T20 World Cup 2021: ಸೂರ್ಯಕುಮಾರ್ ಯಾದವ್ ಕಣಕ್ಕಿಳಿಯದಿರಲು ಇದುವೇ ಅಸಲಿ ಕಾರಣ

Why is Suryakumar Yadav not played: ಇಶಾನ್ ಕಿಶನ್, ರೋಹಿತ್ ಶರ್ಮಾ, ಕೆಎಲ್ ರಾಹುಲ್, ವಿರಾಟ್ ಕೊಹ್ಲಿ(ನಾಯಕ), ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ

T20 World Cup 2021: ಸೂರ್ಯಕುಮಾರ್ ಯಾದವ್ ಕಣಕ್ಕಿಳಿಯದಿರಲು ಇದುವೇ ಅಸಲಿ ಕಾರಣ
Suryakumar Yadav
Follow us
TV9 Web
| Updated By: ಝಾಹಿರ್ ಯೂಸುಫ್

Updated on: Oct 31, 2021 | 9:06 PM

T20 World Cup 2021:  ದುಬೈನಲ್ಲಿ ನಡೆಯುತ್ತಿರುವ (India vs New Zealand) ನ್ಯೂಜಿಲೆಂಡ್ ವಿರುದ್ದದ ಪಂದ್ಯದಲ್ಲಿ ಟೀಮ್ ಇಂಡಿಯಾದಲ್ಲಿ ಎರಡು ಪ್ರಮುಖ ಬದಲಾವಣೆ ಮಾಡಲಾಗಿತ್ತು. ಅದರಲ್ಲೂ ಮಧ್ಯಮ ಕ್ರಮಾಂಕದಲ್ಲಿ ಮಾಡಲಾದ ಬದಲಾವಣೆಯಿಂದಾಗಿ ಆರಂಭಿಕರ ಸ್ಥಾನದಲ್ಲೂ ಪಲ್ಲಟ ಕಂಡು ಬಂತು. ಹೌದು, ಪ್ಲೇಯಿಂಗ್ ಇಲೆವೆನ್​ನಿಂದ ಸೂರ್ಯಕುಮಾರ್ ಯಾದವ್ (Suryakumar Yadav) ಹೊರಗಿಳಿದ ಪರಿಣಾಮ ಇಶಾನ್ ಕಿಶನ್ (Ishan Kishan) ಕಣಕ್ಕಿಳಿದಿದ್ದರು. ಇತ್ತ ಆರಂಭಿಕನಾಗಿ ರೋಹಿತ್ ಶರ್ಮಾ (Rohit Sharma) ಬದಲಿಗೆ ಇಶಾನ್ ಕಿಶನ್, ಕೆಎಲ್ ರಾಹುಲ್ ಜೊತೆ ಇನಿಂಗ್ಸ್​ ಆರಂಭಿಸಿದ್ದರು. ಆದರೆ ಸೂರ್ಯಕುಮಾರ್ ಯಾದವ್​ ಅವರನ್ನು ಟೀಮ್ ಇಂಡಿಯಾ ಪ್ಲೇಯಿಂಗ್​ ಇಲೆವೆನ್​ನಿಂದ ಕೈಬಿಡುವ ಇರಾದೆಯಲ್ಲಿ ಇರಲಿಲ್ಲ. ಅಂತಿಮ ಕ್ಷಣದಲ್ಲಿ ತಿಳಿದ ಅವರ ಅಲಭ್ಯತೆಯು ಟೀಮ್ ಇಂಡಿಯಾದ ಪ್ಲೇಯಿಂಗ್​ 11 ಮೇಲೆ ಪರಿಣಾಮ ಬೀರಿತು. ಅಷ್ಟಕ್ಕೂ ಸೂರ್ಯಕುಮಾರ್ ಯಾದವ್ ಕಣಕ್ಕಿಳಿಯಲಿದಿರಲು ಕಾರಣವೆಂದರೆ ಗಾಯದ ಸಮಸ್ಯೆ.

