IPL 2022: ಮಯಾಂಕ್ ಅಗರ್ವಾಲ್ ತಂಡದಿಂದ ಹೊರುಗಳಿಯಲು ಇದುವೇ ಕಾರಣ
IPL 2022: ಐಪಿಎಲ್ 2022 ರಲ್ಲಿ ಪಂಜಾಬ್ ಕಿಂಗ್ಸ್ ಐದು ಪಂದ್ಯಗಳನ್ನು ಆಡಿದೆ. ಈ ವೇಳೆ ಮೂರರಲ್ಲಿ ಗೆದ್ದಿದ್ದಾರೆ. ಸದ್ಯ ಪಂಜಾಬ್ ಕಿಂಗ್ಸ್ ತಂಡವು ಆರು ಅಂಕಗಳೊಂದಿಗೆ ಐದನೇ ಸ್ಥಾನದಲ್ಲಿದೆ.
ಐಪಿಎಲ್ನ 28ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ಮುಖಾಮುಖಿಯಾಗಿದೆ. ಆದರೆ ಈ ಪಂದ್ಯದಲ್ಲಿ ಟಾಸ್ ಹಾಕಲು ಶಿಖರ್ ಧವನ್ ಆಗಮಿಸಿದಾಗ ಎಲ್ಲರಿಗೂ ಅಚ್ಚರಿ ಕಾದಿತ್ತು. ತಂಡದ ನಾಯಕನಾಗಿ ಉತ್ತಮ ಪ್ರದರ್ಶನ ನೀಡುತ್ತಿದ್ದರೂ ಮಯಾಂಕ್ ಅಗರ್ವಾಲ್ ಯಾಕೆ ಹೊರಗುಳಿದರು ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿತು. ಈ ಪ್ರಶ್ನೆಗೆ ಇದೀಗ ಉತ್ತರ ಸಿಕ್ಕಿದೆ. ಮಯಾಂಕ್ ಅಗರ್ವಾಲ್ ಗಾಯಗೊಂಡಿದ್ದು, ಹೀಗಾಗಿ ಎಸ್ಆರ್ಹೆಚ್ ವಿರುದ್ದದ ಪಂದ್ಯದಿಂದ ಹೊರಗುಳಿದಿದ್ದಾರೆ. ಅದರಂತೆ ಹಂಗಾಮಿ ನಾಯಕನಾಗಿ ಶಿಖರ್ ಧವನ್ ಕಾಣಿಸಿಕೊಂಡಿದ್ದಾರೆ.
ಪಂಜಾಬ್ ಕಿಂಗ್ಸ್ ತಂಡದ ಅಭ್ಯಾಸದ ವೇಳೆ ಮಯಾಂಕ್ ಅಗರ್ವಾಲ್ ಅವರ ಕಾಲ್ಬೆರಳಿಗೆ ಗಾಯವಾಗಿದ್ದು, ಹೀಗಾಗಿ ವೈದ್ಯರು ವಿಶ್ರಾಂತಿ ಸೂಚಿಸಿದ್ದಾರೆ. ಅದರಂತೆ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಿಂದ ಹೊರಗುಳಿದಿದ್ದಾರೆ. ಇನ್ನು ಮುಂದಿನ ಪಂದ್ಯದಲ್ಲಿ ಮಯಾಂಕ್ ಆಡಲಿದ್ದಾರೆ ಎಂದು ತಿಳಿದು ಬಂದಿದೆ. ಮಯಾಂಕ್ ಅನುಪಸ್ಥಿತಿಯಲ್ಲಿ, ಪ್ರಭಾಸಿಮ್ರಾನ್ ಸಿಂಗ್ ಪಂಜಾಬ್ ಕಿಂಗ್ಸ್‌ನ ಪ್ಲೇಯಿಂಗ್ XI ನಲ್ಲಿ ಸ್ಥಾನ ಪಡೆದಿದ್ದಾರೆ.
8 ವರ್ಷಗಳ ನಂತರ ಧವನ್ ನಾಯಕ: ಶಿಖರ್ ಧವನ್ ಸುಮಾರು ಎಂಟು ವರ್ಷಗಳ ನಂತರ ಐಪಿಎಲ್‌ನಲ್ಲಿ ನಾಯಕನಾಗಿ ಕಾಣಿಸಿಕೊಂಡಿದ್ದಾರೆ. ಅವರು ಕೊನೆಯ ಬಾರಿಗೆ 2014 ರಲ್ಲಿ ಐಪಿಎಲ್‌ನಲ್ಲಿ ನಾಯಕತ್ವವನ್ನು ವಹಿಸಿಕೊಂಡಿದ್ದರು. ಈ ವೇಳೆ ಸನ್‌ರೈಸರ್ಸ್ ಹೈದರಾಬಾದ್‌ನ ಭಾಗವಾಗಿದ್ದರು. ಕುತೂಹಲಕಾರಿಯೆಂದರೆ ಅಂದು ಅವರು ಪಂಜಾಬ್ ಕಿಂಗ್ಸ್ ವಿರುದ್ಧ ಈ ಜವಾಬ್ದಾರಿಯನ್ನು ನಿರ್ವಹಿಸಿದ್ದರು. ಇದೀಗ ಪಂಜಾಬ್ ಕಿಂಗ್ಸ್ ನಾಯಕನಾಗಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಕಣಕ್ಕಿಳಿದಿದ್ದಾರೆ.
ಐಪಿಎಲ್ 2022 ರಲ್ಲಿ ಪಂಜಾಬ್ ಕಿಂಗ್ಸ್ ಐದು ಪಂದ್ಯಗಳನ್ನು ಆಡಿದೆ. ಈ ವೇಳೆ ಮೂರರಲ್ಲಿ ಗೆದ್ದಿದ್ದಾರೆ. ಸದ್ಯ ಪಂಜಾಬ್ ಕಿಂಗ್ಸ್ ತಂಡವು ಆರು ಅಂಕಗಳೊಂದಿಗೆ ಐದನೇ ಸ್ಥಾನದಲ್ಲಿದೆ. ಇದುವರೆಗೆ ಮುಂಬೈ ಇಂಡಿಯನ್ಸ್, ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳನ್ನು ಸೋಲಿಸಿದ್ದಾರೆ. ಹಾಗೆಯೇ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಗುಜರಾತ್ ಟೈಟಾನ್ಸ್ ವಿರುದ್ದ ಸೋತಿದೆ.
ಇದನ್ನೂ ಓದಿ: KL Rahul: ಶತಕದ ಪಂದ್ಯದಲ್ಲಿ ಸೆಂಚುರಿ ಸಿಡಿಸಿ ದಾಖಲೆ ಬರೆದ ಕೆಎಲ್ ರಾಹುಲ್
ಇದನ್ನೂ ಓದಿ: IPL 2022: ತೂಫಾನ್ ಜೋಡಿ: ಹೊಸ ದಾಖಲೆ ಬರೆದ ಶಹಬಾಜ್-ಡಿಕೆ