AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KL Rahul: ರಾಹುಲ್ ಪಾಲಿಗೆ ರಾಹುಕಾಲ: ಉಪನಾಯಕತ್ವ ಕೈ ತಪ್ಪಿದ್ದೇಕೆ?

KL Rahul: ಕೆಎಲ್ ರಾಹುಲ್ ಭಾರತ ತಂಡವನ್ನು 12 ಏಕದಿನ ಪಂದ್ಯಗಳಲ್ಲಿ ಮುನ್ನಡೆಸಿದ್ದಾರೆ. ಈ ವೇಳೆ ಟೀಮ್ ಇಂಡಿಯಾ 8 ಮ್ಯಾಚ್​ಗಳಲ್ಲಿ ಜಯ ಸಾಧಿಸಿದೆ. ಅದರಲ್ಲೂ ಪ್ರಮುಖ ಆಟಗಾರರ ಅನುಪಸ್ಥಿತಿಯಲ್ಲಿ ರಾಹುಲ್ ಮುಂದಾಳತ್ವದಲ್ಲಿ ಭಾರತ ತಂಡ ಸೌತ್ ಆಫ್ರಿಕಾ ವಿರುದ್ಧ ಸರಣಿ ಜಯಿಸಿತ್ತು. ಈ ಮೂಲಕ ಕೆಎಲ್​ಆರ್ ತಮ್ಮ ನಾಯಕತ್ವದ ಸಾಮರ್ಥ್ಯವನ್ನು ತೆರೆಟ್ಟಿದ್ದರು. ಆದರೀಗ ನಾಯಕತ್ವದ ನಿರೀಕ್ಷೆಯಲ್ಲಿದ್ದ ರಾಹುಲ್​ಗೆ ಉಪನಾಯಕತ್ವ ಕೂಡ ಕೈ ತಪ್ಪಿದೆ.

KL Rahul: ರಾಹುಲ್ ಪಾಲಿಗೆ ರಾಹುಕಾಲ: ಉಪನಾಯಕತ್ವ ಕೈ ತಪ್ಪಿದ್ದೇಕೆ?
KL Rahul
ಝಾಹಿರ್ ಯೂಸುಫ್
|

Updated on:Jul 20, 2024 | 7:25 AM

Share

ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಿಂದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಹೊರಗುಳಿದರೆ ಕ್ಯಾಪ್ಟನ್ ಯಾರು ಎಂಬ ಪ್ರಶ್ನೆಗೆ ಕೇಳಿ ಬಂದಿದ್ದ ಒಂದೇ ಉತ್ತರ, ಕನ್ನಡಿಗ ಕೆಎಲ್ ರಾಹುಲ್. ಆದರೆ ಲಂಕಾ ವಿರುದ್ಧದ ಸರಣಿಗೆ ರೋಹಿತ್ ಬಂದರು, ಸಹಜವಾಗಿಯೇ ನಾಯಕತ್ವ ಅವರ ಪಾಲಾಯಿತು. ಇತ್ತ ಕೆಎಲ್​ಆರ್ ಪಾಲಿಗೆ ಉಪನಾಯಕತ್ವವು ಕೈತಪ್ಪಿತು. ಶ್ರೀಲಂಕಾ ವಿರುದ್ಧದ ಏಕದಿನ ಸರಣಿಗೆ ರೋಹಿತ್ ಶರ್ಮಾ ಅವರನ್ನು ನಾಯಕನಾಗಿ ಮುಂದುವರೆಸಿದರೆ, ಉಪನಾಯಕನ ಪಟ್ಟ ಶುಭ್​ಮನ್​ ಗಿಲ್​ಗೆ ನೀಡಲಾಗಿದೆ.

ರಾಹುಲ್ ಪಾಲಿಗೆ ರಾಹುಕಾಲ:

ಕೆಎಲ್ ರಾಹುಲ್ ಪಾಲಿಗೆ ರಾಹುಕಾಲ ಆವರಿಸಿರುವುದು ಸ್ಪಷ್ಟ. ಏಕೆಂದರೆ ಭಾರತ ಟಿ20 ತಂಡದ ಖಾಯಂ ಸದಸ್ಯರಾಗಿದ್ದ ಕೆಎಲ್​ಆರ್​ ಈ ಬಾರಿಯ ಟಿ20 ವಿಶ್ವಕಪ್​ಗೂ ಮುನ್ನ ತಂಡದಿಂದ ಹೊರಬಿದ್ದಿದ್ದರು. ಪರಿಣಾಮ ರಾಹುಲ್ ಪಾಲಿಗೆ ವಿಶ್ವಕಪ್ ಎಂಬುದು ಕನಸಾಗಿಯೇ ಉಳಿಯಿತು.

