AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC Final 2023: ಡಬ್ಲ್ಯುಟಿಸಿ ಫೈನಲ್ ಪಂದ್ಯಗಳು ಇಂಗ್ಲೆಂಡ್‌ನಲ್ಲೇ ನಡೆಯುತ್ತಿರುವುದ್ಯಾಕೆ? ಇಲ್ಲಿದೆ ವಿವರ

WTC Final 2023: ವಾಸ್ತವವಾಗಿ ಮೊದಲ ಆವೃತ್ತಿಯ ಫೈನಲ್ ಪಂದ್ಯವೂ ಕೂಡ ಇದೇ ಇಂಗ್ಲೆಂಡ್​ನಲ್ಲಿ ನಡೆದಿತ್ತು. ಇದೀಗ 2ನೇ ಫೈನಲ್ ಕೂಡ ಇಲ್ಲೇ ನಡೆಯುತ್ತಿದೆ.

WTC Final 2023: ಡಬ್ಲ್ಯುಟಿಸಿ ಫೈನಲ್ ಪಂದ್ಯಗಳು ಇಂಗ್ಲೆಂಡ್‌ನಲ್ಲೇ ನಡೆಯುತ್ತಿರುವುದ್ಯಾಕೆ? ಇಲ್ಲಿದೆ ವಿವರ
ಡಬ್ಲ್ಯುಟಿಸಿ ಫೈನಲ್
ಪೃಥ್ವಿಶಂಕರ
|

Updated on:Jun 07, 2023 | 9:17 PM

Share

ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ (World Test Championship) ಎರಡನೇ ಆವೃತ್ತಿ ಮುಕ್ತಾಯಗೊಳ್ಳುತ್ತಿದ್ದು, ಇದರೊಂದಿಗೆ ವಿಶ್ವ ಕ್ರಿಕೆಟ್‌ಗೆ ಹೊಸ ಟೆಸ್ಟ್ ಚಾಂಪಿಯನ್‌ ದೊರೆಯಲಿದೆ. ಕಳೆದ ಆವೃತ್ತಿಯಲ್ಲಿ ಭಾರತ ಫೈನಲ್‌ನಲ್ಲಿ ಸೋತಿತ್ತು. ನ್ಯೂಜಿಲೆಂಡ್ ತಂಡವು ಭಾರತವನ್ನು ಸೋಲಿಸಿ ಮೊದಲ ಡಬ್ಲ್ಯುಟಿಸಿ ಪ್ರಶಸ್ತಿಯನ್ನು ಗೆದ್ದುಕೊಂಡಿತ್ತು. ಇದೀಗ ಭಾರತ, ಆಸ್ಟ್ರೇಲಿಯಾ (India and Australia) ವಿರುದ್ಧ ಸತತ ಎರಡನೇ ಬಾರಿಗೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಆಡುತ್ತಿದೆ. ಲಂಡನ್‌ನ ಓವಲ್‌ನಲ್ಲಿ ಪ್ರಶಸ್ತಿ ಸುತ್ತಿನ ಪಂದ್ಯ ನಡೆಯುತ್ತಿದೆ. ವಾಸ್ತವವಾಗಿ ಮೊದಲ ಆವೃತ್ತಿಯ ಫೈನಲ್ ಪಂದ್ಯವೂ ಕೂಡ ಇದೇ ಇಂಗ್ಲೆಂಡ್​ನಲ್ಲಿ ನಡೆದಿತ್ತು. ಇದೀಗ 2ನೇ ಫೈನಲ್ ಕೂಡ ಇಲ್ಲೇ ನಡೆಯುತ್ತಿದೆ. ಹಾಗಾದರೆ ಸತತ ಎರಡು ಫೈನಲ್ ಪಂದ್ಯಗಳು ಇಂಗ್ಲೆಂಡ್​ನಲ್ಲೇ ನಡೆಯುತ್ತಿರುವುದು ಏಕೆ ಎಂಬ ಪ್ರಶ್ನೆ ನಿಮ್ಮಲ್ಲಿ ಮೂಡಬಹುದು. ಅದಕ್ಕೆ ಉತ್ತರ ಇಲ್ಲಿದೆ.

