India T20 Squad: ಟೀಮ್ ಇಂಡಿಯಾದಿಂದ ಸಿರಾಜ್ ಔಟ್: ಅವೇಶ್ ಖಾನ್ ಆಯ್ಕೆ..!
India T20 Squad: ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯಕ್ಕೆ ಕಳಪೆ ತಂಡವನ್ನು ಆಯ್ಕೆ ಮಾಡಿ ಭಾರೀ ಟೀಕೆಗೆ ಒಳಗಾಗಿದ್ದ ಆಯ್ಕೆ ಸಮಿತಿಯು ಇದೀಗ ಟಿ20 ತಂಡದ ಪ್ರಕಟಣೆ ಬೆನ್ನಲ್ಲೇ ಮತ್ತೊಮ್ಮೆ ಭಾರತೀಯ ಕ್ರಿಕೆಟ್ ಪ್ರೇಮಿಗಳ ಆಕ್ರೋಶಕ್ಕೆ ಗುರಿಯಾಗಿದ್ದಾರೆ.
India vs West Indies: ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಗಾಗಿ ಟೀಮ್ ಇಂಡಿಯಾವನ್ನು (Team India) ಆಯ್ಕೆ ಮಾಡಲಾಗಿದೆ. 15 ಸದಸ್ಯರ ಈ ಬಳಗದಲ್ಲಿ ಹೊಸಮುಖಗಳಾಗಿ ತಿಲಕ್ ವರ್ಮಾ (Tilak Varma) ಹಾಗೂ ಯಶಸ್ವಿ ಜೈಸ್ವಾಲ್ ( Yashasvi Jaiswal) ಸ್ಥಾನ ಪಡೆದಿದ್ದಾರೆ. ಇನ್ನು ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಸಂಜು ಸ್ಯಾಮ್ಸನ್ (Sanju Samson) ತಂಡಕ್ಕೆ ಕಂಬ್ಯಾಕ್ ಮಾಡಿದ್ದಾರೆ. ಆದರೆ ಈ ಬಳಗದಲ್ಲಿ ಮೊಹಮ್ಮದ್ ಸಿರಾಜ್ಗೆ ಸ್ಥಾನ ನೀಡಲಾಗಿಲ್ಲ ಎಂಬುದೇ ಅಚ್ಚರಿ.
ಈ ಬಾರಿಯ ಐಪಿಎಲ್ನಲ್ಲಿ ಭರ್ಜರಿ ಬೌಲಿಂಗ್ ಪ್ರದರ್ಶಿಸಿದ್ದ ಸಿರಾಜ್ 14 ಪಂದ್ಯಗಳಿಂದ 19 ವಿಕೆಟ್ ಕಬಳಿಸಿದ್ದರು. ಅದರಲ್ಲೂ 300 ಎಸೆತಗಳನ್ನು ಎಸೆದಿದ್ದ ಆರ್ಸಿಬಿ ವೇಗಿ ನೀಡಿದ್ದು ಕೇವಲ 376 ರನ್ಗಳು ಮಾತ್ರ. ಇದಾಗ್ಯೂ ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಗೆ ಸಿರಾಜ್ ಆಯ್ಕೆಯಾಗದಿರುವುದು ಅಚ್ಚರಿಗೆ ಕಾರಣವಾಗಿದೆ.
ಇಲ್ಲಿ ಆಯ್ಕೆ ಸಮಿತಿಯು ಮೊಹಮ್ಮದ್ ಸಿರಾಜ್ ಅವರನ್ನು ತಂಡದಿಂದ ಕೈ ಬಿಟ್ಟಿರುವ ಬಗ್ಗೆ ಯಾವುದೇ ಕಾರಣ ನೀಡಿಲ್ಲ ಎಂಬುದು ಉಲ್ಲೇಖಾರ್ಹ. ಹೀಗಾಗಿ ಆಯ್ಕೆ ಸಮಿತಿಯ ನಡೆಯನ್ನು ಇದೀಗ ಭಾರತೀಯ ಕ್ರಿಕೆಟ್ ಪ್ರೇಮಿಗಳು ಪ್ರಶ್ನಿಸಲಾರಂಭಿಸಿದ್ದಾರೆ.
