AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ವಿರುದ್ಧದ ಸರಣಿಯಿಂದ ಕೇನ್ ವಿಲಿಯಮ್ಸನ್ ಹೊರಗುಳಿದಿದ್ದೇಕೆ?

Kane Williamson: 2024 ರಲ್ಲಿ ಇಂಗ್ಲೆಂಡ್ ವಿರುದ್ಧ ಕೊನೆಯ ಟೆಸ್ಟ್ ಪಂದ್ಯವಾಡಿದ್ದ ಕೇನ್ ವಿಲಿಯಮ್ಸನ್ ಇತ್ತೀಚೆಗೆ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯ ಮೂಲಕ ಕಂಬ್ಯಾಕ್ ಮಾಡಿದ್ದರು. ಈ ಕಂಬ್ಯಾಕ್ ಹೊರತಾಗಿಯೂ ಅವರು ಭಾರತದ ವಿರುದ್ಧದ ಏಕದಿನ ಹಾಗೂ ಟಿ20 ಸರಣಿಗಳಿಂದ ಹೊರಗುಳಿದಿದ್ದಾರೆ.

ಭಾರತದ ವಿರುದ್ಧದ ಸರಣಿಯಿಂದ ಕೇನ್ ವಿಲಿಯಮ್ಸನ್ ಹೊರಗುಳಿದಿದ್ದೇಕೆ?
Kane Williamson
ಝಾಹಿರ್ ಯೂಸುಫ್
|

Updated on: Dec 24, 2025 | 9:59 AM

Share

ಭಾರತದ ವಿರುದ್ಧದ ಸರಣಿಗಾಗಿ ನ್ಯೂಝಿಲೆಂಡ್ ತಂಡಗಳನ್ನು ಪ್ರಕಟಿಸಲಾಗಿದೆ. ಈ ತಂಡಗಳಲ್ಲಿ ಸ್ಟಾರ್ ಆಟಗಾರ ಕೇನ್ ವಿಲಿಯಮ್ಸನ್ ಕಾಣಿಸಿಕೊಂಡಿಲ್ಲ ಎಂಬುದು ವಿಶೇಷ. ಅನುಭವಿ ಆಟಗಾರನಾಗಿದ್ದರೂ ಟೀಮ್ ಇಂಡಿಯಾ ವಿರುದ್ಧದ ಸರಣಿಯಿಂದ ವಿಲಿಯಮ್ಸನ್ ಹೊರಗುಳಿದಿದ್ದೇಕೆ? ಎಂಬ ಪ್ರಶ್ನೆ ಮೂಡುವುದು ಸಹಜ. ಈ ಪ್ರಶ್ನೆಗೆ ಇಲ್ಲಿದೆ ಉತ್ತರ…

ಕೇನ್ ವಿಲಿಯಮ್ಸನ್ ನ್ಯೂಝಿಲೆಂಡ್ ಕ್ರಿಕೆಟ್ ಬೋರ್ಡ್​ ಜೊತೆ ಸಾಂದರ್ಭಿಕ ಕಾಂಟ್ರಾಕ್ಟ್ ಒಪ್ಪಂದದಲ್ಲಿದ್ದಾರೆ. ಅಂದರೆ ನ್ಯೂಝಿಲೆಂಡ್ ಪರ ಆಡಬೇಕಾ ಅಥವಾ ಬೇಡವಾ ಎಂಬುದನ್ನು ನಿರ್ಧರಿಸುವ ಹಕ್ಕು ಅವರಿಗಿದೆ. ಈ ಒಪ್ಪಂದದಿಂದಾಗಿ ನ್ಯೂಝಿಲೆಂಡ್ ಕ್ರಿಕೆಟ್ ಬೋರ್ಡ್​ ನೀವು ಆಡಲೇಬೇಕು ಎಂದು ಒತ್ತಾಯ ಮಾಡುವಂತಿಲ್ಲ.

ಅತ್ತ ಭಾರತದ ವಿರುದ್ಧದ ಸರಣಿಯ ವೇಳೆ ಸೌತ್ ಆಫ್ರಿಕಾ ಟಿ20 ಲೀಗ್ ಕೂಡ ನಡೆಯುತ್ತಿದೆ. ಈ ಲೀಗ್​ನಲ್ಲಿ ಡರ್ಬನ್ ಸೂಪರ್ ಜೈಂಟ್ಸ್ ಪರ ಕಣಕ್ಕಿಳಿಯಲು ಕೇನ್ ವಿಲಿಯಮ್ಸನ್ ಒಪ್ಪಂದ ಮಾಡಿಕೊಂಡಿದ್ದಾರೆ. ಹೀಗಾಗಿ ಭಾರತದ ವಿರುದ್ಧದ ಸರಣಿಯಿಂದ ಹೊರಗುಳಿದು, ಅವರು ಸೌತ್ ಆಫ್ರಿಕಾ ಟಿ20 ಲೀಗ್​ನಲ್ಲಿ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ. ಇದೇ ಕಾರಣದಿಂದಾಗಿ ಜನವರಿ 11 ರಿಂದ ಶುರುವಾಗಲಿರುವ ಭಾರತದ ವಿರುದ್ಧದ ಸರಣಿಯಲ್ಲಿ ವಿಲಿಯಮ್ಸನ್ ಕಾಣಿಸಿಕೊಳ್ಳುವುದಿಲ್ಲ.

