Ravindra Jadeja: ಸ್ಟಾರ್ ಆಲ್​ರೌಂಡರ್ ಜಡೇಜಾರನ್ನು ಆಯ್ಕೆ ಮಾಡದಿರಲು ಇದುವೇ ಕಾರಣ..!

| Updated By: ಝಾಹಿರ್ ಯೂಸುಫ್

Updated on: Jan 01, 2022 | 3:04 PM

Team India: ಟೀಮ್ ಇಂಡಿಯಾ ಹೀಗಿದೆ: ಕೆಎಲ್ ರಾಹುಲ್ (ನಾಯಕ) ಶಿಖರ್ ಧವನ್, ಋತುರಾಜ್ ಗಾಯಕ್ ವಾಡ್, ವಿರಾಟ್ ಕೊಹ್ಲಿ, ಸೂರ್ಯ ಕುಮಾರ್ ಯಾದವ್, ಶ್ರೇಯಾಸ್ ಅಯ್ಯರ್, ವೆಂಕಟೇಶ್ ಅಯ್ಯರ್, ರಿಷಭ್ ಪಂತ್ ( ವಿಕೆಟ್ ಕೀಪರ್) ಇಶಾನ್ ಕಿಶಾನ್.

Ravindra Jadeja: ಸ್ಟಾರ್ ಆಲ್​ರೌಂಡರ್ ಜಡೇಜಾರನ್ನು ಆಯ್ಕೆ ಮಾಡದಿರಲು ಇದುವೇ ಕಾರಣ..!
ravindra jadeja
Follow us on

ದಕ್ಷಿಣ ಆಫ್ರಿಕಾ (IND vs SA) ವಿರುದ್ದ ಜನವರಿ 19 ರಿಂದ ಶುರುವಾಗಲಿರುವ ಏಕದಿನ ಸರಣಿಗೆ ಟೀಮ್ ಇಂಡಿಯಾವನ್ನು (Team India) ಪ್ರಕಟಿಸಲಾಗಿದೆ. 18 ಸದಸ್ಯರನ್ನು ಒಳಗೊಂಡಿರುವ ಈ ತಂಡಕ್ಕೆ ಕನ್ನಡಿಗ ಕೆಎಲ್ ರಾಹುಲ್ (KL Rahul) ನಾಯಕರಾಗಿದ್ದಾರೆ. ರಾಹುಲ್ ನಾಯಕರಾದರೆ, ಜಸ್​ಪ್ರೀತ್ ಬುಮ್ರಾ ಅವರನ್ನು ಉಪನಾಯಕರಾಗಿ ಆಯ್ಕೆ ಮಾಡಲಾಗಿದೆ. ಇನ್ನು ತಂಡಕ್ಕೆ ಶಿಖರ್ ಧವನ್ ಹಾಗೂ ವಾಷಿಂಗ್ಟನ್ ಸುಂದರ್ ವಾಪಾಸಾಗಿದ್ದು, ಹಾಗೆಯೇ ರುತುರಾಜ್ ಗಾಯಕ್ವಾಡ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಆದರೆ ತಂಡದಲ್ಲಿ ಸೀಮಿತ ಓವರ್​ಗಳ ನಾಯಕ ರೋಹಿತ್ ಶರ್ಮಾ ಹಾಗೂ ಆಲ್​ರೌಂಡರ್​ ರವೀಂದ್ರ ಜಡೇಜಾ ಸ್ಥಾನ ಪಡೆದಿಲ್ಲ. ಈ ಇಬ್ಬರು ಸ್ಟಾರ್ ಆಟಗಾರರು ತಂಡಕ್ಕೆ ಆಯ್ಕೆಯಾಗದಿರಲು ಮುಖ್ಯ ಕಾರಣ ಫಿಟ್​ನೆಸ್ ಸಮಸ್ಯೆ. ಹೌದು, ರೋಹಿತ್ ಶರ್ಮಾ ಈ ಹಿಂದೆ ಮುಂಬೈನಲ್ಲಿ ಅಭ್ಯಾಸದ ವೇಳೆ ಎಡ ಮಂಡಿರಜ್ಜುಗೆ ಗಾಯ ಮಾಡಿಕೊಂಡಿದ್ದರು. ಹೀಗಾಗಿ ದಕ್ಷಿಣ ಆಫ್ರಿಕಾ ವಿರುದ್ದದ ಟೆಸ್ಟ್ ಸರಣಿಯಿಂದ ಹೊರುಗಳಿದಿದ್ದರು. ಇದೀಗ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ. ಹೀಗಾಗಿ ಹಿಟ್​ಮ್ಯಾನ್ ಅವರನ್ನು ಏಕದಿನ ಸರಣಿಗೆ ಆಯ್ಕೆ ಮಾಡಿಲ್ಲ.