ಕಳೆದ ಬಾರಿ ಭಾರತ ಮತ್ತು ನ್ಯೂಜಿಲೆಂಡ್ ನಡುವೆ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯ ನಡೆದಿದ್ದು ಕೂಡ ಇಂಗ್ಲೆಂಡ್‌ನ ಸೌತಾಂಪ್ಟನ್‌ನಲ್ಲಿರುವ ರೋಸ್ ಬೌಲ್ ಸ್ಟೇಡಿಯಂನಲ್ಲಿ ನಡೆದಿತ್ತು. ಮತ್ತು ಈ ಬಾರಿಯೂ ಡಬ್ಲ್ಯುಟಿಸಿಯ ಫೈನಲ್ ಪಂದ್ಯ ಕೂಡ ಇಂಗ್ಲೆಂಡ್‌ನ ಓವಲ್ ಮೈದಾನದಲ್ಲಿ ನಡೆಯುತ್ತಿದೆ.

WTC Final 2023: ಡಬ್ಲ್ಯುಟಿಸಿ ಫೈನಲ್​ನಲ್ಲಿ ಕೊಹ್ಲಿ ಬ್ಯಾಟ್​ನಿಂದ ಸೃಷ್ಟಿಯಾಗುವ 5 ದಾಖಲೆಗಳಿವು

ಇಂಗ್ಲೆಂಡ್‌ನಲ್ಲೇ ನಡೆಯುತ್ತಿರುವುದ್ಯಾಕೆ?

ಈಗ ಡಬ್ಲ್ಯುಟಿಸಿ ಫೈನಲ್ ಪಂದ್ಯಗಳನ್ನು ಇಂಗ್ಲೆಂಡ್‌ನಲ್ಲಿ ಮಾತ್ರ ಏಕೆ ಆಡಲಾಗುತ್ತಿದೆ ಎಂಬ ಪ್ರಶ್ನೆ ನಿಮ್ಮಲ್ಲಿ ಮೂಡಬಹುದು. ಇದಕ್ಕೆ ಕಾರಣವೂ ಇದ್ದು, WTC ಫೈನಲ್‌ನ ಮೊದಲ ಮೂರು ಆವೃತ್ತಿಗಳ ಫೈನಲ್‌ಗಳನ್ನು ಇಂಗ್ಲೆಂಡ್‌ನಲ್ಲಿ ಮಾತ್ರ ನಡೆಸಲು ಐಸಿಸಿ ನಿರ್ಧರಿಸಿರುವುದು ಇದಕ್ಕೆ ಒಂದು ಕಾರಣವಾಗಿದೆ. ಈ ಫೈನಲ್‌ಗಳಲ್ಲಿ ಒಂದನ್ನು 2021 ರಲ್ಲಿ ಆಡಲಾಗಿದೆ. ಈಗ ಇದು ಎರಡನೇ ಫೈನಲ್ ಪಂದ್ಯವಾಗಿದೆ. ಇದರ ನಂತರ 2025 ರಲ್ಲಿ ಡಬ್ಲ್ಯುಟಿಸಿಯ ಫೈನಲ್ ಪಂದ್ಯವನ್ನು ಕೂಡ ಇಂಗ್ಲೆಂಡ್‌ನಲ್ಲಿಯೇ ಆಡಲಾಗುತ್ತದೆ.