ಹೌದು, ಪಂದ್ಯದ ಆರಂಭಕ್ಕೂ ಮುನ್ನ ಸೂರ್ಯಕುಮಾರ್ ಯಾದವ್ ಕಣಕ್ಕಿಳಿಯಲು ಸಮರ್ಥರಾಗಿಲ್ಲ ಎಂಬುದು ತಿಳಿದು ಬಂದಿದೆ. ಬೆನ್ನು ನೋವಿನ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸೂರ್ಯಕುಮಾರ್ ಅವರಿಗೆ ವೈದ್ಯರು ವಿಶ್ರಾಂತಿ ಸೂಚಿಸಿದ್ದಾರೆ. ಹೀಗಾಗಿ ಅವರನ್ನು ತಂಡದಿಂದ ಕೈಬಿಡಲಾಗಿದೆ. ಬದಲಿಗೆ ಅವರ ಸ್ಥಾನದಲ್ಲಿ ಇಶಾನ್ ಕಿಶನ್ ಅವರನ್ನು ಆಯ್ಕೆ ಮಾಡಲಾಯಿತು. ಇತ್ತ ಆರಂಭಿಕರಾಗಿ ಮಿಂಚಿರುವ ಕಿಶನ್ ಅವರನ್ನು 5ನೇ ಕ್ರಮಾಂಕದಲ್ಲಿ ಆಡಿಸುವ ಬದಲಿಗೆ ಓಪನರ್ ಆಗಿ ಕಣಕ್ಕಿಳಿಸಲು ನಿರ್ಧರಿಸಲಾಯಿತು. ಅದರಂತೆ ರೋಹಿತ್ ಶರ್ಮಾ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದರು.

ಇದಾಗ್ಯೂ ಆರಂಭಿಕರಾಗಿ ಕಣಕ್ಕಿಳಿದ ಇಶಾನ್ ಕಿಶನ್ ನಿರಾಸೆ ಮೂಡಿಸಿದರು. 8 ಎಸೆತಗಳಲ್ಲಿ 4 ರನ್​ ಬಾರಿಸಿ ಟ್ರೆಂಟ್​ ಬೌಲ್ಟ್ ಎಸೆತದಲ್ಲಿ ಬೌಂಡರಿ ಲೈನ್​ನಲ್ಲಿ ಡೇರಿಲ್ ಮಿಚೆಲ್​ಗೆ ಕ್ಯಾಚ್ ನೀಡಿ ನಿರ್ಗಮಿಸಿದರು. ಇದಾಗ್ಯೂ 3ನೇ ಕ್ರಮಾಂಕದಲ್ಲಿ ಕ್ರೀಸ್​ಗೆ ಬಂದ ರೋಹಿತ್ ಶರ್ಮಾ, ಕೆಎಲ್ ರಾಹುಲ್ ಜೊತೆಗೂಡಿ ತಂಡದ ಮೊತ್ತವನ್ನು ಪವರ್​ಪ್ಲೇನಲ್ಲಿ 35 ಕ್ಕೆ ತಂದು ನಿಲ್ಲಿಸಿದ್ದರು.

ಉಭಯ ತಂಡಗಳು ಹೀಗಿವೆ: ಭಾರತ ತಂಡ: ಇಶಾನ್ ಕಿಶನ್, ರೋಹಿತ್ ಶರ್ಮಾ, ಕೆಎಲ್ ರಾಹುಲ್, ವಿರಾಟ್ ಕೊಹ್ಲಿ(ನಾಯಕ), ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ

ನ್ಯೂಜಿಲೆಂಡ್ ತಂಡ: ಮಾರ್ಟಿನ್ ಗಪ್ಟಿಲ್, ಡೇರಿಲ್ ಮಿಚೆಲ್, ಕೇನ್ ವಿಲಿಯಮ್ಸನ್ (ನಾಯಕ), ಜೇಮ್ಸ್ ನೀಶಮ್, ಡೆವೊನ್ ಕಾನ್ವೇ, ಗ್ಲೆನ್ ಫಿಲಿಪ್ಸ್, ಮಿಚೆಲ್ ಸ್ಯಾಂಟ್ನರ್, ಇಶ್ ಸೋಧಿ, ಆಡಮ್ ಮಿಲ್ನ್, ಟ್ರೆಂಟ್ ಬೌಲ್ಟ್, ಟಿಮ್ ಸೌಥಿ

ಇದನ್ನೂ ಓದಿ: IPL 2022: ನಾಲ್ವರು ಆಟಗಾರರಿಗೆ 42 ಕೋಟಿ ರೂ. ನಿಗದಿ: ಐಪಿಎಲ್ ಹೊಸ ರಿಟೈನ್ ನಿಯಮ

ಇದನ್ನೂ ಓದಿ: T20 World Cup 2021: ಸೆಮಿಫೈನಲ್ ಲೆಕ್ಕಾಚಾರ: ನ್ಯೂಜಿಲೆಂಡ್ ವಿರುದ್ದ ಟೀಮ್ ಇಂಡಿಯಾ ಗೆಲ್ಲಲೇಬೇಕು, ಯಾಕೆ ಗೊತ್ತಾ?

ಇದನ್ನೂ ಓದಿ: ICC T20 Batter Rankings: ನೂತನ ಟಿ20 ರ‍್ಯಾಂಕಿಂಗ್ ಪ್ರಕಟ: ಟೀಮ್ ಇಂಡಿಯಾದ ಇಬ್ಬರ ಸ್ಥಾನ ಕುಸಿತ

(Why is Suryakumar Yadav not playing today’s T20 World Cup 2021 match)