ಇನ್ನೊಂದೆಡೆ ರವೀಂದ್ರ ಜಡೇಜಾ ಕಾನ್ಪುರದಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ವೇಳೆ ಬಲ ಮುಂಗೈಗೆ ಗಾಯ ಮಾಡಿಕೊಂಡಿದ್ದರು. ಗಾಯದ ಸ್ಕ್ಯಾನಿಂಗ್ ವೇಳೆ ಮುಂದೋಳಿನ ಮೇಲೆ ಊತ ಕಂಡು ಬಂದಿದೆ. ಹೀಗಾಗಿ ಅವರಿಗೆ ವೈದ್ಯರು ಹೆಚ್ಚಿನ ವಿಶ್ರಾಂತಿ ಸೂಚಿಸಿದ್ದಾರೆ. ಸದ್ಯ ರವೀಂದ್ರ ಜಡೇಜಾ ಕೂಡ ಎನ್‌ಸಿಎಯಲ್ಲಿದ್ದು, ಏಪ್ರಿಲ್‌ ವೇಳೆಗೆ ಸಂಪೂರ್ಣ ಫಿಟ್​ನೆಸ್ ಸಾಧಿಸಲಿದ್ದಾರೆ ಎಂದು ಹೇಳಲಾಗಿದೆ. ಹೀಗಾಗಿ ಟೀಮ್ ಇಂಡಿಯಾ ಈ ಇಬ್ಬರು ಸ್ಟಾರ್ ಆಟಗಾರರನ್ನು ದಕ್ಷಿಣ ಆಫ್ರಿಕಾ ವಿರುದ್ದದ ಏಕದಿನ ಸರಣಿಗೆ ಪರಿಗಣಿಸಲಾಗಿಲ್ಲ.

ದಕ್ಷಿಣ ಆಫ್ರಿಕಾ ವಿರುದ್ದದ ಏಕದಿನ ಸರಣಿಗೆ ಟೀಮ್ ಇಂಡಿಯಾ ಹೀಗಿದೆ: ಕೆಎಲ್ ರಾಹುಲ್ (ನಾಯಕ) ಶಿಖರ್ ಧವನ್, ಋತುರಾಜ್ ಗಾಯಕ್ ವಾಡ್, ವಿರಾಟ್ ಕೊಹ್ಲಿ, ಸೂರ್ಯ ಕುಮಾರ್ ಯಾದವ್, ಶ್ರೇಯಾಸ್ ಅಯ್ಯರ್, ವೆಂಕಟೇಶ್ ಅಯ್ಯರ್, ರಿಷಭ್ ಪಂತ್ ( ವಿಕೆಟ್ ಕೀಪರ್) ಇಶಾನ್ ಕಿಶಾನ್ ( ವಿಕೆಟ್ ಕೀಪರ್) ಯುಜುವೇಂದ್ರ ಚಹಲ್, ಆರ್. ಅಶ್ವಿನ್, ವಾಷಿಂಗ್ಟನ್ ಸುಂದರ್, ಬೂಮ್ರಾ ( ಉಪ ನಾಯಕ) ಭುವನೇಶ್ವರ್ ಕುಮಾರ್, ದೀಪಕ್ ಚಹರ್, ಪ್ರಸಿದ್ ಕೃಷ್ಣ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್.

ಇದನ್ನೂ ಓದಿ:  India vs South Africa 1st Test: ದಕ್ಷಿಣ ಆಫ್ರಿಕಾ ವಿರುದ್ದ ಭಾರತಕ್ಕೆ ಭರ್ಜರಿ ಜಯ

ಇದನ್ನೂ ಓದಿ:  ಭಾರತವನ್ನು ಗೇಲಿ ಮಾಡಿದ ಇಂಗ್ಲೆಂಡ್ ಕ್ರಿಕೆಟಿಗನ ಕಾಲೆಳೆದ ಆಸ್ಟ್ರೇಲಿಯಾ ಪತ್ರಕರ್ತೆ..!

ಇದನ್ನೂ ಓದಿ: IPL 2022: RCB ಮನೀಷ್ ಪಾಂಡೆಯನ್ನು ಯಾಕೆ ಖರೀದಿಸಬೇಕು ಅಂದರೆ…

ಇದನ್ನೂ ಓದಿ: IPL 2022: ಇವರೇ RCB ತಂಡದ ಮುಂದಿನ ಕ್ಯಾಪ್ಟನ್ ಎಂದ ಮಾಜಿ ಆರ್​ಸಿಬಿ ನಾಯಕ

(Why ravindra jadeja not selected in odi team)