ಹಾಗೆಯೇ ಇಲ್ಲಿ ಮತ್ತೊಂದು ಅಚ್ಚರಿ ಎಂದರೆ ತಂಡದಲ್ಲಿ ವೇಗಿಗಳಾಗಿ ಮುಖೇಶ್ ಕುಮಾರ್, ಅವೇಶ್ ಖಾನ್ ಕಾಣಿಸಿಕೊಂಡಿರುವುದು. ಅಂದರೆ ದೇಶೀಯ ಟೂರ್ನಿ ಹಾಗೂ ಐಪಿಎಲ್ನಲ್ಲಿ ಸಾಧಾರಣ ಪ್ರದರ್ಶನ ನೀಡಿದ್ದ ಈ ಇಬ್ಬರು ವೇಗಿಗಳನ್ನು ಟಿ20 ತಂಡಕ್ಕೆ ಆಯ್ಕೆ ಮಾಡಲಾಗಿದೆ.
ಇದನ್ನೂ ಓದಿ: ಟೀಮ್ ಇಂಡಿಯಾದ ಮಾಜಿ ಆಟಗಾರರನ್ನು ನಿಯಂತ್ರಿಸಲು ಬಿಸಿಸಿಐ ಮಾಸ್ಟರ್ ಪ್ಲ್ಯಾನ್..!
ಒಟ್ಟಿನಲ್ಲಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯಕ್ಕೆ ಕಳಪೆ ತಂಡವನ್ನು ಆಯ್ಕೆ ಮಾಡಿ ಭಾರೀ ಟೀಕೆಗೆ ಒಳಗಾಗಿದ್ದ ಆಯ್ಕೆ ಸಮಿತಿಯು ಇದೀಗ ಟಿ20 ತಂಡದ ಪ್ರಕಟಣೆ ಬೆನ್ನಲ್ಲೇ ಮತ್ತೊಮ್ಮೆ ಭಾರತೀಯ ಕ್ರಿಕೆಟ್ ಪ್ರೇಮಿಗಳ ಆಕ್ರೋಶಕ್ಕೆ ಗುರಿಯಾಗಿದ್ದಾರೆ.
ಭಾರತ ಟಿ20 ತಂಡ :
ಇಶಾನ್ ಕಿಶನ್ (ವಿಕೆಟ್ ಕೀಪರ್), ಶುಭ್ಮನ್ ಗಿಲ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ಸೂರ್ಯ ಕುಮಾರ್ ಯಾದವ್ (ಉಪನಾಯಕ), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ ( ನಾಯಕ), ಅಕ್ಸರ್ ಪಟೇಲ್, ಯುಜ್ವೇಂದ್ರ ಚಾಹಲ್, ಕುಲ್ದೀಪ್ ಯಾದವ್, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್, ಅವೇಶ್ ಖಾನ್, ಮುಖೇಶ್ ಕುಮಾರ್.
ಭಾರತ-ವೆಸ್ಟ್ ಇಂಡೀಸ್ ಟಿ20 ಸರಣಿ ವೇಳಾಪಟ್ಟಿ:
- 1ನೇ T20I: ಆಗಸ್ಟ್ 3 – ಬ್ರಿಯಾನ್ ಲಾರಾ ಕ್ರಿಕೆಟ್ ಅಕಾಡೆಮಿ, ಟ್ರಿನಿಡಾಡ್ (8:00 PM IST)
- 2ನೇ T20I: ಆಗಸ್ಟ್ 6 – ರಾಷ್ಟ್ರೀಯ ಕ್ರೀಡಾಂಗಣ, ಗಯಾನಾ (8: 00 PM IST)
- 3ನೇ T20I: ಆಗಸ್ಟ್ 8 – ರಾಷ್ಟ್ರೀಯ ಕ್ರೀಡಾಂಗಣ, ಗಯಾನಾ (8:00 PM IST)
- 4ನೇ T20I: ಆಗಸ್ಟ್ 12 – ಬ್ರೋವರ್ಡ್ ಕೌಂಟಿ ಸ್ಟೇಡಿಯಂ, ಫ್ಲೋರಿಡಾ (8:00 PM IST)
- 5ನೇ T20I: ಆಗಸ್ಟ್ 13 – ಬ್ರೋವರ್ಡ್ ಕೌಂಟಿ ಸ್ಟೇಡಿಯಂ, ಫ್ಲೋರಿಡಾ (8:00 PM IST)
Published On - 10:56 pm, Wed, 5 July 23