ಇದಾಗ್ಯೂ ಏಕದಿನ ವಿಶ್ವಕಪ್​ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದರಿಂದ ಉಪನಾಯಕತ್ವದ ನಿರೀಕ್ಷೆಯಲ್ಲಿದ್ದರು. ಆದರೆ ಈ ನಿರೀಕ್ಷೆಗಳೆಲ್ಲವೂ ಹುಸಿಯಾಗಿದೆ. ತಂಡಕ್ಕೆ ಕೇವಲ ಆಟಗಾರನಾಗಿ ಆಯ್ಕೆಯಾಗಿದ್ದಾರೆ. ಅದು ಕೂಡ 2ನೇ ವಿಕೆಟ್ ಕೀಪರ್ ಆಗಿ ಎಂಬುದು ಇಲ್ಲಿ ಉಲ್ಲೇಖಾರ್ಹ.

ನಾಳೆ ಸಂಜು ಸ್ಯಾಮ್ಸನ್, ಇಶಾನ್ ಕಿಶನ್ ಅಥವಾ ರುತುರಾಜ್ ಗಾಯಕ್ವಾಡ್ ವಿಕೆಟ್ ಕೀಪರ್ ಆಗಿ ಎಂಟ್ರಿ ಕೊಟ್ಟರೆ ರಾಹುಲ್ ತಲೆದಂಡವಾಗುವುದು ನಿಶ್ಚಿತ. ಇದೇ ಕಾರಣಕ್ಕೆ ಅವರಿಗೆ ಉಪನಾಯಕತ್ವ ನೀಡಲಾಗಿಲ್ಲ ಎಂಬ ಮಾತುಗಳು ಕೇಳಿ ಬರುತ್ತಿದೆ.

ಅದರಲ್ಲೂ ಗಾಯದ ಸಮಸ್ಯೆ ಕೆಎಲ್ ರಾಹುಲ್ ಪಾಲಿಗೆ ಹಿನ್ನಡೆಯಾಗುತ್ತಿರುವುದು ಸುಳ್ಳಲ್ಲ. ಏಕೆಂದರೆ ಕಳೆದ 10 ವರ್ಷಗಳಲ್ಲಿ ಕೆಎಲ್​ಆರ್​ ಟೀಮ್ ಇಂಡಿಯಾ ಪರ ಆಡಿರುವುದು 50 ಟೆಸ್ಟ್, 75 ಏಕದಿನ ಮತ್ತು 72 ಟಿ20 ಪಂದ್ಯಗಳನ್ನು ಮಾತ್ರ ಎಂದರೆ ನಂಬಲೇಬೇಕು.

ಭಾರತ ತಂಡದ ಖಾಯಂ ಸದಸ್ಯರಾದ ಬಳಿಕವೂ ರಾಹುಲ್ ಸತತ ಸರಣಿಗಳನ್ನು ಆಡಲು ಸಾಧ್ಯವಾಗಿಲ್ಲ. ಒಂದು ಸರಣಿಯಿಂದ ಮತ್ತೊಂದು ಸರಣಿಗೆ ಹೋಗುವಷ್ಟರಲ್ಲಿ ಫಿಟ್​ನೆಸ್ ಸಮಸ್ಯೆಗೆ ಒಳಗಾಗಿರುತ್ತಾರೆ. ಇದುವೇ ಕೆಎಲ್ ರಾಹುಲ್ ಪಾಲಿಗೆ ಈಗ ಮುಳುವಾಗಿ ಪರಿಣಮಿಸಿದೆ. ಏಕೆಂದರೆ ಚಾಂಪಿಯನ್ಸ್ ಟ್ರೋಫಿ ಬಳಿಕ ಏಕದಿನ ತಂಡದ ನಾಯಕತ್ವದಿಂದ ರೋಹಿತ್ ಶರ್ಮಾ ಕೆಳಗಿಳಿಯುವುದು ಬಹುತೇಕ ಖಚಿತ.

