊಂಡಿದ್ದಾರೆ. ಆದರೆ ಈ ಪಟ್ಟಿಯಲ್ಲಿ ವೆಸ್ಟ್ ಇಂಡೀಸ್ ದಾಂಡಿಗ ಕ್ರಿಸ್ ಗೇಲ್ ಹೆಸರಿಲ್ಲ ಎಂಬುದು ವಿಶೇಷ. ಅಂದರೆ ಕಳೆದ 14 ಸೀಸನ್ ಐಪಿಎಲ್​ ಆಡಿದ್ದ ಗೇಲ್ ಇದೇ ಮೊದಲ ಬಾರಿಗೆ ಐಪಿಎಲ್​ನಿಂದ ಹಿಂದೆ ಸರಿದಿದ್ದಾರೆ. ಕಳೆದ ಸೀಸನ್​ನಲ್ಲಿ ಪಂಜಾಬ್ ಕಿಂಗ್ಸ್ ಪರ ಆಡಿದ್ದ ಗೇಲ್ ಈ ಬಾರಿ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿತ್ತು. ಅದರಲ್ಲೂ ಈ ಬಾರಿ 10 ತಂಡಗಳಿರುವ ಕಾರಣ ಕ್ರಿಸ್ ಗೇಲ್ ಅವರು ಕೂಡ ಹೆಸರು ನೋಂದಣಿ ಮಾಡಿಕೊಳ್ಳಲಿದ್ದಾರೆ ಎಂದು ಹೇಳಲಾಗಿತ್ತು.

ಆದರೀಗ ಮೆಗಾ ಹರಾಜು ಪಟ್ಟಿ ಹೊರಬೀಳುತ್ತಿದ್ದಂತೆ ಕ್ರಿಸ್ ಗೇಲ್ ಹೊರಗುಳಿದಿರುವುದು ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದೆ. ಏಕೆಂದರೆ ಯೂನಿವರ್ಸ್ ಬಾಸ್ ಐಪಿಎಲ್ ಆರಂಭದಿಂದಲೂ ಸ್ಟಾರ್ ಆಗಿದ್ದರು. ಆರಂಭದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಪರ ಆಡಿದ್ದ ಗೇಲ್, ಆ ಬಳಿಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್‌ನ ಭಾಗವಾಗಿದ್ದರು. ಅಲ್ಲದೆ ಕಳೆದ ಸೀಸನ್​ ಐಪಿಎಲ್​ನಲ್ಲೂ ಪಂಜಾಬ್ ಕಿಂಗ್ಸ್ ಪರ ಆಡಿದ್ದರು.

ಆದರೆ ಕಳೆದೆರಡು ಸೀಸನ್​ಗಳಲ್ಲಿನ ಕ್ರಿಸ್ ಗೇಲ್ ಪ್ರದರ್ಶನ ಕಳಪೆಯಾಗಿತ್ತು. ಅದರಲ್ಲೂ 2020 ರಲ್ಲಿ ಪಂಜಾಬ್ ಕಿಂಗ್ಸ್ ತಂಡವು ಕ್ರಿಸ್ ಗೇಲ್ ಅವರನ್ನು 7 ಪಂದ್ಯಗಳಲ್ಲಿ ಬೆಂಚ್ ಕಾಯಿಸಿದ್ದರು. ಆದರೆ ಕೊನೆಯ 7 ಪಂದ್ಯಗಳಲ್ಲಿ ಅವಕಾಶ ಪಡೆದ ಗೇಲ್ ಅತ್ಯುತ್ತಮ ಬ್ಯಾಟಿಂಗ್ ಮೂಲಕ ಗಮನ ಸೆಳೆದಿದ್ದರು. ಇದಾಗ್ಯೂ 2021 ರಲ್ಲಿ 10 ಪಂದ್ಯಗಳನ್ನಾಡಿದ್ದ ಗೇಲ್ ಕಲೆಹಾಕಿದ್ದು ಕೇವಲ 193 ರನ್ ಮಾತ್ರ.