ಇಂಗ್ಲೆಂಡಿನಲ್ಲಿ ಟೆಸ್ಟ್ ಪಂದ್ಯಗಳಿಗೆ ಪ್ರೇಕ್ಷಕರ ಕೊರತೆ ಇಲ್ಲ

ಟೆಸ್ಟ್ ಆಡುವ ಪ್ರತಿಯೊಂದು ದೇಶದ ಜನರು ಇಲ್ಲಿ ವಾಸಿಸುತ್ತಿರುವುದು ಇಂಗ್ಲೆಂಡ್ ಅನ್ನು ಆಯ್ಕೆ ಮಾಡಲು ಇನ್ನೊಂದು ಕಾರಣ. ಇಂಗ್ಲೆಂಡ್ ಫೈನಲ್​ನಲ್ಲಿ ಆಡಲಿ, ಆಡದಿರಲಿ ಅಥವಾ ಫೈನಲ್​ನಲ್ಲಿ ಯಾವ ದೇಶ ಆಡಿದರೂ ಅದರ ಅಭಿಮಾನಿಗಳು ಪಂದ್ಯ ವೀಕ್ಷಿಸಲು ಕ್ರೀಡಾಂಗಣಕ್ಕೆ ಬರುತ್ತಾರೆ. ಮತ್ತೊಂದೆಡೆ, ಫೈನಲ್ ಪಂದ್ಯವನ್ನು ಬೇರೆ ದೇಶದಲ್ಲಿ ಆಡಿದರೆ, ಇತರ ದೇಶಗಳ ಕ್ರೀಡಾಂಗಣಗಳಿಗೆ ಕಡಿಮೆ ಪ್ರೇಕ್ಷಕರು ಬರುವ ಸಾಧ್ಯತೆಯಿದೆ. ಇದರಿಂದ ಐಸಿಸಿ ಬೊಕ್ಕಸಕ್ಕೆ ನಷ್ಟ ಉಂಟಾಗಲಿದೆ. ಹೀಗಾಗಿ ಐಸಿಸಿ ಈ ತೀರ್ಮಾನ ತೆಗೆದುಕೊಂಡಿದೆ.

ಇಂಗ್ಲೆಂಡಿಗರಿಗೆ ಟೆಸ್ಟ್ ಪಂದ್ಯವೆಂದರೆ ಬಲು ಅಚ್ಚುಮೆಚ್ಚು

ಟೆಸ್ಟ್ ಕ್ರಿಕೆಟ್ ಅನ್ನು ಇಂಗ್ಲೆಂಡ್ ಜನರು ತುಂಬಾ ಪ್ರೀತಿಸುತ್ತಾರೆ. ಯಾವುದೇ ತಂಡ ಇಂಗ್ಲೆಂಡ್ ಮೈದಾನದಲ್ಲಿ ಆಡಿದರೂ, ಆ ಪಂದ್ಯವನ್ನು ವೀಕ್ಷಿಸಲು ಜನರು ಮೈದಾನಕ್ಕೆ ಬರುತ್ತಾರೆ. ಇಂಗ್ಲೆಂಡ್ ಕ್ರಿಕೆಟ್ ತಂಡ ಆಡುತ್ತದೆಯೋ ಇಲ್ಲವೋ ಎಂಬುದು ಮುಖ್ಯವಲ್ಲ. ಇಂಗ್ಲೆಂಡಿನ ಕ್ರಿಕೆಟ್ ಪ್ರೇಮಿಗಳು ಟೆಸ್ಟ್ ಕ್ರಿಕೆಟ್ ಅನ್ನು ಬಹಳ ಆನಂದಿಸುತ್ತಾರೆ. ಟೆಸ್ಟ್ ಕ್ರಿಕೆಟ್ ಅನ್ನು ಇಂಗ್ಲೆಂಡ್ ಜನರು ಹೆಚ್ಚು ಗೌರವಿಸುತ್ತಾರೆ. ಈ ಎಲ್ಲಾ ಕಾರಣಗಳಿಗಾಗಿ ಇಂಗ್ಲೆಂಡ್ WTC ಫೈನಲ್ ಅನ್ನು ಆಯೋಜಿಸಲು ಇಂಗ್ಲೆಂಡ್ ಅನ್ನು ಸೂಕ್ತ ಸ್ಥಳವನ್ನಾಗಿ ಆಯ್ಕೆ ಮಾಡಿಕೊಂಡಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:15 pm, Wed, 7 June 23