ಹೀಗಾಗಿಯೇ 32 ವರ್ಷದ ಅನುಭವಿ ಆಟಗಾರ ಕೆಎಲ್ ರಾಹುಲ್ ಪಾಲಿಗೆ ಮುಂದಿನ ವರ್ಷ ನಾಯಕತ್ವ ಒಲಿಯುವುದು ಖಚಿತ ಎನ್ನಲಾಗಿತ್ತು. ಆದರೀಗ ಗಾಯದ ಸಮಸ್ಯೆಯನ್ನೇ ಮುಂದಿಟ್ಟು ಆಯ್ಕೆ ಸಮಿತಿ ಅವರಿಗೆ ಉಪನಾಯಕನ ಪಟ್ಟ ನೀಡಲು ಹಿಂದೇಟು ಹಾಕಿದೆ ಎಂಬ ಮಾತುಗಳು ಕೇಳಿ ಬರುತ್ತಿದೆ.

ಅಂದರೆ ಕೆಎಲ್ ರಾಹುಲ್ 2027ರ ಏಕದಿನ ವಿಶ್ವಕಪ್ ಆಡುವ ಬಗ್ಗೆ ಸ್ಪಷ್ಟತೆಯಿಲ್ಲ. ಹೀಗಾಗಿಯೇ ಯುವ ಆಟಗಾರ ಶುಭ್​ಮನ್ ಗಿಲ್​ ಅವರನ್ನು ವೈಸ್ ಕ್ಯಾಪ್ಟನ್ ಆಗಿ ಆಯ್ಕೆ ಮಾಡಲಾಗಿದೆ. ಅಲ್ಲದೆ ಗಿಲ್ ಅವರನ್ನು ರೋಹಿತ್ ಶರ್ಮಾ ಅವರ ಉತ್ತಾರಾಧಿಕಾರಿ ಎಂದು ಬಿಂಬಿಸಲಾಗುತ್ತಿದೆ.

ಇದನ್ನೂ ಓದಿ: ಚಾಂಪಿಯನ್ಸ್​ ಟ್ರೋಫಿಯಿಂದ ಟೀಮ್ ಇಂಡಿಯಾ ಹಿಂದೆ ಸರಿದರೆ, ಯಾವ ತಂಡಕ್ಕೆ ಚಾನ್ಸ್?

ಇತ್ತ ಟಿ20 ತಂಡದಿಂದ ಗೇಟ್ ಪಾಸ್ ಪಡೆದಿರುವ ಕೆಎಲ್ ರಾಹುಲ್ ತಂಡದಲ್ಲಿ ತಮ್ಮ ಸ್ಥಾನವನ್ನು ಉಳಿಸಿಕೊಳ್ಳಬೇಕಿದ್ದರೆ  ಭರ್ಜರಿ ಪ್ರದರ್ಶನ ನೀಡಲೇಬೇಕು. ಅದರಲ್ಲೂ ರಿಷಭ್ ಪಂತ್ ಅವರನ್ನು ಹಿಂದಿಕ್ಕಿ ವಿಕೆಟ್ ಕೀಪರ್ ಬ್ಯಾಟರ್ ಆಗಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಳ್ಳಬೇಕಾದ ಅನಿವಾರ್ಯತೆ. ಇಲ್ಲದಿದ್ದರೆ, ಮುಂಬರುವ ಸರಣಿಗಳಲ್ಲಿ ಕೆಎಲ್​ಆರ್​ ಸ್ಥಾನ ಇಶಾನ್ ಕಿಶನ್, ರುತುರಾಜ್ ಗಾಯಕ್ವಾಡ್ ಅಥವಾ ಸಂಜು ಸ್ಯಾಮ್ಸನ್ ಪಾಲಾಗುವುದರಲ್ಲಿ ಅನುಮಾನವೇ ಇಲ್ಲ.

Published On - 7:25 am, Sat, 20 July 24

Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಎಲೆಕ್ಟ್ರಿಕ್ ಕಾರಿನ ಭೀಕರ ಅಪಘಾತದ ವಿಡಿಯೋ ವೈರಲ್
ಎಲೆಕ್ಟ್ರಿಕ್ ಕಾರಿನ ಭೀಕರ ಅಪಘಾತದ ವಿಡಿಯೋ ವೈರಲ್
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