ಅತ್ತ 2018 ರ ಮೆಗಾ ಹರಾಜಿನಲ್ಲಿ ಯಾವುದೇ ತಂಡ ಖರೀದಿಸಲು ಮುಂದಾಗಿರಲಿಲ್ಲ. ಮೊದಲೆರಡು ಸುತ್ತಿನಲ್ಲಿ ಗೇಲ್ ಅವರಿಗಾಗಿ ಯಾವುದೇ ತಂಡ ಬಿಡ್ ಮಾಡಿರಲಿಲ್ಲ. ಇದಾಗ್ಯೂ ಅಂತಿಮ ಸುತ್ತಿನಲ್ಲಿ ಗೇಲ್ ಅವರನ್ನು ಮೂಲಬೆಲೆಗೆ ಅಂದರೆ ಕೇವಲ 2 ಕೋಟಿಗೆ ಪಂಜಾಬ್ ಕಿಂಗ್ಸ್​ ಖರೀದಿಸಿತು. ಇದೀಗ ಮತ್ತೆ ಐಪಿಎಲ್ ಮೆಗಾ ಹರಾಜು ನಡೆಯುತ್ತಿದೆ. ಕಳೆದ ಎರಡು ಸೀಸನ್​ ಐಪಿಎಲ್​ನಲ್ಲಿ ವಿಫಲರಾಗಿರುವ 42 ವರ್ಷದ ಗೇಲ್ ಅವರ ಖರೀದಿಗೆ ಐಪಿಎಲ್​ ಫ್ರಾಂಚೈಸಿಗಳು ಒಲವು ತೋರಿಸುವುದು ಅನುಮಾನ. ಇದೇ ಕಾರಣದಿಂದಾಗಿ ಕ್ರಿಸ್ ಗೇಲ್ ಐಪಿಎಲ್​ಗೆ ಹೆಸರು ನೀಡದಿರಲು ನಿರ್ಧರಿಸಿದ್ದಾರೆ. ಒಂದು ವೇಳೆ ಹೆಸರು ನೀಡಿ ಅನ್​ಸೋಲ್ಡ್ ಆದರೆ ಟಿ20 ಕ್ರಿಕೆಟ್​ನಲ್ಲಿ ರಾಜನಂತೆ ಮೆರೆದ ಆಟಗಾರನಿಗೆ ಅದಕ್ಕಿಂತ ಅವಮಾನ ಮತ್ತೊಂದಿಲ್ಲ. ಹೀಗಾಗಿ ಹರಾಜಿನಲ್ಲಿ ಕಾಣಿಸಿಕೊಳ್ಳದಿರಲು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ. ಇದಾಗ್ಯೂ ಕ್ರಿಸ್ ಗೇಲ್ ಕ್ರಿಕೆಟ್​ನಿಂದ ನಿವೃತ್ತಿ ಘೋಷಿಸಿಲ್ಲ. ಟಿ10 ಲೀಗ್ ಹಾಗೂ ಇತರೆ ಲೀಗ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗಿದೆ.

ಐಪಿಎಲ್​ನಲ್ಲಿ ಕೆಕೆಆರ್, ಆರ್​ಸಿಬಿ ಹಾಗೂ ಪಂಜಾಬ್ ಕಿಂಗ್ ಪರ ಆಡಿರುವ ಗೇಲ್ 39.72 ರ ಸರಾಸರಿಯಲ್ಲಿ ಒಟ್ಟು 4965 ರನ್​ಗಳನ್ನು ಕಲೆಹಾಕಿದ್ದಾರೆ. ಈ ವೇಳೆ 6 ಶತಕಗಳನ್ನು ಹಾಗೂ 31 ಅರ್ಧ ಶತಕಗಳನ್ನು ಬಾರಿಸಿದ್ದಾರೆ. ಇನ್ನು 357 ಸಿಕ್ಸರ್‌ ಸಿಡಿಸಿ ಇಂಡಿಯನ್ ಪ್ರೀಮಿಯರ್ ಲೀಗ್‌ನ ಇತಿಹಾಸದಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಆಟಗಾರ ಎನಿಸಿಕೊಂಡಿದ್ದಾರೆ.

ಇದನ್ನೂ ಓದಿ: ICC Mens ODI Team: ಐಸಿಸಿ ಏಕದಿನ ತಂಡ ಪ್ರಕಟ: ಟೀಮ್ ಇಂಡಿಯಾದ ಆಟಗಾರರಿಗಿಲ್ಲ ಸ್ಥಾನ

ಇದನ್ನೂ ಓದಿ: IPL 2022: ಹೊಸ ಎರಡು ತಂಡಗಳು ಆಯ್ಕೆ ಮಾಡಿದ 6 ಆಟಗಾರರು ಇವರೇ..!

(Why is Chris Gayle not part of IPL 2022 mega auction?)

ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