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಪ್ರಶಾಂತ ಆನೆ ಬೆನ್ನಿಗೆ 750 ಕೆಜಿ ಚಿನ್ನದ ಅಂಬಾರಿ ಕಟ್ಟುವ ಪ್ರಕ್ರಿಯೆ ನೋಡಿ
ಪ್ರಶಾಂತ ಆನೆ ಬೆನ್ನಿಗೆ 750 ಕೆಜಿ ಚಿನ್ನದ ಅಂಬಾರಿ ಕಟ್ಟುವ ಪ್ರಕ್ರಿಯೆ ನೋಡಿ
ಮೈಸೂರು ದಸರಾ ಜಂಬೂ ಸವಾರಿ ಮೆರವಣಿಗೆಗೆ ಮೆರುಗು ನೀಡಿದ ಸ್ತಬ್ಧ ಚಿತ್ರಗಳು
ಮೈಸೂರು ದಸರಾ ಜಂಬೂ ಸವಾರಿ ಮೆರವಣಿಗೆಗೆ ಮೆರುಗು ನೀಡಿದ ಸ್ತಬ್ಧ ಚಿತ್ರಗಳು
ದಸರಾ ಹಾಗೂ ಮೈಸೂರಿನ ಬಗ್ಗೆ ರಮೇಶ್ ಮಾತು: ವಿಡಿಯೋ ನೋಡಿ
ದಸರಾ ಹಾಗೂ ಮೈಸೂರಿನ ಬಗ್ಗೆ ರಮೇಶ್ ಮಾತು: ವಿಡಿಯೋ ನೋಡಿ
ನನ್ನ ಬದುಕಿನಲ್ಲಿ ಇವತ್ತು ಮರೆಯಲಾಗದ ದಿನ: ಜನತೆಗೆ ಡಿಕೆಶಿ ಧನ್ಯವಾದ
ನನ್ನ ಬದುಕಿನಲ್ಲಿ ಇವತ್ತು ಮರೆಯಲಾಗದ ದಿನ: ಜನತೆಗೆ ಡಿಕೆಶಿ ಧನ್ಯವಾದ
ಅಗ್ನಿ ಅವಘಡ: 8ನೇ ಮಹಡಿಯಲ್ಲಿ ಹೊತ್ತಿಕೊಂಡ ದಸರಾ ಪೂಜೆ ವೇಳೆ ಹಚ್ಚಿದ್ದ ದೀಪ
ಅಗ್ನಿ ಅವಘಡ: 8ನೇ ಮಹಡಿಯಲ್ಲಿ ಹೊತ್ತಿಕೊಂಡ ದಸರಾ ಪೂಜೆ ವೇಳೆ ಹಚ್ಚಿದ್ದ ದೀಪ
ದಸರಾ ಸಂಭ್ರಮದಲ್ಲಿ ಭಾಗಿಯಾದ ರುಕ್ಮಿಣಿ ವಸಂತ್, ತಪಸ್ವಿನಿ ಪೂಣಚ್ಚ, ಸಪ್ತಮಿ
ದಸರಾ ಸಂಭ್ರಮದಲ್ಲಿ ಭಾಗಿಯಾದ ರುಕ್ಮಿಣಿ ವಸಂತ್, ತಪಸ್ವಿನಿ ಪೂಣಚ್ಚ, ಸಪ್ತಮಿ
ನಂದಿ ಧ್ವಜಕ್ಕೆ ಡಿಕೆಶಿ ಪೂಜೆ ಸಲ್ಲಿಕೆ:ಮೈಸೂರಿನಲ್ಲಿ ಮರುಕಳಿಸಿದ ಗತ ವೈಭವ
ನಂದಿ ಧ್ವಜಕ್ಕೆ ಡಿಕೆಶಿ ಪೂಜೆ ಸಲ್ಲಿಕೆ:ಮೈಸೂರಿನಲ್ಲಿ ಮರುಕಳಿಸಿದ ಗತ ವೈಭವ
ಮೊದಲ ಬಾರಿ ವಜ್ರಮುಷ್ಠಿ ಕಾಳಗ ರದ್ದು, ಮೈಸೂರಿನ ಜಟ್ಟಿ ಮಹೇಶ್ ರಿಯಾಕ್ಷನ್
ಮೊದಲ ಬಾರಿ ವಜ್ರಮುಷ್ಠಿ ಕಾಳಗ ರದ್ದು, ಮೈಸೂರಿನ ಜಟ್ಟಿ ಮಹೇಶ್ ರಿಯಾಕ್ಷನ್
ಸೌಜನ್ಯ ಪ್ರಕರಣ: ಇನ್ನೆರಡು ದಿನದಲ್ಲಿ ಅಪರಾಧ ಸ್ಥಳಕ್ಕೆ ಎಸ್​ಐಟಿ ಭೇಟಿ
ಸೌಜನ್ಯ ಪ್ರಕರಣ: ಇನ್ನೆರಡು ದಿನದಲ್ಲಿ ಅಪರಾಧ ಸ್ಥಳಕ್ಕೆ ಎಸ್​ಐಟಿ ಭೇಟಿ
Live: ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿ ನೇರಪ್ರಸಾರ
Live: ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿ ನೇರಪ್ರಸಾರ