ಟೀಮ್ ಇಂಡಿಯಾ ವಿರುದ್ಧದ ಸರಣಿಗೆ ನ್ಯೂಝಿಲೆಂಡ್ ತಂಡ ಹೀಗಿದೆ:

ನ್ಯೂಝಿಲೆಂಡ್ ಏಕದಿನ ತಂಡ: ಮೈಕೆಲ್ ಬ್ರೇಸ್‌ವೆಲ್ (ನಾಯಕ), ಆದಿ ಅಶೋಕ್, ಕ್ರಿಸ್ಟಿಯನ್ ಕ್ಲಾರ್ಕ್, ಜೋಶ್ ಕ್ಲಾರ್ಕ್ಸನ್, ಡೆವೊನ್ ಕಾನ್ವೆ, ಝ್ಯಾಕ್ ಫೌಲ್ಕ್ಸ್, ಮಿಚ್ ಹೇ (ವಿಕೆಟ್ ಕೀಪರ್), ಕೈಲ್ ಜೇಮಿಸನ್, ನಿಕ್ ಕೆಲ್ಲಿ, ಜೇಡನ್ ಲೆನಾಕ್ಸ್, ಡೇರಿಲ್ ಮಿಚೆಲ್, ಹೆನ್ರಿ ನಿಕೋಲ್ಸ್, ಗ್ಲೆನ್ ಫಿಲಿಪ್ಸ್, ಮೈಕೆಲ್ ರೇ, ವಿಲ್ ಯಂಗ್.

ನ್ಯೂಝಿಲೆಂಡ್ ಟಿ20 ತಂಡ: ಮಿಚೆಲ್ ಸ್ಯಾಂಟ್ನರ್ (ನಾಯಕ), ಮೈಕೆಲ್ ಬ್ರೇಸ್‌ವೆಲ್, ಮಾರ್ಕ್ ಚಾಪ್ಮನ್, ಡೆವೊನ್ ಕಾನ್ವೆ (ವಿಕೆಟ್ ಕೀಪರ್), ಜೇಕಬ್ ಡಫಿ, ಝ್ಯಾಕ್ ಫೌಲ್ಕ್ಸ್, ಮ್ಯಾಟ್ ಹೆನ್ರಿ, ಕೈಲ್ ಜೇಮಿಸನ್, ಬೆವೊನ್ ಜೇಕಬ್ಸ್, ಡೇರಿಲ್ ಮಿಚೆಲ್, ಜೇಮ್ಸ್ ನೀಶಮ್, ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ಟಿಮ್ ರಾಬಿನ್ಸನ್, ಇಶ್ ಸೋಧಿ.

ಭಾರತ vs ನ್ಯೂಝಿಲೆಂಡ್ ಏಕದಿನ ಸರಣಿ ವೇಳಾಪಟ್ಟಿ

  • ಮೊದಲ ಏಕದಿನ ಪಂದ್ಯ – ಜನವರಿ 11 – ವಡೋದರಾ – ಮಧ್ಯಾಹ್ನ 1:30
  • ಎರಡನೇ ಏಕದಿನ ಪಂದ್ಯ – ಜನವರಿ 14 – ರಾಜ್‌ಕೋಟ್ – ಮಧ್ಯಾಹ್ನ 1:30
  • ಮೂರನೇ ಏಕದಿನ ಪಂದ್ಯ – ಜನವರಿ 18 – ಇಂದೋರ್ – ಮಧ್ಯಾಹ್ನ 1:30

ಇದನ್ನೂ ಓದಿ: ಸೂಪರ್ ಶರ್ಮಾ… ಅಭಿಷೇಕ್ ಆರ್ಭಟಕ್ಕೆ ವಿಶ್ವ ದಾಖಲೆ ಉಡೀಸ್

ಭಾರತ vs ನ್ಯೂಝಿಲೆಂಡ್ ಟಿ20 ಸರಣಿ ವೇಳಾಪಟ್ಟಿ

  • ಮೊದಲ ಟಿ20 ಪಂದ್ಯ – ಜನವರಿ 21 – ನಾಗ್ಪುರ – ರಾತ್ರಿ 7:00
  • ಎರಡನೇ ಟಿ20 ಪಂದ್ಯ – ಜನವರಿ 23 – ರಾಯ್ಪುರ – ರಾತ್ರಿ 7:00
  • ಮೂರನೇ ಟಿ20 ಪಂದ್ಯ – ಜನವರಿ 25 – ಗುವಾಹಟಿ – ರಾತ್ರಿ 7:00
  • ನಾಲ್ಕನೇ ಟಿ20 ಪಂದ್ಯ – ಜನವರಿ 28 – ವಿಶಾಖಪಟ್ಟಣ – ರಾತ್ರಿ 7:00
  • ಐದನೇ ಟಿ20 ಪಂದ್ಯ – ಜನವರಿ 31 – ತಿರುವನಂತಪುರಂ – ರಾತ್ರಿ 7:00